ಬೋರವೆಲ್ ನೊಂದಣಿ ಮಾಡಿಸಿ ಇಲ್ಲ 1 ಲಕ್ಷ ದಂಡ ಕಟ್ಟಬೇಕಾದೀತು

0 5

ವಸತಿ ಹಾಗೂ ವಾಣಿಜ್ಯ ಸಮುಚ್ಛಯಗಳು ಇನ್ನೂ ತಮ್ಮ ಬೋರ್ ವೆಲ್ ಗಳನ್ನು ನೋಂದಣಿ ಮಾಡಿಸಿಕೊಳ್ಳದೇ ಇದ್ದಲ್ಲಿ ಆದಷ್ಟು ಬೇಗನೆ ನೋಂದಣಿ ಮಾಡಿಸಿಕೊಳ್ಳಬೇಕು ಎಂದು ಕರ್ನಾಟಕ ಅಂತರ್ಜಲ ಪ್ರಾಧಿಕಾರ ಎಚ್ಚರಿಸಿದೆ. ಆದಷ್ಟು ಬೇಗ ಬೋರ್‌ವೆಲ್ ನೋಂದಣಿ ಮಾಡಿ ಇಲ್ಲವಾದಲ್ಲಿ ದಂಡ ಕಟ್ಟಲು ಸಿದ್ಧರಾಗಿ ಎಂದು ಕರ್ನಾಟಕ ಅಂತರ್ಜಲ ಪ್ರಾಧಿಕಾರ ಹೇಳಿದೆ.

ಅಪಾರ್ಟ್ ಮೆಂಟುಗಳು, ಹೌಸಿಂಗ್ ಸೊಸೈಟಿಗಳು, ಸರ್ಕಾರಿ ನೀರು ಪೂರೈಕೆ ಏಜೆನ್ಸಿಗಳು, ಗಣಿಗಾರಿಕಾ ಸಂಸ್ಥೆಗಳು, ಸ್ವಿಮ್ಮಿಂಗ್ ಪೂಲ್ ಗಳು ಎಲ್ಲವೂ ತಮ್ಮ ಹಳೆಯ ಹಾಗೂ ಹೊಸ ಬೋರ್ ವೆಲ್ ಸಂಪರ್ಕವನ್ನು ನೋಂದಣಿ ಮಾಡಿಸಿಕೊಳ್ಳಬೇಕಾಗಿದೆ. ಅದಕ್ಕಾಗಿ ಮಾರ್ಚ್ 31, 2022ರ ತನಕ ಗಡುವು ನಿಗದಿ ಪಡಿಸಿದೆ. ಗಡುವು ಮೀರಿದಲ್ಲಿ 1 ಲಕ್ಷ ರೂ. ದಂಡ ಕಟ್ಟಬೇಕಾಗಿ ಬರುವುದು. ಅದರ ಜೊತೆಗೆ ಹೆಚ್ಚುವರಿ ಪರಿಸರ ಶುಲ್ಕವನ್ನೂ ಕಟ್ಟಿಸಿಕೊಳ್ಳಲಾಗುವುದು ಎಂದು ಪ್ರಾಧಿಕಾರ ತಿಳಿಸಿದೆ.

ನಗರದಲ್ಲಿ ಅಂತರ್ಜಲ ಮಟ್ಟಕುಸಿಯುವುದನ್ನು ತಪ್ಪಿಸುವ ಉದ್ದೇಶದಿಂದ ಈ ನಿರ್ಣಯ ಕೈಗೊಳ್ಳಲಾಗಿದೆ. ನಿವೇಶನಗಳಲ್ಲಿ ಬೋರ್‌ವೆಲ್‌ ಕೊರೆಸಿಕೊಂಡು ಬಳಿಕ ಆ ನೀರನ್ನು ಕಟ್ಟಡ ನಿರ್ಮಾಣ ಕಾಮಗಾರಿಗೆ ಬಳಸುವುದರಿಂದ ಅಂತರ್ಜಲ ಕಡಿಮೆಯಾಗುತ್ತದೆ. ಹಾಗಾಗಿ ಇನ್ನು ಮುಂದೆ ನಿವೇಶನಗಳಲ್ಲಿ ಹಾಗೂ ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ ಬೋರ್‌ವೆಲ್‌ ಕೊರೆಸಲು ಅನುಮತಿ ನೀಡದಿರಲು ತೀರ್ಮಾನಿಸಲಾಗಿದೆ.

ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ ನೀರು ಅಗತ್ಯವಿದ್ದಲ್ಲಿ ಜಲಮಂಡಳಿ ಸಂಸ್ಕರಿಸಿದ ತಾಜ್ಯ ನೀರನ್ನು ಉಪಯೋಗಿಸಬಹುದು ಎಂದು ಹೇಳಿತ್ತು. ಇನ್ನು ಮುಂದೆ ಬಿಬಿಎಂಪಿ ವ್ಯಾಪ್ತಿಯಲ್ಲಿ ನಿವೇಶನಗಳಲ್ಲಿ ಬೋರ್‌ವೆಲ್‌ ಕೊರೆಸಲು ಅನುಮತಿ ನೀಡದಿರಲು ‘ರಾಜ್ಯ ಅಂತರ್ಜಲ ಪ್ರಾಧಿಕಾರ’ ರಚಿತ ಬಿಬಿಎಂಪಿ ಸಮಿತಿಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎಂದು 2019ರಲ್ಲೇ ತಿಳಿಸಿತ್ತು. ಒಂದು ವೇಳೆ ನಗರದಲ್ಲಿ ಅನಧಿಕೃತವಾಗಿ ಬೋರ್‌ವೆಲ್‌ ಕೊರೆಯುವುದು ಕಂಡು ಬಂದಲ್ಲಿ ಈ ಮೇಲ್ಕಂಡ ಇಲಾಖೆಗಳಿಗೆ ದೂರು ನೀಡಬಹುದು. ಕಟ್ಟಡದ ಮಾಲಿಕ, ಬೋರ್‌ವೆಲ್‌ ಡ್ರಿಲ್ಲಿಂಗ್‌ ಏಜೆನ್ಸಿ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ಜಲಮಂಡಳಿ ಪ್ರಕಟಣೆ ತಿಳಿಸಿದೆ.

ಕೊಳವೆ ಬಾವಿ ಕೊರೆಯಲು ಅನುಸರಿಸಬೇಕಾದಂತಹ ಕ್ರಮಗಳ ಬಗ್ಗೆ ಸುಪ್ರೀಂಕೋರ್ಟ್ ನೀಡಿದ ಆದೇಶದಲ್ಲಿ 21 ಅಂಶಗಳನ್ನು ಸೂಚಿಸಿದ್ದು ಅವುಗಳನ್ನು ತಪ್ಪದೇ ಅನುಸರಿಸಬೇಕು. ಬೋರ್‌ವೆಲ್ ಕೊರೆಯುವ ಸ್ಥಳಗಳನ್ನು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಗುರುತಿಸಬೇಕು.
ಆ ಪ್ರದೇಶದ ಸುತ್ತಲು ಬ್ಯಾರಿಕೇಡ್‌ಗಳ ಅಳವಡಿಕೆ, ಏಜೆನ್ಸಿ ಹೆಸರಿನ ನಾಮಫಲಕದ ವ್ಯವಸ್ಥೆ ಮಾಡಬೇಕು.

ಕೊರೆದ ಕೊಳವೆ ಬಾವಿಗಳಲ್ಲಿ ನೀರು ಬಂದರೆ ಶೀಘ್ರ ಮೋಟಾರ್ ಕೂಡಿಸಬೇಕು, ನಿರುಪಯುಕ್ತ ಬಾವಿ ಇದ್ದಲ್ಲಿ ಏಜೆನ್ಸಿಗಳೇ ಮುಚ್ಚಲು ಮುಂದಾಗಬೇಕು. ರಾಜ್ಯದಲ್ಲಿ ಸಂಭವಿಸಿದ ಕೊಳವೆಬಾವಿ ದುರಂತಗಳು ಮರುಕಳಿಸಿದ್ದಲ್ಲಿ ಏಜೆನ್ಸಿಗಳ ವಿರುದ್ಧವೇ ಕ್ರಮ ಕೈಗೊಳ್ಳಲು ಸರಕಾರ ಆದೇಶಿಸಿದೆ ಎಂದು ತಿಳಿಸಿದರು. ಪಾಲಿಕೆ ವ್ಯಾಪ್ತಿಯಲ್ಲಿ ಹೊಸದಾಗಿ ಬೋರ್‌ವೆಲ್‌ ಕೊರೆಯಲು ರಾಜ್ಯ ಅಂತರ್ಜಲ ಪ್ರಾಧಿಕಾರ ರಚಿತ ಬಿಬಿಎಂಪಿ ಸಮಿತಿಯಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕು. ಈ ಸಮಿತಿಯಲ್ಲಿ ಜಲಮಂಡಳಿಯ ಪ್ರಧಾನ ಮುಖ್ಯ ಎಂಜಿನಿಯರ್‌ ಅಧ್ಯಕ್ಷರಾಗಿದ್ದು, ಬಿಬಿಎಂಪಿ, ಪೊಲೀಸ್‌ ಇಲಾಖೆ, ಬೆಸ್ಕಾಂ, ಅಂತರ್ಜಲ ಪ್ರಾಧಿಕಾರ, ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು ಸದಸ್ಯರಾಗಿದ್ದಾರೆ.

ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430

Leave A Reply

Your email address will not be published.