ಇತ್ತೀಚಿನ ದಿನಗಳಲ್ಲಿ ಹಲವು ಆರೋಗ್ಯ ಸಮಸ್ಯೆಗಳನ್ನು ಎದುರಿಸಲಾಗುತ್ತಿದೆ ಅವುಗಳಲ್ಲಿ ಒಂದು ಪ್ರಮುಖ ಸಮಸ್ಯೆಯೆಂದರೆ ಗ್ಯಾಸ್ಟ್ರಿಕ್ ಸಮಸ್ಯೆ. ಮನೆಯಲ್ಲಿ ಬಳಸುವ ಸಾಮಗ್ರಿಗಳನ್ನು ಬಳಸಿಕೊಂಡು ಗ್ಯಾಸ್ಟ್ರಿಕ್ ಸಮಸ್ಯೆ ನಿವಾರಣೆ ಮಾಡಿಕೊಳ್ಳಬಹುದು. ಈ ಸಮಸ್ಯೆ ನಿವಾರಣೆಯಾಗುವ ಮೂರು ರೀತಿಯ ಮನೆ ಮದ್ದಿನ ಬಗ್ಗೆ ಈ ಲೇಖನದ ಮೂಲಕ ತಿಳಿಯೋಣ.
ಇತ್ತೀಚಿನ ದಿನಗಳಲ್ಲಿ ಗ್ಯಾಸ್ಟ್ರಿಕ್ ಸಮಸ್ಯೆಯನ್ನು ಎಲ್ಲರೂ ಎದುರಿಸುತ್ತಿದ್ದಾರೆ. ಈ ಸಮಸ್ಯೆಗೆ ಬಹಳಷ್ಟು ಜನರು ಟ್ಯಾಬ್ಲೆಟ್ ತೆಗೆದುಕೊಳ್ಳುತ್ತಾರೆ ಇದರಿಂದ ಹಲವು ರೀತಿಯಲ್ಲಿ ಸೈಡ್ ಎಫೆಕ್ಟ್ ಆಗುತ್ತದೆ. ಈ ಸಮಸ್ಯೆಗೆ ಮನೆಯಲ್ಲಿಯೇ ಪರಿಹಾರ ಮಾಡಿಕೊಳ್ಳಬಹುದು. ಗ್ಯಾಸ್ಟ್ರಿಕ್ ಸಮಸ್ಯೆ ಉಂಟಾಗಲು ಪ್ರಮುಖ ಕಾರಣವೆಂದರೆ ನಮ್ಮ ಅನ್ ಹೆಲ್ದಿ ಲೈಫ್ ಸ್ಟೈಲ್ ಹೊರಗಿನ ಜಂಕ್ ಫುಡ್ ಗಳನ್ನು ಮತ್ತು ಖಾರ, ಉಪ್ಪು, ಹುಳಿ ಇರುವ ಆಹಾರವನ್ನು ಹೆಚ್ಚು ತಿಂದರೆ ಗ್ಯಾಸ್ಟ್ರಿಕ್ ಸಮಸ್ಯೆ ಉಂಟಾಗುತ್ತದೆ. ಜೊತೆಗೆ ಪಿತ್ತ ದೇಹ ಇರುವವರಿಗೆ ಸಾಮಾನ್ಯವಾಗಿ ಗ್ಯಾಸ್ಟ್ರಿಕ್ ಸಮಸ್ಯೆ ಉಂಟಾಗುತ್ತದೆ. ಮಲಬದ್ಧತೆ, ಅಜೀರ್ಣ ಇವು ಗ್ಯಾಸ್ಟ್ರಿಕ್ ಸಮಸ್ಯೆಯನ್ನು ಹುಟ್ಟುಹಾಕುತ್ತದೆ. ಕೊಲ್ಡ್ರಿಂಕ್ಸ್ ಗಳನ್ನು ಹೆಚ್ಚು ಕುಡಿಯುವುದರಿಂದ ಸಾಮಾನ್ಯವಾಗಿ ಗ್ಯಾಸ್ಟ್ರಿಕ್ ಸಮಸ್ಯೆ ಉಂಟಾಗುತ್ತದೆ. ಆಹಾರವನ್ನು ನಾವು ನಿಧಾನವಾಗಿ ತೆಗೆದುಕೊಳ್ಳಬೇಕು ಅವಸರದಲ್ಲಿ ತೆಗೆದುಕೊಳ್ಳುವುದರಿಂದ ಗ್ಯಾಸ್ಟ್ರಿಕ್ ಸಮಸ್ಯೆ ಉಂಟಾಗುತ್ತದೆ. ಊಟ ಮಾಡಿದ ತಕ್ಷಣ ಹುಳಿ ತೇಗು ಬರುವುದು, ತಿಂದ ಆಹಾರ ಹೊರಬಂದಂತೆ ಅನಿಸುವುದು ಗ್ಯಾಸ್ಟ್ರಿಕ್ ಸಮಸ್ಯೆಯ ಲಕ್ಷಣಗಳಾಗಿವೆ. ಗ್ಯಾಸ್ಟಿಕ್ ಸಮಸ್ಯೆ ಇರುವವರಿಗೆ ಹೊಟ್ಟೆ ಉಬ್ಬರ, ಎದೆ ನೋವು ಕಾಣಿಸಿಕೊಳ್ಳುತ್ತದೆ. ಮನೆಯಲ್ಲಿ ಉಪಯೋಗಿಸುವ ಅರ್ಧ ಸ್ಪೂನ್ ಅಜವಾನ, ಚಿಟಿಕೆ ಕಪ್ಪು ಉಪ್ಪನ್ನು ದಿನಕ್ಕೆ ಒಂದು ಸಲ ಒಂದು ಲೋಟ ಬೆಚ್ಚಗಿನ ನೀರಿಗೆ ಹಾಕಿ ಮಿಕ್ಸ್ ಮಾಡಿ ಊಟದ ಅರ್ಧಗಂಟೆಯ ನಂತರ ಕುಡಿಯಬೇಕು. ಹೆಚ್ಚಿನ ಪ್ರಮಾಣದಲ್ಲಿ ಗ್ಯಾಸ್ಟ್ರಿಕ್ ಸಮಸ್ಯೆ ಇದ್ದವರು ದಿನಕ್ಕೆ ಎರಡುಸಲ ಕುಡಿಯಬೇಕು. ದಿನಕ್ಕೆ ಒಂದು ಸಲ 1 ಸ್ಪೂನ್ ನಿಂಬೆಹಣ್ಣಿನ ರಸಕ್ಕೆ ಒಂದು ಸ್ಪೂನ್ ಸೋಂಪನ್ನು ಹಾಕಿ ಮಿಕ್ಸ್ ಮಾಡಿ ನಿಂಬೆರಸದಲ್ಲಿ ಸೋಂಪು ನೆನೆದ ನಂತರ ಊಟದ ನಂತರ ಸೇವಿಸಬೇಕು. ಹೆಚ್ಚಿನ ಪ್ರಮಾಣದಲ್ಲಿ ಗ್ಯಾಸ್ಟ್ರಿಕ್ ಇದ್ದವರು ದಿನಕ್ಕೆ ಎರಡು ಸಲ ಸೇವಿಸಬೇಕು. ಒಂದು ಲೋಟ ಬೆಚ್ಚಗಿನ ನೀರಿನಲ್ಲಿ ಒಂದು ಚಿಟಿಕೆ ಅರಿಶಿಣ, ಒಂದು ಚಿಟಿಕೆ ಕಪ್ಪು ಉಪ್ಪನ್ನು ಹಾಕಿ ಮಿಕ್ಸ್ ಮಾಡಿ ಕುಡಿಯಬೇಕು ಇದರಿಂದ ಗ್ಯಾಸ್ಟ್ರಿಕ್ ಸಮಸ್ಯೆ ನಿವಾರಣೆ ಆಗುತ್ತದೆ.
ಈ ಮೂರು ಮನೆಮದ್ದಿನಲ್ಲಿ ಯಾವುದಾದರು ಒಂದನ್ನು ಅನುಸರಿಸಬಹುದು ಇದರಿಂದ ಯಾವುದೇ ಅಡ್ಡ ಪರಿಣಾಮ ಆಗುವುದಿಲ್ಲ. ಗ್ಯಾಸ್ಟ್ರಿಕ್ ಸಮಸ್ಯೆ ಇದ್ದವರು ಆಯುರ್ವೇದಿಕ್ ವೈದ್ಯರ ಬಳಿ ಹೋಗುವುದು ಉತ್ತಮ. ಗ್ಯಾಸ್ಟ್ರಿಕ್ ಸಮಸ್ಯೆಯನ್ನು ನಿವಾರಿಸಿಕೊಳ್ಳಲು ಕೆಲವು ಪದ್ಧತಿಯನ್ನು ಅನುಸರಿಸುವುದು ಉತ್ತಮ. ಬೆಳಗ್ಗೆ ಎದ್ದ ತಕ್ಷಣ ನೀರನ್ನು ಕುಡಿಯುವುದು, ಜಂಕ್ ಫುಡ್ ತಿನ್ನುವುದನ್ನು ಕಡಿಮೆ ಮಾಡುವುದು, ಸರಿಯಾದ ಸಮಯಕ್ಕೆ ಆರೋಗ್ಯಕರ ಆಹಾರವನ್ನು ಸೇವಿಸುವುದು, ಹೆಚ್ಚು ಖಾರ, ಹುಳಿ, ಉಪ್ಪಿನ ಆಹಾರವನ್ನು ಕಡಿಮೆ ಸೇವಿಸುವುದು. ಹೆಚ್ಚಿನ ಪ್ರಮಾಣದಲ್ಲಿ ಗ್ಯಾಸ್ಟ್ರಿಕ್ ಸಮಸ್ಯೆ ಇದ್ದವರು ಹಸಿಮೆಣಸಿನಕಾಯಿ, ಉಪ್ಪಿನಕಾಯಿಯನ್ನು ಸೇವಿಸಬಾರದು, ಹೆಚ್ಚು ನೀರನ್ನು ಕುಡಿಯಬೇಕು. ಈ ಎಲ್ಲಾ ಪದ್ಧತಿಗಳನ್ನು ಅನುಸರಿಸುವುದರಿಂದಲೂ ಗ್ಯಾಸ್ಟ್ರಿಕ್ ಸಮಸ್ಯೆಯಿಂದ ದೂರ ಉಳಿಯಬಹುದು ಈ ಮಾಹಿತಿಯನ್ನು ಎಲ್ಲರಿಗೂ ತಪ್ಪದೇ ತಿಳಿಸಿ.
ಶ್ರೀ ಮಂತ್ರಾಲಯ ಗುರು ಬೃಂದಾವನ ಜ್ಯೋತಿಷ್ಯ ಮಂದಿರ, ಗುರೂಜಿ ಶ್ರೀ ಪರುಶುರಾಮ ಎಲ್ ಜ್ಯೋಷಿ
ವ್ಯಾಪಾರ ಸಮಸ್ಯೆ ಮದುವೆ ಸಮಸ್ಯೆ ಸಂತಾನ ಸಮಸ್ಯೆ ಹಣಕಾಸಿನ ಸಮಸ್ಯೆ ಗಂಡ-ಹೆಂಡತಿ ಸಮಸ್ಯೆ ಅತ್ತೆ ಸೊಸೆ ಕಿರಿಕಿರಿ ಇನ್ನು ನಿಮ್ಮ ಜೀವನದಲ್ಲಿ ಯಾವುದೇ ಕಠಿಣ ಗುಪ್ತ ಸಮಸ್ಯೆಗಳಿಗೆ ಶ್ರೀ ಮಂತ್ರಾಲಯ ಗುರು ರಾಯರ ಅನುಗ್ರಹದಿಂದ ಮತ್ತು ದುರ್ಗಾ ಹೋಮ ಸುದರ್ಶನ ಹೋಮ ಮಹಾಗಣಪತಿ ಯಾಗ ಶ್ರೀ ಕರ ಮಂತ್ರ ಹೋಮ ಸುಗ್ರೀವ ಹೋಮ ಹಾಗೂ 1008 ಜಪ ತಪ ಹೋಮ ಹವನ ಗಳಿಂದ ಕೇವಲ 24 ಗಂಟೆಗಳಲ್ಲಿ ಶಾಶ್ವತವಾಗಿ ಪರಿಹಾರ ಶತಸಿದ್ಧ ಇಂದೇ ಸಂಪರ್ಕಿಸಿ 9845111287