ಈಗಾಗಲೇ ಪೊಲೀಸ್ ಇಲಾಖೆಯಲ್ಲಿ ಮೀಸಲು ಪೊಲೀಸ್, ಇಂಡಸ್ಟ್ರಿಯಲ್ ಸೆಕ್ಯೂರಿಟಿ ಫೋರ್ಸ್ ನಲ್ಲಿ ಕಾನ್ಸ್‌ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಆಗಲು ಅವಕಾಶ ನೀಡಲಾಗಿದೆ.
ಇದಕ್ಕಾಗಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈಗಾಗಲೇ KSRP, KSISF ನಲ್ಲಿ ಪಿಸಿ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ನಾಗರಿಕ ಪೊಲೀಸ್ ಕಾನ್ಸ್‌ಟೇಬಲ್ ಆಗಿ ಕರ್ತವ್ಯ ನಿರ್ವಹಿಸಲು ಇಚ್ಛೆಯಿದ್ದಲ್ಲಿ, ಪ್ರಸ್ತುತ ಬಿಡುಗಡೆ ಮಾಡಲಾದ ಅಧಿಸೂಚನೆಯನ್ನು ಓದಿಕೊಂಡು, ಅರ್ಜಿ ಸಲ್ಲಿಸಿ ನೇಮಕಾತಿ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ತಿಳಿಸಲಾಗಿದೆ. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ನೇಮಕಾತಿ.
ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ. 387 ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ಹುದ್ದಗೆ ಅರ್ಜಿ ಆಹ್ವಾನ ಮಾಡಲಾಗಿದ್ದು ಅರ್ಜಿದಾರರ ವಿದ್ಯಾರ್ಹತೆ, ವಯೋಮಿತಿ ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಏನು? ಅನ್ನೋದನ್ನ ನಾವು ಈ ಲೇಖನದ ಮೂಲಕ ತಿಳಿದುಕೊಳ್ಳೋಣ.
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. 387 ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ಹುದ್ದಗೆ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸೆಪ್ಟೆಂಬರ್ 6, 2021 ಆಗಿರುತ್ತದೆ. ಆನ್‌ಲೈನ್ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ19-08-2021 ಆಗಿರುತ್ತದೆ.
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 06-09-2021 ಹಾಗೂ ಆನ್‌ಲೈನ್ ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆ ದಿನಾಂಕ 08-09-2021 ಆಗಿರುತ್ತದೆ. ಇನ್ನೂ ಅಭ್ಯರ್ಥಿಗಳ ವಿದ್ಯಾರ್ಹತೆ ಏನು? ಎಂದು ನೋಡುವುದಾದರೆ, ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ ಯಿಂದ 12ನೇ ತರಗತಿ (PUC) ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ಹಾಗೇ ಅರ್ಜಿದಾರರು ಸಲ್ಲಿಸಬೇಕಾದ ಅರ್ಜಿ ಶುಲ್ಕ ಹೇಗಿರುತ್ತದೆ. ಸಾಮಾನ್ಯ ಹಾಗೂ ಹಿಂದೂಳಿದ ವರ್ಗದವರಿಗೆ 400 ಮತ್ತು ಎಸ್‌ಸಿ, ಎಸ್ಟಿ ಅಭ್ಯರ್ಥಿಗಳಿಗೆ 200 ರೂಪಯಿ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ನೇಮಕಾತಿ ಹಂತಗಳು ಪ್ರಕ್ರಿಯೆಯನ್ನು ನೋಡುವುದಾದರೆ ಲಿಖಿತ ಪರೀಕ್ಷೆ, ಸಹಿಷ್ಣುತೆ ಪರೀಕ್ಷೆ ಮತ್ತು ದೇಹದಾರ್ಢ್ಯತೆ ಪರೀಕ್ಷೆ ಮಾಡಲಾಗುವುದು. ವಯೋಮಿತಿ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 19ರಿಂದ 31 ವರ್ಷ, ಇತರೆ SC, ST ಅಭ್ಯರ್ಥಿಗಳಿಗೆ 19ರಿಂದ 33 ವರ್ಷ. ಇನ್ನು ವೇತನ ಎಷ್ಟು ಎಂದು ನೋಡುವುದಾದರೆ, ಕಾನ್‌ಸ್ಟೇಬಲ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.
ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.ಅರ್ಜಿ ಸಲ್ಲಿಕೆ: ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://ksp.karnataka.gov.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಸೆಪ್ಟೆಂಬರ್ 6, 2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430