ಮಕ್ಕಳಿಗೆ ಉತ್ತಮ ಭವಿಷ್ಯವೇ ಭಾರತದ ಭವಿಷ್ಯ ಎಂಬ ದೂರದೃಷ್ಠಿಯ ಹಿನ್ನೆಲೆಯಲ್ಲಿ ಇಲಾಖೆಯು ಮಕ್ಕಳ ಕಲ್ಯಾಣ ಮತ್ತು ಅಭಿವೃದ್ಧಿಗಾಗಿ ಜಾರಿಯಲ್ಲಿರುವ ನೀತಿ ಮತ್ತು ಕಾರ್ಯಕ್ರಮಗಳ ಅನುಷ್ಠಾನಕ್ಕೆ ಹೆಚ್ಚು ಒತ್ತು ನೀಡಿ ಶ್ರಮಿಸುತ್ತಿದೆ. ಈ ಶ್ರಮವು ದೇಶದ ಮುಂದಿನ ಸಾಮಾಜಿಕ, ಆರ್ಥಿಕ ಬೆಳವಣಿಗೆಗೆ ಹೂಡುತ್ತಿರುವ ಬಂಡವಾಳವಾಗಿರುತ್ತದೆ. ಈಗ ರಾಜ್ಯದ ಎಲ್ಲಾ ತಾಲ್ಲೂಕುಗಳಿಗೆ ವಿಸ್ತರಿಸಲಾಗಿದೆ. ಗರ್ಭಿಣಿ, ಬಾಣಂತಿ, ಕಿಶೋರಿಯರು ಮತ್ತು 6 ವರ್ಷ ಒಳಗಿನ ಮಕ್ಕಳ ಕಲ್ಯಾಣವು ಈ ಯೋಜನೆಯ ಮುಖ್ಯ ಗುರಿಯಾಗಿರುತ್ತದೆ. ಆದ್ದರಿಂದ ನಾವು ಇಲ್ಲಿ ಆಶಾ ಕಾರ್ಯಕರ್ತೆಯರ ಹುದ್ದೆಯ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ.
ಇಂದಿನ ದಿನದಲ್ಲಿ ದೇಶದಾದ್ಯಂತ ಅಂಗನವಾಡಿ ಕೇಂದ್ರಗಳು ಉತ್ತಮ ರೀತಿಯಲ್ಲಿ ನಡೆಯುತ್ತಿದೆ. ಅಂಗನವಾಡಿ ಕೇಂದ್ರಗಳು ಪ್ರತಿಯೊಂದು ತಾಲೂಕಿನಲ್ಲಿಯೂ ಪ್ರತಿಯೊಂದು ಊರಿನಲ್ಲಿಯೂ ಆರಂಭವಾಗಿದ್ದು ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆ ಖಾಲಿ ಇದ್ದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯವರು ಈ ಕಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸ್ವೀಕರಿಸುತ್ತಿದ್ದಾರೆ. ಇದರಲ್ಲಿ ಒಟ್ಟು 170 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಇದರಲ್ಲಿ 36 ಹುದ್ದೆಗಳು ಅಂಗನವಾಡಿ ಕಾರ್ಯಕರ್ತರಿಗೆ ಆಗಿರುತ್ತದೆ ಮತ್ತು 134 ಹುದ್ದೆಗಳು ಅಂಗನವಾಡಿ ಸಹಾಯಕಿಯರ ಹುದ್ದೆ ಯಾಗಿರುತ್ತದೆ.
ಬಳ್ಳಾರಿ ಜಿಲ್ಲೆಗಾಗಿ ಹುದ್ದೆಗಳನ್ನು ಆಹ್ವಾನಿಸಲಾಗಿದೆ. ಇದಕ್ಕೆ ಬೇಕಾಗಿರುವ ವಿದ್ಯಾರ್ಹತೆ ಎಂದರೆ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಅರ್ಜಿ ನೀಡುವವರು ಎಸೆಸೆಲ್ಸಿಯಲ್ಲಿ ತೇರ್ಗಡೆಯನ್ನು ಹೊಂದಿರಬೇಕು. ಅಂಗನವಾಡಿ ಸಹಾಯಕ ಹುದ್ದೆಗೆ ಅರ್ಜಿ ನೀಡುವವರು ಕನಿಷ್ಠ ನಾಲ್ಕನೇ ತರಗತಿಯನ್ನು ಮುಗಿಸಿರಬೇಕು.ಈ ಹುದ್ದೆಗಳಿಗೆ ಅರ್ಜಿ ನೀಡುವವರು ಕನಿಷ್ಠ 18 ವರ್ಷ ಮೇಲ್ಪಟ್ಟು ಮತ್ತು 35 ವರ್ಷದ ಒಳಗಿನವರಾಗಿರಬೇಕು. ವಿಕಲಚೇತನರಿಗೆ ಹತ್ತುವರ್ಷದ ವಯೋಮಿತಿಯನ್ನು ಸಡಲಿಕೆ ಮಾಡಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ಹುದ್ದೆ ಖಾಲಿ ಇರುವ ಊರಿನ ಮಹಿಳೆಯರು ಅರ್ಜಿಯನ್ನು ಸಲ್ಲಿಸಲು ಸೂಚಿಸಲಾಗಿದೆ.
ಅಂಗನವಾಡಿ ಕಾರ್ಯಕರ್ತೆಯರನ್ನು ಆಯ್ಕೆ ಮಾಡುವ ವಿಧಾನವೆಂದರೆ ಅಭ್ಯರ್ಥಿಗಳು ವಿದ್ಯಾರ್ಹತೆಯಲ್ಲಿ ಪಡೆದ ಅಂಕ ಮತ್ತು ಬೋನಸ್ ಅಂಕವನ್ನು ಒಳಗೊಂಡಂತೆ ಪಡೆದ ಒಟ್ಟು ಅಂಕಗಳಿಗೆ ಅನುಸಾರವಾಗಿ ಅಧಿಕೃತ ಪಟ್ಟಿಯನ್ನು ಸಿದ್ಧಪಡಿಸಿ ಅರ್ಹತೆ ಮತ್ತು ಮೆರಿಟ್ ಅನುಸಾರವಾಗಿ ಪರಿಶೀಲಿಸಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಅರ್ಜಿಯನ್ನು ಸಲ್ಲಿಸಲು 6/3/2021 ರಿಂದ 5/4/2021ರ ವರಗೆ ಅರ್ಜಿಯನ್ನು ನೀಡಬಹುದಾಗಿದೆ. ಅರ್ಜಿಯನ್ನು ಸಲ್ಲಿಸಲು ಬಯಸುವವರು ಇಲಾಖೆಯ ಅಧಿಕೃತ ವೆಬ್ ಸೈಟ್ ವಿಳಾಸಕ್ಕೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಇಂತಹ ಉದ್ಯೋಗವನ್ನು ಊರಿನಲ್ಲಿರುವ ವಿದ್ಯಾವಂತ ಮಹಿಳೆಯರು ಉದ್ಯೋಗ ಮಾಡಲು ಅನುಕೂಲಕರ ಆಗಿದೆ.