ಸೋಶಿಯಲ್ ಮೀಡಿಯಾದಲ್ಲಿ ನಂಬರ್ 1 ಸ್ಥಾನಕ್ಕೇರಿದ್ದು ಯಾರು ಇವರಿಬ್ಬರಲ್ಲಿ ನೋಡಿ

0 3

ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಅವರ ಹವಾ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಹಲವು ಕಾರಣಗಳಿಗಾಗಿ ಅವರು ಸುದ್ದಿ ಆಗುತ್ತಿದ್ದಾರೆ. ಈಗ ಅವರು ಯಶ್​, ಸಮಂತಾ, ಪ್ರಭಾಸ್​, ವಿಜಯ್​ ದೇವರಕೊಂಡ ಮುಂತಾದ ಸ್ಟಾರ್​ ಕಲಾವಿದರನ್ನು ಹಿಂದಿಕ್ಕಿ ನಂಬರ್​ ಒನ್​ ಪಟ್ಟ ಪಡೆದುಕೊಂಡಿದ್ದಾರೆ.

ಸೋಶಿಯಲ್​ ಮೀಡಿಯಾದಲ್ಲಿ ಅತಿ ಹೆಚ್ಚು ಪ್ರಭಾವಿ ಎನಿಸಿಕೊಂಡಿರುವ ದಕ್ಷಿಣ ಭಾರತದ ಸೆಲೆಬ್ರಿಗಳ ಪಟ್ಟಿಯನ್ನು ಫೋರ್ಬ್ಸ್​ ಸಂಸ್ಥೆ ಬಿಡುಗಡೆ ಮಾಡಿದೆ. ಅದರಲ್ಲಿ ರಶ್ಮಿಕಾ ನಂಬರ ಒನ್ ಆಗಿದ್ದಾರೆ. ಸದ್ಯ ಸೋಷಿಯಲ್ ಮೀಡಿಯಾದ್ದೇ ಮೇಲುಗೈ. ಎಲ್ಲರ ಕೈಯಲ್ಲೂ ಮೊಬೈಲ್ ಬಂದ ಮೇಲೆ ಸಾಮಾಜಿಕ ಜಾಲತಾಣ ತುಂಬಾ ಸದ್ದು ಮಾಡುತ್ತಿದೆ.

ಇದೇ ಹಿನ್ನೆಲೆಯಲ್ಲಿ ಫೋರ್ಬ್ಸ್ ಸಂಸ್ಥೆಯು ಪಟ್ಟಿಯೊಂದನ್ನು ಬಿಡುಗಡೆ ಮಾಡಿದೆ. ಸೌತ್ ಫಿಲಂ ಇಂಡಸ್ಟ್ರಿಯ ನಟ- ನಟಿಯರು ಸೋಶಿಯಲ್ ಮೀಡಿಯಾದಲ್ಲಿ ಯಾರು ಹೆಚ್ಚು ಫಾಲೋವರ್ಸ್ ಹೊಂದಿದ್ದಾರೆ, ಹೆಚ್ಚು ಸಕ್ರಿಯರಾಗಿದ್ದು, ಯಾರ ಪೋಸ್ಟ್ ಗಳಿಗೆ ಪ್ರತಿಕ್ರಿಯೆಗಳು ಹೆಚ್ಚಿಗೆ ಬರುತ್ತದೆ ಹೀಗೆ ಹಲವಾರು ಅಂಶಗಳ ಆಧಾರದ ಮೇಲೆ ಪಟ್ಟಿಯನ್ನು ಸಿದ್ಧ ಮಾಡಿದೆ.

ಇನ್ನು ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಸದ್ಯ ಸದ್ದು ಮಾಡುತ್ತಿರುವ ನಟ ಅಂದ್ರೆ ಯಶ್. ಫೋರ್ಬ್ಸ್ ಸೆಲೆಬ್ರಿಟಿಗಳ ಪಟ್ಟಿಯಲ್ಲಿ ಇವರ ಹೆಸರು ಇರುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ಆದ್ರೆ ಫೋರ್ಬ್ಸ್ ಪಟ್ಟಿಯಲ್ಲಿ ಯಶ್ ಅವರನ್ನು ಹಿಂದಿಕ್ಕಿ ಕನ್ನಡದ ನಟಿ, ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಮುಂದೆ ಸಾಗಿದ್ದಾರೆ. ಸಂಭಾವನೆ, ಸೋಶಿಯಲ್ ಮೀಡಿಯಾ ಹಿಂಬಾಲಕರ ಸಂಖ್ಯೆ, ಸಿನಿಮಾ ಆಫರ್​ ಮುಂತಾದ ಎಲ್ಲ ವಿಚಾರದಲ್ಲೂ ಈ ಕೊಡಗಿನ ಕುವರಿಯ ನಾಗಾಲೋಟ ಮುಂದುವರಿದಿದೆ.

