ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 14ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಭರ್ಜರಿ ಪ್ರದರ್ಶನವನ್ನು ಮುಂದುವರೆಸಿದ್ದು, ಸದ್ಯ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಪ್ಲೇ-ಆಫ್‌ಗೆ ಏರುವ ನೆಚ್ಚಿನ ತಂಡಗಳಲ್ಲಿ ಒಂದು ಎಂದು ಗುರುತಿಸಿಕೊಂಡಿರುವ ಆರ್‌ಸಿಬಿ ತಂಡ ಬೌಲಿಂಗ್ ನಲ್ಲಿ ಗಮನಾರ್ಹವಾದ ಪ್ರದರ್ಶನವನ್ನು ತೋರುತ್ತಿದೆ.
ರಾಜಸ್ಥಾನ ರಾಯಲ್ಸ್ ವಿರುದ್ದದ ಪಂದ್ಯದಲ್ಲಿ ಆರ್‌ಸಿಬಿ ವೇಗಿ ಹರ್ಷಲ್ ಪಟೇಲ್ ಅಪರೂಪದ ದಾಖಲೆಯನ್ನು ಬರೆದಿದ್ದಾರೆ. ಏನದು ದಾಖಲೆ ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ. ಡೆತ್ ಓವರ್ ಸ್ಪೆಷಲಿಸ್ಟ್ ಆಗಿ ಗುರುತಿಸಿಕೊಂಡಿರುವ ಹರ್ಷಲ್ ಪಟೇಲ್ ಐಪಿಎಲ್ ಇತಿಹಾಸದಲ್ಲೇ ಆರ್‌ಸಿಬಿಯ ಯಾವೊಬ್ಬ ಬೌಲರ್ ಮಾಡಿರದ ವಿಶೇಷ ಸಾಧನೆ ಮಾಡಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲೆ ಅತಿದೊಡ್ಡ ದಾಖಲೆ ಮಾಡಿದ್ದಾರೆ ಆರ್‌ಸಿಬಿ ವೇಗಿ ಹರ್ಷಲ್ ಪಟೇಲ್. ಇದರ ಕುರಿತಾಗಿ ಹೆಚ್ಚಿನ ಮಾಹಿತಿಯನ್ನು ನಾವು ಈ ಲೇಖನದ ಮೂಲಕ ತಿಳಿದುಕೊಳ್ಳೋಣ.
14ನೇ ಆವೃತ್ತಿಯ ಐಪಿಎಲ್ ಟೂರ್ನಿಯ 43ನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ದ ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 7 ವಿಕೆಟ್‌ಗಳ ಜಯ ಸಾಧಿಸಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರಮುಖ ಬೌಲಿಂಗ್ ಅಸ್ತ್ರ ಹರ್ಷಲ್ ಪಟೇಲ್ ಐಪಿಎಲ್ ಇತಿಹಾಸದ ಅತಿದೊಡ್ಡ ದಾಖಲೆಯನ್ನು ಪುಡಿಪುಡಿ ಮಾಡಿದ್ದಾರೆ. ಇಂಡಿಯನ್ ಪ್ರೀಮಿಯರ್ ಲೀಗ್ 14ನೇ ಆವೃತ್ತಿಯ ಬುಧವಾರದ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಹರ್ಷಲ್ ಈ ವಿಶೇಷ ಸಾಧನೆ ಮಾಡಿದ್ದಾರೆ.
ಈ ಬಾರಿಯ ಲೀಗ್‌ನಲ್ಲಿ ಅತಿ ಹೆಚ್ಚು ವಿಕೆಟ್‌ಗಳನ್ನು ಪಡೆದು ಪರ್ಪಲ್ ಕ್ಯಾಪ್ ತೊಟ್ಟಿರುವ ಹರ್ಷಲ್ ಪಟೇಲ್, ರಾಜಸ್ಥಾನ ರಾಯಲ್ಸ್ ತಂಡದ ವಿರುದ್ಧದ ಪಂದ್ಯದಲ್ಲಿ ಆರಂಭದಲ್ಲಿ ದುಬಾರಿಯಾದರು. ಆದರೆ, ಕೊನೇಯ ಓವರ್‌ನಲ್ಲಿ ಆರ್‌ಸಿಬಿ ಬೌಲರ್ ರಾಜಸ್ಥಾನ್ ಬ್ಯಾಟರ್ಗಳನ್ನು ಪೆವಿಲಿಯನ್ಗೆ ಅಟ್ಟಿ ಮೂರು ವಿಕೆಟ್ ಪಡೆದುಕೊಂಡು ವಿಶೇಷ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಐಪಿಎಲ್ ನಲ್ಲಿ ಇದುವರೆಗೂ ಇತಿಹಾಸದಲ್ಲೇ ಆರ್‌ಸಿಬಿಯ ಯಾವೊಬ್ಬ ಬೌಲರ್ ಮಾಡಿರದ ವಿಶೇಷ ಸಾಧನೆಯನ್ನು ಹರ್ಷಲ್ ಪಟೇಲ್ ಮಾಡಿದ್ದಾರೆ. ಆಲ್ರೌಂಡ್ ಪ್ರದರ್ಶನ ತೋರಿದ ವಿರಾಟ್ ಪಡೆ ಗೆಲುವಿನೊಂದಿಗೆ 14 ಅಂಕಗಳ ಸಹಿತ ಅಂಕಪಟ್ಟಿಯಲ್ಲಿ ಆರ್‌ಸಿಬಿ 3ನೇ ಸ್ಥಾನವನ್ನು ಮತ್ತಷ್ಟು ಭದ್ರಪಡಿಸಿಕೊಂಡಿದ್ದು, ಪ್ಲೇ ಆಫ್‌ಗೆ ಮತ್ತಷ್ಟು ಹತ್ತಿರವಾಗಿದೆ.
