ನಮ್ಮ ದೇಶದಲ್ಲಿ ನಿರುದ್ಯೋಗ ಹೆಚ್ಚಾಗಿ ಕಂಡುಬರುತ್ತಿದೆ. ಬಹಳಷ್ಟು ಯುವಕರು ಕೆಲಸ ಇಲ್ಲದೆ ಮನೆಯಲ್ಲಿ ಇದ್ದಾರೆ. ಅದರಲ್ಲೂ ಕಳೆದ ವರ್ಷದಿಂದ ಕೊರೋನ ಹೆಮ್ಮಾರಿ ಬಂದಿರುವ ಕಾರಣ ಎಲ್ಲಾ ಕೆಲಸಗಳು ಸ್ಥಗಿತವಾಗಿದೆ ಕೆಲಸಕ್ಕೆ ಕರೆಯುವವರು ಇಲ್ಲವಾಗಿದೆ. ಹೀಗಿರುವಾಗ ಕರ್ನಾಟಕ ರಾಜ್ಯ ಸರ್ಕಾರದ ಪೊಲೀಸ್ ಇಲಾಖೆಯಿಂದ ಕೆಲವು ಉದ್ಯೋಗಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಆಹ್ವಾನಿಸಿದ ಉದ್ಯೋಗಗಳ ಬಗ್ಗೆ ಈ ಲೇಖನದಲ್ಲಿ ನೋಡೋಣ.

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ನಾಗರಿಕ ಪೊಲೀಸ್ ಕಾನ್ಸ್‌ಟೇಬಲ್ ನೇರ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಅರ್ಜಿಗಳನ್ನು ಜೂನ್ 25, 2021ರ ಒಳಗೆ ಸಲ್ಲಿಕೆ ಮಾಡಬಹುದು. ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಕೆಲವು ಅರ್ಹತೆಯನ್ನು ಹೊಂದಿರಬೇಕು. ಅಭ್ಯರ್ಥಿಗಳು ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣರಾಗಿರಬೇಕು, ಅಭ್ಯರ್ಥಿಗಳು 168ಸೆಂ.ಮೀ ಎತ್ತರ ಇರಬೇಕು. ಆಯ್ಕೆಯಾದವರಿಗೆ 23,500ರೂಪಾಯಿಯಿಂದ 47,650ರೂಪಾಯಿವರೆಗೆ ವೇತನ ನೀಡಲಾಗುತ್ತದೆ. ಹಿರಿಯ, ಕಿರಿಯ ಕನ್ಸಲ್ಟಂಟ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಮಂಗಳೂರು ನಗರದಲ್ಲಿ 135 ಹುದ್ದೆಗಳು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 68 ಹುದ್ದೆಗಳು, ಉಡುಪಿ ಜಿಲ್ಲೆಯಲ್ಲಿ 81 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಆನ್ಲೈನ್ ಮೂಲಕವೂ ಸಲ್ಲಿಸಬಹುದಾಗಿದೆ.

ಮಂಗಳೂರು ನಗರದಲ್ಲಿ ಕೆಲವು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕೆಲವು ಅರ್ಹತೆ ಇರಬೇಕು. ಅರ್ಜಿ ಸಲ್ಲಿಸುವವರ ವಯೋಮಿತಿ ಕನಿಷ್ಟ 19 ವರ್ಷ ಆಗಿರಬೇಕು. ಸಾಮಾನ್ಯ ಅಭ್ಯರ್ಥಿಗೆ ಗರಿಷ್ಟ ವಯೋಮಿತಿ 25 ವರ್ಷಗಳು. ಎಸ್‌ಸಿ, ಎಸ್‌ಟಿ, ಒಬಿಸಿ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 27 ವರ್ಷಗಳು ಇದ್ದು, ನಂತರ ಅವರು ಅರ್ಜಿ ಹಾಕುವಂತಿಲ್ಲ. ಅರ್ಜಿಗಳನ್ನು ಇದೆ ತಿಂಗಳು 25ರಿಂದ ಮುಂದಿನ ತಿಂಗಳು 25ನೇ ತಾರೀಖಿನವರೆಗೆ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಸಮೀಪದ ಅಂಚೆ ಕಚೇರಿಯಲ್ಲಿ ಪಾವತಿಸಬಹುದು. ಅರ್ಜಿ ಸಲ್ಲಿಸುವಾಗ ಎಸ್‌ಎಸ್‌ಎಲ್‌ಸಿ, ಪಿಯುಸಿ ಅಂಕಪಟ್ಟಿ, ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಕನ್ನಡ ಮಾಧ್ಯಮದಲ್ಲಿ ಓದಿದ್ದರೆ ಕನ್ನಡ ಮಾಧ್ಯಮ ಪ್ರಮಾಣ ಪತ್ರ, ಗ್ರಾಮೀಣ ಪ್ರದೇಶದಲ್ಲಿ ಓದಿದರೆ ಗ್ರಾಮೀಣ ವಿದ್ಯಾಭ್ಯಾಸ ಪ್ರಮಾಣ ಪತ್ರ, ನಾಲ್ಕು ಪಾಸ್‌ಪೋರ್ಟ್ ಸೈಜ್ ಫೋಟೋಗಳು ಬೇಕಾಗುತ್ತದೆ. ಕೆಲಸವಿಲ್ಲದೆ ಮನೆಯಲ್ಲಿ ಇರುವವರಿಗೆ ಇದು ಹೊಸ ಅವಕಾಶವಾಗಿದೆ. ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಈ ಮಾಹಿತಿಯನ್ನು ತಪ್ಪದೆ ಎಲ್ಲರಿಗೂ ತಿಳಿಸಿ.

WhatsApp Group Join Now
Telegram Group Join Now

Leave a Reply

Your email address will not be published. Required fields are marked *

error: Content is protected !!