ಕನ್ನಡದ ಖ್ಯಾತ ಪ್ರತಿಭಾವಂತ ನಟ ಡಾ. ರಾಜ್ ಕುಮಾರ್ ಹಾಗೂ ಪಾರ್ವತಮ್ಮ ರಾಜಕುಮಾರ್ ಅವರ ಕಿರಿಯ ಪುತ್ರ, ದೊಡ್ಮನೆ ಹುಡುಗ ಪುನೀತ್ ರಾಜ್ ಕುಮಾರ್ ಅವರು ಇಂದು ಅಂದರೆ ಶುಕ್ರವಾರ ಬೆಳಗ್ಗೆ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 46 ವರ್ಷ ವಯಸ್ಸಾಗಿತ್ತು. ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪುನೀತ್ ರಾಜ್ ಕುಮಾರ್ ಚಿಕಿತ್ಸೆ ಫಲಕಾರಿಯಾಗದೆ ಮರಣ ಹೊಂದಿದ್ದು ಕುಟುಂಬಸ್ಥರು, ಅಸಂಖ್ಯಾತ ಅಭಿಮಾನಿಗಳು ಶೋಕಸಾಗರದಲ್ಲಿ ಮುಳುಗಿದ್ದಾರೆ. ಇದರ ಕುರಿತಾಗಿ ಇನ್ನೂ ಹೆಚ್ಚಿನ ಮಾಹಿತಿ

ಚಂದನವನದ ಪಾಲಿಗೆ ಇಂದು ಕರಾಳ ಶುಕ್ರವಾರ ಎಂದೇ ಹೇಳಬಹುದು. ಇಂದು ನಸುಕಿನ ಜಾವ ಎಂದಿನಂತೆ ಜಿಮ್ ನಲ್ಲಿ ದೇಹ ಕಸರತ್ತು ನಡೆಸುತ್ತಿದ್ದ ಪುನೀತ್ ರಾಜ್ ಕುಮಾರ್ ಅವರಿಗೆ ಹೃದಯಾಘಾತವಾಗಿತ್ತು. ತಕ್ಷಣ ಅವರನ್ನು ರಮಣಶ್ರೀ ಆಸ್ಪತ್ರೆಗೆ ಚಿಕಿತ್ಸೆಗೆ ಕರೆತರಲಾಯಿತು. ಆಗ ಆಸ್ಪತ್ರೆಯಲ್ಲಿ ತೀವ್ರ ಅಸ್ವಸ್ಥಗೊಂಡು ಕುಸಿದುಬಿದ್ದಿದ್ದ ಅವರನ್ನು ವಿಕ್ರಂ ಆಸ್ಪತ್ರೆಗೆ ವರ್ಗಾಯಿಸಲಾಯಿತು.

ಪುನೀತ್ ಅವರನ್ನು ಐಸಿಯುನಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಯಿತಾದರೂ ಫಲಕಾರಿಯಾಗದೆ ಅಸುನೀಗಿದ್ದು ಅವರ ಕುಟುಂಬದವರಿಗೆ, ಅಭಿಮಾನಿಗಳಿಗೆ ಆಘಾತವಾಗಿದೆ. ಪುನೀತ್ ಅವರ ನಿಧನ ಸುದ್ದಿ ಕೇಳುತ್ತಿದ್ದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ, ನಗರ ಪೊಲೀಸ್ ಆಯುಕ್ತ ಕಮಲ್ ಪಂತ್, ಚಿತ್ರರಂಗದ ಗಣ್ಯರು, ಅಸಂಖ್ಯಾತ ಅಭಿಮಾನಿಗಳು ಆಸ್ಪತ್ರೆಯತ್ತ ದೌಡಾಯಿಸಿದರು.

ಅಷ್ಟಕ್ಕೂ ಪುನೀತ್ ರಾಜ್ ಕುಮಾರ್ ಅವರಿಗೆ ಆಗಿದ್ದೇನು? ಇಂದು ನಸುಕಿನ ಜಾವ ಜಿಮ್ ಗೆ ವರ್ಕೌಟ್ ಗೆ ಹೋಗಿದ್ದಾಗಲೇ ಪುನೀತ್ ಅವರಿಗೆ ತೀವ್ರ ಹೃದಯಾಘಾತವಾಗಿದೆ. ನಟ ಪುನೀತ್ ರಾಜ್ ಕುಮಾರ್ ಅವರು ತೀವ್ರ ಹೃದಯಾಘಾತವಾಗಿ ಆಸ್ಪತ್ರೆಗೆ ಬಂದಿದ್ದಾರೆ, ಇಂದು ಬೆಳಗ್ಗೆ 11.30ರ ಹೊತ್ತಿಗೆ ಅವರು ಆಸ್ಪತ್ರೆಗೆ ಬರುವಾಗಲೇ ಗಂಭೀರವಾಗಿದ್ದರು. ಅದಕ್ಕೆ ಮೊದಲು ಎದೆನೋವು ಕಾಣಿಸಿಕೊಂಡು ಬೇರೆ ಆಸ್ಪತ್ರೆಯಲ್ಲಿ ಇಸಿಜಿ ಮಾಡಿಸಿಕೊಂಡು ಇಲ್ಲಿಗೆ ಬಂದರು. ಐಸಿಯುನಲ್ಲಿ ಕೂಡಲೇ ಅವರಿಗೆ ತುರ್ತು ಚಿಕಿತ್ಸೆ ನೀಡಲು ವ್ಯವಸ್ಥೆ ಮಾಡಲಾಗಿತ್ತು. ಆದರೆ ನಮ್ಮಿಂದ ಬದುಕಿಸಲು ಸಾಧ್ಯವಾಗಿಲ್ಲ ಎಂದು ಆಸ್ಪತ್ರೆಯ ತಜ್ಞ ಡಾ ರಂಗನಾಥ್ ನಾಯಕ್ ತಿಳಿಸಿದ್ದಾರೆ.

