ಈಗಿನ ದಿನಗಳಲ್ಲಿ ಭೂಮಿಗೆ ಹೆಚ್ಚಿನ ಬೆಲೆ ಬರುತ್ತಿದೆ, ಕೋಟಿ ಕೋಟಿ ಹಣವನ್ನು ನೀಡಿ ಭೂಮಿಯನ್ನು ಖರೀದಿಸುತ್ತಾರೆ. ಕೆಲವರಿಗೆ ಕೃಷಿ ಮಾಡಬೇಕು, ಪ್ರಾಣಿ ಸಾಕಾಣಿಕೆ ಮಾಡಬೇಕು ಎಂಬ ಕನಸಿರುತ್ತದೆ ಆದರೆ ಅದಕ್ಕೆ ಸರಿಯಾದ ತರಬೇತಿ ಇರುವುದಿಲ್ಲ ಆದರೆ ಯಾದಗಿರಿ ಜಿಲ್ಲೆಯವರಿಗೆ ಒಂದು ಸುವರ್ಣ ಅವಕಾಶವಿದೆ ಅದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದ ಮೂಲಕ ತಿಳಿಯೋಣ.

ಕುರಿ ಸಾಕಾಣಿಕೆ ಮಾಡಲಿಚ್ಚಿಸುವ ರೈತರಿಗೆ ಹಾಗೂ ಈಗಾಗಲೆ ಕುರಿ ಸಾಕಾಣಿಕೆಯಲ್ಲಿ ತೊಡಗಿರುವ ರೈತರಿಗೆ ಉಚಿತವಾಗಿ 10 ದಿನಗಳ ಕಾಲ ಕುರಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಯಾದಗಿರಿ ಜಿಲ್ಲೆಯ ಗ್ರಾಮೀಣ ಸ್ವಯಂ ತರಬೇತಿ ಸಂಸ್ಥೆ ಮತ್ತು ಭಾರತೀಯ ಸ್ಟೇಟ್ ಬ್ಯಾಂಕ್ ಸಹಯೋಗದೊಂದಿಗೆ ಉಚಿತ ಕುರಿ ಸಾಕಾಣಿಕೆಯ ಬಗ್ಗೆ 10 ದಿನಗಳ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಸ್ವಯಂ ಉದ್ಯೋಗ ಕೈಗೊಳ್ಳಲು ಆಸಕ್ತಿಯುಳ್ಳ ಯಾದಗಿರಿ ಜಿಲ್ಲೆಯ 18 ರಿಂದ 45 ವರ್ಷದೊಳಗಿನ ಗ್ರಾಮೀಣ ಯುವಕರು ಉಚಿತ ಕುರಿ ಸಾಕಾಣಿಕೆ ತರಬೇತಿಗೆ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ರೈತರು ಕನಿಷ್ಟ 7ನೇ ತರಗತಿಯವರೆಗೆ ಓದಿರಬೇಕು. ಕನ್ನಡ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ತರಬೇತಿ ಸಮಯದಲ್ಲಿ ಉಚಿತವಾಗಿ ಊಟ ಹಾಗೂ ವಸತಿ ಸೌಲಭ್ಯಗಳನ್ನು ನೀಡಲಾಗುವುದು ಎಂದು ಯಾದಗಿರಿ ಭಾರತೀಯ ಸ್ಟೇಟ್ ಬ್ಯಾಂಕ್ ನ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ದಿನದ 24 ಗಂಟೆಗಳು ರೈತರಿಗೆ ಉಚಿತವಾಗಿ ಪಶುಸಂಗೋಪನೆ ಕುರಿತು ಮಾಹಿತಿ ನೀಡಲು ಸಹಾಯವಾಣಿ ಆರಂಭಿಸಲಾಗಿದೆ.

8277100200 ಗೆ ಕರೆ ಮಾಡಿದರೆ ಸಂಬಂಧಿಸಿದ ಅಧಿಕಾರಿಗಳು ಕರೆ ಸ್ವೀಕರಿಸಿ ರೈತರಿಗೆ ಅಗತ್ಯ ಮಾಹಿತಿ ನೀಡುವರು. ಸಹಾಯವಾಣಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪಶುವೈದ್ಯರು ಮತ್ತು ಇತರೆ ವಿಶೇಷ ತಜ್ಞರಿಂದ ಅಗತ್ಯ ಮಾಹಿತಿ ಪಡೆಯಬಹುದು. ಹೈನುಗಾರಿಕೆ, ಕುರಿ ಮತ್ತು ಮೇಕೆ ಸಾಕಾಣಿಕೆ, ಮೊಲ, ಹಂದಿ ಸಾಕಾಣಿಕೆ, ಕೋಳಿ ಸಾಕಾಣಿಕೆ ಕುರಿತಂತೆ ಇಲಾಖೆಯ ತರಬೇತಿ ಕೇಂದ್ರಗಳಲ್ಲಿ ನಡೆಯುವ ತರಬೇತಿ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಲಾಗುವುದು.

ಜಾನುವಾರುಗಳಿಗೆ ಬರುವ ರೋಗಗಳು, ಲಸಿಕಾ ಕಾರ್ಯಕ್ರಮ ಹಾಗೂ ಜಾನುವಾರುಗಳಿಗೆ ರೋಗ ಬರದಂತೆ ತಡೆಗಟ್ಟಲು ಸೂಕ್ತ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಮಾಹಿತಿ ನೀಡಲಾಗುವುದು. ದೇಶಿ ಹಾಗೂ ವಿದೇಶಿ ಜಾನುವಾರು ತಳಿಗಳ ಬಗ್ಗೆ ಮಾಹಿತಿ ನೀಡಲಾಗುವುದು. ಅಷ್ಟೆ ಅಲ್ಲದೆ ಪಶು ಸಂಗೋಪನೆ ಚಟುವಟಿಕೆಗಳಿಗಾಗಿ ಅಂದರೆ ಕುರಿ, ಮೇಕೆ, ಕೋಳಿ, ಮೊಲ ಸಾಕಾಣಿಕೆ ಹಾಗೂ ಹೈನುಗಾರಿಕೆಗೆ ವಿವಿಧ ಬ್ಯಾಂಕ್ ಗಳಿಂದ ದೊರೆಯಬಹುದಾದ ಸಾಲ ಸೌಲಭ್ಯದ ಕುರಿತು ಸಹ ಮಾಹಿತಿ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ 0448994164, 9448577110, 9902698281, 8088235941 ಹಾಗೂ 7829101994ಗೆ ಸಂಪರ್ಕಿಸಲು ಕೋರಲಾಗಿದೆ. ಈ ಮಾಹಿತಿಯನ್ನು ತಪ್ಪದೆ ಯಾದಗಿರಿ ಜಿಲ್ಲೆಯ ಜನರಿಗೆ ತಿಳಿಸಿ ಆಸಕ್ತರು ಈ ಅಮೂಲ್ಯವಾದ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ.

WhatsApp Group Join Now
Telegram Group Join Now

Leave a Reply

Your email address will not be published. Required fields are marked *

error: Content is protected !!