ಬೀದರ್ ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವಂತಹ ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನ ಮಾಡಲಾಗಿದೆ. ಯಾರೆಲ್ಲಾ ಅರ್ಜಿ ಸಲ್ಲಿಸಬಹುದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಏನೂ? ವೇತನ ಎಷ್ಟು ಈ ಎಲ್ಲದರ ಕುರಿತಾಗಿ ವಿವರವಾಗಿ ನಾವು ಈ ಲೇಖನದಲ್ಲಿ ನೋಡೋಣ.
ಹುದ್ದೆಗಳ ಹೆಸರು ಸ್ಟೆನೋಗ್ರಾಫರ್ ಗ್ರೇಡ್ 3 ಹಾಗೂ ಟೈಪಿಸ್ಟ್ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಹ್ವಾನ ಮಾಡಲಾಗಿದೆ. ಇದರಲ್ಲಿ ಒಟ್ಟೂ 21 ಹುದ್ದೆಗಳು ಖಾಲಿ ಇದ್ದು ಅವುಗಳಲ್ಲಿ ಸ್ಟೆನೋಗ್ರಾಫರ್ ಗ್ರೇಡ್ 3 ಅಲ್ಲಿ ಹನ್ನೆರಡು ಹುದ್ದೆಗಳು ಹಾಗೂ ಟೈಪಿಸ್ಟ್ ನಲ್ಲಿ ಒಂಭತ್ತು ಹುದ್ದೆಗಳು ಖಾಲಿ ಇದ್ದಿರುತ್ತವೆ ಆಸಕ್ತ ಅಭ್ಯರ್ಥಿಗಳು ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು.
ಉದ್ಯೋಗ ಸ್ಥಳ ಬೀದರ್ ಜಿಲ್ಲೆ. ಇನ್ನೂ ಅಭ್ಯರ್ಥಿಗಳ ವಿದ್ಯಾರ್ಹತೆ ಏನು ಎಂದು ನೋಡುವುದಾದರೆ, ಅರ್ಜಿ ಸಲ್ಲಿಸಲು ನಿಗದಿ ಪಡಿಸಿದ ಕೊನೆಯ ದಿನಾಂಕದ ಒಳಗಾಗಿ ಅಭ್ಯರ್ಥಿಗಳು ದ್ವಿತೀಯ ಪಿಯುಸಿ , ಮೂರು ವರ್ಷದ ಡಿಪ್ಲೊಮಾ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಸ್ಟೆನೋಗ್ರಾಫರ್ ಹುದ್ದೆಗೆ ಕನ್ನಡ ಮತ್ತು ಆಂಗ್ಲ ಹಿರಿಯ ಶ್ರೇಣಿ ಶೀಘ್ರಲಿಪಿ ಹಾಗೂ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಹಾಗೂ ಅದೇ ರೀತಿ ಟೈಪಿಸ್ಟ್ ಹುದ್ದೆಗೆ ಕನ್ನಡ ಮತ್ತು ಆಂಗ್ಲ ಹಿರಿಯ ಶ್ರೇಣಿ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ ನೋಡುವುದಾದರೆ, ಕನಿಷ್ಠ ಹದಿನೆಂಟು ವರ್ಷ ವಯಸ್ಸು ಆಗಿರಬೇಕು ಹಾಗೂ ಗರಿಷ್ಠ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಮೂವತ್ತೈದು ವರ್ಷ ವಯಸ್ಸು ಆಗಿರಬೇಕು. SC, ST ಹಾಗೂ ಪ್ರ ವರ್ಗ ಒಂದರ ಅಭ್ಯರ್ಥಿಗಳಿಗೆ ನಲವತ್ತು ವರ್ಷ ಹಾಗೂ 2ಎ , 2ಬಿ, 3ಎ, 3ಬಿ ವರ್ಗದ ಅಭ್ಯರ್ಥಿಗಳಿಗೆ ಆದರೆ ಗರಿಷ್ಠ ಮೂವತ್ತೆಂಟು ವರ್ಷ ವಯಸ್ಸು ಆಗಿರಬೇಕು.
