ಜಿಲ್ಲಾ ಪಂಚಾಯತ್ ನೇಮಕಾತಿ ಕುರಿತು ಇಲ್ಲಿದೆ ಮಾಹಿತಿ ಆಸಕ್ತರು ಅರ್ಜಿ ಸಲ್ಲಿಸಿ

0 8

ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿರುವವರಿಗೆ ನಾವು ಒಂದು ಉದ್ಯೋಗ ಮಾಹಿತಿಯನ್ನು ತಿಳಿಸಿ ಕೊಡುತ್ತೇವೆ. ಅದೇನೆಂದರೆ ಜಿಲ್ಲಾ ಪಂಚಾಯ್ತಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗಾಗಿ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹಾಗಾದರೆ ಯಾವೆಲ್ಲಾ ಹುದ್ದೆಗಳು ಖಾಲಿ ಇವೆ ಎಷ್ಟು ಹುದ್ದೆಗಳು ಖಾಲಿ ಇವೆ ಹುದ್ದೆಗಳಿಗೆ ಅರ್ಜಿಯನ್ನು ಯಾವ ರೀತಿಯಾಗಿ ಸಲ್ಲಿಸಬೇಕು ಮತ್ತು ವೇತನ ಹೇಗಿರುತ್ತದೆ ಉದ್ಯೋಗ ಸ್ಥಳ ಯಾವುದು ಅರ್ಜಿ ಸಲ್ಲಿಸುವ ದಿನಾಂಕ ಈ ಕುರಿತಾದ ಸಂಪೂರ್ಣ ಮಾಹಿತಿಯನ್ನು ನಿಮಗೆ ತಿಳಿಸಿಕೊಡುತ್ತೇವೆ.

ಜಿಲ್ಲಾ ಪಂಚಾಯತ್ ಅಲ್ಲಿ ಖಾಲಿ ಇರುವ ಹುದ್ದೆಗಳು ಯಾವವು ಎಂದರೆ ಜಿಲ್ಲಾ ಐಇಸಿ ಸಂಯೋಜಕರು, ತಾಲೂಕು ಐಇಸಿ ಸಂಯೋಜಕರು, ತಾಂತ್ರಿಕ ಸಹಾಯಕರು ಕೃಷಿ ಹಾಗೂ ತೋಟಗಾರಿಕೆ ಹಾಗೂ ಆಡಳಿತ ಸಹಾಯಕರ ಹುದ್ದೆ. ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಯಾವ ರೀತಿಯಾಗಿ ವೇತನವನ್ನು ನೀಡಲಾಗುತ್ತದೆ ಎಂಬುದನ್ನು ನೋಡುವುದಾದರೆ, ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ ಹದಿನೈದು ಸಾವಿರದಿಂದ ಇಪ್ಪತ್ತೈದು ಸಾವಿರದವರೆಗೆ ವೇತನ ನೀಡಲಾಗುತ್ತದೆ.

