ಮಲೆನಾಡಿನ ಪ್ರತಿಯೊಬ್ಬರ ಮನೆಯಲ್ಲಿ ಮಜ್ಜಿಗೆ ಕುಡಿಯುತ್ತಾರೆ ಅಲ್ಲದೆ ಅಡುಗೆಗೆ ಮಜ್ಜಿಗೆಯನ್ನು ಬಳಸುತ್ತಾರೆ. ಮಜ್ಜಿಗೆ ಕುಡಿಯುವುದರಿಂದ ಆರೋಗ್ಯಕ್ಕೆ ಬಹಳ ಲಾಭವಿದೆ. ಹಾಗಾದರೆ ಮಜ್ಜಿಗೆ ಕುಡಿಯುವುದರಿಂದ ಆಗುವ ಆರೋಗ್ಯಕರ ಲಾಭಗಳ ಬಗ್ಗೆ ಈ ಲೇಖನದ ಮೂಲಕ ತಿಳಿಯೋಣ.
ಮಜ್ಜಿಗೆ ಭೂಲೋಕದ ಅಮೃತ ಇದ್ದ ಹಾಗೆ, ಬಹಳ ವರ್ಷಗಳಿಂದ ಮಜ್ಜಿಗೆಯನ್ನು ಕುಡಿಯುತ್ತಾ ಬಂದಿದ್ದೇವೆ. ಊಟದ ನಂತರ ಮಜ್ಜಿಗೆ ಕುಡಿಯದೆ ಇದ್ದರೆ ಆ ಊಟ ಅಪೂರ್ಣ ಎನಿಸುತ್ತದೆ. ಮಜ್ಜಿಗೆ ಕುಡಿಯುವುದರಿಂದ ಆರೋಗ್ಯಕ್ಕೆ ಬಹಳ ಒಳ್ಳೆಯದು. ಮಜ್ಜಿಗೆಯಲ್ಲಿ ಹಲವು ಔಷಧೀಯ ಗುಣಗಳಿವೆ. ಮಜ್ಜಿಗೆಯಲ್ಲಿ ಕ್ಯಾಲೋರಿ, ಪ್ರೊಟೀನ್, ಕಾರ್ಬೋಹೈಡ್ರೇಟ್, ಫ್ಯಾಟ್, ಫೈಬರ್, ಸೋಡಿಯಂ, ವಿಟಮಿನ್ ಎ ಮತ್ತು ವಿಟಮಿನ್ ಬಿ 12 ಇದೆ. ಇಷ್ಟು ಪೋಷಕಾಂಶ ಇರುವ ಮಜ್ಜಿಗೆಯನ್ನು ನಿಯಮಿತವಾಗಿ ಕುಡಿಯುವುದರಿಂದ ನಮ್ಮ ದೇಹದ ಮೂಳೆಗಳಿಗೆ ರಕ್ಷಣೆ ಸಿಗುತ್ತದೆ.
