ಅರಣ್ಯ ಇಲಾಖೆಯ ನೇಮಕಾತಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಸಿಹಿಸುದ್ದಿಯನ್ನು ನಾವಿಂದು ತಿಳಿಸುತ್ತೇವೆ. ಕರ್ನಾಟಕ ರಾಜ್ಯ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಈಗಾಗಲೇ ಅರ್ಜಿಯನ್ನು ಕರೆಯಲಾಗಿತ್ತು ಜೊತೆಗೆ ದೈಹಿಕ ಪರೀಕ್ಷೆಯನ್ನು ಕೂಡ ನಡೆಸಲಾಗಿತ್ತು ಇದೀಗ ಅಭ್ಯರ್ಥಿಗಳ ಆಯ್ಕೆಗಾಗಿ ಪರೀಕ್ಷೆ ದಿನಾಂಕವನ್ನು ಇಲಾಖಾ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ ಹಾಗಾದರೆ ಯಾವ ದಿನಾಂಕದಂದು ಅರಣ್ಯ ಇಲಾಖೆಯ ನೇಮಕಾತಿ ಪರೀಕ್ಷೆ ನಡೆಯುತ್ತದೆ ಈ ಪರೀಕ್ಷೆಯಲ್ಲಿ ಯಾವ ವಿಷಯಗಳ ಮೇಲೆ ಎಷ್ಟು ಅಂಕಗಳಿಗೆ ಪರೀಕ್ಷೆ ನಡೆಯುತ್ತದೆ ಎಂಬ ಕುರಿತಾದ ಮಾಹಿತಿಯನ್ನು ನಿಮಗೆ ತಿಳಿಸಿಕೊಡುತ್ತೇವೆ.

ಕರ್ನಾಟಕ ರಾಜ್ಯ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವಂತಹ ಮುನ್ನೂರಾ ಮೂವತ್ತೊಂಬತ್ತು ಅರಣ್ಯ ರಕ್ಷಕ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಲಾಗಿತ್ತು ಆ ವಿಷಯಕ್ಕೆ ಸಂಬಂಧಿಸಿದಂತೆ ಅಂತಿಮವಾಗಿ ಪರೀಕ್ಷಾ ದಿನಾಂಕವನ್ನು ಪ್ರಕಟಣೆ ಮಾಡಿದ್ದಾರೆ.

ಈ ವಿಷಯದ ಕುರಿತಂತೆ ಕರ್ನಾಟಕ ಸರ್ಕಾರ ಅರಣ್ಯ ಇಲಾಖೆಯ ಪ್ರಕಟಣೆಯನ್ನು ನೋಡುವುದಾದರೆ, ಮುನ್ನೂರಾ ಮೂವತ್ತೊಂಬತ್ತು ಅರಣ್ಯ ರಕ್ಷಕ ಹುದ್ದೆಗಳ ನೇರ ನೇಮಕಾತಿ ಕುರಿತಂತೆ ಅಧಿಸೂಚನೆಯಲ್ಲಿ ಅಧಿಸೂಚಿಸಿರುವ ವೃತ್ತಗಳ ವ್ಯಾಪ್ತಿಯ ಪರೀಕ್ಷಾ ಕೇಂದ್ರದಲ್ಲಿ ದಿನಾಂಕ ಡಿಸೆಂಬರ್ ಐದು ಎರಡು ಸಾವಿರದ ಇಪ್ಪತ್ತೊಂದರಂದು ಲಿಖಿತ ಪರೀಕ್ಷೆಯನ್ನು ನಡೆಸಲಾಗುವುದು.

ಅರಣ್ಯ ರಕ್ಷಕ ಹುದ್ದೆಯ ಲಿಖಿತ ಪರೀಕ್ಷೆಯ ಕುರಿತಂತೆ ಪರೀಕ್ಷಾ ಪಠ್ಯಕ್ರಮವನ್ನು ಈ ಪ್ರಕಟಣೆಯೊಂದಿಗೆ ಇಲಾಖಾ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಲಿಖಿತ ಪರೀಕ್ಷೆಯಲ್ಲಿ ಹಾಜರಾಗಲು ಪ್ರವೇಶ ಪತ್ರವನ್ನು ಇಲಾಖಾ ವೆಬ್ಸೈಟ್ನಲ್ಲಿ ಡೌನ್ಲೋಡ್ ಮಾಡಿಕೊಳ್ಳುವುದಕ್ಕೆ ಅವಕಾಶ ಕಲ್ಪಿಸಲಾಗುವುದು ಹಾಗೂ ಈ ಕುರಿತು ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ನಮೂದಿಸಿರುವ ಮೊಬೈಲ್ ಸಂಖ್ಯೆಗೆ ಸಂದೇಶವನ್ನು ಕಳುಹಿಸಲಾಗುವುದು. ಪ್ರವೇಶಪತ್ರ ಬಂದಂತಹ ಸಂದರ್ಭದಲ್ಲಿ ನಿಮ್ಮ ಮೊಬೈಲ್ ನಂಬರ್ ಗೆ ಸಂದೇಶ ಬರುತ್ತದೆ. ಈ ರೀತಿಯಾಗಿ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ ಡಿಸೆಂಬರ್ ಐದರಂದು ಪರೀಕ್ಷೆ ಇರುವುದರಿಂದಾಗಿ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಇದರ ಕಡೆ ಗಮನ ಹರಿಸಬೇಕು.

