ಪ್ರಸಕ್ತ ವರ್ಷ ಸಹಕಾರಿ ಬ್ಯಾಂಕುಗಳ ಮೂಲಕ ರಾಜ್ಯದ 30 ಲಕ್ಷ ರೈತರಿಗೆ 20,810 ಕೋಟಿ ರುಪಾಯಿ ಸಾಲ ನೀಡುವ ಗುರಿಯನ್ನು ಹೊಂದಲಾಗಿದೆ ಎಂದು ಸಹಕಾರಿ ಸಚಿವ ಎಸ್.ಟಿ. ಸೋಮಶೇಖರ್ ಅವರು ತಿಳಿಸಿದರು. ಈ ಮೂಲಕ ರಾಜ್ಯದ 30 ಲಕ್ಷ ರೈತರಿಗೆ ಬಂಪರ್ ಕೊಡುಗೆ ಸಿಗಲಿದೆ ಎಂದೇ ಹೇಳಬಹುದು. ಬಿಜೆಪಿಯ ಭಾರತಿ ಶೆಟ್ಟಿ ಎಂಬವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕಳೆದ ವರ್ಷ 14,500 ಕೋಟಿ ರುಪಾಯಿ ಸಾಲ ನೀಡುವ ಗುರಿ ಹೊಂದಿದ್ದರೂ ಸಹ ಗುರಿ ಮೀರಿ ಸಾಲ ನೀಡಲಾಗಿದೆ.
ಈ ವರ್ಷ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಸಾಲ ಸೌಲಭ್ಯ ಕಲ್ಪಿಸಲಾಗುವುದು. ರಾಜ್ಯದಲ್ಲಿ ಸಹಕಾರಿ ಕ್ಷೇತ್ರದ ಬಲವರ್ಧನೆಗೆ ಅನೇಕ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ವಿಶೇಷವಾಗಿ ಸಹಕಾರ ಸಂಘಗಳಲ್ಲಿ 3 ಲಕ್ಷ ರು.ವರೆಗೆ ಹೈನುಗಾರಿಕೆ ಒಳಗೊಂಡಂತೆ ಅಲ್ಪಾವಧಿ ಕೃಷಿ ಸಾಲವನ್ನು ಶೂನ್ಯ ಬಡ್ಡಿ ದರದಲ್ಲಿ ಹಾಗೂ ಮಧ್ಯಮಾವಧಿ ಹಾಗೂ ದೀರ್ಘಾವಧಿ ಸಾಲವನ್ನು ಶೇಕಡಾ 3ರ ಬಡ್ಡಿ ದರದಲ್ಲಿ 10 ಲಕ್ಷ ರುಪಾಯಿಯವರೆಗೆ ನೀಡಲಾಗಿದೆ.
ಇದಕ್ಕಾಗಿ ಸರ್ಕಾರ ಪ್ರತಿ ವರ್ಷ ಆಯವ್ಯಯದಲ್ಲಿ 1100 ಕೋಟಿ ರುಪಾಯಿವರೆಗೂ ಅವಕಾಶ ಕಲ್ಪಿಸಲಾಗಿದೆ. ಎಲ್ಲ ರೈತ ಫಲಾನುಭವಿಗಳಿಗೆ ಸಾಲ ಸಿಗಬೇಕು ಎಂಬ ಉದ್ದೇಶದಿಂದ ಪ್ರತಿ ಜಿಲ್ಲೆಗಳಿಗೆ ಭೇಟಿ ನೀಡಿ ಡಿಸಿಸಿ ಬ್ಯಾಂಕುಗಳ ಶಾಖೆಗಳಲ್ಲಿ ಪ್ರಗತಿ ಪರಿಶೀಲನೆ ನಡೆಸಿದ್ದೇನೆ. ‘ಸಹಕಾರಿ ನಡಿಗೆ ಡಿಸಿಸಿ ಬ್ಯಾಂಕ್ ಕಡೆಗೆ’ ಕಾರ್ಯಕ್ರಮ ಹಾಕಿಕೊಂಡು ಸ್ವತಃ ಸಭೆ ನಡೆಸಿ ರೈತರಿಗೆ ನೀಡಲಾದ ಸಾಲದ ವಿವರ ಪಡೆದು, ಎಲ್ಲಿ ಗುರಿ ಸಾಧಿಸದೇ ಇರುವ ಕಡೆ ಸಲಹೆ ಸೂಚನೆ ನೀಡಿದ್ದಾಗಿ ಸಚಿವರು ತಿಳಿಸಿದರು.
