ಸರ್ಕಾರ ನಿಗದಿಪಡಿಸಿದ ಮಾನದಂಡಗಳಿಗೆ ವಿರುದ್ಧವಾಗಿ ಎಪಿಎಲ್ ಕಾರ್ಡ್ ಬದಲಿಗೆ ಬಿಪಿಎಲ್ ಕಾರ್ಡ್ ಹೊಂದಿರುವವರು ರೇಷನ್ ಕಾರ್ಡ್ ಅನ್ನು ನಿಮ್ಮ ತಾಲೂಕಿನ ದಂಡಾಧಿಕಾರಿಗಳಿಗೆ ಹಿಂದಿರುಗಿಸಬೇಕು ಎಂದು ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೋಡೋಣ.
ಯಾರಿಗೆ ಅವಶ್ಯಕತೆ ಇದೆ ಅವರು ಮಾತ್ರ ಬಿಪಿಎಲ್ ಕಾರ್ಡ್ ಪಡೆಯಬಹುದು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಆಯುಕ್ತರು ತಿಳಿಸಿದ್ದಾರೆ. ಸರ್ಕಾರದಿಂದ ಅನುದಾನ ಪಡೆಯುತ್ತಿರುವ ಸಂಸ್ಥೆಗಳ ನೌಕರರು, ಸರ್ಕಾರಿ ಪ್ರಾಯೋಜಿತ, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು/ಮಂಡಳಿಗಳು, ನಿಗಮಗಳು/ಸ್ವಾಯತ್ತ ಸಂಸ್ಥೆಗಳಲ್ಲಿ ನೌಕರಿ ಮಾಡುತ್ತಿರುವವರು, ಆದಾಯ ತೆರಿಗೆ, ಸೇವಾ ತೆರಿಗೆ, ವ್ಯಾಟ್, ವೃತ್ತಿ ತೆರಿಗೆ ಪಾವತಿಸುವ ಕುಟುಂಬಗಳು, ಗ್ರಾಮೀಣ ಪ್ರದೇಶದಲ್ಲಿ 3 ಹೆಕ್ಟೇರ್ ಗಿಂತಲೂ ಹೆಚ್ಚಿನ ಒಣ ಭೂಮಿ ಅಥವಾ ನೀರಾವರಿ ಭೂಮಿ ಹೊಂದಿರುವವರು ಎಪಿಎಲ್ ಮತ್ತು ಬಿಪಿಎಲ್ ಕಾರ್ಡ್ ಹೊಂದಿದ್ದರೆ ಅವುಗಳನ್ನು ತಮ್ಮ ಭಾಗದ ತಹಶೀಲ್ದಾರರಿಗೆ ಹಿಂದಿರುಗಿಸಬೇಕು.
ನಗರ ಪ್ರದೇಶದಲ್ಲಿ ಸಾವಿರ ಅಡಿಗಳಿಗಿಂತಲೂ ಅಧಿಕವಾಗಿರುವ ವಿಸ್ತೀರ್ಣದ ಮನೆ ಹೊಂದಿರುವ ಕುಟುಂಬಗಳು, ಜೀವನ ಉಪಯೋಗಕ್ಕಾಗಿ ಸ್ವತಃ ಓಡಿಸುವ ಟ್ರ್ಯಾಕ್ಟರ್, ಮ್ಯಾಕ್ಸಿ ಕ್ಯಾಬ್, ಟ್ಯಾಕ್ಸಿ ಹೊರತುಪಡಿಸಿ ಉಳಿದ ನಾಲ್ಕು ಚಕ್ರವಾಹನ ಹೊಂದಿರುವ ಕುಟುಂಬಗಳು, ವಾರ್ಷಿಕ ಕುಟುಂಬ ಆದಾಯವು 1.20 ಲಕ್ಷಗಳಿಗಿಂತಲೂ ಅಧಿಕ ಇರುವ ಕುಟುಂಬಗಳು, ಸರ್ಕಾರ ನಿಗದಿ ಪಡಿಸಿದ ಮಾನದಂಡಗಳ ಅನ್ವಯ ಎಪಿಎಲ್ ಮತ್ತು ಬಿಪಿಎಲ್ ಕಾರ್ಡ್ ಹೊಂದಲು ಅನರ್ಹರಾಗಿರುತ್ತಾರೆ. ಒಂದು ವೇಳೆ ಹಿಂದಿರುಗಿಸದೆ ಇದ್ದರೆ, ದಂಡ ಕಟ್ಟಬೇಕಾಗುತ್ತದೆ ಅಲ್ಲದೆ ನೌಕರಿ ಕಳೆದುಕೊಳ್ಳುವ ಸಂಭವ ಕೂಡ ಇದೆ ಎಂದು ಹೇಳಲಾಗಿದೆ. ಬಡತನ ರೇಖೆಗಿಂತ ಕೆಳಗಿರುವವರಿಗೆ ಅಕ್ಕಿ ಇತರೆ ದಿನಸಿ ಸಾಮಾನುಗಳನ್ನು ಕೊಡುವ ಮೂಲಕ ಅವರನ್ನು ಸದೃಢರನ್ನಾಗಿ ಮಾಡುವ ಉದ್ದೇಶಕ್ಕಾಗಿ ಬಿಪಿಎಲ್ ರೇಷನ್ ಕಾರ್ಡ್ ಅನ್ನು ವಿತರಿಸಲಾಗುತ್ತದೆ ಆದರೆ ಬಡತನ ರೇಖೆಗಿಂತ ಮೇಲಿರುವವರು ಬಿಪಿಎಲ್ ಕಾರ್ಡ್ ಅನ್ನು ಪಡೆಯುತ್ತಿದ್ದಾರೆ.
