ಪಶುಸಂಗೋಪನಾ ಇಲಾಖೆಯಲ್ಲಿ ಖಾಲಿ ಇರುವಂತಹ ಶೇಕಡಾ 50 ರಷ್ಟು ಹುದ್ದೆಗಳ ಭರ್ತಿಗೆ ಶೀಘ್ರವೆ ಸೂಕ್ತ ಕ್ರಮವನ್ನು ತೆಗೆದುಕೊಳ್ಳಲಾಗುವುದು ಎಂದು ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ಹೇಳಿದ್ದಾರೆ. ನಗರದ ಮುನ್ಸಿಪಲ್ ಮೈದಾನದ ಒಳ ಕ್ರೀಡಾಂಗಣ ಸಭಾಂಗಣದಲ್ಲಿ ಪಶುಸಂಗೋಪನಾ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಪ್ರಭು ಚವ್ಹಾಣ್ ಅವರು, ಅನೇಕ ವರ್ಷಗಳಿಂದ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಚರ್ಚಿಸಲಾಗುವುದು ಎಂದು ತಿಳಿಸಿದ್ದಾರೆ.
ಈ ಮೂಲಕ ರಾಜ್ಯದ ಪಶುಸಂಗೋಪನಾ ಇಲಾಖೆಯಲ್ಲಿ 50% ಗಳಷ್ಟು ಹುದ್ದೆಗಳು ಖಾಲಿ ಇದ್ದು, ಅವುಗಳ ಭರ್ತಿಗೆ ಶೀಘ್ರದಲ್ಲೇ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಪ್ರಭು ಚೌಹಾಣ್ ತಿಳಿಸಿದ್ದಾರೆ. ಇದರ ಕುರಿತಾಗಿ ಹೆಚ್ಚಿನ ಮಾಹಿತಿಯನ್ನು ನಾವು ಈ ಲೇಖನದ ಮೂಲಕ ತಿಳಿದುಕೊಳ್ಳೋಣ.
ಪಶುಸಂಗೋಪನಾ ಇಲಾಖೆಯ ಸಚಿವರಾಗಿ ಜವಾಬ್ದಾರಿ ವಹಿಸಿಕೊಂಡ ನಂತರ ಇಂದು ಮೊದಲ ಬಾರಿಗೆ, ಸಚಿವರಾದ ಶ್ರೀ ಪ್ರಭು ಚೌಹಾಣ್ ಅವರು ಇಲಾಖೆಯ ಅಡಿಯಲ್ಲಿ ಬರುವ ವಿವಿಧ ಕೇಂದ್ರಗಳಿಗೆ ದಿಢೀರ್ ಭೆಟಿ ನೀಡಿ, ಅಲ್ಲಿನ ಕಾರ್ಯಚಟುವಟಿಕೆಗಳನ್ನು ಪರಿಶೀಲಿಸಿದರು. ವಿವಿಧ ಕೇಂದ್ರಗಳ ಕಾರ್ಯ ನಿರ್ವಹಣೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಇಲಾಖೆಯಲ್ಲಿ ಹಲವಾರು ಹುದ್ದೆಗಳು ಖಾಲಿ ಇದ್ದು, ಇವುಗಳನ್ನು ಮಾನ್ಯ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಭರ್ತಿ ಮಾಡಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಇಲಾಖೆಯ ಕ್ಷೇತ್ರಗಳಲ್ಲಿ ಅತ್ಯುತ್ತಮವಾಗಿ ಸಂವರ್ಧನೆ ಕಾರ್ಯ ನಡೆಯುತ್ತಿದ್ದು, ಅದನ್ನು ಸೂಕ್ತ ರೀತಿಯಲ್ಲಿ ರೈತರಿಗೆ ತಲುಪಿಸಲು ಅತ್ಯುನ್ನತವಾದ ತರಬೇತಿ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು. ಹೈನುಗಾರಿಕೆ ಅಭಿವೃದ್ಧಿಯೊಂದಿಗೆ ಸಮಗ್ರ ಪಶುಪಾಲನೆಗೆ ಹೆಚ್ಚಿನ ಒತ್ತು ಕೊಟ್ಟು ಮೊಲ ಸಾಕಾಣಿಕೆ, ಹಂದಿ ಸಾಕಾಣಿಕೆ, ಕೋಳಿ ಸಾಕಾಣಿಕೆ ಇವುಗಳಿಗೆ ಮುಂದಿನ ದಿನಗಳಲ್ಲಿ ಹೆಚ್ಚಿನ ಉತ್ತೇಜನ ನೀಡಲಾಗುವುದು ಎಂದು ತಿಳಿಸಿದರು.
