ಹಠಾತ್ತನೆ ಪೆಟ್ರೋಲ್ ಡಿಸೇಲ್ ಬೆಲೆ ಗಗನಕ್ಕೇರಿದೆ. ಸತತ ಆರನೆ ದಿನ ಮುಂಬೈ, ದೆಹಲಿ, ಬೆಂಗಳೂರು, ಶಿರಸಿಗಳಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಏರುತ್ತಿದೆ. ಇಂದಿನ ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಎಷ್ಟು ಹಾಗೂ ಲೀಟರ್ ಗೆ ಎಷ್ಟು ಬೆಲೆಯಾಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನದ ಮೂಲಕ ತಿಳಿಯೋಣ.
ಸತತ ಆರನೆ ದಿನವೂ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆಯಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಬೆಲೆ 30 ಪೈಸೆ ಏರಿಕೆಯಾಗಿದೆ. ಪೆಟ್ರೋಲ್ ಲೀಟರ್ ಗೆ 104.14 ರೂಪಾಯಿ ಆಗಿದೆ. ಡಿಸೇಲ್ 35 ಪೈಸೆ ಏರಿಕೆಯಾಗಿದ್ದು ಲೀಟರ್ ಗೆ 92.82 ರೂಪಾಯಿ ಆಗಿದೆ. ಮುಂಬೈನಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 29 ಪೈಸೆ ಏರಿಕೆಯಾಗಿದೆ. ಅಲ್ಲಿ ಲೀಟರ್ ಗೆ 110.12ರೂಪಾಯಿ ಆಗಿದೆ. ಮುಂಬೈನಲ್ಲಿ ಡಿಸೇಲ್ ಇಂದು ಲೀಟರ್ ಗೆ 37 ಪೈಸೆ ಹೆಚ್ಚಳವಾಗಿದ್ದು 100.66ರೂಪಾಯಿ ಆಗಿದೆ.
ಬೆಂಗಳೂರಿನಲ್ಲಿ ಪೆಟ್ರೋಲ್ 31 ಪೈಸೆ ಏರಿಕೆಯಾಗಿದ್ದು, ಪೆಟ್ರೋಲ್ ಲೀಟರ್ ಗೆ 107.77 ರೂಪಾಯಿ ಆಗಿದೆ. ಡಿಸೇಲ್ ಲೀಟರ್ ಗೆ 37 ಪೈಸೆ ಏರಿಕೆಯಾಗಿದ್ದು, 98,52 ರೂಪಾಯಿ ಆಗಿದೆ. ಶಿರಸಿಯಲ್ಲಿ ಶನಿವಾರ ಡಿಸೇಲ್ ದರ ಲೀಟರ್ ಗೆ 100 ರೂಪಾಯಿ ಗಡಿ ದಾಟಿದೆ. ಕರ್ನಾಟಕದಲ್ಲಿ ಇದೆ ಮೊದಲ ಬಾರಿಗೆ ಡಿಸೇಲ್ ದರ ನೂರು ರೂಪಾಯಿ ಗಡಿದಾಟಿದೆ. ಪೆಟ್ರೋಲ್ ಹಾಗೂ ಡಿಸೇಲ್ ದರ ದಿನ ದಿನಕ್ಕೆ ಏರುತ್ತಲೆ ಇದೆ ಅದರಂತೆ ತರಕಾರಿ ಬೇಳೆಕಾಳುಗಳು, ಇತರೆ ಸಾಮಗ್ರಿಗಳ ದರವೂ ಕೂಡ ವಾರದಿಂದ ವಾರಕ್ಕೆ ಹೆಚ್ಚಾಗುತ್ತಲೆ ಇದೆ. ಇದರಿಂದ ಜನಸಾಮಾನ್ಯರು ಜೀವನ ನಡೆಸುವುದು ಕಷ್ಟವಾಗಿದೆ.
ದಿಡೀರ್ ದಿನನಿತ್ಯ ವಸ್ತುಗಳ ಬೆಲೆ ಹೆಚ್ಚಾಗಿರುವುದು ಎಲ್ಲರಿಗೂ ಆಶ್ಚರ್ಯವಾಗಿದೆ. ಹೀಗೆ ದಿನೆ ದಿನೆ ಅಗತ್ಯವಸ್ತುಗಳ ಬೆಲೆ ಹೆಚ್ಚಾದರೆ ಜೊತೆಗೆ ನಿರುದ್ಯೋಗವು ಎಲ್ಲಾ ಕಡೆ ಹೆಚ್ಚಾಗುತ್ತಿದ್ದು ಜೀವನ ನಡೆಸುವುದು ಕಷ್ಟವಾಗುತ್ತದೆ. ವಸ್ತುಗಳ ಬೆಲೆ ಹೆಚ್ಚಾಗಲು ಕಾರಣವೇನು ಎಂದು ತಿಳಿದು ಬಂದಿಲ್ಲ. ಈ ಬಗ್ಗೆ ಸರ್ಕಾರ ಯಾವುದೆ ಕ್ರಮ ಕೈಗೊಳ್ಳದೆ ಇರುವುದು ಜನಸಾಮಾನ್ಯರ ಹೊಟ್ಟೆಯ ಮೇಲೆ ಹೊಡೆದಂತಾಗಿದೆ. ಮುಂದಿನ ದಿನಗಳಲ್ಲಿ ಆದರೂ ಸರ್ಕಾರ ಈ ಬಗ್ಗೆ ಗಮನ ಕೊಡಬೇಕಾಗಿದೆ.
ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430