ಕರ್ನಾಟಕ ರಾಜ್ಯದಲ್ಲಿ ಜನರು ಈಗಾಗಲೆ ಪೆಟ್ರೋಲ್, ಡಿಸೇಲ್ ಅಡುಗೆ ಎಣ್ಣೆಯ ಬೆಲೆ ಏರಿಕೆಯಿಂದ ಕಂಗಾಲಾಗಿದ್ದಾರೆ. ಹೀಗಿರುವಾಗ ಕಳೆದ ಒಂದು ವಾರದಿಂದ ತರಕಾರಿ ಬೆಲೆಯೂ ಸಹ ಗಗನಕ್ಕೇರಿದೆ. ಟೊಮೆಟೊ ಬೆಲೆ ಕೆಜಿಗೆ 60 ರೂಪಾಯಿ ಆಗಿದೆ. ಗಗನಕ್ಕೇರುತ್ತಿರುವ ಟೊಮೆಟೊ ಬೆಲೆಯ ಬಗ್ಗೆ ಈ ಲೇಖನದ ಮೂಲಕ ತಿಳಿದುಕೊಳ್ಳೋಣ.
ರಾಜ್ಯದಲ್ಲಿ ಕಳೆದ ಹಲವು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು ಭಾರಿ ಪ್ರಮಾಣದಲ್ಲಿ ಮಳೆಯಾದರೆ ತರಕಾರಿ ಗಿಡಗಳು ಹಾನಿಯಾಗುತ್ತದೆ. ಭಾರಿ ಮಳೆಯಿಂದಾಗಿ ಟೊಮೊಟೊ ಪೂರೈಕೆ ಕಡಿಮೆಯಾಗಿದ್ದು ಬೆಂಗಳೂರು ಗ್ರಾಮಾಂತರ ಹಾಗೂ ಮಹಾರಾಷ್ಟ್ರದಿಂದ ಟೊಮೆಟೊ ಪೂರೈಕೆ ಸರಿಯಾಗಿ ಆಗುತ್ತಿಲ್ಲ ಇದರಿಂದ ಕರ್ನಾಟಕದಲ್ಲಿ ಬೇಡಿಕೆ ಹೆಚ್ಚಾಗಿದೆ. ಹೀಗಾಗಿ ಸೆಪ್ಟೆಂಬರ್ ತಿಂಗಳಿನ ಆರಂಭದ ದಿನಗಳಲ್ಲಿ ಟೊಮೆಟೊ ಕೆಜಿಗೆ 10 ರೂ ಇತ್ತು ಈಗ ಟೊಮೆಟೊ ಬೆಲೆ ಕೆಜಿಗೆ ಗರಿಷ್ಠ 15 ರೂ ಹೆಚ್ಚಾಗಿದೆ, ಇದೀಗ ಸದ್ಯದಲ್ಲೆ ನೂರರ ಗಡಿ ದಾಟಬಹುದು ಎಂದು ಹೇಳಲಾಗುತ್ತಿದೆ.
ಕರ್ನಾಟಕ, ಮಧ್ಯಪ್ರದೇಶ, ಆಂಧ್ರಪ್ರದೇಶ, ತೆಲಂಗಾಣ, ಪಶ್ಚಿಮ ಬಂಗಾಳ ಹಾಗೂ ಒಡಿಶಾ ರಾಜ್ಯಗಳು ದೇಶದಲ್ಲಿ ಹೆಚ್ಚು ಟೊಮೆಟೊ ಬೆಳೆಯುವ ರಾಜ್ಯಗಳಾಗಿದೆ ಆದರೆ ಕಳೆದ ಸುಮಾರು ದಿನಗಳಿಂದ ಟೊಮೊಟೊ ಬೆಳೆಯುವ ಜಿಲ್ಲೆಗಳಲ್ಲಿಯೂ ಭಾರಿ ಮಳೆಯಾಗಿದೆ ಇದರಿಂದ ಟೊಮೊಟೊ ಬೆಳೆಯ ಉತ್ಪಾದನೆಯ ಮೇಲೆ ಶೇ 50 ರಷ್ಟು ಪರಿಣಾಮ ಬೀರಿರುವುದು ನಿಜಕ್ಕೂ ಆತಂಕದ ಸಂಗತಿ.
ಕೋಲಾರ, ಚಿಂತಾಮಣಿ, ದೊಡ್ಡಬಳ್ಳಾಪುರ, ಚಿಕ್ಕಬಳ್ಳಾಪುರ, ಮಾಲೂರು, ಮಾಗಡಿ ಹಾಗೂ ಸುತ್ತಮುತ್ತಲ ಪ್ರದೇಶದಿಂದ ಎಪಿಎಂಸಿಗೆ ಟೊಮೆಟೊ ಸಾಗಣೆ ಶೇ 40ರಷ್ಟು ಕಡಿಮೆಯಾಗಿದ್ದು, ಹೀಗೆ ಪೂರೈಕೆ ಕಡಿಮೆ ಆದರೆ ಬೆಲೆ ನೂರರ ಗಡಿ ದಾಟುವುದರಲ್ಲಿ ಯಾವುದೆ ಅನುಮಾನವಿಲ್ಲ. ಟೊಮೊಟೊ ಮಾತ್ರವಲ್ಲದೆ ಈರುಳ್ಳಿ ಬೆಲೆಯಲ್ಲೂ ಏರಿಕೆಯಾಗಿದ್ದು ತರಕಾರಿ ಬೆಲೆ ಜನರಲ್ಲಿ ಕಣ್ಣೀರು ತರಿಸುತ್ತಿವೆ.