ಹಾಗೆಯೇ ಸಾಮಾಜಿಕ ಜಾಲತಾಣದಲ್ಲಿ ಅವರ ಪ್ರಭಾವ ಹೆಚ್ಚುತ್ತಿದೆ. ಅವರು ಮಾಡುವ ಪ್ರತಿ ಪೋಸ್ಟ್​ ಕೂಡ ಕೋಟ್ಯಂತರ ಮಂದಿಯನ್ನು ತಲುಪುತ್ತಿದೆ. ಫೋರ್ಬ್ಸ್ ನಡೆಸಿದ ಸಮೀಕ್ಷೆಯಲ್ಲಿ ರಶ್ಮಿಕಾ ಮಂದಣ್ಣ 9. 88 ಪಾಯಿಂಟ್ ಗಳೊಂದಿಗೆ ಅಗ್ರಸ್ಥಾನ ಪಡೆದಿದ್ದಾರೆ. ವಿಜಯ್ ದೇವರಕೊಂಡ ಪಟ್ಟಿಯಲ್ಲಿ 9.67 ಪಾಯಿಂಟ್ ಗಳೊಂದಿಗೆ 2ನೇ ಸ್ಥಾನಗಳಿಸಿದ್ದಾರೆ.

ದಕ್ಷಿಣ ಭಾರತದ ಘಟಾನುಘಟಿ ಸ್ಟಾರ್​ ಕಲಾವಿದರನ್ನೆಲ್ಲ ರಶ್ಮಿಕಾ ಮಂದಣ್ಣ ಹಿಂದಿಕ್ಕಿದ್ದಾರೆ. ‘ಕೆಜಿಎಫ್​’ ಸಿನಿಮಾ ಮೂಲಕ ಅಪಾರ ಜನಪ್ರಿಯತೆ ಗಳಿಸಿರುವ ‘ರಾಕಿಂಗ್​ ಸ್ಟಾರ್​’ ಯಶ್​ ಅವರಿಗೆ ಮೂರನೇ ಸ್ಥಾನವಿದೆ. ಅವರು 9.54 ರೇಟಿಂಗ್​ ಪಡೆದುಕೊಂಡಿದ್ದಾರೆ. 9.49 ರೇಟಿಂಗ್​ನೊಂದಿಗೆ ನಟಿ ಸಮಂತಾ ನಾಲ್ಕನೇ ಸ್ಥಾನದಲ್ಲಿದ್ದಾರೆ. ಅಲ್ಲು ಅರ್ಜುನ್​ 9.46, ದುಲ್ಖರ್​ ಸಲ್ಮಾನ್​ 9.42, ಪೂಜಾ ಹೆಗ್ಡೆ 9.41, ಪ್ರಭಾಸ್​ 9.40, ಸೂರ್ಯ 9.37, ತಮನ್ನಾ ಭಾಟಿಯಾ 9.36 ರೇಟಿಂಗ್​ ಪಡೆದುಕೊಂಡಿದ್ದಾರೆ.

ಟಾಲಿವುಡ್​ನ ಇನ್ನಿತರ ಸ್ಟಾರ್​ ಕಲಾವಿದರಾದ ರಾಮ್​ ಚರಣ್​, ಜ್ಯೂ. ಎನ್​ಟಿಆರ್​ ಮುಂತಾದವರು ಟಾಪ್​ 10 ಪಟ್ಟಿಯ ಹೊರಗಿದ್ದಾರೆ. ಕನ್ನಡ, ತೆಲುಗು, ಮಲಯಾಳಂ ಮತ್ತು ತಮಿಳು ಚಿತ್ರರಂಗದ ಸೆಲೆಬ್ರಿಟಿಗಳ ಸೋಶಿಯಲ್​ ಮೀಡಿಯಾ ಪೋಸ್ಟ್​ಗಳಿಗೆ ಬಂದ ಪ್ರತಿಕ್ರಿಯೆಯನ್ನು ಆಧರಿಸಿ ಪೋರ್ಬ್ಸ್​ ಸಂಸ್ಥೆ ಈ ಪಟ್ಟಿ ಬಿಡುಗಡೆ ಮಾಡಿದೆ. ಇದರಲ್ಲಿ ರಶ್ಮಿಕಾ ಮಂದಣ್ಣ ನಂಬರ್ ಒನ್ ಎಂಬುದನ್ನು ತಿಳಿದು ಅವರ ಫ್ಯಾನ್ಸ್​ ಹಿರಿಹಿರಿ ಹಿಗ್ಗುತ್ತಿದ್ದಾರೆ.

ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430

Leave A Reply

Your email address will not be published.