ಕಟ್ಟಡ ನಿರ್ಮಾಣ ಕಾರ್ಮಿಕರು ಹಾಗೂ ಇತರೆ ನಿರ್ಮಾಣ ಕಾರ್ಮಿಕರಿಗೆ ಕರ್ನಾಟಕ ಸರ್ಕಾರದಿಂದ ಒಂದು ಸಿಹಿಸುದ್ದಿ ಇದೆ ಅದೇನೆಂದರೆ ಕಟ್ಟಡ ನಿರ್ಮಾಣ ಕಾರ್ಮಿಕರು ಅಥವಾ ಇತರೆ ನಿರ್ಮಾಣ ಕಾರ್ಮಿಕರರು ಅಥವಾ ಕಾರ್ಮಿಕ ಕಾರ್ಡ್ ಮಾಡಿಸಿಕೊಂಡು ಇರುವಂತಹ ಕಾರ್ಮಿಕರ ಅವಲಂಬಿತರು ಅವರದೇ ಆದ ಸ್ವಂತ ಉದ್ಯೋಗವನ್ನು ಪ್ರಾರಂಬಿಸುವ ಉದ್ದೇಶದಿಂದ ಉಚಿತ ಹೊಲಿಗೆ ಯಂತ್ರವನ್ನು ನೀಡುವ ಯೋಜನೆಯನ್ನು ಜಾರಿಗೆ ತರಲಾಗಿದೆ.ಆ ಕುರಿತಾದಂತಹ ಸಂಪೂರ್ಣ ಮಾಹಿತಿಯನ್ನು ನಾವಿಂದು ನಿಮಗೆ ತಿಳಿಸಿಕೊಡುತ್ತೇವೆ.
ನೊಂದಾಯಿತ ಕಟ್ಟಡ ನಿರ್ಮಾಣ ಕಾರ್ಮಿಕರು ಮತ್ತು ಇತರೆ ನಿರ್ಮಾಣ ಕಾರ್ಮಿಕರ ಅವಲಂಬಿತರು ಸ್ವ-ಉದ್ಯೋಗವನ್ನು ಮಾಡುವ ದೃಷ್ಟಿಯಿಂದ ಕಾರ್ಮಿಕ ಕಲ್ಯಾಣ ಮಂಡಳಿ ಇಲಾಖೆಯಿಂದ ಉಚಿತವಾಗಿ ಹೊಲಿಗೆ ಯಂತ್ರಗಳನ್ನು ನೀಡುವ ಯೋಜನೆಯೊಂದನ್ನು ಜಾರಿಗೆ ತರಲಾಗಿದೆ. ಆ ಕುರಿತು ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ನಡೆದ ಸಭೆಯಲ್ಲಿ ಈ ರೀತಿಯಾದಂತಹ ನಿರ್ಣಯವನ್ನು ತೆಗೆದುಕೊಳ್ಳಲಾಗಿದೆ. ನಮ್ಮ ಕಾರ್ಮಿಕ ಸಚಿವರಾದಂತಹ ಶಿವರಾಮ್ ಹೆಬ್ಬಾರ್ ಅವರು ಇದಕ್ಕೆ ಸಂಬಂಧಿಸಿದಂತೆ ಕೆಲವು ಮಾಹಿತಿಗಳನ್ನು ನೀಡಿದರು ಕಟ್ಟಡ ನಿರ್ಮಾಣ ಅಥವಾ ಇತರ ಕಾರ್ಮಿಕರು ಅಥವಾ ಕಾರ್ಮಿಕ ಕಾರ್ಡನ್ನು ಹೊಂದಿರುವಂತಹ ಅಭ್ಯರ್ಥಿಗಳು ಸ್ವ ಉದ್ಯೋಗವನ್ನು ಮಾಡುವ ಉದ್ದೇಶದಿಂದ ಉಚಿತವಾದ ಹೊಲಿಗೆ ಯಂತ್ರಗಳನ್ನು ನೀಡಲಾಗುವುದು ಎಂದು ಕಾರ್ಮಿಕ ಸಚಿವರು ತಿಳಿಸಿದ್ದಾರೆ.
