ದೇಶದಲ್ಲಿ ಮಹಾಮಾರಿ ಕರೊನಾದಿಂದಾಗಿ ಜನರು ಈಗಾಗಲೆ ಸಾಕಷ್ಟು ಕಷ್ಟಗಳನ್ನು ಅನುಭವಿಸಿದ್ದಾರೆ ಎರಡನೇ ಅಲೆ ಮುಗಿಯುತ್ತಿದ್ದಂತೆ ಮತ್ತೆ ಕರೊನಾ ಪ್ರಕರಣಗಳು ಹೆಚ್ಚುತ್ತಿವೆ ಹಾಗಾದರೆ ಇದನ್ನು ತಡೆಯುವ ಸಲುವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾವ ಕ್ರಮಗಳನ್ನು ಜಾರಿಗೆ ತಂದಿದ್ದಾರೆ ಎಂಬುದನ್ನು ತಿಳಿದುಕೊಳ್ಳೋಣ.

ದಕ್ಷಿಣ ಕನ್ನದಡಲ್ಲಿ ಕರೊನಾ ಹೆಚ್ಚಳ ಹಿನ್ನೆಲೆಯಲ್ಲಿ ಆಗಸ್ಟ್ ಐದರಿಂದ ಹದಿನೈದರವರೆಗೆ ಕಟ್ಟುನಿಟ್ಟಿನ ಕ್ರಮವನ್ನು ಜಾರಿಗೆತರಲಾಗಿದೆ ವಾರಾಂತ್ಯದಲ್ಲಿ ಧರ್ಮಸ್ಥಳ ಕುಕ್ಕೆಗೆ ಹೊರಟಿರುವ ಭಕ್ತಾದಿಗಳು ಈ ಸುದ್ದಿಯನ್ನು ತಿಳಿದುಕೊಳ್ಳಿ. ವಾರಾಂತ್ಯದಲ್ಲಿ ಧರ್ಮಸ್ಥಳ ಮತ್ತು ಕುಕ್ಕೆ ದೇವಸ್ಥಾನಗಳು ಸಂಪೂರ್ಣವಾಗಿ ಬಂದಾಗಿರುತ್ತವೆ ಶನಿವಾರ ಮತ್ತು ಭಾನುವಾರ ವಸತಿಗೃಹಗಳಲ್ಲಿ ತಂಗುವುದಕ್ಕೆ ನಿರ್ಭಂದ ವಿಧಿಸಲಾಗಿದೆ.

ದೇವಸ್ಥಾನದಲ್ಲಿ ವಾರಾಂತ್ಯದಲ್ಲಿ ಸಾಂಪ್ರದಾಯಿಕ ಪ್ಯೂಜೆಗಳಿಗೆ ಮಾತ್ರ ಅವಕಾಶವಿದೆ ವಾರದ ಇತರ ಐದು ದಿನಗಳಲ್ಲಿ ಬೆಳಿಗ್ಗೆ ಏಳು ಗಂಟೆಯಿಂದ ಸಂಜೆ ಏಳು ಗಂಟೆಯವರೆಗೆ ದೇವಸ್ಥಾನಗಳು ತೆರೆದಿರುತ್ತದೆ. ವಾರದ ದಿನಗಳಲ್ಲಿ ವಸತಗೃಹದಲ್ಲಿ ತಂಗುವವರಿಗೆ ಎಪ್ಪತ್ತೆರಡು ಗಂಟೆ ಒಳಗಿನ ಕೋವಿಡ ಪರೀಕ್ಷಾ ವರದಿ ಕಡ್ಡಾಯ ಎಂದು ದಕ್ಷಿಣ ಕನ್ನಡದ ಜಿಲ್ಲಾಧಿಕಾರಿ ರಾಜೇಂದ್ರ ಕೆ ವಿ ಆದೇಶವನ್ನು ಹೊರಡಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡನಿಯಂತ್ರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತವು ಸರ್ಕಾರದ ನಿರ್ದೇಶನದಂತೆ ಕಾಲ ಕಾಲಕ್ಕೆ ಎಲ್ಲ ಅವಶ್ಯಕ ಕ್ರಮಗಳನ್ನು ಕೈಗೊಳ್ಳುತ್ತಿದೆ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ನಿರ್ಬಂಧಗಳನ್ನು ವಿಧಿಸಿದ ನಂತರವೂ ಕೋವಿಡ ಪ್ರಕರಣಗಳ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗುತ್ತಿದ್ದು ಈ ಹಂತದಲ್ಲಿಯೇ ಕಟ್ಟು ನಿಟ್ಟಿನ ನಿರ್ಬಂಧಗಳನ್ನು ಅನುಷ್ಟಾನಗೊಳಿಸದೇ ಇದ್ದಲ್ಲಿ ಸಂಭವ್ಯಾ ಮೂರನೇ ಅಲೆಯನ್ನು ಸಮರ್ಪಕವಾಗಿ ನಿರ್ವಹಿಸುವುದು ಕಷ್ಟಸಾಧ್ಯವಾಗುತ್ತದೆ.

ಅಲ್ಲದೆ ದಕ್ಷಿಣ ಕನ್ನಡ ಜಿಲ್ಲೆಯ ನೆರೆಯ ರಾಜ್ಯ ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ಕೋವಿಡ ಪ್ರಕರಣಗಳು ಹೆಚ್ಚಾಗಿದ್ದು ಕಾರಣ ಕೇರಳ ರಾಜ್ಯದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಬರುವ ಪ್ರಯಾಣಿಕರ ಮೇಲೆ ಕೆಲವು ನಿರ್ಬಂಧಗಳನ್ನು ವಿಧಿಸಲಾಗಿದೆ.

ವಾರಾಂತ್ಯದಲ್ಲಿ ಪ್ರತಿಷ್ಠಿತ ದೇವಾಲಯಗಳಾದ ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನ ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಕುಕ್ಕೆ ಸುಬ್ರಮಣ್ಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಬರುತ್ತಿರುವುದರಿಂದ ಅಲ್ಲಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವ ಕುರಿತು ಮಾಹಿತಿ ನೀಡಿದ್ದಾರೆ.

ಕರೊನಾವನ್ನು ಎದುರಿಸಲು ಈ ರೀತಿಯ ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಲ್ಲುವುದು ತುಂಬಾ ಅವಶ್ಯಕವಾಗಿದೆ ಸಮಾಜದ ಸುರಕ್ಷತೆಗಾಗಿ ಮತ್ತು ನಿಮ್ಮಸುರಕ್ಷತೆಗಾಗಿ ನೀವು ಕೂಡ ಮಾಸ್ಕ್ ಧರಿಸಿ ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಸುರಕ್ಷಿತವಾಗಿರಿ.

WhatsApp Group Join Now
Telegram Group Join Now

Leave a Reply

Your email address will not be published. Required fields are marked *

error: Content is protected !!