ಈ ವಿಭಾಗದಲ್ಲಿ ಒಟ್ಟು ಹನ್ನೆರಡು ಹುದ್ದೆಗಳ ಭರ್ತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.ಜಿಲ್ಲಾ ಐಇಸಿ ಸಂಯೋಜಕ ಒಂದು ಹುದ್ದೆ ತಾಲೂಕು ಐಇಸಿ ಸಂಯೋಜಕ ಒಂದು ಹುದ್ದೆ ತಾಂತ್ರಿಕ ಸಹಾಯಕ ಮೂರು ಹುದ್ದೆ ಹಾಗೂ ಆಡಳಿತ ಸಹಾಯಕರ ಏಳು ಹುದ್ದೆ. ಈ ಹುದ್ದೆಗೆ ಅರ್ಜಿ ಸಲ್ಲಿಸುವವರಿಗೆ ವಯೋಮಿತಿ ಎಷ್ಟಿರುತ್ತದೆ ಎನ್ನುವುದನ್ನು ನೋಡುವುದಾದರೆ ಜಿಲ್ಲಾ ಹಾಗೂ ತಾಲೂಕು ಐಇ ಸಿ ಸಂಯೋಜಕ ಹುದ್ದೆಗೆ ಇಪ್ಪತ್ಮೂರು ವರ್ಷದಿಂದ ನಲವತ್ತು ವರ್ಷದ ಒಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ತಾಂತ್ರಿಕ ಹಾಗೂ ಆಡಳಿತ ಹುದ್ದೆಗೆ ಇಪ್ಪತ್ತೊಂದು ವರ್ಷದಿಂದ ನಲವತ್ತು ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಈ ಹುದ್ದೆಗೆ ಅಭ್ಯರ್ಥಿಗಳನ್ನು ಯಾವ ರೀತಿಯಾಗಿ ಆಯ್ಕೆಮಾಡಿಕೊಳ್ಳಲಾಗುತ್ತದೆ ಎಂದರೆ ನಿಗದಿಪಡಿಸಿದ ವಿದ್ಯಾರ್ಹತೆ ಮತ್ತು ಅನುಭವದ ಆಧಾರದ ಮೇಲೆ ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಇನ್ನು ಈ ಹುದ್ದೆಗೆ ಯಾವ ರೀತಿಯಾಗಿ ಅರ್ಜಿಯನ್ನು ಸಲ್ಲಿಸಬೇಕು ಎನ್ನುವುದನ್ನು ನೋಡುವುದಾದರೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ ಸೈಟ್ ವಿಳಾಸಕ್ಕೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.

ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವ ಅವಶ್ಯಕತೆ ಇರುವುದಿಲ್ಲ. ಇನ್ನು ಉದ್ಯೋಗ ಸ್ಥಳ ಯಾವುದು ಎಂದರೆ ಚಿಕ್ಕಮಂಗಳೂರು ಜಿಲ್ಲೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಯಾವ ವಿದ್ಯಾರ್ಹತೆಯನ್ನು ಹೊಂದಿರಬೇಕು ಎಂದರೆ ಜಿಲ್ಲಾ ಹಾಗೂ ತಾಲೂಕು ಐಇಸಿ ಸಂಯೋಜಕ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವವರು ಸ್ನಾತಕೋತ್ತರ ಪದವಿಯ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ತಾಂತ್ರಿಕ ಸಹಾಯಕ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವವರು ಕೃಷಿ ಮತ್ತು ತೋಟಗಾರಿಕೆ ವಿಷಯದ ಮೇಲೆ ಬಿಎಸ್ಸಿ ಪದವಿಯನ್ನು ಮತ್ತು ಕಂಪ್ಯೂಟರ್ ಜ್ಞಾನವನ್ನು ಪಡೆದಿರಬೇಕು.

ಆಡಳಿತ ಸಹಾಯಕರ ಹುದ್ದೆಗೆ ಬಿಕಾಂ ಪದವಿ ಜೊತೆಗೆ ಕನ್ನಡ ಮತ್ತು ಇಂಗ್ಲಿಷ್ ಟೈಪಿಂಗ್ ಜ್ಞಾನ ಹೊಂದಿರಬೇಕು. ಅರ್ಜಿಯನ್ನು ಸಲ್ಲಿಸುವವರು ನವೆಂಬರ್ ಎಂಟರಿಂದ ನವೆಂಬರ್ ಹದಿನೆಂಟು ಎರಡು ಸಾವಿರದ ಇಪ್ಪತ್ತೊಂದರ ಒಳಗಾಗಿ ತಮ್ಮ ಅರ್ಜಿಯನ್ನು ಸಲ್ಲಿಸಬೇಕು. ನೀವು ಕೂಡ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಿ ಉದ್ಯೋಗವನ್ನು ಪಡೆದುಕೊಳ್ಳಿ. ಈ ಮಾಹಿತಿಯನ್ನು ನೀವು ತಿಳಿದುಕೊಳ್ಳುವುದರ ಜೊತೆಗೆ ನಿಮ್ಮ ಸ್ನೇಹಿತರು ಹಾಗೂ ಪರಿಚಿತರಿಗೂ ತಿಳಿಸಿರಿ.

ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430

Leave A Reply

Your email address will not be published.