ಈ ಒಂದು ಯೋಜನೆಯ ಉದ್ದೇಶಕ್ಕಾಗಿ ಹದಿನೈದು ಕೋಟಿ ರೂಪಾಯಿ ಹಣವನ್ನು ಮೀಸಲಿಡಲಾಗಿದೆ ಎಂದು ಅವರು ತಿಳಿಸಿದ್ದಾರೆ. ಈವರೆಗೂ ಕಾರ್ಮಿಕ ಕಾರ್ಡನ್ನು ಪಡೆಯುವುದಕ್ಕಾಗಿ 28,94,389 ಕಾರ್ಮಿಕರು ಇವರೆಗು ಅರ್ಜಿಯನ್ನು ಸಲ್ಲಿಸಿದ್ದಾರೆ. ಕಾರ್ಮಿಕರಿಗೆ ಉಚಿತ ಹೊಲಿಗೆ ಯಂತ್ರವನ್ನು ನೀಡುವುದರ ಜೊತೆಗೆ ಇನ್ನೂ ಕೆಲವೊಂದು ಸೌಲಭ್ಯಗಳನ್ನು ಕಲ್ಪಿಸಿಕೊಡಲಾಗುವುದು ಎಂಬ ಮಾಹಿತಿಯನ್ನು ಕಾರ್ಮಿಕ ಸಚಿವರು ತಿಳಿಸಿದ್ದಾರೆ. ಜೊತೆಗೆ ಕಾರ್ಮಿಕರಿಗೆ ಸ್ವಸಾಮರ್ಥ್ಯ ಟೂಲ್ ಕಿಟ್ ಗಳ ವಿತರಣೆ ಯೋಜನೆಗೆ ಪ್ರಸಕ್ತ ಸಾಲಿನಲ್ಲಿ ನೂರು ಕೋಟಿ ರೂಪಾಯಿ ಹಾಗೂ ಕಾರ್ಮಿಕ ಮಕ್ಕಳ ಸ್ಪರ್ಧಾತ್ಮಕ ಪರೀಕ್ಷೆ ಯೋಜನೆಗೆ ಎಪ್ಪತ್ತು ಕೋಟಿ ರೂಪಾಯಿ ಮೀಸಲಿಡಲಾಗಿದೆ.
ಕಾರ್ಮಿಕರು ಕೆಲಸದ ನಿಮಿತ್ತ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ವಲಸೆ ಹೋಗುತ್ತಿರುತ್ತಾರೆ ಹಾಗಾಗಿ ಕೆಲಸದ ಸ್ಥಳದಲ್ಲಿಯೇ ವಾಸ ಮಾಡುವುದರಿಂದ ಅವರ ಮಕ್ಕಳ ಪಾಲನೆ ಮತ್ತು ಪೋಷಣೆ ಮಾಡುವ ಉದ್ದೇಶದಿಂದ ಕಟ್ಟಡ ಕಾರ್ಮಿಕರು ವಾಸಿಸುವ ಪ್ರದೇಶದಲ್ಲಿ ಆರು ವರ್ಷದೊಳಗಿನ ಮಕ್ಕಳಿಗೆ ಶಿಶುಪಾಲನಾ ಕೇಂದ್ರ ತೆರೆಯಲಾಗುವುದು.
ಈ ಯೋಜನೆಗೆ ಐವತ್ತು ಕೋಟಿ ರೂಪಾಯಿ ಅನುದಾನ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಈ ರೀತಿಯಾಗಿ ಕಾರ್ಮಿಕರ ಅವಲಂಬಿತರಿಗೆ ಜೀವನವನ್ನು ನಡೆಸುವುದಕ್ಕಾಗಿ ಸ್ವ-ಉದ್ಯೋಗವನ್ನು ಆರಂಭಿಸುವುದಕ್ಕೆ ಈ ರೀತಿಯ ಯೋಜನೆಗಳನ್ನು ಜಾರಿಗೆ ತರಲಾಗಿದೆ ಇದರ ಪ್ರಯೋಜನ ಎಲ್ಲಾ ಕಾರ್ಮಿಕ ವರ್ಗದವರಿಗೆ ಸಿಗಲಿ ಎಂದು ಆಶಿಸೋಣ. ಈ ಮಾಹಿತಿಯನ್ನು ನೀವು ತಿಳಿದುಕೊಳ್ಳುವುದರೊಂದಿಗೆ ನಿಮ್ಮ ಸ್ನೇಹಿತರು ಹಾಗೂ ಪರಿಚಿತರರಿಗು ತಿಳಿಸಿರಿ.