ರೈತ ಮಕ್ಕಳು ಸ್ಕಾಲರ್ಶಿಪ್ ಪಡೆಯಲು ಹೊಸ ಯೋಜನೆ ಪ್ರಾರಂಭ ಯಾರಿಗೆ ಎಷ್ಟು ಇಲ್ಲಿದೆ ಮಾಹಿತಿ

0 0

ದೇಶದ ಬೆನ್ನೆಲುಬು ಎಂದು ರೈತರಿಗೆ ಕರೆಯಲಾಗುತ್ತದೆ ಆದರೆ ರೈತರು ತಾವು ಕಷ್ಟಪಟ್ಟು ಜಮೀನಿನಲ್ಲಿ ದುಡಿದರೂ ಸರಿಯಾದ ಫಲ ಸಿಗದೆ ಕುಟುಂಬದವರು ಬೀದಿಗೆ ಬರುವ ಸ್ಥಿತಿಯನ್ನು ನಾವು ಎಲ್ಲೆಲ್ಲೂ ನೋಡಬಹುದು. ಸನ್ಮಾನ್ಯ ಮುಖ್ಯಮಂತ್ರಿಯವರಾದ ಬಸವರಾಜ ಬೊಮ್ಮಾಯಿ ಅವರು ರೈತ ಬಾಂಧವರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಹೊಸದೊಂದು ಯೋಜನೆಯನ್ನು ಜಾರಿಗೊಳಿಸಿದ್ದಾರೆ. ಹಾಗಾದರೆ ಹೊಸ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದ ಮೂಲಕ ನೋಡೋಣ.

ಕರ್ನಾಟಕ ರಾಜ್ಯ ಸರ್ಕಾರದಿಂದ ಕರ್ನಾಟಕದಲ್ಲಿರುವ ರೈತ ಬಾಂಧವರಿಗೆ ಹಾಗೂ ಅವರ ಮಕ್ಕಳಿಗೆ ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಎನ್ನುವ ಹೊಸ ಯೋಜನೆಯನ್ನು ಪ್ರಾರಂಭಿಸಲಾಗಿದೆ. ಈ ಯೋಜನೆ ಮೂಲಕ ರೈತರ ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿರುವಾಗ ವಿದ್ಯಾರ್ಥಿವೇತನವನ್ನು ರಾಜ್ಯ ಸರ್ಕಾರದಿಂದ ಪಡೆಯಬಹುದು. ಕಾರ್ಯಕ್ರಮದಲ್ಲಿ ಮಂಜೂರಾಗುವ ವಾರ್ಷಿಕ ಶಿಷ್ಯವೇತನ ಪಡೆಯಲು ಫಲಾನುಭವಿಗಳಾಗಲು ಕೆಲವು ಅರ್ಹತೆಗಳಿರಬೇಕು. ಪಿಯುಸಿ, ಐಟಿಐ, ಡಿಪ್ಲೊಮಾ ಓದುತ್ತಿರುವ ವಿದ್ಯಾರ್ಥಿಗಳಿಗೆ 2,500 ರೂಪಾಯಿ, ವಿದ್ಯಾರ್ಥಿನಿಯರಿಗೆ 3,000 ರೂಪಾಯಿ ವಿದ್ಯಾರ್ಥಿವೇತನ ನೀಡಲಾಗುತ್ತದೆ.

ಬಿಎಸ್ಸಿ, ಬಿಕಾಂ ಇನ್ನಿತರ ಪದವಿ ಓದುತ್ತಿರುವ ವಿದ್ಯಾರ್ಥಿಗಳಿಗೆ 5000 ರೂಪಾಯಿ ಮತ್ತು ವಿದ್ಯಾರ್ಥಿನಿಯರಿಗೆ.5,500 ರೂಪಾಯಿ ವಿದ್ಯಾರ್ಥಿವೇತನ ನೀಡಲಾಗುತ್ತದೆ. LLB, ಪ್ಯಾರಾಮೆಡಿಕಲ್, ಬಿ ಫಾರ್ಮ್, ನರ್ಸಿಂಗ್ ಇನ್ನಿತರ ವೃತ್ತಿಪರ ಕೋರ್ಸ್ ಓದುತ್ತಿರುವ ವಿದ್ಯಾರ್ಥಿಗಳಿಗೆ 7,500 ರೂಪಾಯಿ ಮತ್ತು ವಿದ್ಯಾರ್ಥಿನಿಯರಿಗೆ 8000 ರೂಪಾಯಿ ವಿದ್ಯಾರ್ಥಿವೇತನ ನೀಡಲಾಗುತ್ತದೆ. ಎಂಬಿಬಿಎಸ್, ಬಿಇ, ಬಿಟೆಕ್ ಹಾಗೂ ಇತರೆ ಎಲ್ಲ ಸ್ನಾತಕೋತ್ತರ ಕೋರ್ಸ್ ನಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ 10,000 ರೂಪಾಯಿ, ವಿದ್ಯಾರ್ಥಿನಿಯರಿಗೆ 11,000 ರೂಪಾಯಿ ವಿದ್ಯಾರ್ಥಿವೇತನ ನೀಡಲಾಗುತ್ತದೆ.

