2030 ರಿಂದ ಪೆಟ್ರೋಲ್ ಹಾಗೂ ಡೀಸೆಲ್ ವಾಹನ ಮಾರಾಟ ಸಂಪೂರ್ಣ ನಿ’ಷೇಧ ಮಾಡುತ್ತಾ?

0 1

ಹೆಚ್ಚುತ್ತಿರುವ ಮಾಲಿನ್ಯ ಪ್ರಮಾಣವನ್ನು ತಡೆಯುವ ಉದ್ದೇಶದಿಂದ ವಿಶ್ವಾದ್ಯಂತ ಬಹುತೇಕ ರಾಷ್ಟ್ರಗಳು ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಪ್ರೇರಿತ ವಾಹನಗಳ ಬಳಕೆಯನ್ನು ತಗ್ಗಿಸಲು ಹಲವು ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಕೇಂದ್ರ ಸರ್ಕಾರವು ಸಹ ಈ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಿಡಲು ಸಜ್ಜಾಗುತ್ತಿದೆ. 2030 ರಿಂದ ಪೆಟ್ರೋಲ್, ಡೀಸೆಲ್ ವಾಹನ ಮಾರಾಟ ಸಂಪೂರ್ಣ ನಿಷೇಧಕ್ಕೆ ನಿರ್ಧಾರ! ಇದರ ಕುರಿತಾಗಿ ನಾವು ಈ ಲೇಖನದ ಮೂಲಕ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ.

ಈಗಾಗಲೇ ವಿಶ್ವದ ಪ್ರಮುಖ ರಾಷ್ಟ್ರಗಳು ಮಾಲಿನ್ಯ ತಗ್ಗಿಸಲು ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ವಾಹನಗಳಿಗೆ ಪರ್ಯಾಯವಾಗಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಪರಿಣಾಮಕಾರಿ ಅನುಷ್ಠಾನಗೊಳಿಸುತ್ತಿದ್ದು, ಕೇಂದ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳ ಮೇಲಿನ ಅವಲಂಬನೆಯನ್ನು ತಗ್ಗಿಸುವತ್ತ ಕೆಲವು ಮಹತ್ವದ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಪೆಟ್ರೋಲ್ ಹಾಗೂ ಡೀಸೆಲ್ ಕಾರು ಮಾರಾಟ ಸಂಪೂರ್ಣ ನಿಷೇಧಿಸಲು ಮಹತ್ವದ ನಿರ್ಧಾರ ಸರ್ಕಾರ ಮುಂದಾಗಿದೆ.. ಮುಂದಿನ 10 ವರ್ಷದಲ್ಲಿ ಸಂಪೂರ್ಣ ಎಲೆಕ್ಟ್ರಿಕ್ ಮಯ ಮಾಡಲು ರೂಪುರೇಶೆ ತಯಾರಾಗಿದೆ. ಬ್ರಿಟನ್ ಪ್ರಧಾನಿ ಬೊರಿಸ್ ಜಾನ್ಸನ್ ಮಹತ್ವದ ನಿರ್ಧಾರ ಪ್ರಕಟಿಸಲಿದ್ದಾರೆ. 2030ರ ವೇಳೆಗೆ ಎಲ್ಲಾ ಪೆಟ್ರೋಲ್, ಡೀಸೆಲ್ ವಾಹನ ಮಾರಾಟ ಸಂಪೂರ್ಣ ನಿಷೇಧಿಸಲು ನಿರ್ಧರಿಸಲಾಗಿದೆ. ಮುಂದಿನ ವಾರ ಪ್ರಧಾನಿ ಬೊರಿಸ್ ಮಹತ್ವದ ನಿರ್ಧಾರ ಪ್ರಕಟಿಸಲಿದ್ದಾರೆ. ಇದಕ್ಕೊ ಮೊದಲು 2040ರ ಗಡುವು ನೀಡಲಾಗಿತ್ತು. ಇದನ್ನು 2035ಕ್ಕೆ ಇಳಿಸಲಾಗಿತ್ತು. ಇದೀಗ 2030ಕ್ಕೆ ಸಂಪೂರ್ಣ ಡೀಸೆಲ್ ಹಾಗೂ ಪೆಟ್ರೋಲ್ ವಾಹನ ಮಾರಾಟ ನಿಷೇಧಕ್ಕೆ ನಿರ್ಣಯ ತೆಗೆದುಕೊಳ್ಳಲಾಗಿದೆ. 2030ರ ವೇಳೆಗೆ ಡೀಸೆಲ್ ಮತ್ತು ಪೆಟ್ರೋಲ್ ವಾಹನಗಳ ಉತ್ಪಾದನೆ ಮತ್ತು ಮಾರಾಟವನ್ನು ಸಂಪೂರ್ಣವಾಗಿ ಸ್ಧಗಿತಗೊಳಿಸುವ ಸಂಬಂಧ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆ ಮತ್ತು ಮಾರಾಟದ ಹೆಚ್ಚಿನ ಒತ್ತು ನೀಡಲಾಗುತ್ತಿದೆ.