ಆಯ್ಕೆಯ ವಿಧಾನ ಹೇಗೆ ಎಂದು ನೋಡುವುದಾದರೆ, ಅಭ್ಯರ್ಥಿಗಳು ಅರ್ಹತಾ ಪರೀಕ್ಷೆಯಲ್ಲಿ ಗಳಿಸಿದ ಒಟ್ಟೂ ಶೇಕಡಾವಾರು ಅಂಕಗಳು ಮತ್ತು ಸಾಮರ್ಥ್ಯ ಪರೀಕ್ಷೆಯಲ್ಲಿ ಗಳಿಸುವ ಅಂಕಗಳು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು. ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕ ಈ ರೀತಿಯಾಗಿದೆ. ಪ್ರ ವರ್ಗ 2ಎ , 2ಬಿ, 3ಎ, 3ಬಿ ಹಾಗೂ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 200 ರೂಪಾಯಿ ಅರ್ಜಿ ಶುಲ್ಕ ಹಾಗೂ SC ST ಹಾಗೂ ಪ್ರವರ್ಗ ಒಂದರ ಅಭ್ಯರ್ಥಿಗಳಿಗೆ ನೂರು ರೂಪಾಯಿ ಅರ್ಜಿ ಶುಲ್ಕ ಕಟ್ಟಬೇಕು.
ಶುಲ್ಕ ಪಾವತಿಸುವ ವಿಧಾನ ಅಭ್ಯರ್ಥಿಗಳು ಆನ್ಲೈನ್ ಮೂಲಕ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ , ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು. ಅಥವಾ ಜಿಲ್ಲಾ ನ್ಯಾಯಾಲಯದ ವೆಬ್ಸೈಟ್ ನಿಂದ ಚಲನ್ ಪ್ರಿಂಟ್ ತೆಗೆದು SBI ಬ್ಯಾಂಕ್ ನ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿ ಮಾಡಬಹುದು. ಇನ್ನೂ ಅರ್ಜಿ ಸಲ್ಲಿಸುವ ವಿಧಾನ ಹೇಗೆ ಎಂದು ನೋಡುವುದಾದರೆ, ಅಭ್ಯರ್ಥಿಗಳು ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
https://district.ecourt.gov.in/bidar ಈ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಸಲ್ಲಿಸಬಹುದು.ಇನ್ನೂ ಈ ಎರಡೂ ಹುದ್ದೆಗಳಿಗೆ ನೀಡುವ ವೇತನ ಎಷ್ಟು? ಎಂದು ನೋಡುವುದಾದರೆ, ಸ್ಟೆನೋಗ್ರಾಫರ್ ಗ್ರೇಡ್ 3 ಈ ಹುದ್ದೆಗೆ ಇಪ್ಪತ್ತೇಳು ಸಾವಿರದ ಆರುನೂರ ಐವತ್ತು ರೂಪಾಯಿ ಇಂದ ಐವತ್ತೆರಡು ಸಾವಿರದ ಆರುನೂರ ಐವತ್ತು ರೂಪಾಯಿ ವರೆಗೆ ಮಾಸಿಕ ವೇತನ ನೀಡಲಾಗುವುದು.
ಅದೇ ರೀತಿ ಟೈಪಿಸ್ಟ್ ಹುದ್ದೆಗೆ ಇಪ್ಪತ್ತೊಂದು ಸಾವಿರದ ನಾಲ್ಕುನೂರು ರೂಪಾಯಿಯಿಂದ ನಲವತ್ತೆರಡು ಸಾವಿರದವರೆಗೆ ವೇತನ ನೀಡಲಾಗುವುದು. ಪ್ರಮುಖ ದಿನಾಂಕಗಳನ್ನು ನೋಡುವುದಾದರೆ, ಅರ್ಜಿ ಸಲ್ಲಿಸಲು ಆರಂಭವಾದ ದಿನಾಂಕ 09/09/2021 ಆಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 09/10/2021 ಆಗಿರುತ್ತದೆ ಹಾಗೂ ಶುಲ್ಕ ಪಾವತಿಸಲು ಕೊನೆಯ ದಿನಾಂಕ 12/10/2021 ಆಗಿರುತ್ತದೆ.
ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430