ಅಕ್ಟೋಬರ್ 3ನೇ ವಾರದಲ್ಲಿ ಬಂದ ಉದ್ಯೋಗ ಮಾಹಿತಿ ಇಲ್ಲಿದೆ

0 1

ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿರುವವರಿಗೆ ಸುವರ್ಣಾವಕಾಶ ಎಂದು ಹೇಳಬಹುದು ನಾವಿಂದು ನಿಮಗೆ ಅಕ್ಟೋಬರ್ ತಿಂಗಳಿನಲ್ಲಿ ಯಾವೆಲ್ಲಾ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ ಹಾಗೂ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವವರು ಯಾವ ಅರ್ಹತೆಯನ್ನು ಹೊಂದಿರಬೇಕು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಹಾಗೂ ಪ್ರಾರಂಭವಾದ ದಿನಾಂಕದ ಕುರಿತು ಹಾಗೂ ಅಭ್ಯರ್ಥಿಗಳನ್ನು ಯಾವ ರೀತಿಯಾಗಿ ಆಯ್ಕೆಮಾಡಿಕೊಳ್ಳಲಾಗುತ್ತದೆ ಮತ್ತು ವೇತನ ಮುಂತಾದವುಗಳ ಬಗ್ಗೆ ಮಾಹಿತಿಯನ್ನು ತಿಳಿಸಿಕೊಡುತ್ತೇವೆ.

ನಾವು ನಿಮಗೆ ತಿಳಿಸುತ್ತಿರುವ ಮೊದಲ ನೇಮಕಾತಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿನ ನೇಮಕಾತಿ. ಈ ಒಂದು ಇಲಾಖೆಯಡಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮಿನಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಸಹಾಯಕಿಯರು ಈ ರೀತಿಯಾಗಿ ಒಟ್ಟು ನೂರಾ ಐವತ್ತು ಹುದ್ದೆಗಳಿಗೆ ಮಂಡ್ಯ ಮತ್ತು ರಾಯಚೂರು ಜಿಲ್ಲೆಗಳಲ್ಲಿ ನೇಮಕಾತಿ ನಡೆಯುತ್ತಿದೆ. ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವವರು ಹತ್ತನೇ ತರಗತಿಯನ್ನು ಮಿನಿ ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸುವವರು ಒಂಬತ್ತನೇ ತರಗತಿಯನ್ನು ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸುವವರು ನಾಲ್ಕನೇ ತರಗತಿಯನ್ನು ಪಾಸಾಗಿರಬೇಕು.

ಹದಿನೆಂಟು ವರ್ಷದಿಂದ ಮೂವತ್ತೈದು ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳ ಆಯ್ಕೆ ಮಾಡಲಾಗುತ್ತದೆ. ಅಭ್ಯರ್ಥಿಗಳು ನವೆಂಬರ್ ಹದಿನೈದು, ಎರಡು ಸಾವಿರದ ಇಪ್ಪತ್ತೊಂದರೊಳಗಾಗಿ ಆನ್ಲೈನ್ ಮೂಲಕ ತಮ್ಮ ಅರ್ಜಿಯನ್ನು ಸಲ್ಲಿಸಬಹುದು ಅರ್ಜಿ ಸಲ್ಲಿಸುವುದಕ್ಕೆ ಯಾವುದೇ ರೀತಿಯಾದಂತಹ ಅರ್ಜಿ ಶುಲ್ಕ ಇರುವುದಿಲ್ಲ.