2020-21ರ ಆರ್ಥಿಕ ವರ್ಷದಲ್ಲಿ 24.50 ಲಕ್ಷ ರೈತರಿಗೆ 15400 ಕೋಟಿ ರೂಪಾಯಿ ಅಲ್ಪಾವಧಿ, ಮಧ್ಯಮಾವಧಿ ಹಾಗೂ ದೀರ್ಘಾವಧಿ ಸಾಲ ನೀಡಿಕೆಯ ಗುರಿಯನ್ನು ಹೊಂದಲಾಗಿತ್ತು. ಅಪೆಕ್ಸ್ ಬ್ಯಾಂಕ್ ಹಾಗೂ 21 ಡಿಸಿಸಿ ಬ್ಯಾಂಕ್ ಗಳು 25,93,982 ರೈತರಿಗೆ 17490 ಕೋಟಿ ರೂಪಾಯಿ ಸಾಲ ನೀಡಿವೆ ಎಂದು ವಿವರಿಸಿದರು. ಹೆಚ್ಚಿನ ರೈತರಿಗೆ ಸಾಲ ತಲುಪಿಸುವಂತೆ ಸಿಎಂ ಸೂಚನೆ ನೀಡಿದ್ದು ಅಂತೆಯೇ ಅಪೆಕ್ಸ್ ಬ್ಯಾಂಕ್, ಡಿಸಿಸಿ ಬ್ಯಾಂಕ್ ಗಳ ಮೂಲಕ ರೈತರಿಗೆ ಅಗತ್ಯವಾದ ಸಾಲ ನೂರಕ್ಕೆ ನೂರರಷ್ಟು ದೊರಕಿಸಿಕೊಡಲು ಡಿಸಿಸಿ ಬ್ಯಾಂಕುಗಳು ಮುಂದಾಗಬೇಕು ಎಂದು ಹೇಳಿದ್ದಾರೆ.
ಶೂನ್ಯ ಬಡ್ಡಿ ದರದಲ್ಲಿ ಮಹಿಳಾ ಸ್ವ ಸಹಾಯ ಸಂಘಗಳಿಗೆ ಹಾಗೂ ಶೇಕಡಾ 4ರ ಬಡ್ಡಿ ದರದಲ್ಲಿ ಪುರುಷ ಸ್ವ ಸಹಾಯ ಸಂಘಗಳಿಗೆ 5 ಲಕ್ಷ ರುಪಾಯಿ ವರೆಗೆ ಸಾಲ ನೀಡಲಾಗುತ್ತಿದೆ. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳನ್ನು (ಪ್ಯಾಕ್ಸ್) ಬಹುಸೇವಾ ಸಂಸ್ಥೆಗಳಾಗಿ ಅಭಿವೃದ್ಧಿ ಪಡಿಸಿ ಮೂಲಭೂತ ಸೌಲಭ್ಯ ಒದಗಿಸಲು ಗೋದಾಮು, ಶೀತಲಕೇಂದ್ರ ನಿರ್ಮಾಣ ಮಾಡಲು ಮತ್ತು ರೈತ ಸೇವಾ ಕೇಂದ್ರಗಳಾಗಿ ಅಭಿವೃದ್ಧಿ ಪಡಿಸಲು ನಬಾರ್ಡ್ ಮೂಲಕ ಕಡಿಮೆ ಬಡ್ಡಿ ದರದಲ್ಲಿ ಸಾಲ ಒದಗಿಸಲಾಗುತ್ತಿದೆ. ರಾಜ್ಯ ಸರ್ಕಾರದ ಉತ್ತೇಜನದೊಂದಿಗೆ ಸುಮಾರು 900 ಪ್ಯಾಕ್ಸ್‌ಗಳಲ್ಲಿ ಈ ಯೋಜನೆ ಪ್ರಾರಂಭಿಸಲಾಗಿದೆ ಎಂದು ಸಚಿವ ಸೋಮಶೇಖರ್ ವಿವರಿಸಿದರು.
ಸಹಕಾರ ಸಂಘಗಳ ಲೆಕ್ಕ ಪರಿಶೋಧನಾ ಇಲಾಖೆಯನ್ನು ಸದೃಢಗೊಳಿಸಲು 402 ಲೆಕ್ಕ ಪರಿಶೋಧಕರ ಹುದ್ದೆಗಳ ನೇಮಕಾತಿಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದ ಸಚಿವರು, ಸಹಕಾರ ಸಂಘಗಳಲ್ಲಿ ಅಕ್ರಮ, ಅವ್ಯವಹಾರ ತಡೆಯಲು ಆಡಿಟ್ ಇಲಾಖೆಯನ್ನು ಬಲಪಡಿಸಲಾಗುತ್ತಿದೆ. ತಪ್ಪು ಲೆಕ್ಕಪರಿಶೋಧನಾ ವರದಿ ನೀಡಿದ ಲೆಕ್ಕ ಪರಿಶೋಧಕರನ್ನು ಕಪ್ಪು ಪಟ್ಟಿಗೆ ಸೇರಿಸಲಾಗುವುದು ಎಂದು ಹೇಳಿದರು.
ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430