ಪುನೀತ್ ಅವರು ಬಾಲನಟನಾಗಿ ಕನ್ನಡ ಚಿತ್ರರಂಗ ಪ್ರವೇಶಿಸಿದ್ದರು. ‘ಅಪ್ಪು’ ಸಿನಿಮಾದ ಮೂಲಕ ನಾಯಕ ನಟನಾಗಿ ಯಶಸ್ಸು ಪಡೆದಿದ್ದ ಅವರು ಅಭಿಮಾನಿ ಬಳಗದಲ್ಲಿ ‘ಅಪ್ಪು’ ಆಗಿಯೇ ಉಳಿದಿದ್ದರು. ಅಲ್ಲದೆ, ರಾಜ್‌ಕುಮಾರ್ ಕುಟುಂಬದಿಂದ ಬಂದಿರುವ ಪ್ರತಿಭಾವಂತ ನಟನಾಗಿದ್ದ ಪುನೀತ್ ಅವರು ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದರು. ಪುನೀತ್ ಅವರು ಚಿಕ್ಕ ವಯಸ್ಸಿನಲ್ಲೇ ಅಪಾರ ಸಾಧನೆ ಮಾಡಿದ್ದರು. ನಾಡು-ನುಡಿ ಮತ್ತು ಸಮಾಜದ ಬಗ್ಗೆ ಅಪಾರ ಕಳಕಳಿ ಹೊಂದಿದ್ದ ಅವರನ್ನು ಕಳೆದುಕೊಂಡಿರುವುದರಿಂದ ಕನ್ನಡ ನಾಡು ಅಕ್ಷರಶಃ ಬಡವಾಗಿದೆ’ ಎಂದು ಅವರು ತಮ್ಮ ಶೋಕಸಂದೇಶದಲ್ಲಿ ದುಃಖಿಸಿದ್ದಾರೆ. ರಚನಾತ್ಮಕ ಕಾರ್ಯಕ್ರಮಗಳಿಗೆ ಸದಾ ಬೆನ್ನೆಲುಬಾಗಿ ನಿಂತುಕೊಳ್ಳುತ್ತಿದ್ದ ಪುನೀತ್ ಅವರು ಇನ್ನಿಲ್ಲವೆಂದರೆ ನಂಬುವುದು ಕಷ್ಟವಾಗುತ್ತದೆ. ಅವರ ಸ್ಥಾನವನ್ನು ಬೇರೆ ಯಾರಿಂದಲೂ ತುಂಬುವುದು ಸಾಧ್ಯವಿಲ್ಲ ಎಂದು ಸಚಿವರು ಕಂಬನಿ ಮಿಡಿದಿದ್ದಾರೆ.

ಸಾವಿನಲ್ಲೂ ಸಾರ್ಥಕತೆ ಮೆರೆದ ಅಪ್ಪು: ಹೌದು ತಮ್ಮ ತಂದೆಯಂತೆ ಇವರು ಕೂಡ ನೇತ್ರದಾನ ಮಾಡಿದ್ದಾರೆ ಇವರ ಅಮೂಲ್ಯವಾದ ಕಣ್ಣುಗಳನ್ನು ಬೇರೆಯವರ ಬಳಿಗೆ ಬೆಳಕಾಗಿಸಿದ್ದಾರೆ. ಪುನೀತ್ ರಾಜ್ ಕುಮಾರ್ ಅವರ ನಿಧನದ ಸುದ್ದಿಯನ್ನು ತಿಳಿಯುತ್ತಿದ್ದಂತೆ ಅವರ ಅಭಿಮಾನಿಗಳು ತಂಡೋಪತಂಡವಾಗಿ ಮನೆಯತ್ತ ಲಗ್ಗೆಯಿಡುತ್ತಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪುನೀತ್ ಮನೆಗೆ ತೆರಳುವ ರಸ್ತೆಗಳನ್ನು ಬಂದ್ ಮಾಡಲಾಗಿದೆ. ಅವರ ನಿವಾಸಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ಕೂಡ ಏರ್ಪಡಿಸಲಾಗಿದೆ. ಪುನೀತ್ ಅವರ ನಿಧನದ ನೋವನ್ನು ತಡೆದುಕೊಳ್ಳುವಂತಹ ಶಕ್ತಿಯನ್ನು ಭಗವಂತನು ಅವರ ಕುಟುಂಬದ ಸದಸ್ಯರಿಗೆ, ಬಂಧುಬಾಂಧವರಿಗೆ ಮತ್ತು ಅಭಿಮಾನಿ ಬಳಗಕ್ಕೆ ನೀಡಲಿ ಪರಮಾತ್ಮನು ಅವರ ಆತ್ಮಕ್ಕೆ ಶಾಂತಿಯನ್ನು ಕೊಡಲಿ ಎಂದು ನಾವೆಲ್ಲ ಪ್ರಾರ್ಥಿಸೋಣ.

ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430

WhatsApp Group Join Now
Telegram Group Join Now

Leave a Reply

Your email address will not be published. Required fields are marked *

error: Content is protected !!