ಚಿತ್ರರಂಗದಲ್ಲಿ ಬಂದು ಹೋಗುವ ಕಲಾವಿದರ ಸಂಖ್ಯೆ ಅಪಾರ. ಆದರೆ ಅಲ್ಲಿ ಸುದೀರ್ಘ ಕಾಲ ಉಳಿಯುವವರು ತುಂಬಾ ಕಡಿಮೆ. ಅದರಲ್ಲೂ ಕನ್ನಡ ಚಿತ್ರರಂಗದಂತಹ ಸೀಮಿತ ಮಾರುಕಟ್ಟೆಯ ಪರಿಮಿತಿಗಳಲ್ಲಿ ಕೆಲವೊಂದು ನಾಯಕನಟರುಗಳು ಹಲವು ದಶಕಗಳು ನೆಲೆ ನಿಂತಿದ್ದಾಗ ಇಲ್ಲಿಗೆ ಹೆಚ್ಚು ಬಂದು ಹೋಗುತ್ತಿದ್ದವರು ಇತರ ಭಾಷೆಗಳ ಕೆಲವೊಂದು ಪ್ರಸಿದ್ಧ ಚಿತ್ರನಟಿಯರು ಇಲ್ಲವೇ ಕೆಲವೊಂದು ಪರಭಾಷಾ ನಟಿಯರು. ಇಂತಹವರ ನಡುವೆ ಇಲ್ಲಿ ನೂರಾರು ಚಿತ್ರಗಳಲ್ಲಿ ನಟಿಸಿ ಕನ್ನಡ ಚಿತ್ರರಸಿಕರ ಹೃದಯದಲ್ಲಿ ನೆಲೆನಿಂತವರಲ್ಲಿ ಕನ್ನಡದ ಹುಡುಗಿ ಮಾಲಾಶ್ರೀ ಕೂಡ ಒಬ್ಬರು. ಆದ್ದರಿಂದ ನಾವು ಇಲ್ಲಿ ಇವರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ.
ಮಾಲಾಶ್ರೀಯವರು ತಮ್ಮ ಭಾವಪೂರ್ಣ ನಾಯಕಿ ಪಾತ್ರಗಳಿಗೆ ಹೆಸರುವಾಸಿಯಾದ ಒಬ್ಬ ಕನ್ನಡ ನಟಿ. ಅವರು1989ರಲ್ಲಿ ಸಾರ್ವಕಾಲಿಕ ಜನಪ್ರಿಯ ನಂಜುಂಡಿ ಕಲ್ಯಾಣ ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ಆ ಚಿತ್ರದಲ್ಲಿ ಒಬ್ಬ ಅಹಂಕಾರದ ಗಂಡುಬೀರಿ ಮಹಿಳೆಯಾಗಿ ಅವರ ಅಭಿನಯ ಅವರಿಗೆ ಅಪಾರ ಮನ್ನಣೆ ತಂದಿತು. ಕನ್ನಡ ಚಿತ್ರರಂಗದ ಪ್ರಮುಖ ನಟಿಯಾಗಿ ಅವರ ಆಗಮನವನ್ನು ಸೂಚಿಸಿತು. ಅವರ ಮುಂದಿನ ಕೆಲವು ಚಿತ್ರಗಳು ಅವರಿಗಾಗಿಯೇ ಬರೆದಂಥವಾಗಿದ್ದವು ಮತ್ತು ಇವೆಲ್ಲವುಗಳಲ್ಲಿ ಅವರು ಮುಖ್ಯ ಪಾತ್ರದಲ್ಲಿದ್ದರು.
ಈ ಎಲ್ಲ ಚಿತ್ರಗಳು ಭಾರಿ ಯಶಸ್ಸು ಕಂಡವು. ಗಜಪತಿ ಗರ್ವಭಂಗ, ಪೋಲಿಸ್ನ ಹೆಂಡ್ತಿ, ಪ್ರತಾಪ್, ಕಿತ್ತೂರಿನ ಹುಲಿ ಮತ್ತು ತವರುಮನೆ ಉಡುಗೊರೆಯಂತಹ ಚಿತ್ರಗಳು ಅವರಿಗೆ ಅಪಾರ ಜನಪ್ರಿಯತೆ ತಂದುಕೊಟ್ಟವು. ಅವರು ಮುಂದೆ ಕನ್ನಡ ಚಿತ್ರರಂಗದ ಅತ್ಯಧಿಕ ಸಂಭಾವನೆ ಪಡೆದ ನಟಿಯೆನಿಸಿದರು. ಇವರು ನಿರ್ಮಾಪಕ ಆಗಿದ್ದ ರಾಮು ಅವರೊಡನೆ ವಿವಾಹವಾದರು. ಇತ್ತೀಚೆಗೆ ಕೋಟಿ ನಿರ್ಮಾಪಕ ಎಂದೇ ಪ್ರಖ್ಯಾತರಾಗಿದ್ದ ಹಾಗೂ ಖ್ಯಾತ ನಟಿ ಮಾಲಾಶ್ರೀ ಪತಿ ರಾಮು ಅವರು ಕೊರೊನಾವೈರಸ್ ಸೋಂಕಿನಿಂದ ಸೋಮವಾರ ಮೃತಪಟ್ಟಿದ್ದಾರೆ.
ಕಳೆದ ದಿನಗಳ ಹಿಂದೆಯಷ್ಟೇ ನಿರ್ಮಾಪಕ ರಾಮು ಅವರಿಗೆ ಕೊವಿಡ್19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿತ್ತು. ತೀವ್ರ ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ರಾಮು ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ದರಿಂದ ಪತಿಯನ್ನು ಕಳೆದುಕೊಂಡು ಬಹಳ ನೋವಿನಲ್ಲಿ ಇದ್ದ ಮಾಲಾಶ್ರೀ ಅವರಿಗೆ ಅನೇಕ ಚಿತ್ರರಂಗದ ಕಲಾವಿದರು ಕೊರೊನಾ ಕಾರಣದಿಂದಾಗಿ ಫೋನಿನಲ್ಲಿ ಸಾಂತ್ವನ ಹೇಳಿದ್ದಾರೆ. ಆದರೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮನೆಗೆ ಬಂದು ಮಾಲಾಶ್ರೀ ಅವರಿಗೆ ಮತ್ತು ಅವರ ಮಕ್ಕಳಾದ ಆರ್ವಿನ್ ಹಾಗೂ ಅನನ್ಯ ಅವರಿಗೆ ಸಾಂತ್ವನದ ಮಾತುಗಳನ್ನು ಹೇಳಿ ಧೈರ್ಯವನ್ನು ನೀಡಿದ್ದಾರೆ.