ನಿರುದ್ಯೋಗವು ಭಾರತ ಎದುರಿಸುತ್ತಿರುವ ಒಂದು ಪ್ರಮುಖ ಸಮಸ್ಯೆಯಾಗಿದೆ. ಬಹಳ ವರ್ಷಗಳಿಂದಲೂ ಈ ಸಮಸ್ಯೆ ಭಾರತವನ್ನು ಕಾಡುತ್ತಲೆ ಇದೆ. ಸರ್ಕಾರ ಅನೇಕ ರೀತಿಯಲ್ಲಿ ಉದ್ಯೋಗ ಸೃಷ್ಟಿ ಮಾಡಿದರೂ ಶಿಕ್ಷಣ, ಕೌಶಲ್ಯ ಕೊರತೆಯಿಂದಾಗಿ ಸಾಕಷ್ಟು ಜನರು ಉದ್ಯೋಗದಿಂದ ಹೊರಗುಳಿದಿದ್ದಾರೆ.
ಇದೀಗ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಈ ಲೇಖನದ ಮೂಲಕ ತಿಳಿದುಕೊಳ್ಳೋಣ.
ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಎಫ್ಎಸ್ಎಸ್ಎಐ ದಲ್ಲಿ ಖಾಲಿ ಇರುವ ತಾಂತ್ರಿಕ ಅಧಿಕಾರಿ, ಆಹಾರ ಸುರಕ್ಷತಾ ಅಧಿಕಾರಿ, ಸಹಾಯಕ, ವೈಯಕ್ತಿಕ ಸಹಾಯಕ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು ಅದಕ್ಕಾಗಿ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಅಭ್ಯರ್ಥಿಗಳು ನವೆಂಬರ್ 7ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅಕ್ಟೋಬರ್ 8 ನೆ ತಾರೀಖಿನಿಂದ ಅರ್ಜಿಸಲ್ಲಿಸಲು ಪ್ರಾರಂಭವಾಗಿದೆ. ಅರ್ಜಿ ಶುಲ್ಕವನ್ನು ನವೆಂಬರ್ 7ರವರೆಗೆ ತುಂಬಲು ಅವಕಾಶವಿರುತ್ತದೆ.
ಒಟ್ಟು 233 ಹುದ್ದೆಗಳು ಖಾಲಿ ಇದ್ದು, ಭಾರತದಾದ್ಯಂತ ಉದ್ಯೋಗಕ್ಕಾಗಿ ನೇಮಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಸಂಬಂಧಿಸಿದ ವಿಭಾಗಗಳಲ್ಲಿ ಪಿಯುಸಿ, ಪದವಿ ಮತ್ತು ಸ್ನಾತಕೋತ್ತರ ಪದವಿಯನ್ನು ಓದಿರಬೇಕು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಾಮಾನ್ಯ ವರ್ಗ ಅಥವಾ ಹಿಂದುಳಿದ ವರ್ಗಗಳಿಗೆ ಸೇರಿದ್ದರೆ 1,500 ರೂಪಾಯಿ ಅರ್ಜಿ ಶುಲ್ಕ ತುಂಬಬೇಕಾಗುತ್ತದೆ. ಅಭ್ಯರ್ಥಿಗಳು ಎಸ್ಸಿಎಸ್ಟಿ, ಮಹಿಳೆಯರು, ಮಾಜಿ ಸೈನಿಕರು ವರ್ಗಕ್ಕೆ ಸೇರಿದ್ದರೆ ಐದು ನೂರು ರೂಪಾಯಿ ಅರ್ಜಿ ಶುಲ್ಕ ತುಂಬಬೇಕಾಗುತ್ತದೆ. ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 25 ವರ್ಷ ಗರಿಷ್ಠ 35 ವರ್ಷ ವಯೋಮಿತಿ ಹೊಂದಿರಬೇಕು.
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಅನುಗುಣವಾಗಿ ಲಿಖಿತ ಪರೀಕ್ಷೆ, ಆಯ್ಕೆಪಟ್ಟಿ, ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಅಭ್ಯರ್ಥಿಗಳ ಆಯ್ಕೆಯಲ್ಲಿ ಪಾರದರ್ಶಕತೆಯನ್ನು ಅನುಸರಿಸಲಾಗುತ್ತದೆ. ಈ ಮಾಹಿತಿಯನ್ನು ತಪ್ಪದೆ ಎಲ್ಲರಿಗೂ ತಿಳಿಸಿ. ಉದ್ಯೋಗಕ್ಕಾಗಿ ಪರದಾಡುತ್ತಿರುವವರು ಈ ಮಾಹಿತಿಯ ಉಪಯೋಗವನ್ನು ಪಡೆದು ಉದ್ಯೋಗಿಗಳಾಗಿ ನಿರುದ್ಯೋಗದ ಪ್ರಮಾಣವನ್ನು ಕಡಿಮೆ ಮಾಡಬಹುದು.
ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430