ನಾವು ನಿಮಗೆ ತಿಳಿಸುತ್ತಿರುವ ಎರಡನೇ ನೇಮಕಾತಿ, ದ ಯರಗಟ್ಟಿ ಅರ್ಬನ್ ಕೋ-ಆಪ್ ಕ್ರೆಡಿಟ್ ಬ್ಯಾಂಕ್ ಲಿ. ಇಲ್ಲಿ ನೇಮಕಾತಿ ನಡೆಯುತ್ತಿದ್ದು ಅಭ್ಯರ್ಥಿಗಳು ಮ್ಯಾನೇಜರ್ ಮತ್ತು ಕಿರಿಯ ಸಹಾಯಕ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಒಟ್ಟು ಆರು ಹುದ್ದೆಗಳಿದ್ದು ಯರಗಟ್ಟಿ ಬೆಳಗಾವಿ ಜಿಲ್ಲೆ ಉದ್ಯೋಗ ಸ್ಥಳವಾಗಿದೆ. ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸುವವರು ಪದವಿಯನ್ನು ಹಾಗೂ ಕಿರಿಯ ಸಹಾಯಕ ಹುದ್ದೆಗೆ ಅರ್ಜಿ ಸಲ್ಲಿಸುವವರು ದ್ವಿತೀಯ ಪಿಯುಸಿಯನ್ನು ಮುಗಿಸಿರಬೇಕು.

ಹದಿನೆಂಟರಿಂದ ಮೂವತ್ತೈದು ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಹನ್ನೆರಡು ಸಾವಿರದ ಐನೂರರಿಂದ ನಲವತ್ಮೂರು ಸಾವಿರದ ಎರಡು ನೂರು ರೂಪಾಯಿಗಳವರೆಗೆ ಮಾಸಿಕ ವೇತನ ನೀಡಲಾಗುವುದು. ಕರ್ನಾಟಕ ಸಹಾಯಕ ಸಂಘಗಳ ಕಾಯ್ದೆಗಳ ನಿಯಮಾನುಸಾರ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಅಭ್ಯರ್ಥಿಗಳು ಈ ಒಂದು ಹುದ್ದೆಗೆ ನವೆಂಬರ್ ಎರಡು ಎರಡು ಸಾವಿರದ ಇಪ್ಪತ್ತೊಂದರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಚೇರಿಗೆ ಖುದ್ದು ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬೇಕು. ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸುವವರು ಒಂದು ಸಾವಿರದ ಎರಡು ನೂರು ರೂಪಾಯಿ ಮತ್ತು ಕಿರಿಯ ಸಹಾಯಕ ಹುದ್ದೆಗೆ ಅರ್ಜಿ ಸಲ್ಲಿಸುವವರು ಒಂದು ಸಾವಿರ ರೂಪಾಯಿ ಅರ್ಜಿ ಶುಲ್ಕವನ್ನು ಪಾವತಿಸಬೇಕು.

ಮೂರನೆಯದಾಗಿ ನಾವು ನಿಮಗೆ ತಿಳಿಸುತ್ತಿರುವ ನೇಮಕಾತಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ. ಹುದ್ದೆಯ ಹೆಸರು ಶುಶ್ರೂಷಕರ ಹುದ್ದೆ. ಒಟ್ಟು ಹುದ್ದೆಗಳ ಸಂಖ್ಯೆ ಮೂವತ್ತಾರು. ಮಂಡ್ಯ ಜಿಲ್ಲೆಯಲ್ಲಿ ಹುದ್ದೆಗಳ ಭರ್ತಿಗೆ ಅಭ್ಯರ್ಥಿಗಳನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಎಂಎಸ್ಸಿ ಅಥವಾ ಬಿಎಸ್ಸಿ ಅಥವಾ ಡಿಪ್ಲೋಮಾ ಇನ್ ನರ್ಸಿಂಗ್ ವಿದ್ಯಾರ್ಹತೆಯನ್ನು ಹೊಂದಿರಬೇಕು. ಈ ಹುದ್ದೆಗೆ ಹದಿನೆಂಟು ವರ್ಷದಿಂದ ನಲವತ್ತೈದು ವರ್ಷದ ಒಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ ಹದಿಮೂರು ಸಾವಿರ ರೂಪಾಯಿಗಳನ್ನು ನೀಡಲಾಗುತ್ತದೆ. ಅಭ್ಯರ್ಥಿಗಳನ್ನು ಮೆರಿಟ್ ಕಮ್ ರೋಸ್ಟರ್ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಈ ಒಂದು ಹುದ್ದೆಗೆ ಅಭ್ಯರ್ಥಿಗಳು ಅಕ್ಟೋಬರ್ ಇಪ್ಪತ್ತೆಂಟು ಎರಡು ಸಾವಿರದ ಇಪ್ಪತ್ತೊಂದರೊಳಗಾಗಿ ಕುದ್ದಾಗಿ ಕಚೇರಿಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವಿಳಾಸ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಂಡ್ಯ.