ಮಜ್ಜಿಗೆಯಲ್ಲಿ ಉತ್ತಮ ಪ್ರಮಾಣದ ವಿಟಮಿನ್ ಎ ಮತ್ತು ಕ್ಯಾಲ್ಶಿಯಂ ಇರುವುದರಿಂದ ಮೂಳೆಗಳಿಗೆ ರಕ್ಷಣೆ ದೊರೆಯುತ್ತದೆ. ಮಜ್ಜಿಗೆಗೆ ಜೀರಿಗೆ ಪುಡಿ ಹಾಗೂ ಉಪ್ಪು ಸೇರಿಸಿ ಕುಡಿಯುವುದರಿಂದ ಜೀರ್ಣಶಕ್ತಿ ಹೆಚ್ಚುತ್ತದೆ. ಮಜ್ಜಿಗೆಯಲ್ಲಿ ಕಲ್ಲುಸಕ್ಕರೆ ಅಥವಾ ಸಕ್ಕರೆ ಬೆರೆಸಿ ಕುಡಿಯುವುದರಿಂದ ಪಿತ್ತದಿಂದ ಕಾಡುವ ಎದೆ ಉರಿ ಹಾಗೂ ಉರಿ ತೇಗು ಶಮನವಾಗುತ್ತದೆ. ಕೆಲವರಿಗೆ ವಾಂತಿ ಅಥವಾ ವಾಕರಿಕೆ ಬರುತ್ತದೆ ಮಜ್ಜಿಗೆಯಲ್ಲಿ ಉಪ್ಪು ಹಾಗೂ ಹಸಿಶುಂಠಿ ರಸವನ್ನು ಸೇರಿಸಿ ಸೇವನೆ ಮಾಡುವುದರಿಂದ ವಾಕರಿಕೆ ವಾಂತಿ ಕಡಿಮೆ ಆಗುತ್ತದೆ. ನಮ್ಮ ದೇಹಕ್ಕೆ ಅಗತ್ಯವಿರುವ ಖನಿಜಗಳು ಮಜ್ಜಿಗೆಯಲ್ಲಿ ಹೇರಳವಾಗಿ ಕಂಡುಬರುತ್ತದೆ. ಮಜ್ಜಿಗೆಯನ್ನು ಕುಡಿಯುವುದರಿಂದ ಮಾನಸಿಕ ಒತ್ತಡ ಕಡಿಮೆ ಆಗುತ್ತದೆ.
ಅಜೀರ್ಣ, ಹೊಟ್ಟೆ ಉರಿ ಕಂಡುಬಂದರೆ ಅರ್ಧ ಲೋಟ ಹುಳಿ ಮಜ್ಜಿಗೆಗೆ ಇಂಗು, ಉಪ್ಪು ಬೆರೆಸಿ ಕುಡಿಯುವುದರಿಂದ ಕೆಲವೆ ಹೊತ್ತಿನಲ್ಲಿ ಹೊಟ್ಟೆ ನೋವು ಕಡಿಮೆ ಆಗುತ್ತದೆ. ಮಜ್ಜಿಗೆಯಲ್ಲಿರುವ ಪೊಟ್ಯಾಷಿಯಂ ಅಂಶವು ರಕ್ತದ ಒತ್ತಡವನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ. ನಿಯಮಿತವಾಗಿ ಮಜ್ಜಿಗೆಯನ್ನು ಕುಡಿಯುವುದರಿಂದ ರಕ್ತನಾಳಗಳಲ್ಲಿ ಶೇಖರಣೆಯಾಗಿರುವ ಕೊಬ್ಬನ್ನು ಕರಗಿಸುತ್ತದೆ. ಮಜ್ಜಿಗೆಯ ಜಠರದ ಒಳಪದರವನ್ನು ಲೇಪಿಸಿ ಜಠರದ ತೀಕ್ಷ ಸ್ರಾವವನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ.
ಬೆಣ್ಣೆ ತೆಗೆದ ಮಜ್ಜಿಗೆಯನ್ನು ಸೇವನೆ ಮಾಡುವುದರಿಂದ ದೇಹದ ತೂಕ ಕಡಿಮೆ ಆಗುತ್ತದೆ. ಉರಿ ಮೂತ್ರ ಅಥವಾ ಮೂತ್ರ ವಿಸರ್ಜಿಸಲು ತೊಂದರೆ ಆಗುತ್ತಿದ್ದರೆ ಮಜ್ಜಿಗೆಗೆ ಬೆಲ್ಲವನ್ನು ಸೇರಿಸಿ ಕುಡಿಯುವುದರಿಂದ ನಿವಾರಣೆಯಾಗುತ್ತದೆ. ಪ್ರತಿದಿನ ಊಟದ ನಂತರ ನಿಯಮಿತವಾಗಿ ಮಜ್ಜಿಗೆಯನ್ನು ಕುಡಿಯುವುದರಿಂದ ಅನೇಕ ಆರೋಗ್ಯಕರ ಲಾಭಗಳಿವೆ. ಈ ಮಾಹಿತಿಯನ್ನು ತಪ್ಪದೆ ಎಲ್ಲರಿಗೂ ತಿಳಿಸಿ, ಮಜ್ಜಿಗೆ ಕುಡಿಯುವ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳೋಣ.