ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಅಂಗನವಾಡಿ ಶಿಕ್ಷಕಿಯರ ಹುದ್ದೆಯ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ ಅಭ್ಯರ್ಥಿಗಳು ಯಾವ ರೀತಿಯಾಗಿ ಅರ್ಜಿಯನ್ನು ಸಲ್ಲಿಸಬೇಕು ಉದ್ಯೋಗ ಸ್ಥಳ ಯಾವುದು ಆಯ್ಕೆಯಾದ ಅಭ್ಯರ್ಥಿಗಳಿಗೆ ವೇತನ ಯಾವ ರೀತಿಯಾಗಿರುತ್ತದೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಾಗ ಎಷ್ಟು ಅರ್ಜಿ ಶುಲ್ಕವನ್ನು ಸಲ್ಲಿಸಬೇಕು ಯಾವ ದಿನಾಂಕದೊಳಗೆ ಸಲ್ಲಿಸಬೇಕು ಈ ಕುರಿತಾದ ಸಂಪೂರ್ಣ ಮಾಹಿತಿಯನ್ನು ನಾವಿಂದು ನಿಮಗೆ ತಿಳಿಸಿಕೊಡುತ್ತೇವೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಇಲಾಖೆಯಿಂದ ನಡೆಯುತ್ತಿರುವ ನೇಮಕಾತಿಯಲ್ಲಿ ಯಾವೆಲ್ಲ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ ಎಂಬುದನ್ನು ಮೊದಲಿಗೆ ತಿಳಿದುಕೊಳ್ಳೋಣ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಅಂಗನವಾಡಿ ಕಾರ್ಯಕರ್ತೆಯರು ಅಂಗನವಾಡಿ ಸಹಾಯಕಿಯರ ಹುದ್ದೆಗೆ ನೇಮಕಾತಿ ನಡೆಯುತ್ತಿದೆ. ಈ ಒಂದು ಹುದ್ದೆಗೆ ಕನಿಷ್ಠ ಹದಿನೆಂಟು ವರ್ಷದಿಂದ ಮೂವತ್ತೈದು ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಅಂಗವಿಕಲ ಅಭ್ಯರ್ಥಿಗಳಿಗೆ ಹತ್ತು ವರ್ಷ ವಯಸ್ಸಿನ ಸಡಿಲಿಕೆಯ ನೀಡಲಾಗಿದೆ.

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಯಾವ ರೀತಿಯಾಗಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ ಎಂಬುದನ್ನು ನೋಡುವುದಾದರೆ ಅಭ್ಯರ್ಥಿಗಳು ವಿದ್ಯಾರ್ಹತೆಯಲ್ಲಿ ಪಡೆದ ಅಂಕ ಮತ್ತು ಬೋನಸ್ ಅಂಕಗಳನ್ನು ಒಳಗೊಂಡಂತೆ ಪಡೆದ ಒಟ್ಟು ಅಂಕಗಳಿಗೆ ಅನುಸಾರವಾಗಿ ಕ್ರೂಡೀಕೃತ ಅಂಕ ಪಟ್ಟಿಯನ್ನು ತಯಾರಿಸಿ ಅರ್ಹತೆ ಮತ್ತು ಮೆರಿಟ್ ಅನುಸಾರವಾಗಿ ಪರಿಶೀಲಿಸಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ಲೈನ್ ಮುಖಾಂತರ ತಮ್ಮ ಅರ್ಜಿಯನ್ನು ಸಲ್ಲಿಸಬೇಕು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಒಟ್ಟು ನೂರಾ ಎಂಬತ್ತು ಹುದ್ದೆಗಳ ನೇಮಕಾತಿ ನಡೆಯುತ್ತಿದ್ದು ಅಂಗನವಾಡಿ ಕಾರ್ಯಕರ್ತೆಯರ ನಲವತ್ತೊಂದು ಹುದ್ದೆಗಳು ಮತ್ತು ಅಂಗನವಾಡಿ ಸಹಾಯಕಿಯರ ನೂರಾ ಮೂವತ್ತೊಂಬತ್ತು ಹುದ್ದೆಗಳ ನೇಮಕಾತಿ ನಡೆಯುತ್ತಿದೆ ಉದ್ಯೋಗ ಸ್ಥಳ ತುಮಕೂರು ಜಿಲ್ಲೆಯಾಗಿದೆ.

ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವ ವಿದ್ಯಾರ್ಹತೆಯನ್ನು ಪಡೆದಿರಬೇಕು ಎಂಬುವುದನ್ನು ನೋಡುವುದಾದರೆ ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸುವವರು ಹತ್ತನೇ ತರಗತಿ ಉತ್ತೀರ್ಣರಾಗಿರಬೇಕು ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸುವವರು ಕನಿಷ್ಠ ನಾಲ್ಕನೇ ತರಗತಿ ಹಾಗೂ ಗರಿಷ್ಠ 9ನೇ ತರಗತಿ ಮುಗಿಸಿರಬೇಕು.

ಈ ಒಂದು ಹುದ್ದೆಗೆ ಈಗಾಗಲೇ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭವಾಗಿದ್ದು ಆಸಕ್ತ ಅಭ್ಯರ್ಥಿಗಳು ಮಾರ್ಚ್ 19 2022ರ ವರೆಗೆ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹುದ್ದೆ ಖಾಲಿ ಇರುವ ಕೇಂದ್ರದ ಗ್ರಾಮದವರನ್ನು ಹೊರತುಪಡಿಸಿ ಬೇರೆ ಗ್ರಾಮದವರಿಗೆ ಅರ್ಜಿ ಸಲ್ಲಿಸುವುದಕ್ಕೆ ಅವಕಾಶ ಇರುವುದಿಲ್ಲ. ಅರ್ಜಿ ಸಲ್ಲಿಸುವಾಗ ಯಾವೆಲ್ಲ ದಾಖಲೆಗಳನ್ನು ಒದಗಿಸಬೇಕಾಗುತ್ತದೆ ಎಂದರೆ ದೃಢೀಕೃತ ಜನನ ಪ್ರಮಾಣ ಪತ್ರ ಅಥವಾ ಜನ್ಮದಿನಾಂಕ ಇರುವ ಎಸ್ ಎಸ್ ಎಲ್ ಸಿ ಅಂಕಪಟ್ಟಿ.

ನಿಗದಿತ ವಿದ್ಯಾರ್ಹತೆಯ ದೃಢೀಕೃತ ಅಂಕಪಟ್ಟಿ ಮುಂದಿನದಾಗಿ ಅಭ್ಯರ್ಥಿಯು ಅದೇ ಗ್ರಾಮದಲ್ಲಿ ವಾಸ್ತವ್ಯವಿರುವ ಬಗ್ಗೆ ತಹಶೀಲ್ದಾರ್ ಅಥವಾ ಉಪ ತಹಶೀಲ್ದಾರ್ ಇದರಿಂದ ಪಡೆದ ಮೂರು ವರ್ಷದ ಒಳಗಿನ ವಾಸ್ತವ್ಯ ಪ್ರಮಾಣ ಪತ್ರ. ಅಭ್ಯರ್ಥಿಗಳ ಜಾತಿ ಪ್ರಮಾಣ ಪತ್ರ ಇವುಗಳನ್ನು ಒದಗಿಸಬೇಕಾಗುತ್ತದೆ. ಈ ಉದ್ಯೋಗ ಮಾಹಿತಿಯನ್ನು ನೀವು ತಿಳಿದುಕೊಳ್ಳುವುದರೊಂದಿಗೆ ನಿಮ್ಮ ಪರಿಚಿತರು ಹಾಗೂ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

Leave a Reply

Your email address will not be published. Required fields are marked *