ನಾವು ನಿಮಗೆ ತಿಳಿಸುತ್ತಿರುವ ಮುಂದಿನ ನೇಮಕಾತಿ ಸೌತ್ ವೆಸ್ಟರ್ನ್ ರೈಲ್ವೆ ನೇಮಕಾತಿ. ಇಲ್ಲಿ ಖಾಲಿ ಇರುವ ಹುದ್ದೆಗಳು ಫಿಟ್ಟರ್ ವೆಲ್ಡರ್ ಎಲೆಕ್ಟ್ರಿಷಿಯನ್ ಟರ್ನರ್ ಕಾರ್ಪೆಂಟರ್ ಮೆಕ್ಯಾನಿಕ್ ಪೇಂಟರ್ ಸ್ಟೆನೋಗ್ರಾಫರ್ ಇನ್ನುಳಿದ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಹುಬ್ಬಳ್ಳಿ ಬೆಂಗಳೂರು ಮೈಸೂರು ಸೇರಿದಂತೆ ಒಟ್ಟು ಒಂಬೈನೂರಾ ನಾಲ್ಕು ಹುದ್ದೆಗಳು ಖಾಲಿಯಿವೆ. ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹತ್ತನೇ ತರಗತಿಯ ಜೊತೆಗೆ ಐಟಿಐ ವಿದ್ಯಾರ್ಹತೆಯನ್ನು ಪಡೆದಿರಬೇಕು.

ಹದಿನೈದು ವರ್ಷದಿಂದ ಇಪ್ಪತ್ನಾಲ್ಕು ವರ್ಷದ ವರೆಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಅಭ್ಯರ್ಥಿಗಳು ನವೆಂಬರ್ ಮೂರು ಎರಡು ಸಾವಿರದ ಇಪ್ಪತ್ತೊಂದರೊಳಗಾಗಿ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು. ಎಸ್ಸಿಎಸ್ಟಿ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ ಉಳಿದ ಅಭ್ಯರ್ಥಿಗಳು ನೂರು ರೂಪಾಯಿ ಅರ್ಜಿ ಶುಲ್ಕವನ್ನು ಪಾವತಿಸಬೇಕು.

ಮುಂದಿನ ನೇಮಕಾತಿ ಮಂಗಳೂರು ಮಹಾನಗರಪಾಲಿಕೆಯ ನೇಮಕಾತಿ. ಒಟ್ಟು ಹುದ್ದೆಗಳ ಸಂಖ್ಯೆ ನೂರಾ ತೊಂಬತ್ತು. ಪೌರಕಾರ್ಮಿಕ ಹುದ್ದೆಯಲ್ಲಿ ಕೆಲಸ ಮಾಡುತ್ತಿರುವ ದಿನಗೂಲಿ, ಹೊರಗುತ್ತಿಗೆ ನೌಕರರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಹದಿನೆಂಟು ವರ್ಷದಿಂದ ನಲವತ್ತೈದು ವರ್ಷದ ವರೆಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಹದಿನೇಳು ಸಾವಿರದಿಂದ ಇಪ್ಪತ್ತೆಂಟು ಸಾವಿರದ ಒಂಬೈನೂರಾ ಐವತ್ತು ರೂಪಾಯಿವರೆಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ. ಅಭ್ಯರ್ಥಿಗಳನ್ನು ನೇರ ನೇಮಕಾತಿ ಮೂಲಕ ಆಯ್ಕೆಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನವೆಂಬರ್ ಇಪ್ಪತ್ಮೂರು ಎರಡು ಸಾವಿರದ ಇಪ್ಪತ್ತೊಂದರೊಳಗಾಗಿ ತಮ್ಮ ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬೇಕು. ಎಸ್ಸಿಎಸ್ಟಿ ಅಭ್ಯರ್ಥಿಗಳಿಗೆ ನೂರು ರೂಪಾಯಿ ಹಾಗೂ ಇನ್ನುಳಿದ ಅಭ್ಯರ್ಥಿಗಳಿಗೆ ಎರಡು ನೂರು ರೂಪಾಯಿ ಅರ್ಜಿ ಶುಲ್ಕವಿರುತ್ತದೆ.

ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದಿಂದ ನೇಮಕಾತಿ ನಡೆಯುತ್ತಿದೆ. ಇಲ್ಲಿ ಖಾಲಿ ಇರುವ ಹುದ್ದೆಗಳು ಪ್ರಿನ್ಸಿಪಲ್ ಮ್ಯಾನೇಜರ್ ಸಹಾಯಕ ನಿರ್ದೇಶಕರು ಉಪ ವ್ಯವಸ್ಥಾಪಕರು ತಾಂತ್ರಿಕ ಅಧಿಕಾರಿ ಕೇಂದ್ರ ಆಹಾರ ಸುರಕ್ಷತಾ ಅಧಿಕಾರಿ ಸಹಾಯಕ ವ್ಯವಸ್ಥಾಪಕರು ಸಹಾಯಕರು ಹಾಗೂ ಕಿರಿಯ ಸಹಾಯಕರ ಹುದ್ದೆಗಳು. ಇಲ್ಲಿ ಒಟ್ಟು ಎರಡು ನೂರಾ ಇಪ್ಪತ್ತೈದು ಹುದ್ದೆಗಳು ಖಾಲಿ ಇವೆ. ಪಿಯುಸಿ ಅಥವಾ ಪದವಿ ಅಥವಾ ಸ್ನಾತಕೋತ್ತರ ಪದವಿಯನ್ನು ಪಡೆದಂತಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ ಹಾಗೂ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅಭ್ಯರ್ಥಿಗಳು ನವೆಂಬರ್ ಹನ್ನೆರಡು ಎರಡು ಸಾವಿರದ ಇಪ್ಪತ್ತೊಂದರೊಳಗಾಗಿ ಆನ್ಲೈನ್ ಮೂಲಕ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಸಾಮಾನ್ಯ ಹಾಗೂ ಒಬಿಸಿ ಅಭ್ಯರ್ಥಿಗಳು ಸಾವಿರದ ಐದು ನೂರು ರೂಪಾಯಿ ಉಳಿದ ಅಭ್ಯರ್ಥಿಗಳು ಐದು ನೂರು ರೂಪಾಯಿ ಶುಲ್ಕವನ್ನು ಪಾವತಿಸಬೇಕು. ಈ ರೀತಿಯಾಗಿ ಅಕ್ಟೋಬರ್ ತಿಂಗಳಿನಲ್ಲಿ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ನೀವು ಕೂಡ ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮೂಲಕ ಉದ್ಯೋಗವನ್ನು ಪಡೆದುಕೊಳ್ಳಬಹುದಾಗಿದೆ ಈ ಮಾಹಿತಿಯನ್ನು ತಪ್ಪದೆ ನಿಮ್ಮ ಪರಿಚಿತರಿಗೂ ಹಾಗೂ ಸ್ನೇಹಿತರಿಗೂ ತಿಳಿಸಿರಿ.

ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430

Leave A Reply

Your email address will not be published.