ನಾವಿಂದು ನಿಮಗೆ ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಯ ಕುರಿತಾದ ಮಾಹಿತಿಯನ್ನು ತಿಳಿಸಿಕೊಡುತ್ತೇವೆ. ರೈಲ್ವೆ ಇಲಾಖೆಯ ನೇಮಕಾತಿಗೆ ಯಾರೆಲ್ಲಾ ಅರ್ಜಿಯನ್ನು ಸಲ್ಲಿಸಬೇಕು ಹೇಗೆ ಅರ್ಜಿಯನ್ನು ಸಲ್ಲಿಸಬೇಕು ಆಯ್ಕೆಯಾದ ಅಭ್ಯರ್ಥಿಗಳಿಗೆ ವೇತನ ಯಾವ ರೀತಿಯಾಗಿರುತ್ತದೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ವಯೋಮಿತಿ ಕುರಿತಾದ ಸಂಪೂರ್ಣ ಮಾಹಿತಿಯನ್ನು ನಮಗೆ ತಿಳಿಸಿಕೊಡುತ್ತೇವೆ.
ಭಾರತೀಯ ರೈಲ್ವೆ ಇಲಾಖೆಯಲ್ಲಿ ಒಟ್ಟು ಎರಡು ಸಾವಿರದ ಐದುನೂರು ಹುದ್ದೆಗಳು ಖಾಲಿ ಇವೆ. ಭಾರತೀಯ ರೈಲ್ವೆ ಇಲಾಖೆಯಲ್ಲಿ ಯಾವೆಲ್ಲಾ ಹುದ್ದೆಗಳು ಖಾಲಿ ಇವೆ ಎಂಬುದನ್ನು ನೋಡುವುದಾದರೆ ಟಿಕೆಟ್ ಕ್ಲಾರ್ಕ್ ಮತ್ತು ಪ್ರಯಾಣ ಟಿಕೆಟ್ ಪರೀಕ್ಷಕ ಹುದ್ದೆಗಳು ಖಾಲಿ ಇವೆ. ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ತಮ್ಮ ಅರ್ಜಿಯನ್ನು ಸಲ್ಲಿಸಬೇಕು. ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಇಬ್ಬರು ಕೂಡ ಅರ್ಜಿಯನ್ನು ಸಲ್ಲಿಸುವುದಕ್ಕೆ ಅರ್ಹರಾಗಿರುತ್ತಾರೆ.
ಆಯ್ಕೆಯಾದ ಅಭ್ಯರ್ಥಿಗಳಿಗೆ ಭಾರತದಾದ್ಯಂತ ಉದ್ಯೋಗ ಸ್ಥಳ ಇರುತ್ತದೆ. ಇದು ಕೇಂದ್ರ ಸರ್ಕಾರದ ಉದ್ಯೋಗವಾಗಿರುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ವೇತನವನ್ನು ಯಾವ ರೀತಿಯಾಗಿ ನೀಡಲಾಗುತ್ತದೆ ಎಂಬುದರ ಕುರಿತು ನೋಡುವುದಾದರೆ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ಇಪ್ಪತ್ತೊಂದು ಸಾವಿರದ ಏಳು ನೂರು ರೂಪಾಯಿಯಿಂದ ಎಂಬತ್ತೊಂದು ಸಾವಿರ ರೂಪಾಯಿಯವರೆಗೂ ವೇತನವನ್ನು ನೀಡಲಾಗುತ್ತದೆ.
ಇನ್ನು ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ ಜನರಲ್ ಕೆಟಗರಿ ಮತ್ತು ಒಬಿಸಿ ಅಭ್ಯರ್ಥಿಗಳು ಐದು ನೂರು ರೂಪಾಯಿ ಮತ್ತು ಎಸ್ಸಿ ಎಸ್ಟಿ ಮತ್ತು ಮಹಿಳಾ ಅಭ್ಯರ್ಥಿಗಳು ಎರಡು ನೂರಾ ಐವತ್ತು ರೂಪಾಯಿ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹದಿನೆಂಟು ವರ್ಷ ಮೇಲ್ಪಟ್ಟವರು ಹಾಗೂ ಮೂವತ್ತೈದು ವರ್ಷದೊಳಗಿನ ವರಾಗಿರಬೇಕು.
