ಮನಸ್ಸು ಬಯಸಿದ ಊಟ-ತಿಂಡಿ ಸಿಕ್ಕಾಗ ಖುಷಿಯಿಂದ ಸೇವಿಸುತ್ತೇವೆ. ಆದರೆ ಅದರ ಪರಿಣಾಮ ಹೊಟ್ಟೆಯಲ್ಲಿ ಗ್ಯಾಸ್ ತುಂಬುವ ಸಮಸ್ಯೆಯನ್ನು ಉಂಟುಮಾಡಬಹುದು. ಪದೇ ಪದೇ ಗಾಸ್ ಬಿಡುಗಡೆಯಾಗುವುದು, ಹೊಟ್ಟೆಯಲ್ಲಿ ನೋವು ಹಾಗೂ ಬಳಲಿಕೆ ಉಂಟಾಗುತ್ತದೆ. ಕೆಲವೊಮ್ಮೆ ಸಭೆ-ಸಮಾರಂಭಗಳ ನಡುವೆ ಇರುವಾಗ ಗ್ಯಾಸ್ ಸಮಸ್ಯೆಯು ಕಾಡುವ ಸಾಧ್ಯತೆಗಳು ಇರುತ್ತವೆ.
ಆಗ ಸಾಕಷ್ಟು ಇರುಸು-ಮುರಿಸು ಉಂಟಾಗುವುದು. ಹೊಟ್ಟೆಯಲ್ಲಿರುವ ಗ್ಯಾಸ್ ಹೊರಗೆ ಹೋದರೆ ಅಷ್ಟು ಸಮಸ್ಯೆ ಎನಿಸದು. ಅದು ಹೊಟ್ಟೆಯಲ್ಲಿಯೇ ಉಳಿದುಕೊಂಡಾಗ ಸಮಸ್ಯೆ ಅಧಿಕವಾಗುವುದು. ಹೊಟ್ಟೆಯಲ್ಲಿ ಗ್ಯಾಸ್ ಸಮಸ್ಯೆ ಉಂಟಾದಾಗ ಅದಕ್ಕೆ ಸುಲಭವಾದ ಮನೆಮದ್ದುಗಳನ್ನು ನಾವು ಈ ಲೇಖನದ ಮೂಲಕ ತಿಳಿದುಕೊಳ್ಳೋಣ.
ಹಾಗಾಗಿ ನಾವು ಸೇವಿಸುವ ದೈನಂದಿನ ಆಹಾರ ಸಮತೋಲನ ಹಾಗೂ ಆರೋಗ್ಯ ಪೂರ್ಣವಾಗಿರಬೇಕು. ಬೀನ್ಸ್, ಎಲೆಕೋಸು, ಕಡಲೆ, ಸಕ್ಕರೆ ಮತ್ತು ಮಸೂರದಂತಹ ಪದಾರ್ಥಗಳು ಹೆಚ್ಚಿನ ಕಾರ್ಬನ್ಗಳನ್ನು ಒಳಗೊಂಡಿರುತ್ತವೆ. ಅವು ಹೊಟ್ಟೆಯಲ್ಲಿ ಸುಲಭವಾಗಿ ಜೀರ್ಣವಾಗುವುದಿಲ್ಲ. ಅವು ಕೊಲೋನ್ ಮೂಲಕ ಹಾದುಹೋಗುತ್ತವೆ. ಅಲ್ಲದೆ ಬಹಳಷ್ಟು ಬ್ಯಾಕ್ಟೀರಿಯಾಗಳಿಂದಲೂ ಕೂಡಿರುತ್ತದೆ. ಅವು ಹೆಚ್ಚು ಅನಿಲವನ್ನು ಬಿಡುಗಡೆ ಮಾಡುವುದರ ಮೂಲಕ ಅನಾರೋಗ್ಯ ಹಾಗೂ ಗ್ಯಾಸ್ ಸಮಸ್ಯೆಯನ್ನು ಸೃಷ್ಟಿಸುತ್ತವೆ. ಇದ್ದಕ್ಕಿದ್ದಂತೆಯೇ ಹೊಟ್ಟೆಯಲ್ಲಿ ಉಂಟಾಗುವ ಗ್ಯಾಸ್ ಸಮಸ್ಯೆಗೆ ನೀವು ಮನೆ ಮದ್ದನ್ನು ಬಳಸಬಹುದು. ಬಹಳ ಪರಿಣಾಮಕಾರಿ ರೀತಿಯಲ್ಲಿ ಶಮನವನ್ನು ನೀಡುವುದು.