ರಾಜಸ್ಥಾನ ರಾಯಲ್ಸ್ ವಿರುದ್ದ ಮತ್ತೊಮ್ಮೆ ಮಿಂಚಿನ ಪ್ರದರ್ಶನ ತೋರಿದ ಪರ್ಪಲ್ ಕ್ಯಾಪ್ ಒಡೆಯ ಹರ್ಷಲ್ ಪಟೇಲ್ ಒಂದೇ ಓವರ್‌ನಲ್ಲಿ ಮತ್ತೆ 3 ವಿಕೆಟ್ ಕಬಳಿಸುವ ಮೂಲಕ ಈ ಆವೃತ್ತಿಯಲ್ಲೇ 26 ಬಲಿ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಅನ್‌ಕ್ಯಾಪ್ಡ್ ಆಟಗಾರರಲ್ಲಿ ಐಪಿಎಲ್‌ನಲ್ಲಿ ಹೆಚ್ಚು ವಿಕೆಟ್ ಪಡೆದ ಮೊದಲ ಬೌಲರ್ ಆಗಿ ಗಮನ ಸೆಳೆದಿದ್ದಾರೆ. ಇದಕ್ಕೂ ಮುನ್ನ 2015ರಲ್ಲಿ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಲ್ 23 ವಿಕೆಟ್‌ಗಳನ್ನು ಪಡೆದಿದ್ದು ಆರ್‌ಸಿಬಿ ಪರ ಶ್ರೇಷ್ಠ ಸಾಧನೆಯ ದಾಖಲೆ ಆಗಿತ್ತು. ಈಗ ಈ ದಾಖಲೆ ಹರ್ಷಲ್ ಪಾಲಾಗಿದೆ.
ಸ್ಲೋ ಬಾಲ್ ಮೂಲಕ ಡೆತ್ ಓವರ್ ಸ್ಪೆಷಲಿಸ್ಟ್ ಆಗಿ ಗುರುತಿಸಿಕೊಂಡಿರುವ ಹರ್ಷಲ್ ಪಟೇಲ್ ರಾಜಸ್ಥಾನ್ ಬ್ಯಾಟಿಂಗ್ ಇನ್ನಿಂಗ್ಸ್ನ ಅಂತಿಮ ಓವರ್‌ನಲ್ಲಿ ಮ್ಯಾಜಿಕ್ ಮಾಡಿಬಿಟ್ಟರು. ಮತ್ತೊಮ್ಮೆ ಹ್ಯಾಟ್ರಿಕ್ ಪಡೆಯುವ ಅವಕಾಶವೂ ಇತ್ತು. ಮೊದಲ ಎಸೆತ ಡಾಟ್ ಆದರೆ, ಎರಡನೇ ಎಸೆತದಲ್ಲಿ ರಿಯಾನ್ ಪರಾಗ್ ಅವರನ್ನು ಔಟ್ ಮಾಡಿದರು. ನಂತರದ ಮೂರನೇ ಎಸೆತದಲ್ಲಿ ಕ್ರಿಸ್ ಮೊರೀಸ್ಗೆ ಪೆವಿಲಿಯನ್ ಹಾದಿ ತೋರಿಸಿದರು. ನಾಲ್ಕನೇ ಎಸೆತ ಒಂದು ರನ್, ಐದನೇ ಎಸೆತದಲ್ಲಿ ಎರಡು ರನ್ ಹಾಗೂ ಅಂತಿಮ ಆರನೇ ಎಸೆತದಲ್ಲಿ ಮತ್ತೊಂದು ವಿಕೆಟ್. ಮುಂಬೈ ಇಂಡಿಯನ್ಸ್ ವಿರುದ್ದ ಪಂದ್ಯದಲ್ಲಿ ಹರ್ಷಲ್ ಪಟೇಲ್ ಹ್ಯಾಟ್ರಿಕ್ ವಿಕೆಟ್ ಕಬಳಿಸಿ ಗಮನ ಸೆಳೆದಿದ್ದರು. ಇದರೊಂದಿಗೆ ಆರ್‌ಸಿಬಿ ಪರ ಹ್ಯಾಟ್ರಿಕ್ ವಿಕೆಟ್ ಕಬಳಿಸಿದ ಮೂರನೇ ಬೌಲರ್ ಎನಿಸಿಕೊಂಡಿದ್ದರು.