ಜೊತೆಗೆ ವಯೋಮಿತಿ ಸಡಿಲಿಕೆ ಇದ್ದು ಒಬಿಸಿ ಅಭ್ಯರ್ಥಿ ವಯಸ್ಸಿನ ಮಿತಿ ಹದಿನೆಂಟು ವರ್ಷದಿಂದ ಮೂವತ್ತೆಂಟು ವರ್ಷಗಳು ಎಸ್ಸಿಎಸ್ಟಿ ಅಭ್ಯರ್ಥಿಗಳಿಗೆ ವಯಸ್ಸಿನ ಮಿತಿ ಹದಿನೆಂಟು ವರ್ಷದಿಂದ ನಲವತ್ತು ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಹತ್ತನೇ ತರಗತಿ ಅಥವಾ ಹನ್ನೆರಡನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.
ಈ ಒಂದು ಹುದ್ದೆಗೆ ನೀವು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸುವಾಗ ಕೆಲವು ದಾಖಲೆಗಳನ್ನು ಒದಗಿಸಬೇಕಾಗುತ್ತದೆ. ಯಾವೆಲ್ಲ ದಾಖಲೆಗಳನ್ನು ಒದಗಿಸಬೇಕು ಎಂದರೆ ಫೋಟೋ ಮತ್ತು ಸಹಿ ಶಿಕ್ಷಣ ಪ್ರಮಾಣ ಪತ್ರ ನಿವಾಸ ಪ್ರಮಾಣಪತ್ರ ಜಾತಿ ಪ್ರಮಾಣ ಪತ್ರ ಪಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಬೇಕಾಗುತ್ತದೆ.
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನ ಯಾವ ರೀತಿಯಾಗಿ ಆಯ್ಕೆಮಾಡಿಕೊಳ್ಳಲಾಗುತ್ತದೆ ಎಂದರೆ ಮೊದಲಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನು ನಡೆಸಲಾಗುತ್ತದೆ ನಂತರ ವೈದ್ಯಕೀಯ ಪರೀಕ್ಷೆ ನಂತರ ದಾಖಲೆಗಳ ಪರಿಶೀಲನೆ ನಂತರ ಮೆರಿಟ್ ಪಟ್ಟಿಯನ್ನು ತಯಾರಿಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಇನ್ನೂ ಪ್ರಾರಂಭವಾಗಿಲ್ಲ ಮಾರ್ಚ್ ನಿಂದ ಎಪ್ರಿಲ್ ತಿಂಗಳಲ್ಲಿ ಅರ್ಜಿಯನ್ನು ಆಹ್ವಾನಿಸಬಹುದಾಗಿದೆ. ಅದಕ್ಕೆ ಬೇಕಾದ ಪೂರ್ವ ತಯಾರಿಯನ್ನು ನೀವು ಮಾಡಿಕೊಳ್ಳಬಹುದಾಗಿದೆ ಅರ್ಜಿಯನ್ನು ಆಹ್ವಾನಿಸಿದ ತಕ್ಷಣ ನೀವು ಕೂಡ ಅರ್ಜಿಯನ್ನು ಸಲ್ಲಿಸಿ ಉದ್ಯೋಗವನ್ನು ಪಡೆದುಕೊಳ್ಳಬಹುದು. ಈ ಮಾಹಿತಿಯನ್ನು ನಿವು ತಿಳಿದುಕೊಳ್ಳುವುದರೊಂದಿಗೆ ನಿಮ್ಮ ಸ್ನೇಹಿತರು ಹಾಗೂ ಪರಿಚಿತರಿಗೂ ತಿಳಿಸಿರಿ.