ಕರ್ನಾಟಕ ಸರ್ಕಾರದ ಅಡಿಯಲ್ಲಿ ಜಿಕೆವಿಕೆ ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರು ಇವರು ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದಾರೆ, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ ಹುದ್ದೆ ವೇತನ ಇತ್ಯಾದಿ ಮಾಹಿತಿಗಳು ಈ ಕೆಳಕಂಡಂತಿವೆ.
ಕರ್ನಾಟಕ ಸರ್ಕಾರದ ಸರ್ಕಾರದ ಅಡಿಯಲ್ಲಿ ಜಿಕೆವಿಕೆ ಕೃಷಿ ವಿಶ್ವವಿದ್ಯಾನಿಲಯವು ತಮ್ಮಲ್ಲಿ ಖಾಲಿ ಇರುವ ಜೂನಿಯರ್ ಇಂಜಿನಿಯರ್ ಸ್ಟೈನೋಗ್ರಾಫರ್ ಫರ್ಮಾಸಿಸ್ಟ್ ಅಸ್ಸಿಸ್ಟೆಂಟ್ ಲ್ಯಾಬೊರೇಟರಿ ಅಸಿಸ್ಟೆಂಟ್ ಫೀಲ್ಡ್ ಅಸಿಸ್ಟೆಂಟ್ ಕೇರ್ ಟೇಕರ್ ಟ್ರ್ಯಾಕ್ಟರ್ ಡ್ರೈವರ್ ಅಸಿಸ್ಟೆಂಟ್ ಕುಕ್ಕರ್ ಕಮ್ ಕೇರ್ ಟೇಕರ್ ಸೇರಿದಂತೆ, ಒಟ್ಟು 34 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಅಲ್ಲದೇ ಹುದ್ದೆಗಳಿಗಾನುಸಾರವಾಗಿ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ 18600 ರಿಂದ ರೂ 70650 ವರೆಗೆ ವೇತನವನ್ನು ನೀಡಲಾಗುವುದು, ಇನ್ನೂ ಪ್ರವರ್ಗ 2ಎ 3ಎ 3ಬಿ ನ ಅಭ್ಯರ್ಥಿಗಳಿಗೆ ರೂ 300 ಗಳನ್ನು ಅರ್ಜಿ ಶುಲ್ಕವಾಗಿ ನಿಗಧಿಪಡಿಸಲಾಗಿದೆ ಮತ್ತು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ 600 ಗಳನ್ನು ಅರ್ಜಿ ಶುಲ್ಕವಾಗಿ ನಿಗಧಿಪಡಿಸಲಾಗಿದೆ.
ಅರ್ಜಿ ಶುಲ್ಕವನ್ನು ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಪಾವತಿಸಬೇಕಾಗಿರುತ್ತದೆ,ಇನ್ನೂ ಎಸ್ ಸಿ, ಎಸ್ ಟಿ ಪ್ರವರ್ಗ1 ಅಂಗವಿಕಲರು ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು ಯಾವುದೇ ಶುಲ್ಕವನ್ನು ಪಾವತಿಸುವಂತಿಲ್ಲ. ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ ಮತ್ತು ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ಪ್ರಾಯೋಗಿಕ ಪರೀಕ್ಷೆಗಳ ಮೂಲಕ ಆಯ್ಕೆ ಪ್ರಕ್ರಿಯೆ ನಡೆಸಲಾಗುವುದು. ಹಾಗೂ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಸಾರವಾಗಿ ಡಿಪ್ಲೋಮಾ ಪದವಿ ಹತ್ತನೇ ತರಗತಿ ಅಥವಾ ಏಳನೇ ತರಗತಿ ಕನಿಷ್ಠ ವಿದ್ಯಾರ್ಹತೆಯನ್ನು ಹೊಂದಿರಬೇಕಾಗುತ್ತದೆ.
ಆಸಕ್ತರು ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಜಿಕೆವಿಕೆ ನ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್ ಲೋಡ್ ಮಾಡಿಕೊಂಡು ಅದನ್ನು ಭರ್ತಿ ಮಾಡಿ ಅದರ ಜೊತೆಗೆ ಅಗತ್ಯ ಧಾಖಲೆಗಳನ್ನು ಲಗತ್ತಿಸಿ ಕಚೇರಿಯ ವಿಳಾಸಕ್ಕೆ 28 ಜನವರಿ 2020 ರ ಒಳಗಾಗಿ ರಿಜಿಸ್ಟರ್ ಅಥವಾ ಸ್ಪೀಡ್ ಪೋಸ್ಟ್ ನ ಮುಖಾಂತರ ಸಲ್ಲಿಸಬಹುದಾಗಿದೆ, ಮತ್ತು ಅರ್ಜಿ ಸಲ್ಲಿಸಬೇಕಾದ ವಿಳಾಸ ಆಡಳಿತಾಧಿಕಾರಿ ಕೃಷಿ ವಿಶ್ವವಿದ್ಯಾನಿಲಯ ಜಿಕೆವಿಕೆ ಬೆಂಗಳೂರು ಕರ್ನಾಟಕ 560065 ಆಗಿರುತ್ತದೆ.