ಕಲಿತಿರುವ ಶಿಕ್ಷಣಕ್ಕೆ ಸರಿಯಾಗಿ ಅಥವಾ ನಿರೀಕ್ಷೆ ಮಾಡಿದಷ್ಟು ವೇತನ ಸಿಗದೆ ಪರದಾಡುತ್ತಿರುವವರ ಸಂಖ್ಯೆ ಸಾಕಷ್ಟಿದೆ. ಕೆಲವರಿಗೆ ಸರ್ಕಾರಿ ಹುದ್ದೆಯನ್ನು ಪಡೆಯಬೇಕೆಂದು ಕನಸಿರುತ್ತದೆ. ಅಂಥವರಿಗೆ ಕರ್ನಾಟಕ ತೋಟಗಾರಿಕಾ ಇಲಾಖೆ ಸಿಹಿಸುದ್ದಿಯನ್ನು ನೀಡಿದೆ. ಕರ್ನಾಟಕ ತೋಟಗಾರಿಕೆ ಇಲಾಖೆಯ ಖಾಲಿ ಇರುವ ಹುದ್ದೆ ಆಯ್ಕೆ ವಿಧಾನ, ಶೈಕ್ಷಣಿಕ ಅರ್ಹತೆ ಬಗ್ಗೆ ಈ ಲೇಖನದಲ್ಲಿ ನೋಡೋಣ.
ಕರ್ನಾಟಕ ರಾಜ್ಯ ತೋಟಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೊಸದಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಹಿರಿಯ ತೋಟಗಾರಿಕೆ ಸಹಾಯಕ ನಿರ್ದೇಶಕ ಹುದ್ದೆ 228 ಹುದ್ದೆಗಳು ಖಾಲಿ ಇವೆ. ವೇತನ 52,000 ರೂಪಾಯಿಯಿಂದ 92,000ರೂಪಾಯಿ ಕೊಡಲಾಗುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ತೋಟಗಾರಿಕೆಯಲ್ಲಿ ಬಿಎಸ್ಸಿ ಪದವಿ ಮತ್ತು ಸ್ನಾತಕೋತ್ತರ ಪದವಿ ಹೊಂದಿರಬೇಕು. ತೋಟಗಾರಿಕೆ ಸಹಾಯಕ ನಿರ್ದೇಶಕರು 465 ಹುದ್ದೆಗಳು ಖಾಲಿ ಇವೆ.
43,000 ಸಾವಿರ ರೂಪಾಯಿಯಿಂದ 83,000 ರೂಪಾಯಿವರೆಗೆ ವೇತನ ಕೊಡಲಾಗುತ್ತದೆ. ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ತೋಟಗಾರಿಕೆಯಲ್ಲಿ ಬಿಎಸ್ಸಿ ಪದವಿ ಹಾಗೂ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು. ಸಹಾಯಕ ತೋಟಗಾರಿಕೆ ಅಧಿಕಾರಿ 1090 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 40,000ರೂಪಾಯಿಯಿಂದ 78,000 ರೂಪಾಯಿವರೆಗೆ ವೇತನ ಕೊಡಲಾಗುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಬಿಎಸ್ಸಿ ಪದವಿ ಹೊಂದಿರಬೇಕು.
ಪ್ರಥಮ ದರ್ಜೆ ಸಹಾಯಕರು 292 ಹುದ್ದೆಗಳು ಖಾಲಿ ಇವೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 27,000 ರೂಪಾಯಿಯಿಂದ 32,000 ರೂಪಾಯಿವರೆಗೆ ವೇತನ ಕೊಡಲಾಗುತ್ತದೆ. ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪದವಿ ಹೊಂದಿರಬೇಕು. ಶೀಘ್ರಲಿಪಿಗಾರರು 18 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 27,000 ರೂಪಾಯಿಯಿಂದ 52,000 ರೂಪಾಯಿವರೆಗೆ ವೇತನ ಕೊಡಲಾಗುತ್ತದೆ.
ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನ್ನಡದಲ್ಲಿ ಹಿರಿಯ ಹಾಗೂ ಕಿರಿಯ ದರ್ಜೆ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಚಾಲಕರು 85 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 21,000 ರೂಪಾಯಿಯಿಂದ 42,000 ರೂಪಾಯಿವರೆಗೆ ವೇತನ ಕೊಡಲಾಗುತ್ತದೆ. ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್ ಎಸ್ ಎಲ್ ಸಿ ಪಾಸಾಗಿರಬೇಕು ಹಾಗೂ ಭಾರಿ ವಾಹನ ಚಾಲನಾ ಪರವಾನಿಗೆ ಹೊಂದಿರಬೇಕು. ಲ್ಯಾಬ್ ಸಹಾಯಕ 13 ಹುದ್ದೆ ಖಾಲಿ ಇದೆ. ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 18,000 ರೂಪಾಯಿಯಿಂದ 32,000 ರೂಪಾಯಿವರೆಗೆ ವೇತನ ಕೊಡಲಾಗುತ್ತದೆ. ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪಿಯುಸಿ ಸೈನ್ಸ್ ನಲ್ಲಿ ಓದಿರಬೇಕು.
