ಸ್ಯಾಂಡಲ್ ವುಡ್ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಒಂದಲ್ಲ ಒಂದು ಸಮಾಜಮುಖಿ ಕಾರ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದವರು. ಪುನೀತ್ ಅವರು ನಡೆಸುತ್ತಿದ್ದ ಹಲವಾರು ಸಮಾಜಮುಖಿ ಕಾರ್ಯಗಳಲ್ಲಿ 1,800 ಮಕ್ಕಳಿಗೆ ವಿದ್ಯಾಭ್ಯಾಸ ಕೊಡಿಸುವ ಜವಾಬ್ದಾರಿಯನ್ನೂ ಸಹ ಹೊತ್ತುಕೊಂಡಿದ್ದರು. ಇದೀಗ ಪುನೀತ್ ನಿರ್ವಹಿಸುತ್ತಿದ್ದ ಈ ಜವಾಬ್ದಾರಿಯನ್ನು ತಾವು ಹೊರುವುದಾಗಿ ತಮಿಳು ನಟ ವಿಶಾಲ್ ಹೇಳಿಕೆ ನೀಡಿದ್ದಾರೆ. ಇನ್ಮುಂದೆ ಮಕ್ಕಳ ಶಿಕ್ಷಣದ ಜವಾಬ್ದಾರಿ ನನ್ನದು ಎಂದು ಅವರು ಘೋಷಣೆ ಮಾಡಿದ್ದಾರೆ. ಇದರ ಕುರಿತಾಗಿ ಹೆಚ್ಚಿನ ಮಾಹಿತಿಯನ್ನು ನಾವು ಈ ಲೇಖನದ ಮೂಲಕ ತಿಳಿದುಕೊಳ್ಳೋಣ.
ನಟ ವಿಶಾಲ್ ತಮಿಳು ಸಿನಿಮಾ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದರು. ಈ ವೇಳೆ ಪುನೀತ್ ರಾಜ್ ಕುಮಾರ್ ಗೆ ಶ್ರದ್ದಾಂಜಲಿ ಸಲ್ಲಿಸಲಾಯಿತು. ಬಳಿಕ ಮಾತನಾಡಿದ ವಿಶಾಲ್ ಅಗಲಿದ ಗೆಳೆಯ ಪುನೀತ್ ರಾಜ್ ಕುಮಾರ್ ರನ್ನು ನೆನೆದು ಭಾವುಕರಾದರು. ನನ್ನ ಸ್ನೇಹಿತ ಪುನೀತ್ ಒಳ್ಳೆಯ ನಟ ಮಾತ್ರ ಅಲ್ಲ. ಉತ್ತಮ ಸ್ನೇಹಿತ, ಉತ್ತಮ ವ್ಯಕ್ತಿ. ಇಂದು ಪುನೀತ್ ನಮ್ಮೊಂದಿಗೆ ಇಲ್ಲ ಎನ್ನುವುದನ್ನು ಊಹಿಸಲು ಸಾಧ್ಯವಾಗುತ್ತಿಲ್ಲ. ಅವರ ಅಗಲಿಕೆ ಜೀರ್ಣಿಸಿಕೊಳ್ಳಲು ಆಗುತ್ತಿಲ್ಲ. ಭಾರತ ಸಿನಿಮಾ ರಂಗಕ್ಕೆ ದೊಡ್ಡ ನಷ್ಟ. ಪುನೀತ್ ರಾಜ್‍ಕುಮಾರ್ ಅವರಿಗೆ ಅವರೇ ಸಾಟಿ.
ಅವರಂತಹ ಮತ್ತೊಬ್ಬ ವ್ಯಕ್ತಿ ಬರಲು ಸಾಧ್ಯವಿಲ್ಲ. ಐ ಮಿಸ್ ಯೂ ಅಪ್ಪು ಎಂದು ಭಾವುಕರಾದರು. ಪುನೀತ್ 1,800 ಮಕ್ಕಳಿಗೆ ಉಚಿತ ಶಿಕ್ಷಣ ನೀಡುತ್ತಿರುವ ಬಗ್ಗೆ ನನಗೆ ಗೊತ್ತಿದೆ. ಅದರ ಜೊತೆಗೆ ಅನಾಥಶ್ರಮ, ವೃದ್ದಾಶ್ರಮ, ಗೋಶಾಲೆ ಸೇರಿ ಇನ್ನೂ ಅನೇಕ ಸಮಾಜಮುಖಿ ಕೆಲಸಗಳನ್ನು ಮಾಡುತ್ತಿದ್ದರು. ಅವರು ಸಾವಿನ ಬಳಿಕವೂ ನೇತ್ರ ದಾನ ಮಾಡಿದ್ದಾರೆ. ಗೆಳೆಯನಾಗಿ ಅವರಿಗೆ ಮಾತು ಕೊಡುತ್ತಿದ್ದೇನೆ. 1,800ಮಕ್ಕಳಿಗೆ ನಾನು ವಿದ್ಯಾಭ‍್ಯಾಸ ಕೊಡಿಸುತ್ತೇನೆ ಎಂದು ಭರವಸೆ ನೀಡಿದ್ದಾರೆ.