ಇದೊಂದು ಸರ್ಕಾರದ ಮುಂದಿರುವ ಸಮಸ್ಯೆಯಾಗಿದ್ದು ಜನರು ತಾವು ಬಿಪಿಎಲ್ ಕಾರ್ಡ್ ಅನ್ನು ಹೊಂದುವ ಅವಶ್ಯಕತೆ ಇಲ್ಲದಿದ್ದರೆ ತಮ್ಮ ಕಾರ್ಡ್ ಅನ್ನು ತಹಶೀಲ್ದಾರರಿಗೆ ಒಪ್ಪಿಸಬೇಕು, ಈ ಕುರಿತು ಜನರಲ್ಲಿ ಜಾಗೃತಿ ಮೂಡಬೇಕಿದೆ. ನಿಜವಾಗಿಯೂ ಬಡತನ ರೇಖೆಗಿಂತ ಕೆಳಗಿರುವವರಿಗೆ ರೇಷನ್ ಕಾರ್ಡ್ ಸಿಗದೆ ಅವಶ್ಯಕತೆ ಇಲ್ಲದವರಿಗೆ ಬಿಪಿಎಲ್ ಕಾರ್ಡ್ ಸಿಗುತ್ತಿದೆ. ಈ ಮಾಹಿತಿ ಉಪಯುಕ್ತವಾಗಿದ್ದು ಅವಶ್ಯಕತೆ ಇರದಿದ್ದರೂ ಬಿಪಿಎಲ್ ರೇಷನ್ ಕಾರ್ಡ್ ಅನ್ನು ಹೊಂದಿದ್ದರೆ ಈಗಲೇ ಅದನ್ನು ಸರಕಾರಕ್ಕೆ ಒಪ್ಪಿಸಿ.
ಶ್ರೀ ಕೇರಳ ಭಗವತಿ ಜ್ಯೋತಿಷ್ಯ ಶಾಸ್ತ್ರ ಪ್ರಧಾನ ತಂತ್ರಿಕ್ ರಾಘವೇಂದ್ರ ಭಟ್ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಮತ್ತು ನಿಮ್ಮ ಗುಪ್ತ ಸಮಸ್ಯೆಗಳಿಗೆ ಹಾಗೂ ಮನ ಇಚ್ಛಾಕಾರ್ಯ ನೆರವೇರಿಸಲು ಮತ್ತು ಸುಲಭ ಪರಿಹಾರಕ್ಕಾಗಿ ಇಂದೆ ಕರೆ ಮಾಡಿ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ತೊಂದರೆ, ವಿವಾಹದಲ್ಲಿ ತೊಂದರೆ ಸ್ತ್ರೀ-ಪುರುಷ ಪ್ರೇಮ ವಿಚಾರ, ಇಷ್ಟಪಟ್ಟವರು ನಿಮ್ಮಂತೆ ಆಗಲು ಹಣಕಾಸಿನ ತೊಂದರೆ, ಆರೋಗ್ಯ ಸಮಸ್ಯೆ ಉದ್ಯೋಗ, ವ್ಯವಹಾರದಲ್ಲಿ ತೊಂದರೆ, ಅತ್ತೆಸೊಸೆ ತೊಂದರೆ ಡೈವರ್ಸ್ ಪ್ರಾಬ್ಲಮ್ ಮಕ್ಕಳು ನಿಮ್ಮ ಮಾತು ಕೇಳಲು ಶತ್ರು ಬಾಧೆ, ಮಾಟಮಂತ್ರ ತಡೆ ಇನ್ನು ನಿಮ್ಮ ಜೀವನದ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಪರಿಹಾರ ಶ್ರೀ ಅಂಬಾ ಭವಾನಿ ಜ್ಯೋತಿಷ್ಯಾಲಯ ಪಂಡಿತ್ ರಾಘವೇಂದ್ರ ಭಟ್ ಮೊಬೈಲ್ ನಂಬರ್ 9448001466