ಜುಲೈ ಮತ್ತು ಆಗಸ್ಟ್ ತಿಂಗಳಿಗೆ ಹೋಲಿಸಿದರೆ ಈರುಳ್ಳಿಯ ಬೆಲೆ ಹೆಚ್ಚಾಗಿದೆ. ಮುಂದಿನ ದಿನಗಳಲ್ಲಿ ಈ ಬೆಲೆಗಳು ದುಪ್ಪಟ್ಟಾಗುವ ಎಲ್ಲಾ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ತರಕಾರಿಗಳು ಪ್ರತಿನಿತ್ಯದ ಅಗತ್ಯ ವಸ್ತುಗಳಲ್ಲಿ ಒಂದಾಗಿದೆ. ಈಗಾಗಲೆ ಹಲವಾರು ತರಕಾರಿಗಳ ಬೆಲೆ ಹೆಚ್ಚಾಗಿದೆ. ಬೆಲೆಗಳ ನಿರಂತರ ಏರಿಕೆಯಿಂದ ಜನರ ಬದುಕು ನಿಜಕ್ಕೂ ಕಷ್ಟಕರವಾಗುತ್ತಿದೆ.
ಕೊರೋನ ಸೋಂಕಿನಿಂದ ಆರ್ಥಿಕವಾಗಿ ಪ್ರತಿಯೊಬ್ಬರು ಹೊಡೆತ ತಿಂದಿದ್ದಾರೆ ಹೀಗಿರುವಾಗ ತರಕಾರಿ ಬೆಲೆ ಹೆಚ್ಚಾಗಿರುವುದು ಗಾಯದ ಮೇಲೆ ಬರೆ ಎಳೆದಂತೆ ಆಗುತ್ತಿದೆ. ಈಗಾಗಲೆ ಎರಡು ಲಾಕ್ಡೌನ್ ಜನರನ್ನು ಕಂಗೆಡಿಸಿದೆ ಈ ಮಧ್ಯೆ ಬೇಳೆಕಾಳು, ಆಹಾರ ಪದಾರ್ಥ, ಹಣ್ಣು, ತರಕಾರಿಗಳ ಬೆಲೆ ಏರಿದರೆ ಅದು ಅವರ ಬದುಕನ್ನು ದುಸ್ತರಗೊಳಿಸುತ್ತದೆ. ಕೆಳ ಹಾಗೂ ಮಧ್ಯಮ ವರ್ಗದ ಜನರ ಬದುಕನ್ನು ಊಹಿಸಿಕೊಳ್ಳುವುದು ಅಸಾಧ್ಯ. ಹೀಗೆ ಬೆಲೆ ಏರಿಕೆ ಹೆಚ್ಚಾದರೆ ಬದುಕು ಬೀದಿಗೆ ಬರುವುದಂತು ಖಂಡಿತ.
ಬೆಲೆ ಏರಿಕೆ ಬಿಸಿ ಜನಸಾಮಾನ್ಯರ ನಿದ್ದೆಗೆಡಿಸಿದೆ. ಬೇಳೆ ಕಾಳುಗಳು, ಅಕ್ಕಿ, ತರಕಾರಿ ಎಲ್ಲದರ ಬೆಲೆ ಹೆಚ್ಚಾದರೆ ಬದುಕುವುದು ಹೇಗೆ ಎಂಬ ಪ್ರಶ್ನೆ ಜನರಲ್ಲಿ ಮೂಡಿದೆ. ಇನ್ನೊಂದು ಕಡೆ ಗ್ರಾಮೀಣ ಭಾಗದಲ್ಲಿ ರೈತರು ತಮ್ಮ ಬೆಳೆಗೆ ಸರಿಯಾದ ಬೆಲೆ ಸಿಗದೆ ಪರದಾಡುತ್ತಿದ್ದಾರೆ. ಮಳೆ, ಪ್ರವಾಹ, ಬರಗಾಲದ ನಡುವೆ ಕಷ್ಟಪಟ್ಟು ಬೆಳೆದ ಬೆಳೆಗಳಿಗೆ ಸರಿಯಾದ ಬೆಲೆ ಸಿಗದಿದ್ದಲ್ಲಿ ಅವರ ಬದುಕು ಕೂಡ ಮೂರಾಬಟ್ಟೆಯಾಗುತ್ತದೆ. ಒಟ್ಟಿನಲ್ಲಿ ದಿನಸಿ ವಸ್ತುಗಳ ಬೆಲೆ ಏರಿಕೆಯಿಂದ ಜನರ ಬದುಕು ಕಷ್ಟದಲ್ಲಿದೆ.
ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430