ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿರುವವರಿಗೆ ಸಿಹಿಸುದ್ದಿ ಇದೆ ಅದೇನೆಂದರೆ ಎರಡು ಉದ್ಯೋಗಗಳ ನೇಮಕಾತಿಯ ಬಗ್ಗೆ ಮಾಹಿತಿಯನ್ನು ನಾವಿಂದು ನಿಮಗೆ ತಿಳಿಸಿಕೊಡುತ್ತೆವೆ. ಮೊದಲನೆಯದಾಗಿ ಬೆಂಗಳೂರು ಮಹಾನಗರ ಸಾರಿಗೆಯಿಂದ ಐದುನೂರು ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ. ಬೆಂಗಳೂರು ಮಹಾನಗರ ಸಾರಿಗೆ ನಿಗಮವು ನವೆಂಬರ್ ಎರಡು ಸಾವಿರದ ಇಪ್ಪತ್ತೊಂದರ ಬಿಎಂಟಿಸಿ ಅಧಿಕೃತ ಅಧಿಸೂಚನೆಯ ಮೂಲಕ ಮೆಕ್ಯಾನಿಕ್ ಡೀಸೆಲ್ ಪೋಸ್ಟ್ಗಳನ್ನು ಭರ್ತಿಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. ಬೆಂಗಳೂರು ಕರ್ನಾಟಕ ಸರ್ಕಾರದ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು.

ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹತ್ತನೇ ತರಗತಿ ಉತ್ತೀರ್ಣರಾಗಿರಬೇಕು. ಹುದ್ದೆಗೆ ಅರ್ಜಿಯನ್ನು ಸಲ್ಲಿಸುವವರು ಆನ್ಲೈನ್ ಮೂಲಕ ತಮ್ಮ ಅರ್ಜಿಯನ್ನು ಸಲ್ಲಿಸಬೇಕು. ಹುದ್ದೆಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಅರ್ಜಿಯನ್ನು ಹದಿನೆಂಟು ನವೆಂಬರ್ ಎರಡು ಸಾವಿರದ ಇಪ್ಪತ್ತೊಂದರಿಂದ ಮುವತ್ತು ನವೆಂಬರ್ ಎರಡು ಸಾವಿರದ ಇಪ್ಪತ್ತೊಂದರ ವರೆಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸುವುದಕ್ಕೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ. ಈ ಹುದ್ದೆಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ ಉದ್ಯೋಗ ಸ್ಥಳ ಬೆಂಗಳೂರು ಕರ್ನಾಟಕ ಉದ್ಯೋಗದ ಹೆಸರು ಮೆಕ್ಯಾನಿಕ್ ಡಿಸೆಲ್ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿತಿಂಗಳು ಎಂಟರಿಂದ ಒಂಬತ್ತು ಸಾವಿರ ಸಂಬಳ ಇರುತ್ತದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ತಮ್ಮ ಅರ್ಜಿಯನ್ನು ಸಲ್ಲಿಸಬಹುದು.

ಇನ್ನು ಎರಡನೆಯದಾಗಿ ಕಾನ್ಸ್ಟೇಬಲ್ ಹುದ್ದೆಗಳಿಗೆ ಸರ್ಕಾರದಿಂದ ನೇಮಕಾತಿ ನಡೆಯುತ್ತಿದೆ ಇದಕ್ಕೆ ಹತ್ತನೇ ತರಗತಿ ಐಟಿಐ ಪಾಸ್ ಆಗಿರುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು ಬಿಎಸ್ಎಫ್ ನಲ್ಲಿ ನೇಮಕಾತಿ ನಡೆಯುತ್ತಿದೆ. ಒಟ್ಟು ಇಪ್ಪತ್ತೆರಡು ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದ್ದು ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿತಿಂಗಳು ಮೂವತ್ತು ಸಾವಿರದಿಂದ ಐವತ್ತು ಸಾವಿರದವರೆಗೆ ಸಂಬಳ ಇರುತ್ತದೆ.

ಇನ್ನು ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳುವಾಗ ಲಿಖಿತ ಮತ್ತು ದೈಹಿಕ ಪರೀಕ್ಷೆಯನ್ನು ನಡೆಸಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಇನ್ನು ಯಾವ ವಯಸ್ಸಿನವರು ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು ಎಂದರೆ ಕನಿಷ್ಠ ಹದಿನೆಂಟು ವರ್ಷದಿಂದ ಇಪ್ಪತ್ತೈದು ವರ್ಷದೊಳಗಿನ ಸಾಮಾನ್ಯ ಅಭ್ಯರ್ಥಿಗಳು ಇಪ್ಪತ್ತೆಂಟು ವರ್ಷದೊಳಗಿನ ಒಬಿಸಿ ಅಭ್ಯರ್ಥಿಗಳು ಮುವತ್ತು ವರ್ಷದೊಳಗಿನ ಎಸ್ಸಿಎಸ್ಟಿ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿ ಶುಲ್ಕವನ್ನು ನೋಡುವುದಾದರೆ ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ನೂರು ರೂಪಾಯಿ ಮತ್ತು ಎಸ್ಸಿ-ಎಸ್ಟಿ ಅಭ್ಯರ್ಥಿಗಳಿಗೆ ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನವೆಂಬರ್ ಹತೊಂಬತ್ತರಿಂದ ಡಿಸೆಂಬರ್ ಇಪ್ಪತ್ತೊಂಬತ್ತು ಎರಡು ಸಾವಿರದ ಇಪ್ಪತ್ತೊಂದರವರೆಗೆ ಅರ್ಜಿಯನ್ನು ಸಲ್ಲಿಸಬಹುದು

ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಈ ರೀತಿಯಾಗಿ ಎರಡೆರಡು ಹುದ್ದೆಗಳ ನೇಮಕಾತಿ ನಡೆಯುತ್ತಿದ್ದು ಉದ್ಯೋಗವನ್ನು ಹುಡುಕುತ್ತಿರುವವರಿಗೆ ಉದ್ಯೋಗವನ್ನು ಪಡೆದುಕೊಳ್ಳುವುದಕ್ಕೆ ಇದೊಂದು ಸದಾವಕಾಶ ನೀವು ಕೂಡ ಈ ಅವಕಾಶದ ಉಪಯೋಗವನ್ನು ಪಡೆದುಕೊಳ್ಳಿ ಜೊತೆಗೆ ಈ ಮಾಹಿತಿಯನ್ನು ನಿಮ್ಮ ಪರಿಚಿತರು ಸ್ನೇಹಿತರಿಗೂ ತಿಳಿಸಿರಿ.

Leave a Reply

Your email address will not be published. Required fields are marked *