ಕೃಷಿ ಇಲಾಖೆಯು ನೇಮಕಾತಿಗಾಗಿ ಒಟ್ಟೂ ಖಾಲಿ ಇರುವ 3851 ಹುದ್ದೆಗಳಿಗೆ ಅಧಿಸೂಚನೆಯನ್ನು ಹೊರಡಿಸಿದ್ದು ಯಾವೆಲ್ಲ ಇಲಾಖೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನ ಮಾಡಲಾಗಿದೆ? ಹಾಗೂ ಇದರ ಕುರಿತಾಗಿ ಎನು ಚರ್ಚೆ ನಡೆದಿದೆ ಎನ್ನುವುದನ್ನು ನಾವು ಈ ಲೇಖನದ ಮೂಲಕ ವಿವರವಾಗಿ ತಿಳಿದುಕೊಳ್ಳೋಣ.
ಸಚಿವ ಬಿ ಸಿ ಪಾಟೀಲ್ ಅವರು ತಿಳಿದ ಪ್ರಕಾರ ಕೃಷಿ ಇಲಾಖೆಯ ಖಾಲಿ ಹುದ್ದೆಗೆ ಕ್ರಮ. ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಕೃಷಿ ಸಹಾಯಕ ನಿರ್ದೇಶಕರು ಹಾಗೂ ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗೆ ಸಂಬಂಧಿಸಿ ಮುಖ್ಯಮಂತ್ರಿಗಳು ಹಾಗೂ ಹಣಕಾಸು ಇಲಾಖೆಯ ಜೊತೆಗೆ ಚರ್ಚೆ ಮಾಡಿ ಒಟ್ಟು 3851 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು ಎಂದು ಸಚಿವರಾಗಿ ಬಿ ಸಿ ಪಾಟೀಲ್ ಅವರು ತಿಳಿಸಿದ್ದಾರೆ. ಇದರ ಕುರಿತಾಗಿ ಸಚಿವ ಬಿ ಸಿ ಪಾಟೀಲ್ ಅವರು ವಿಧಾನ ಸಭೆಯಲ್ಲಿ ಭರವಸೆ ನೀಡಿದ್ದಾರೆ. ಬುಧವಾರ ನಡೆದ ಸಭೆಯ ಕಲಾಪದಲ್ಲಿ ಜೆಡಿಎಸ್ ಸದಸ್ಯ H D ರೇವಣ್ಣ ನೀಡಿದ ಪ್ರಶ್ನೆಗೆ ಉತ್ತರಿಸಿ , ಕೃಷಿ ಇಲಾಖೆಯಲ್ಲಿ ಖಾಲಿಯಿರುವ 8061 ಹುದ್ದೆಗಳಲ್ಲಿ ಈಗಾಗಲೇ 4093 ಹುದ್ದೆಗಳನ್ನು ಭರ್ತಿ ಮಾಡಲಾಗಿದ್ದು ಉಳಿದ 3851 ಹುದ್ದೆಗಳು ಖಾಲಿ ಇವೆ. ಆಡಳಿತಕ್ಕೆ ತೊಂದರೆ ಆಗಬಾರದು ಎಂಬ ಉದ್ದೇಶಕ್ಕೆ ಹೊರಗುತ್ತಿಗೆ ಆಧಾರದ ಮೇಲೆ 2455 ಹುದ್ದೆಗಳನ್ನು ಭರ್ತಿ ಮಾಡಲಾಗಿದೆ ಎಂದು ವಿವರಿಸಿದರು.
ಖಾಲಿ ಇರುವ ಹುದ್ದೆಗಳನ್ನು KPSC ಮೂಲಕ ಭರ್ತಿ ಮಾಡಲು ತೀರ್ಮಾನಿಸಿದ್ದು ಇದಕ್ಕೆ ಸಂಬಂಧಿಸಿದಂತೆ ಹಣಕಾಸು ಇಲಾಖೆ ಹಾಗೂ ಮುಖ್ಯಮಂತ್ರಿಗಳ ಜೊತೆಗೆ ಪತ್ರ ವ್ಯವಹಾರ ನಡೆದಿದೆ ಅವರ ಕಡೆಯಿಂದ ಅನುಮತಿ ದೊರಕಿದ ಕೂಡಲೇ ಉಳಿದ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು ಎಂದು ಸಚಿವ ಬಿ ಎಸ್ ಪಾಟೀಲ್ ಅವರು ತಿಳಿಸಿದ್ದಾರೆ. ಅಂದರೆ ಕೃಷಿ ಇಲಾಖೆಯ ನೇಮಕಾತಿಯೆ ಆಗಿದ್ದರೂ ಇದನ್ನು ಕೃಷಿ ಇಲಾಖೆ ನೋಡಿಕೊಳ್ಳುವುದಿಲ್ಲ ಇದರ ಬದಲಿಗೆ KPSC ನೇಮಕ ಮಾಡಿಕೊಳ್ಳುತ್ತದೆ ಎಂದು ಹೇಳಿದ್ದಾರೆ.
ಇದಕ್ಕೆ ಆಕ್ಷೇಪಿಸಿದ H D ರೇವಣ್ಣ ಕೃಷಿ ಇಲಾಖೆಯಲ್ಲಿ ಶೇಕಡಾ ಐವತ್ತರಷ್ಟು ಹುದ್ದೆಗಳು ಖಾಲಿ ಇದ್ದರೆ ಇಲ್ಲಿ ಕೆಲಸ ಮಾಡಲು ಹೇಗೆ ಸಾಧ್ಯ? ಇದು ರೈತರಿಗೆ ನೆರವಾಗಬೇಕಾದ ಮುಖ್ಯ ಇಲಾಖೆ ಆಗಿರುವುದರಿಂದ ವಿಳಂಬ ಮಾಡದೆ ಅಗತ್ಯ ಇರುವ ಖಾಲಿ ಇರುವ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿದರು. ಈ ಮೂಲಕ ಆದಷ್ಟು ಬೇಗ ನೇಮಕಾತಿ ಮಾಡಿಕೊಳ್ಳಲು ಸೂಚಿಸಿದ್ದಾರೆ. ಹಾಗಾಗಿ ಕೃಷಿ ಇಲಾಖೆಯಲ್ಲಿ ಆದಷ್ಟು ಬೇಗನೆ ಅರ್ಜಿ ಆಹ್ವಾನ ಮಾಡುವ ಸಾಧ್ಯತೆ ಹೆಚ್ಚಾಗಿ ಇರುವುದರಿಂದ ಆಸಕ್ತ ಅಭ್ಯರ್ಥಿಗಳು ಇದರ ಬಗ್ಗೆ ಹೆಚ್ಚಿನ ಗಮನ ಹರಿಸುವುದು ಉತ್ತಮ.