ಪುನೀತ್ ರಾಜ್‍ಕುಮಾರ್ ಓದಿಸುತ್ತಿದ್ದ ಮಕ್ಕಳ ವಿದ್ಯಾಭ್ಯಾಸದ ಹೊಣೆ ಹೊರುವೆ ಎಂದು ತಮಿಳು ನಟ ವಿಶಾಲ್ ಅವರು ಅಕ್ಟೋಬರ್ 31 ರಂದು ಘೋಷಣೆ ಮಾಡಿದ್ದಾರೆ. ಮುಂದಿನ ವರ್ಷದಿಂದ 1800 ಮಕ್ಕಳ ಜವಾಬ್ದಾರಿ ನನ್ನದು ಎಂದು ಅವರು ತಿಳಿಸಿದ್ದಾರೆ. ಹೃದಯಾಘಾತದಿಂದ ಪುನೀತ್ ರಾಜ್‍ಕುಮಾರ್ ಅಕ್ಟೋಬರ್ 29 ರಂದು ನಿಧನರಾಗಿದ್ದರು.
ಈ ಹಿನ್ನೆಲೆಯಲ್ಲಿ ಪುನೀತ್ ಓದಿಸುತ್ತಿದ್ದ ಮಕ್ಕಳ ವಿದ್ಯಾಭ್ಯಾಸದ ಹೊಣೆ ತಾನು ಹೊರುವುದಾಗಿ ತಮಿಳು ನಟ ಹೇಳಿದ್ದಾರೆ. ಪುನೀತ್ ರಾಜ್‍ಕುಮಾರ್ 1800 ಮಕ್ಕಳನ್ನು ಓದಿಸುತ್ತಿದ್ದರು. ಇದೀಗ ಪುನೀತ್ ನಿರ್ವಹಿಸುತ್ತಿದ್ದ ಜವಾಬ್ದಾರಿ ಹೊರುವುದಾಗಿ ವಿಶಾಲ್ ಹೇಳಿಕೆ ನೀಡಿದ್ದಾರೆ. ಇನ್ಮುಂದೆ ಮಕ್ಕಳ ಶಿಕ್ಷಣದ ಜವಾಬ್ದಾರಿ ನನ್ನದು ಎಂದು ಅವರು ಘೋಷಣೆ ಮಾಡಿದ್ದಾರೆ. ಪುನೀತ್ ರಾಜ್‍ಕುಮಾರ್ ಸದ್ದಿಲ್ಲದೆ ಸಾಕಷ್ಟು ಸಮಾಜಮುಖಿ ಕಾರ್ಯಗಳಲ್ಲಿ ಕೂಡ ತೊಡಗಿಕೊಂಡಿದ್ದರು ಎಂಬ ವಿಚಾರ ಅವರ ನಿಧನಾನಂತರ ಹೆಚ್ಚು ಹೆಚ್ಚು ಬಯಲಾಗುತ್ತಿದೆ. ಈ ಬಗ್ಗೆ ಪುನೀತ್ ಬಗ್ಗೆ ಅಭಿಮಾನದ ಮಾತುಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.
ಈ ಮಧ್ಯೆ, ಭಾನುವಾರ ರಾತ್ರಿ ನಡೆದ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡುತ್ತಾ ಮೂಲತಃ ಬೆಂಗಳೂರಿನವರಾದ, ತಮಿಳು ನಟ ವಿಶಾಲ್ ಅವರು ಅಪ್ಪು ಮೇಲಿನ ಅಭಿಮಾನದೊಂದಿಗೆ ತಾವು ತೆಗೆದುಕೊಂಡಿರುವ ನಿರ್ಣಯವನ್ನು ಅತ್ಯಂತ ವಿನಮ್ರವಾಗಿ ಪ್ರಕಟಿಸಿದ್ದಾರೆ. ವಿಶಾಲ್ ಅವರ ಈ ಸಹೃದಯೀ ನಿರ್ಧಾರದ ಬಗ್ಗೆ ಕನ್ನಡಿಗರು ಅಭಿಮಾನದ ಹೊಳೆ ಹರಿಸಿದ್ದಾರೆ. ಹೃದಯತುಂಬಿ ಬಂದು ಶಹಬ್ಬಾಸ್ ವಿಶಾಲ್ ಎಂದು ಕನ್ನಡಿಗರು ಆತನನ್ನು ಹರಿಸಿದ್ದಾರೆ.
ಅಲ್ಲೇ ಡ್ರಾ ಅಲ್ಲೇ ಬಹುಮಾನ ಎಂಬಂತೆ ವಿಶಾಲ ಹೃದಯದ ನಟ ವಿಶಾಲ್ ಅವರನ್ನು ಸಾಮಾಜಿಕ ಜಾಲತಾಣಗಳಲ್ಲಿ ಕೊಂಡಾಡಿದ್ದಾರೆ. ವಿಶಾಲ್ ನಿಮ್ಮದು ಅದ್ಭುತ ಸ್ಪಂದನೆ ಎಂದಿರುವ ಕನ್ನಡಿಗರು, ಇದೇ ವೇಳೆ ಬೇರೆ ಯಾವೊಬ್ಬ ನಟ, ರಾಜಕಾರಣಿಗೂ ಇಂತಹ ಸದಾಲೋಚನೆ ಬರಲಿಲ್ಲವಲ್ಲಾ ಎಂದು ವ್ಯಥೆ ಕೂಡಾ ಪಟ್ಟಿದ್ದಾರೆ. ಈ ಬೆಳವಣಿಗೆಯ ಸಮ್ಮುಖದಲ್ಲಿ, ಕನ್ನಡ ಪ್ರೇಮಿ ವಿಶಾಲ್ ಬಗ್ಗೆ ಕನ್ನಡಿಗರು ಇನ್ನಷ್ಟು ಅಭಿಮಾನ ಹೆಚ್ಚಿಸಿಕೊಂಡಿದ್ದಾರೆ.
ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430