ಜೊತೆಗೆ ಜನಗಳ ಮಧ್ಯೆ ಇರುವಾಗ ಉಂಟಾಗುವ ಮುಜುಗರವನ್ನು ತಡೆಯುವುದು. ಓಂಕಾಳು ಇದರಲ್ಲಿ ಥೈಮೋಲ್ ಎಂಬ ಸಂಯುಕ್ತವಿದೆ. ಇದು ಜೀರ್ಣ ಕ್ರಿಯೆಗೆ ಸಹಾಯ ಮಾಡುವುದು. ಹೊಟ್ಟೆಯಲ್ಲಿ ಉಂಟಾಗುವ ಗ್ಯಾಸ್ ಸಮಸ್ಯೆಯನ್ನು ನಿವಾರಿಸಲು ಓಂಕಾಳನ್ನು ಸೇವಿಸಬೇಕು. ನಿತ್ಯವೂ ಒಂದು ಬಾರಿ ಅರ್ಧಟೀ ಚಮಚ ಓಂಕಾಳನ್ನು ಜಗೆದು ನೀರನ್ನು ಕುಡಿಯಬಹುದು. ಇಲ್ಲವೇ ನೀರಿಗೆ ಸೇರಿಸಿ, ಕಷಾಯವನ್ನು ತಯಾರಿಸಿಯೂ ಕುಡಿಯಬಹುದು. ಈ ವಿಧಾನವು ಬಹುಬೇಗ ಆರೈಕೆಯನ್ನು ಮಾಡುವುದು.
ಜೀರಿಗೆ ನೀರು. ಗ್ಯಾಸ್ಟ್ರಿಕ್ ಅಥವಾ ಗ್ಯಾಸ್ ಸಮಸ್ಯೆಗೆ ಜೀರಿಗೆ ನೀರು ಕುಡಿಯುವುದು ಉತ್ತಮ ಮನೆಮದ್ದು. ಜೀರಾ ಅಥವಾ ಜೀರಿಗೆ ಜೀವಾಣು ಗ್ರಂಥಿಗಳನ್ನು ಉತ್ತೇಜಿಸುವ ಸಾರಭೂತ ತೈಲಗಳನ್ನು ಒಳಗೊಂಡಿರುತ್ತದೆ. ಇದು ಆಹಾರದ ಉತ್ತಮ ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ ಮತ್ತು ಹೆಚ್ಚುವರಿ ಅನಿಲದ ರಚನೆಯನ್ನು ತಡೆಯುತ್ತದೆ ಎಂದು ತಜ್ಞರು ಹೇಳುತ್ತಾರೆ. ಎರಡು ಕಪ್ ನೀರಿಗೆ ಒಂದು ಟೀ ಚಮಚ ಜೀರಿಗೆ ಸೇರಿಸಿ, 10-15 ನಿಮಿಷಗಳ ಕಾಲ ಚೆನ್ನಾಗಿ ಕುದಿಸಿ. ನಂತರ ಸ್ವಲ್ಪ ಕಾಲ ತಣಿಯಲು ಬಿಡಿ. ಊಟ ಆದ ನಂತರ ಈ ಜೀರಿಗೆ ನೀರನ್ನು ಸೇವಿಸಿ. ಆಗ ನಿಮ್ಮ ಹೊಟ್ಟೆಯಲ್ಲಿ ಗ್ಯಾಸ್ ತುಂಬುವ ಪ್ರಕ್ರಿಯೆಯನ್ನು ಸುಲಭವಾಗಿ ತಡೆಯಬಹುದು.
