ತಾಲ್ಲೂಕ್ ಪಂಚಾಯಿತಿಯಲ್ಲಿ ಖಾಲಿ ಇರುವ ಆಡಳಿತ ಸಹಾಯಕ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹಾಗಾದರೆ ತಾಲೂಕು ಪಂಚಾಯಿತಿಯಲ್ಲಿ ಯಾವೆಲ್ಲಾ ಹುದ್ದೆಗಳು ಖಾಲಿ ಇವೆ ಯಾರೆಲ್ಲಾ ಅರ್ಜಿಯನ್ನು ಸಲ್ಲಿಸಬಹುದು ಅರ್ಜಿ ಸಲ್ಲಿಸುವುದಕ್ಕೆ ಕೊನೆಯ ದಿನಾಂಕ ವಯೋಮಿತಿ ಈ ಕುರಿತಾದ ಸಂಪೂರ್ಣ ಮಾಹಿತಿಯನ್ನು ನಾವಿಂದು ನಿಮಗೆ ತಿಳಿಸಿಕೊಡುತ್ತೇವೆ. ಮೊದಲನೆಯದಾಗಿ ಹುದ್ದೆಗಳು ಮತ್ತು ಅವುಗಳ ವಯೋಮಿತಿಯನ್ನು ನೋಡುವುದಾದರೆ ಆಡಳಿತ ಸಹಾಯಕರು ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇಪ್ಪತ್ತೊಂದು ವರ್ಷದಿಂದ ಮೂವತ್ತೈದು ವರ್ಷ ಒಳಗಿನ ಅಭ್ಯರ್ಥಿಗಳಾಗಿರಬೇಕು.
ತಾಂತ್ರಿಕ ಸಹಾಯಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇಪ್ಪತ್ತೊಂದು ವರ್ಷದಿಂದ ನಲವತ್ತು ವರ್ಷದ ಒಳಗಿನ ಅಭ್ಯರ್ಥಿಗಳಾಗಿರಬೇಕು ತಾಲೂಕು ಐಇಸಿ ಸಂಯೋಜಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇಪ್ಪತ್ತೊಂದು ವರ್ಷದಿಂದ ನಲವತ್ತೈದು ವರ್ಷದ ಒಳಗಿನ ಅಭ್ಯರ್ಥಿಗಳಾಗಿರಬೇಕು. ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ವೇತನ ಯಾವ ರೀತಿಯಾಗಿ ಇರುತ್ತದೆ ಎಂಬುದರ ಕುರಿತು ನೋಡುವುದಾದರೆ ಆಡಳಿತ ಸಹಾಯಕ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾರ್ಮಿಕ ಇಲಾಖೆಯು ತಾಲೂಕ ಮಟ್ಟದಲ್ಲಿ ಡೇಟಾ ಎಂಟ್ರಿ ಆಪರೇಟರ್ ಹುದ್ದೆಗೆ ನಿಗದಿಪಡಿಸಿದ ಕನಿಷ್ಠ ವೇತನ ನೀಡಲಾಗುತ್ತದೆ. ಉಳಿದ ಹುದ್ದೆಗಳಿಗೆ ಮಾಸಿಕ ಇಪ್ಪತ್ನಾಲ್ಕು ಸಾವಿರ ರೂಪಾಯಿ ವೇತನವನ್ನು ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಫೆಬ್ರುವರಿ 17 2022ರವರೆಗೆ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಇನ್ನು ಅಭ್ಯರ್ಥಿಗಳನ್ನು ಯಾವ ರೀತಿಯಾಗಿ ಆಯ್ಕೆಮಾಡಿಕೊಳ್ಳಲಾಗುತ್ತದೆ ಎಂಬುದರ ಕುರಿತು ನೋಡುವುದಾದರೆ ಹೊರಗುತ್ತಿಗೆ ಆಧಾರದ ಮೇಲೆ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು. ಆಡಳಿತ ಸಹಾಯಕ ಹುದ್ದೆಗಳಿಗೆ ಅಭ್ಯರ್ಥಿಗಳಿಗೆ ಕಂಪ್ಯೂಟರ್ ಜ್ಞಾನ ಕನ್ನಡ ಹಾಗೂ ಇಂಗ್ಲಿಷ್ ಟೈಪಿಂಗ್ ಬಗ್ಗೆ ಪ್ರಾಯೋಗಿಕ ಪರೀಕ್ಷೆ ನಡೆಸಲಾಗುವುದು. ಇನ್ನು ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ ಸೈಟ್ ವಿಳಾಸಕ್ಕೆ ಭೇಟಿ ನೀಡಿ ಆನ್ಲೈನ್ ಮುಖಾಂತರ ತಮ್ಮ ಅರ್ಜಿಯನ್ನು ಸಲ್ಲಿಸಬೇಕು.
ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವ ಅವಶ್ಯಕತೆ ಇರುವುದಿಲ್ಲ. ಇನ್ನು ಈ ವಿಭಾಗದಲ್ಲಿ ಖಾಲಿ ಇರುವ ಹುದ್ದೆಗಳು ಯಾವುದು ಎನ್ನುವುದನ್ನು ನೋಡುವುದಾದರೆ ಆಡಳಿತ ಸಹಾಯಕರು ತಾಂತ್ರಿಕ ಸಹಾಯಕರು( ಅರಣ್ಯ) ತಾಂತ್ರಿಕ ಸಹಾಯಕರು(ತೋಟಗಾರಿಕೆ) ತಾಲೂಕ ಐ ಇ ಸಿ ಸಂಯೋಜಕರು. ಒಟ್ಟು 13 ಹುದ್ದೆಗಳ ಭರ್ತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅದರಲ್ಲಿ ಆಡಳಿತ ಸಹಾಯಕರು ನಾಲ್ಕು ಹುದ್ದೆ ತಾಂತ್ರಿಕ ಸಹಾಯಕರು ಏಳು ಹುದ್ದೆ ತಾಲೂಕ ಐ ಇ ಸಿ ಸಂಯೋಜಕರು ಎರಡು ಹುದ್ದೆ ಖಾಲಿ ಇವೆ. ಉದ್ಯೋಗ ಸ್ಥಳ ಮಂಡ್ಯ ಜಿಲ್ಲೆ. ಇದಕ್ಕೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವ ವಿದ್ಯಾರ್ಹತೆಯನ್ನು ಪಡೆದಿರಬೇಕು ಎಂಬುದನ್ನು ನೋಡುವುದಾದರೆ ಆಡಳಿತ ಸಹಾಯಕ ಹುದ್ದೆಗೆ ಬಿಕಾಂ ಪದವಿಯ ಜೊತೆಗೆ ಕನ್ನಡ ಮತ್ತು ಇಂಗ್ಲಿಷ್ ಟೈಪಿಂಗ್ ಪರಿಣಿತಿ ಹೊಂದಿರಬೇಕು ಹಾಗೂ ಉತ್ತಮ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ತಾಂತ್ರಿಕ ಸಹಾಯಕ ಹುದ್ದೆಗೆ ಅರ್ಜಿ ಸಲ್ಲಿಸುವವರು ಬಿಎಸ್ಸಿ ಪದವಿಯನ್ನ ಪಡೆದಿರಬೇಕು ತಾಲೂಕ ಐ ಇ ಸಿ ಸಂಯೋಜಕ ಹುದ್ದೆಗೆ ಅರ್ಜಿ ಸಲ್ಲಿಸುವವರು ಸ್ನಾತಕೋತ್ತರ ಪದವಿ ಪಡೆದಿರಬೇಕು ನೀವು ಕೂಡ ತಾಲೂಕು ಪಂಚಾಯಿತಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮೂಲಕ ಉದ್ಯೋಗವನ್ನು ಪಡೆದುಕೊಳ್ಳಬಹುದಾಗಿದೆ. ಈ ಮಾಹಿತಿಯನ್ನು ನೀವು ತಿಳಿದುಕೊಳ್ಳುವುದರೊಂದಿಗೆ ನಿಮ್ಮ ಪರಿಚಿತರು ಹಾಗೂ ಸ್ನೇಹಿತರಿಗೂ ತಿಳಿಸಿರಿ.