ತೋಟಗಾರಿಕೆ ಬೆಳೆಗಳಾದ ತೆಂಗು, ಬಾಳೆ, ಮಾವು, ಸಪೋಟಾ, ನಿಂಬೆ, ದಾಳಿಂಬೆ, ಪಪ್ಪಾಯ, ಹೂವಿನ ಬೆಳೆ, ತರಕಾರಿ ಬೆಳೆ ಹಾಗೂ ಇತ್ಯಾದಿ ತೋಟಗಾರಿಕೆ ಬೆಳೆಗಳಿಗೆ ಸಹಾಯಧನ ನೀಡಲಾಗುತ್ತಿದ್ದು, ಸಣ್ಣ ಅತೀ ಸಣ್ಣ ರೈತರು, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದವರಿಗೆ 2 ಹೆಕ್ಟೇರ್ ವರೆಗೆ ಶೇಕಡಾ 90 ರಷ್ಟು ಸಹಾಯಧನ ಹಾಗೂ 2 ರಿಂದ 5 ಹೆಕ್ಟೇರ್ ವರೆಗಿನ ರೈತರಿಗೆ ಶೇಕಡಾ 45 ರಷ್ಟು ಸಹಾಯಧನ ನೀಡಲಾಗುತ್ತಿದೆ. ಹನಿ ನೀರಾವರಿ ಘಟಕ ಅಳವಡಿಸಿಕೊಳ್ಳುವ ಎಲ್ಲ ವರ್ಗದ ರೈತರಿಗೂ ಹಿಂದಿನಂತೆಯೇ ಶೇ 90ರಷ್ಟು ಸಹಾಯಧನ ಕೊಡಲಾಗುವುದು.

ಈ ನಿಟ್ಟಿನಲ್ಲಿ ಶೀಘ್ರವೇ ಆದೇಶ ಹೊರಬೀಳಲಿದೆ’ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ ಭರವಸೆ ನೀಡಿದರು. ಮೂರು ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ತಾಲ್ಲೂಕಿನ ಕೊಂಡಸಕೊಪ್ಪ ಗ್ರಾಮದ ಗುಡ್ಡದಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಸೋಮವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮುಖಂಡರಿಂದ ಮನವಿ ಸ್ವೀಕರಿಸಿ ಅವರು ಮಾತನಾಡಿದರು.

ಕೋವಿಡ್ ಕಾರಣದಿಂದ ಸಹಾಯಧನವನ್ನು ಎಲ್ಲ ವರ್ಗದ ರೈತರಿಗೂ ಕೊಡಲಾಗುತ್ತಿರಲಿಲ್ಲ. ಇದರಿಂದ ರೈತರಿಗೆ ತೊಂದರೆ  ಆಗಿತ್ತು. ಇದನ್ನು ಗಮನಿಸಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿದ್ದೇನೆ. ಹನಿ ನೀರಾವರಿಗೆ 2 ಎಕರೆವರೆಗೂ ಶೇಕಡಾ 90ರಷ್ಟು ಸಹಾಯಧನವನ್ನು ಕೊಡಲಾಗುವುದು. ವಿಧಾನಪರಿಷತ್ ಚುನಾವಣೆ ನೀತಿಸಂಹಿತೆ ಇರುವುದರಿಂದ ಆದೇಶ ಹೊರಬಿದ್ದಿಲ್ಲ ಎಂದು ಹೇಳಿದರು.

ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಮಾತನಾಡಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಾರಾಣಸಿಗೆ ಹೋಗಿದ್ದಾರೆ. ಅವರು ಬಂದ ಕೂಡಲೇ, ಮೂರು ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕು ಎಂದು ನಿಮ್ಮ ಬೇಡಿಕೆ ಬಗ್ಗೆ ಚರ್ಚಿಸಲಾಗುವುದು. ನಮ್ಮ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಲಿದೆ. ಇದು ಪ್ರಮುಖ ಬೇಡಿಕೆಯಾಗಿದ್ದು, ಬೇಗ ಇತ್ಯರ್ಥಪಡಿಸಬೇಕು ಎಂದು ಮುಖ್ಯಮಂತ್ರಿಯನ್ನು ಕೋರಲಾಗುವುದು’ ಎಂದು ತಿಳಿಸಿದರು.

ರಸಗೊಬ್ಬರದ ತೊಂದರೆ ಇಲ್ಲ. ಭತ್ತ ಖರೀದಿ ಕೇಂದ್ರಗಳನ್ನು ಜನವರಿ 1ರಿಂದ ಆರಂಭಿಸಲಾಗುವುದು. ಪ್ರಸ್ತುತ ರೈತರ ನೋಂದಣಿ ಪ್ರಕ್ರಿಯೆ ನಡೆಯುತ್ತಿದೆ’ ಎಂದರು. ಇನ್ನೂ 9 ದಿನಗಳು ಅಧಿವೇಶನ ನಡೆಯಲಿದೆ. ನಾವು ಮಾಡುವುದಿಲ್ಲ ಎಂದರೆ ರೈತರು ಬಿಡುವುದೂ ಇಲ್ಲ ಸಮಯ ಕೊಡಿ ಎಂದು ಕೋರಿದ್ದಾರೆ.

WhatsApp Group Join Now
Telegram Group Join Now

Leave a Reply

Your email address will not be published. Required fields are marked *

error: Content is protected !!