ತಾಜಾ ಶುಂಠಿ. ಶುಂಠಿಯು ಆಯುರ್ವೇದದಲ್ಲಿ ಅತ್ಯುತ್ತಮ ಔಷಧಿ ಮೂಲ ಎಂದು ಗುರುತಿಸಲಾಗಿದೆ. ಇದು ವಿವಿಧ ಆರೋಗ್ಯ ಸಮಸ್ಯೆಗಳನ್ನು ಬಹುಬೇಗ ನಿವಾರಿಸುವುದು. ಗ್ಯಾಸ್ ಸಮಸ್ಯೆ ಅಥವಾ ಹೊಟ್ಟೆ ಉಬ್ಬರದ ಸಮಸ್ಯೆ ಹೊಂದಿರುವ ವ್ಯಕ್ತಿಗಳು ಶುಂಠಿಯ ಪರಿಹಾರ ಕಂಡುಕೊಳ್ಳಬಹುದು. ತಾಜಾ ಶುಂಠಿಯ ತುರಿಯನ್ನು ನಿಂಬೆ ರಸದೊಂದಿಗೆ ಸೇರಿಸಿ, ಸೇವಿಸಬೇಕು. ಈ ಕ್ರಮವನ್ನು ಊಟದ ನಂತರ ಸೇವಿಸಿದರೆ ಉತ್ತಮ ಪರಿಹಾರ ನೀಡುವುದು. ಊಟದ ನಂತರ ಬೆಚ್ಚಗಿನ ಶುಂಠಿ ಚಹಾ ಸೇವಿಸುವುದರಿಂದಲೂ ಹೊಟ್ಟೆ ಉಬ್ಬರ ಗುಣಮುಖವಾಗುವುದು. ಶುಂಠಿ ನೈಸರ್ಗಿಕ ಕಾರ್ಮಿನೇಟಿವ್ ಆಗಿ ಕಾರ್ಯನಿರ್ವಹಿಸುತ್ತದೆ.
ಇನ್ನೊಂದು ಉತ್ತಮವಾದ ಮನೆಮದ್ದು ಎಂದರೆ ದೊಡ್ಡಪತ್ರೆ ಎಲೆ. ಇದನ್ನು ಒಣಗಿಸಿಯೂ ಸಹ ನಾವು ಉಪಯೋಗಿಸಿಕೊಳ್ಳಬಹುದು. ಒಂದು ಮೂರ್ನಾಲ್ಕು ದೊಡ್ಡಪತ್ರೆ ಎಲೆಯನ್ನು ತೆಗೆದುಕೊಂಡು ಅದಕ್ಕೆ ಒಂದು ಇಂಚಷ್ಟು ಶುಂಠಿಯನ್ನು ಸಹ ತೆಗೆದುಕೊಂಡು ಎರಡನ್ನೂ ಸ್ವಲ್ಪ ಜಜ್ಜಿಕೊಳ್ಳಬೇಕು. ನಂತರ ಒಂದು ಪಾತ್ರೆಗೆ ಒಂದು ಲೋಟ ನೀರನ್ನು ಹಾಕಿ ಅದಕ್ಕೆ ಜಜ್ಜಿಕೊಂಡ ದೊಡ್ಡಪತ್ರೆ ಎಲೆ ಮತ್ತು ಶುಂಠಿಯನ್ನು ಹಾಕಿ ಸ್ವಲ್ಪ ಕುದಿಸಿ ನಂತರ ಅದನ್ನು ಒಂದು ಪಾತ್ರೆಗೆ ಶೋಧಿಸಿಕೊಂಡು ಸ್ವಲ್ಪ ತಣ್ಣಗಾದ ನಂತರ ಚಿಟಿಕೆ ಅಷ್ಟು ಉಪ್ಪು ಮತ್ತು ಅರ್ಧ ಚಮಚದಷ್ಟು ನಿಂಬೆ ಹಣ್ಣಿನ ರಸವನ್ನು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿಕೊಂಡು ಕುಡಿಯುವುದರಿಂದ ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು.