ಪಪ್ಪಾಯಿ ಅಥವಾ ಪರಂಗಿ ಹಣ್ಣು ಯಾರಿಗೆ ತಾನೆ ಇಷ್ಟವಿಲ್ಲ. ಪಪ್ಪಾಯಿ ಒಂದು ಅದ್ಭುತ ಹಣ್ಣಾಗಿದ್ದು ಸಾಮಾನ್ಯವಾಗಿ ಎಲ್ಲ ಕಡೆಗಳಲ್ಲಿ ಕಾಣಸಿಗುವ ಹಾಗೂ ಎಲ್ಲಾ ಋತುಗಳಲ್ಲಿ ದೊರೆಯುವ ಪಪ್ಪಾಯಿ ಹಣ್ಣಿನಲ್ಲಿ ಅಪಾರ ಔಷಧೀಯ ಗುಣಗಳಿವೆ. ಸಾಮಾನ್ಯ ಪಪ್ಪಾಯವು ಆರೋಗ್ಯ ಪ್ರಯೋಜನಗಳೊಂದಿಗೆ ತುಂಬಿದ ಹಣ್ಣಾಗಿದೆ. ಇದರ ಮರವನ್ನು ಹೆಚ್ಚಾಗಿ ಹಳ್ಳಿಯ ಮನೆಗಳಲ್ಲಿ ನೋಡಬಹುದು. ಆದ್ದರಿಂದ ನಾವು ಇಲ್ಲಿ ಇದರ ಪ್ರಯೋಜನಗಳ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ.
ಇದು ಹೊಟ್ಟೆಯ ಕಾಯಿಲೆಯಿಂದ ಬಳಲುತ್ತಿರುವವರಿಗೆ ಅತ್ಯಂತ ಪೌಷ್ಟಿಕ ಹಣ್ಣು ಎಂದು ನಂಬಲಾಗಿದೆ. ಪಪ್ಪಾಯಿ ಸೇವನೆಯಿಂದ ಕರುಳಿನಲ್ಲಿ ಸೇರಿಕೊಳ್ಳುವ ಜಂತುಗಳು ನಾಶವಾಗುವವು. ಇದು ಕಿತ್ತಳೆಗಿಂತ ಹೆಚ್ಚಿನ ವಿಟಮಿನ್ ಸಿ ಯನ್ನು ಹೊಂದಿದೆ ಮತ್ತು ಜೀವಸತ್ವಗಳು ಎ ಮತ್ತು ಬಿ ಗಳ ಉತ್ತಮ ಮೂಲವಾಗಿದೆ. ನಮ್ಮ ದೇಹದಲ್ಲಿ ಕೊಬ್ಬಿನ ಪ್ರಮಾಣವನ್ನು ನಿಯಂತ್ರಿಸುವ ಪಪ್ಪಾಯಿ ಉತ್ತಮವಾದ ಫೈಬರ್‌ಗಳ ಮೂಲವಾಗಿದೆ. ಇದು ನೋಡಲು ಒಳಗೆ ಕೇಸರಿ ಬಣ್ಣದಲ್ಲಿದ್ದು ಕಪ್ಪು ಬೀಜವನ್ನು ಹೊಂದಿರುತ್ತದೆ.
ಪಪ್ಪಾಯಿ ಸೇವಿಸುವ ಮೂಲಕ ನಮ್ಮ ದೇಹದ ರೋಗ ನಿರೋಧಕ ವ್ಯವಸ್ಥೆ ಹೆಚ್ಚಾಗುತ್ತದೆ. ಪಪ್ಪಾಯದಲ್ಲಿ ಮಿಟಮಿನ್ ಸಿ ಹೃದಯಾಘಾತದ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಪಪ್ಪಾಯಿಯಲ್ಲಿ ಫೈಬರ್ ಹೆಚ್ಚಿರುತ್ತದೆ ಹಾಗಾಗಿ ಜೀರ್ಣಕ್ರಿಯೆಗೆ ಉಪಯುಕ್ತವಾಗಿದೆ. ಹೊಟ್ಟೆ ಸಮಸ್ಯೆಗಳಾದ ಅಜೀರ್ಣ, ಹೊಟ್ಟೆ ಹುಣ್ಣು, ಹೊಟ್ಟೆ ಮತ್ತು ಎದೆ ಉರಿ ಸಮಸ್ಯೆಗಳಿಗೆ ಪಪ್ಪಾಯಿ ಹಣ್ಣು ಸಹಕಾರಿಯಾಗಿದೆ. ಅಲ್ಲದೇ ಪಿತ್ತಕೋಶದಲ್ಲಿರುವ ವಿಷ ವಸ್ತುಗಳನ್ನು ಹೊರ ಹಾಕುವಲ್ಲಿ ಇದು ಸಹಕಾರಿ.
ಕೀಲುರೋಗವು ಕೀಲುಗಳಲ್ಲಿ ಉರಿಯೂತಕ್ಕೆ ಕಾರಣವಾಗುವ ಅಸ್ವಸ್ಥತೆಯಾಗಿದೆ. ಪಪ್ಪಾಯವು ವಿಟಮಿನ್ ಸಿ ಜೊತೆಗೆ ಉರಿಯೂತ ಕಿಣ್ವಗಳನ್ನು ಹೊಂದಿದೆ. ಇದು ಸಂಧಿವಾತದಿಂದ ಉಂಟಾಗುವ ನೋವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಪಪ್ಪಾಯ ಖನಿಜಗಳು, ಜೀವಸತ್ವಗಳು ಮತ್ತು ಕಿಣ್ವಗಳ ಒಂದು ಉತ್ತಮ ಮೂಲವಾಗಿದೆ. ಇದು ಕೂದಲು ಬೆಳವಣಿಗೆಯನ್ನು ಹೆಚ್ಚಿಸುತ್ತದೆ ಅಲ್ಲದೇ ಕೂದಲನ್ನು ಹೊಳಪಿನಂತೆ ಮಾಡುತ್ತದೆ. ಪಪ್ಪಾಯಿ ಹಣ್ಣಿನ ಹೋಳಿನಿಂದ ಚರ್ಮವನ್ನು ಉಜ್ಜಿದರೆ ಚರ್ಮದ ಮೇಲಿನ ಕಲೆ ಮಾಯವಾಗುತ್ತದೆ.