ತೋಟಗಾರಿಕೆ ಸಹಾಯಕರು 866 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 23,000 ರೂಪಾಯಿಯಿಂದ 45,000 ರೂಪಾಯಿವರೆಗೆ ವೇತನ ಕೊಡಲಾಗುತ್ತದೆ. ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪಿಯುಸಿ ಸೈನ್ಸ್ ನಲ್ಲಿ ಓದಿರಬೇಕು ಹಾಗೂ 10 ತಿಂಗಳು ತೋಟಗಾರಿಕೆ ತರಬೇತಿಯನ್ನು ಪಡೆದಿರಬೇಕು. ದ್ವಿತೀಯ ದರ್ಜೆ ಸಹಾಯಕರು 569 ಹುದ್ದೆ ಖಾಲಿ ಇದ್ದು ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 21,000 ರೂಪಾಯಿಯಿಂದ 42,000 ರೂಪಾಯಿವರೆಗೆ ವೇತನ ಕೊಡಲಾಗುತ್ತದೆ.
ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಓದಿರಬೇಕು. ಡೇಟಾ ಎಂಟ್ರಿ ಆಪರೇಟರ್ 56 ಹುದ್ದೆ ಖಾಲಿ ಇದ್ದು ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 21,000 ರೂಪಾಯಿಯಿಂದ 42,000 ರೂಪಾಯಿವರೆಗೆ ಕೊಡಲಾಗುತ್ತದೆ. ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನ್ನಡದಲ್ಲಿ ಕಿರಿಯ ದರ್ಜೆ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ತೋಟಗಾರ 177 ಹುದ್ದೆ ಖಾಲಿ ಇದ್ದು ಈ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ 15,000 ರೂಪಾಯಿಯಿಂದ 28,000 ರೂಪಾಯಿವರೆಗೆ ವೇತನ ಕೊಡಲಾಗುತ್ತದೆ. ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್ ಎಸ್ ಎಲ್ ಸಿ ಓದಿರಬೇಕು ಅಥವಾ ಎರಡು ವರ್ಷಗಳು ಡಿಪ್ಲೋಮಾ ಕೋರ್ಸ್ ಮುಗಿಸಬೇಕು. ವಾಚ್ ಮನ್ 29 ಹುದ್ದೆಗಳು ಖಾಲಿ ಇದೆ, ಈ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ 15,000 ರೂಪಾಯಿಯಿಂದ 28,000 ರೂಪಾಯಿವರೆಗೆ ವೇತನ ಕೊಡಲಾಗುತ್ತದೆ.
ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಏಳನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಬಿ ಕೀಪಿಂಗ್ ಅಸಿಸ್ಟೆಂಟ್ 20 ಹುದ್ದೆಗಳು ಖಾಲಿ ಇವೆ. 8,000 ರೂಪಾಯಿಯಿಂದ 32,000 ರೂಪಾಯಿವರೆಗೆ ವೇತನ ಕೊಡಲಾಗುತ್ತದೆ. ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 8ನೇ ತರಗತಿಯನ್ನು ಓದಿರಬೇಕು ಜೊತೆಗೆ 3ತಿಂಗಳ ಬಿ ಕೀಪಿಂಗ್ ತರಬೇತಿ ಹೊಂದಿರಬೇಕು.
ಸೇವಕ 98 ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 17,000 ರೂಪಾಯಿಯಿಂದ 28,000 ರೂಪಾಯಿವರೆಗೆ ವೇತನ ಕೊಡಲಾಗುತ್ತದೆ. ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕಾರ್ಯನಿರ್ವಹಿಸಬೇಕು. ಒಟ್ಟು ಕರ್ನಾಟಕ ತೋಟಗಾರಿಕಾ ಇಲಾಖೆಯಿಂದ ಮೂರು ಸಾವಿರದ ಎರಡು ನೂರಕ್ಕೂ ಅಧಿಕ ಹುದ್ದೆಗಳು ಖಾಲಿ ಇವೆ.
ಅಭ್ಯರ್ಥಿಗಳನ್ನು ನೇರನೇಮಕಾತಿ ಅಥವಾ ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಮುಂಬಡ್ತಿ ಮೂಲಕ ಭರ್ತಿ ಮಾಡಲಾಗುತ್ತದೆ. ಶೀಘ್ರದಲ್ಲಿಯೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ಪ್ರಕಟಿಸಲಾಗುತ್ತದೆ. ಈ ಮಾಹಿತಿಯನ್ನು ತಪ್ಪದೆ ಎಲ್ಲರಿಗೂ ತಿಳಿಸಿ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವುದರಿಂದ ಉದ್ಯೋಗ ದೊರೆತು ಜೀವನ ಕಟ್ಟಿಕೊಳ್ಳಲು ಆಧಾರವಾಗುತ್ತದೆ.
ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430