ಕಳೆದ ಹಲವು ವರ್ಷಗಳಿಂದ ಇಲಾಖೆಯಲ್ಲಿ ಶೇಕಡಾ 50 ರಷ್ಟು ಹುದ್ದೆಗಳು ಖಾಲಿ ಇದ್ದು, ಅವುಗಳನ್ನು ತುಂಬುವ ನಿಟ್ಟಿನಲ್ಲಿ ಪೂರಕ ಕ್ರಮಗಳನ್ನು ಕೈಗೊಳ್ಳುವ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚೆ ನಡೆಸಲಾಗುವುದು. ಹಾಗೂ ಅದರ ಜೊತೆಗೆ ಹಣಕಾಸು ಇಲಾಖೆಯ ಜೊತೆಗೂ ಅಗತ್ಯ ಮಾತುಕತೆ ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ. ಗೋಹತ್ಯೆ ನಿಷೇಧ ಕಾಯ್ದೆ, ಪ್ರತಿ ಜಿಲ್ಲೆಗೊಂದು ಗೋಶಾಲೆ, ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿ ರಚನೆ, ಪಶು ಸಂಜೀವಿನಿ ಆ್ಯಂಬ್ಯುಲೆನ್ಸ್, ಬೆಂಗಳೂರಿನಲ್ಲಿ ಸೂಪರ್ ಸ್ಪೇಶಾಲಿಟಿ ಆಸ್ಪತ್ರೆ ಆರಂಭ, ಸಿಬ್ಬಂದಿ ಬಡ್ತಿಗೆ ಕ್ರಮ, ಪ್ರಾಣಿ ಕಲ್ಯಾಣ ಸಹಾಯವಾಣಿ, ಪಶುಲೋಕ, ಅಮೃತ ಸಿರಿ,
ಅಮೃತ ಧಾರೆ ಯೋಜನೆಗಳನ್ನು ಜಾರಿಗೆ ತರುವ ಮೂಲಕ ದೇಶಿ ತಳಿ ಅಭಿವೃದ್ಧಿಗೆ ಒತ್ತು ನೀಡಲಾಗಿದೆ ಎಂದು ಹೇಳಿದ್ದಾರೆ. ಗೋಮಾತೆ ಕಸಾಯಿ ಖಾನೆಗೆ ಹೋಗಬಾರದು ಎನ್ನುವ ಸದುದ್ದೇಶದಿಂದ ಹೊಸ ಗೋ ಹತ್ಯೆ ನಿಷೇಧ ಕಾಯ್ದೆ ಅನುಷ್ಠಾನಕ್ಕೆ ತಂದು ಕಾನೂನು ಬಿಗಿಗೊಳಿಸಲಾಗಿದೆ ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ. ಹಾಗೆಯೇ ಕಲ್ಯಾಣ ಕರ್ನಾಟಕಕ್ಕೆ ಸಂಬಂಧಿಸಿದಂತೆ 83 ಪಶುವೈದ್ಯರ ನೇರ ನೇಮಕಾತಿ ಮಾಡಿಕೊಳ್ಳಲಾಗುವುದು. 32 ಪಶುವೈದ್ಯಕೀಯ ಪರೀಕ್ಷಕರು, 27 ಪಶುವೈದ್ಯರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಹಾಗೆಯೇ ಕಳೆದ 12 ವರ್ಷಗಳಿಂದ ಭಡ್ತಿ ಸಮಸ್ಯೆ ಎದುರಿಸುತ್ತಿದ್ದ ಅನೇಕರಿಗೆ ಭಡ್ತಿ ನೀಡಿರುವುದಾಗಿಯೂ ಅವರು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.
ಪಶು ಮೇಳದಂತೆಯೇ ರಾಜ್ಯದಲ್ಲಿ ಎಲ್ಲಾ ತಳಿಗಳ ಪಶುಗಳನ್ನು ನೋಡುವುದಕ್ಕೆ ಲಭ್ಯವಾಗುವ ಪಶು ಲೋಕವನ್ನು 1೦೦ ಎಕರೆ ಪ್ರದೇಶದಲ್ಲಿ ಆರಂಭಿಸಲು ಉದ್ದೇಶಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ. ಹೊರಟ್ಟಿಪ್ರಸ್ತುತ ಪಶು ಸಂಗೋಪನೆ ಇಲಾಖೆಯಲ್ಲಿ ಸುಮಾರು 8,000 ಹುದ್ದೆಗಳು ಖಾಲಿ ಇರುವುದಲ್ಲದೇ, ಸುಮಾರು 1,200 ಹುದ್ದೆಗಳು ಪಶು ಸಂಗೋಪನಾ ಇಲಾಖೆಯಲ್ಲಿ ನೇಮಕಗೊಂಡ ಸಿಬ್ಬಂದಿ ಬೇರೆ-ಬೇರೆ ಇಲಾಖೆಗಳಲ್ಲಿ ನಿಯೋಜನೆ ಮೇಲೆ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಈ ಪ್ರಕ್ರಿಯೆ ಪಶು ಸಂಗೋಪನಾ ಇಲಾಖೆಯ ಅಭಿವೃದ್ಧಿ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವುದಲ್ಲದೇ, ಸಿಬ್ಬಂದಿಗಳ ಕೊರತೆಯೂ ಎದ್ದು ಕಾಣುವಂತಿದೆ. ಈ ಹಿನ್ನೆಲೆಯಲ್ಲಿ, ಪ್ರಸ್ತುತ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವುದು ಹಾಗೂ ಪಶು ಇಲಾಖೆಯಲ್ಲಿ ನೇಮಕಗೊಂಡು ಬೇರೆ ಇಲಾಖೆಗೆ ನಿಯೋಜನೆಗೊಂಡ ಸಿಬ್ಬಂದಿಗಳ ಸೇವೆಯನ್ನು ಮಾತೃ ಇಲಾಖೆಗೆ ಹಿಂಪಡೆಯುವುದು ಅವಶ್ಯಕವಾಗಿದೆ ಎಂದಿದ್ದಾರೆ.
ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430