ಇನ್ನು ರಾಜಸ್ಥಾನ ರಾಯಲ್ಸ್ ವಿರುದ್ದದ ಪಂದ್ಯದಲ್ಲೂ ಸತತ 2 ವಿಕೆಟ್ ಕಬಳಿಸಿದರಾದರೂ ಹ್ಯಾಟ್ರಿಕ್ ವಿಕೆಟ್ ಕಬಳಿಸಲು ಸಾಧ್ಯವಾಗಲಿಲ್ಲ. ಇನ್ನೂ ಐಪಿಎಲ್ ಇತಿಹಾಸದಲ್ಲಿ ಒಂದೇ ಆವೃತ್ತಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ದಾಖಲೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಲ್‌ರೌಂಡರ್ ಡ್ವೇನ್ ಬ್ರಾವೋ ಹೆಸರಲ್ಲಿದೆ. 2013ರ ಆವೃತ್ತಿಯಲ್ಲಿ ಬ್ರಾವೋ ಒಟ್ಟು 32 ವಿಕೆಟ್‌ಗಳನ್ನು ಪಡೆದ ಸಾಧನೆ ಮಾಡಿದ್ದರು. ಈಗ ಈ ದಾಖಲೆ ಮುರಿಯಲು ಹರ್ಷಲ್‌ಗೆ ಕೇವಲ 7 ವಿಕೆಟ್‌ಗಳ ಅಗತ್ಯವಿದೆ. ಲೀಗ್‌ನಲ್ಲಿ ಇನ್ನು ಮೂರು ಪಂದ್ಯ ಬಳಿಕ ನಾಕ್‌ಔಟ್ ಪಂದ್ಯಗಳಲ್ಲಿ ಹರ್ಷಲ್‌ಗೆ ಈ ದಾಖಲೆ ಮುರಿಯುವ ಅತ್ಯುತ್ತಮ ಅವಕಾಶ ಸಿಕ್ಕಿದೆ.
ಅಲ್ಲದೆ ಐಪಿಎಲ್ ಮಂಡಳಿ ಕೇಳಿದ ಪೋಲ್ ಪ್ರಶ್ನೆಯಲ್ಲಿ ಹರ್ಷಲ್ ಅವರು ಬ್ರಾವೋ ದಾಖಲೆಯನ್ನೂ ಮುರಿಯಲಿದ್ದಾರೆ ಎಂದು ಅಭಿಮಾನಿಗಳು ನಂಬಿಕೆ ವ್ಯಕ್ತಪಡಿಸಿದ್ದಾರೆ. ಇದರೊಂದಿಗೆ ಐಪಿಎಲ್ ಆವೃತ್ತಿಯೊಂದರಲ್ಲಿ ಅತಿಹೆಚ್ಚು ವಿಕೆಟ್ ಪಡೆದ ಆರ್‌ಸಿಬಿಯ ಬೌಲರ್ ಎನ್ನುವ ದಾಖಲೆಯನ್ನು ಹರ್ಷಲ್ ಪಟೇಲ್ ಬರೆದಿದ್ದಾರೆ. ಈ ಋುತುವಿನಲ್ಲಿ ಒಟ್ಟು ವಿಕೆಟ್ ಗಳಿಕೆಯನ್ನು 26ಕ್ಕೆ ಹೆಚ್ಚಿಸಿಕೊಂಡಿದ್ದಾರೆ. ದುಬೈನಲ್ಲಿ ಬುಧವಾರ ನಡೆದ ಐಪಿಎಲ್ 2021ರ 43ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಆರ್‌ಸಿಬಿ ತಂಡ 7 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತು. ಗ್ಲೆನ್ ಮ್ಯಾಕ್ಸ್ವೆಲ್ ಮತ್ತು ಯುಜ್ವೇಂದ್ರ ಚಹಾಲ್ ಹೀಗೆ ಬ್ಯಾಟಿಂಗ್ – ಬೌಲಿಂಗ್ನಲ್ಲಿ ಮಿಂಚಿದ ವಿರಾಟ್ ಕೊಹ್ಲಿ ಪಡೆ ಅಮೋಘ ಗೆಲುವು ಕಂಡಿತು.
ಈ ಮೂಲಕ ಬೆಂಗಳೂರು ತಂಡ ಪಾಯಿಂಟ್ ಟೇಬಲ್ನಲ್ಲಿ 14 ಅಂಕದೊಂದಿಗೆ ಮೂರನೇ ಸ್ಥಾನದಲ್ಲಿದ್ದು, ಪ್ಲೇ ಆಫ್ ಸನಿಹ ತಲುಪಿದೆ. ಈ ಮೊದಲು 2015ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ 15 ಪಂದ್ಯಗಳಲ್ಲಿ ಲೆಗ್ ಸ್ಪಿನ್ನರ್ ಯುಜುವೇಂದ್ರ ಚಹಲ್ 23 ವಿಕೆಟ್ ಕಬಳಿಸಿದ್ದೇ ಆರ್‌ಸಿಬಿ ಪರ ಗರಿಷ್ಠ ಎನಿಸಿತ್ತು.
ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430