ನಮ್ಮ ದೇಶದ ಅನೇಕ ಹಳ್ಳಿಗಳಲ್ಲಿ ಇಂದಿಗೂ ಕರೆಂಟ್ ಸಂಪರ್ಕ ಇಲ್ಲ. ಇದೀಗ ಇಂಧನ ಸಚಿವರು ಪಡಿತರ ಚೀಟಿಯನ್ನು ಹೊಂದಿದ ಎಲ್ಲಾ ಮನೆಗಳಿಗೂ ವಿದ್ಯುತ್ ಸಂಪರ್ಕಿಸುವಂತೆ ಆದೇಶ ಹೊರಡಿಸಿದ್ದಾರೆ ಹಾಗೂ ಇತರೆ ಅಂಶಗಳನ್ನು ಸಭೆಯಲ್ಲಿ ಚರ್ಚೆ ಮಾಡಿದ್ದಾರೆ ಅದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೋಡೋಣ.
ಬೆಂಗಳೂರಿನ ಕೆಪಿಟಿಸಿ ಎಲ್ ಕಚೇರಿಯಲ್ಲಿ ಬುಧವಾರ ಇಂಧನ ಇಲಾಖೆ, ವಿದ್ಯುತ್ ಸರಬರಾಜು ಕಂಪನಿಗಳು ಮತ್ತು ಅದರ ಅಂಗ ಸಂಸ್ಥೆಗಳ ಕಾರ್ಯವೈಖರಿಯ ಬಗ್ಗೆ ಸಭೆ ನಡೆಸಿ ಬಜೆಟ್ ನಲ್ಲಿ ಮಂಡಿಸಿರುವ ಎಲ್ಲ ಕಾರ್ಯಕ್ರಮಗಳು ಅನುಷ್ಠಾನಕ್ಕೆ ತರಬೇಕು ಅಲ್ಲದೆ ಕರ್ನಾಟಕ ರಾಜ್ಯಾದ್ಯಂತ ಪಡಿತರ ಚೀಟಿ ಹೊಂದಿರುವ ಪ್ರತಿಯೊಂದು ಮನೆಗೂ ವಿದ್ಯುತ್ ಸಂಪರ್ಕ ಕಲ್ಪಿಸಬೇಕೆಂದು ಇಂಧನ ಸಚಿವ ಸುನೀಲ್ ಕುಮಾರ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಪ್ರಸ್ತುತವಾಗಿ ವಿದ್ಯುತ್ ಸರಬರಾಜು ಕಂಪನಿಗಳಿಗೆ ಆಗುತ್ತಿರುವ ನಷ್ಟವನ್ನು ತಡೆಯಲು ಸೂಕ್ತ ಕಾರ್ಯ ಯೋಜನೆ ರೂಪಿಸಬೇಕು ಎಂದು ಅವರು ಹೇಳಿದರು. ಬಜೆಟ್ ನಲ್ಲಿ ಘೋಷಿಸಿರುವ ಕಾರ್ಯಕ್ರಮಗಳು ಮತ್ತು ಕೇಂದ್ರ ಸರ್ಕಾರದ ಸಹಾಯೋಗದ ಯೋಜನೆಗಳನ್ನು ಅವುಗಳ ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು. ಈ ವಿಷಯದಲ್ಲಿ ನಾನು ಯಾವುದೆ ಕಾರಣಕ್ಕೂ ರಾಜಿ ಆಗುವುದಿಲ್ಲ ಎಂದು ಅವರು ಖಡಕ್ಕಾಗಿ ಎಚ್ಚರಿಕೆ ನೀಡಿದರು. ಜನರಿಗೆ ಸಮಸ್ಯೆಯಾಗದಂತೆ ತ್ವರಿತಗತಿಯಲ್ಲಿ ಸೇವೆ ಸಲ್ಲಿಸಬೇಕು ಎಂದು ಅವರು ಹೇಳಿದರು.
ಇತ್ತೀಚೆಗೆ ಟ್ರಾನ್ಸ್ ಫಾರ್ಮರ್ ಗಳ ದುರಸ್ತಿ, ಅವುಗಳ ಬದಲಾವಣೆ ಕುರಿತು ಬಹಳ ದೂರುಗಳು ಬರುತ್ತಿವೆ, ತಕ್ಷಣ ಅವುಗಳ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು. ಅಲ್ಲದೆ ಅವರು ವಿದ್ಯುಚ್ಛಾಲಿತ ವಾಹನಗಳು ಹೆಚ್ಚಾಗುತ್ತಿವೆ ಆದ್ದರಿಂದ ವಿದ್ಯುತ್ ವಾಹನ ಚಾರ್ಜಿಂಗ್ ಕೇಂದ್ರಗಳನ್ನು ಆರಂಭಿಸಬೇಕು ಎಂದು ಹೇಳಿದರು. ಕೆಲವು ಸ್ಥಳಗಳನ್ನು ಈಗಾಗಲೆ ಗುರುತಿಸಲಾಗಿದೆ, ಅಲ್ಲಿ ವೇಗವಾಗಿ ವಿದ್ಯುತ್ ರಿಚಾರ್ಜಿಂಗ್ ಮಾಡುವ ಘಟಕಗಳನ್ನು ಸ್ಥಾಪಿಸಬೇಕು ಎಂದು ಹೇಳಿದರು. ಒಟ್ಟಿನಲ್ಲಿ ಇಂಧನ ಸಚಿವ ಸುನೀಲ್ ಅವರು ನೀಡಿರುವ ಭರವಸೆಯು ಶೀಘ್ರದಲ್ಲಿ ಈಡೇರಲಿ, ಜನರಿಗೆ ಬೇಗನೆ ಸೇವೆ ಸಿಗಲಿ ಎಂದು ಆಶಿಸೋಣ.
ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430