ಹತ್ತನೆ ತರಗತಿಯನ್ನು ಪೂರ್ಣಗೊಳಿಸಿ ಕರ್ನಾಟಕ ರಾಜ್ಯದ ಯಾವುದೆ ಭಾಗದಲ್ಲಿ ಅಧಿಕೃತವಾಗಿ ನೋಂದಣಿಯಾಗಿರುವ ಶಿಕ್ಷಣ ಸಂಸ್ಥೆಯಲ್ಲಿ ಪಿಯುಸಿ, ಪದವಿ ಅಥವಾ ಸ್ನಾತಕೋತ್ತರ ಕೋರ್ಸ್ ಗಳಿಗೆ ಪ್ರವೇಶ ಪಡೆದಿರುವ ರೈತರ ಮಕ್ಕಳಿಗೆ ಶಿಷ್ಯವೇತನ ಅಥವಾ ವಿದ್ಯಾರ್ಥಿವೇತನ ನೀಡಲಾಗುತ್ತದೆ. ಈ ಯೋಜನೆಗಾಗಿ ಸರ್ಕಾರ ಒಂದು ಸಾವಿರ ಕೋಟಿ ರೂಪಾಯಿಯನ್ನು ಮೀಸಲಿಟ್ಟಿದೆ.

5/9/2021 ಭಾನುವಾರದಂದು ಹತ್ತು ಮೂವತ್ತಕ್ಕೆ ಬ್ಯಾಂಕ್ವೆಟ್ ಹಾಲ್ ವಿಧಾನಸೌಧ ಬೆಂಗಳೂರು ಇಲ್ಲಿ ರಾಜ್ಯದ ರೈತಾಪಿ ಮಕ್ಕಳ ಉನ್ನತ ವ್ಯಾಸಂಗಕ್ಕೆಂದು ವರದಾನದಂತೆ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಕಾರ್ಯಕ್ರಮದ ಲೋಕಾರ್ಪಣೆ ನಡೆಯಿತು. ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರು ಅಧಿಕಾರ ಸ್ವೀಕರಿಸಿ ಪ್ರಥಮವಾಗಿ ನಾಡಿನ ಅನ್ನದಾತ ರೈತರು ಮತ್ತು ಸಮಾಜದ ದುರ್ಬಲ ವರ್ಗಗಳ ಕಲ್ಯಾಣಕ್ಕಾಗಿ ಕೈಗೊಂಡ ಪ್ರಧಾನ ಪಂಚ ಕಾರ್ಯಕ್ರಮಗಳ ಪೈಕಿ ಮೊದಲ ಕಾರ್ಯಕ್ರಮ ಇದಾಗಿದೆ.

ಎಸೆಸೆಲ್ ಸಿ ಪೂರೈಸಿದ ರೈತರ ಮಕ್ಕಳು ಮುಂದಿನ ವಿದ್ಯಾಭ್ಯಾಸದ ಕನಸು ಕೈಗೂಡಲು ಪ್ರತಿವರ್ಷ ವಿದ್ಯಾರ್ಥಿವೇತನ ಒದಗಿಸುವ ನೆರವಿನ ಕಾರ್ಯಕ್ರಮವಾಗಿದೆ ಇದಾಗಿದೆ. ವಾರ್ಷಿಕ ವಿದ್ಯಾರ್ಥಿವೇತನವನ್ನು ರೈತರ ಮಕ್ಕಳ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ (ಡೆಬಿಟ್) ಮೂಲಕ ಜಮೆ ಮಾಡಲಾಗುವುದು. ಈ ಕಾರ್ಯಕ್ರಮದ ಮೂಲಕ ಅನ್ನದಾತ ಸುಖೀಭವ ಎಂಬುದನ್ನು ಸಾಕಾರಗೊಳಿಸಲಾಗಿದೆ. ಬಿ.ಸಿ ಪಾಟೀಲ್ ಅವರು ಕರ್ನಾಟಕ ರಾಜ್ಯದ ಕೃಷಿ ಇಲಾಖೆಯ ಸಚಿವರಾಗಿದ್ದಾರೆ.

ಕೆ ಕಿಸಾನ್ ಕರ್ನಾಟಕ ಸರ್ಕಾರದ ಕೃಷಿ ಇಲಾಖೆಯ ವೆಬ್ ಸೈಟ್ ಆಗಿದೆ. ಈ ಯೋಜನೆಯಡಿ ಅರ್ಜಿ ಸಲ್ಲಿಸಲು ರೈತ ಕುಟುಂಬದವರು ಎಂಬುದರ ಬಗ್ಗೆ ಪ್ರಮಾಣಪತ್ರ ಇರಬೇಕಾಗುತ್ತದೆ. ವಿದ್ಯಾರ್ಥಿವೇತನಕ್ಕೆ ಆನಲೈನ್ ಅರ್ಜಿ ಸಲ್ಲಿಸಬಹುದು ಆದರೆ ಯಾವಾಗ ವೆಬ್ ಸೈಟ್ ನಲ್ಲಿ ಸಲ್ಲಿಸಬೇಕು ಎನ್ನುವುದರ ಬಗ್ಗೆ ಮುಂದಿನ ದಿನಗಳಲ್ಲಿ ಮಾಹಿತಿ ಸಿಗಲಿದೆ. ಈ ಮಾಹಿತಿಯನ್ನು ರೈತ ಬಾಂಧವರಿಗೆ ಹಾಗೂ ಅವರ ಮಕ್ಕಳಿಗೆ ತಪ್ಪದೆ ತಿಳಿಸಿ.

ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430

Leave A Reply

Your email address will not be published.