ಇನ್ನು ಈ ಪರೀಕ್ಷೆಯ ಕುರಿತಂತೆ ಪಠ್ಯಕ್ರಮಗಳು ಯಾವ ರೀತಿ ಆಗಿದೆ ಎನ್ನುವುದನ್ನು ತಿಳಿಯುವುದಾದರೆ ನಲವತ್ತು ಅಂಕಗಳಿಗೆ ಗಣಿತದಲ್ಲಿ ದ್ವಿತೀಯ ಪಿಯುಸಿ ಮಟ್ಟದವರೆಗಿನ ಪ್ರಶ್ನೆಯನ್ನು ಕೇಳಲಾಗುತ್ತದೆ. ಸಾಮಾನ್ಯ ಜ್ಞಾನ ಅರವತ್ತು ಅಂಕಗಳಿಗೆ ಇರುತ್ತದೆ ಇದರಲ್ಲಿ ಪಠ್ಯಕ್ರಮ ಭಾರತದ ಪ್ರಾಚೀನ ನಾಗರೀಕತೆ ಇತಿಹಾಸ ಭಾರತದ ಸ್ವಾತಂತ್ರ್ಯ ಹೋರಾಟ ಭಾರತದ ಸಂವಿಧಾನ ಭಾರತದ ರಾಜನೀತಿ ಭಾರತದ ಅರ್ಥನೀತಿ ಭೂಗೋಳ ಮತ್ತು ನೈಸರ್ಗಿಕ ಸಂಪನ್ಮೂಲಗಳು ವಿಜ್ಞಾನ ಮತ್ತು ತಂತ್ರಜ್ಞಾನ ಕಲೆ ಮತ್ತು ಸಂಸ್ಕೃತಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಪ್ರಚಲಿತ ವಿದ್ಯಮಾನಗಳು ಹಾಗೂ ಕ್ರೀಡೆ. ಇವುಗಳ ಮೇಲೆ ಪ್ರಶ್ನೆಯನ್ನು ಕೇಳಲಾಗುತ್ತದೆ.

ಈ ರೀತಿಯಾಗಿ ನಲವತ್ತು ಅಂಕಗಳಿಗೆ ಗಣಿತ ವಿಷಯಕ್ಕೆ ಸಂಬಂಧಿಸಿದ ಹಾಗೂ ಅರವತ್ತು ಅಂಕಗಳಿಗೆ ಸಾಮಾನ್ಯಜ್ಞಾನ ವಿಷಯಕ್ಕೆ ಸಂಬಂಧಿಸಿದ ಒಟ್ಟು ನೂರು ಅಂಕಗಳಿಗೆ ಪರೀಕ್ಷೆಯನ್ನು ನಡೆಸಲಾಗುತ್ತದೆ. ನೀವು ಕೂಡ ಅರಣ್ಯ ಇಲಾಖೆಯ ನೇಮಕಾತಿಗೆ ಅರ್ಜಿಯನ್ನು ಸಲ್ಲಿಸಿದ್ದರೆ ಈ ಮೇಲಿನ ವಿಷಯಗಳ ಓದಿಕೊಂಡು ಪರೀಕ್ಷೆಗೆ ಬೇಕಾದ ತಯಾರಿಯನ್ನು ನಡೆಸಿಕೊಂಡು ಚೆನ್ನಾಗಿ ಪರೀಕ್ಷೆಯನ್ನು ಬರೆಯಿರಿ. ಡಿಸೆಂಬರ್ ಐದರಂದು ರಂದು ನಡೆಯುವ ಪರೀಕ್ಷೆಯಲ್ಲಿ ಯಶಸ್ಸು ನಿಮ್ಮದಾಗಲಿ ಎಂದು ನಾವು ಹಾರೈಸುತ್ತೇವೆ ಈ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೂ ತಿಳಿಸಿರಿ.

ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430

WhatsApp Group Join Now
Telegram Group Join Now

Leave a Reply

Your email address will not be published. Required fields are marked *

error: Content is protected !!