ಹಾಗೆಯೇ 2022ರ ವೇಳೆಗೆ ಶೇ.25ರಷ್ಟು ಎಲೆಕ್ಟ್ರಿಕ್ ವಾಹನಗಳ ಮಾರಾಟ ಗುರಿಹೊಂದಿರುವ ಕೇಂದ್ರ ಸರ್ಕಾರವು 2025ರ ವೇಳೆಗೆ 150ಸಿಸಿಗಿಂತ ಕಡಿಮೆ ಸಾಮಾರ್ಥ್ಯವುಳ್ಳ ಬೈಕ್ ಮಾದರಿಗಳ ಮಾರಾಟವನ್ನು ನಿಷೇಧಿಸಲು ತೀರ್ಮಾನಿಸಿದೆ. ನಂತರ ಮುಂದಿನ ಐದು ವರ್ಷಗಳಲ್ಲಿ ಸಂಪೂರ್ಣವಾಗಿ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳ ಉತ್ಪಾದನೆಯನ್ನು ನಿಷೇಧಿಸಲಿದ್ದು, ಶೇ.100 ರಷ್ಟು ಎಲೆಕ್ಟ್ರಿಕ್ ಮತ್ತು ಹೈಬ್ರಿಡ್ ವಾಹನಗಳ ಉತ್ಪಾದನೆ ಮತ್ತು ಮಾರಾಟಕ್ಕೆ ಮಾತ್ರವೇ ಅವಕಾಶ ನೀಡಲಿದೆ. ಈ ಸಂಬಂಧ ನವದೆಹಲಿ ನಡೆದ ನೀತಿ ಆಯೋಗದ ಸಭೆಯಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಪ್ರೋತ್ಸಾಹಿಸುವ ಸಂಬಂಧ ಕೆಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದ್ದು, ಮುಂಬರುವ ದಿನಗಳಲ್ಲಿ ಹೊಸ ನಿಯಮಗಳು ಜಾರಿಗೆ ಬರಲಿವೆ.

ಹಾಗೆಯೇ ದೇಶದ ಆರ್ಥಿಕ ಕ್ಷೇತ್ರಕ್ಕೆ ಬಹುದೊಡ್ಡ ಕೊಡುಗೆ ನೀಡುವ ರಾಷ್ಟ್ರೀಯ ಹೆದ್ದಾರಿಗಳನ್ನು ಸಹ ಇ-ಹೆದ್ದಾರಿಯಾಗಿ ಪರಿವರ್ತಿಸುವ ಯೋಜನೆ ಬಗ್ಗೆಯೂ ನೀತಿ ಆಯೋಗವು ನೀಲ ನಕ್ಷೆ ರೂಪಿಸಿದ್ದು, ಎಲೆಕ್ಟ್ರಿಕ್ ವಾಹನಗಳ ಅಗತ್ಯವಾಗಿ ಬೇಕಿರುವ ಚಾರ್ಜಿಂಗ್ ಸ್ಟೆಷನ್‌ಗಳ ನಿರ್ಮಾಣಕ್ಕೆ ತುರ್ತು ಕ್ರಮ ಕೈಗೊಳ್ಳುವಂತೆ ವಿವಿಧ ಇಲಾಖೆಗಳಿಗೆ ಮಹತ್ವದ ನಿರ್ದೇಶನ ನೀಡಲಾಗಿದೆ. ಹೀಗಾಗಿ ಮುಂದಿನ ಐದು ವರ್ಷದೊಳಗೆ ದೇಶಾದ್ಯಂತ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸುವ ಸಂಬಂಧ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುವಂತೆ ನಿರ್ದೇಶನ ನೀಡಿರುವ ನೀತಿ ಆಯೋಗವು, ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳ ಉತ್ಪಾದನೆಯನ್ನು ತಗ್ಗಿಸಿ ಎಲೆಕ್ಟ್ರಿಕ್ ವಾಹನಗಳ ಮೇಲೆ ಹೆಚ್ಚಿನ ಒತ್ತು ನೀಡುವಂತೆ ಉತ್ಪಾದನಾ ಸಂಸ್ಥೆಗಳಿಗೂ ಸಹ ಖಡಕ್ ಸೂಚನೆ ನೀಡಿದೆ.

Leave A Reply

Your email address will not be published.