ಈಗಿನ ದಿನಗಳಲ್ಲಿ ಕಲಿತ ವಿದ್ಯೆಗೆ ತಕ್ಕದಾದ ಉದ್ಯೋಗ ಸಿಗುವುದು ಕಷ್ಟವಾಗಿದೆ, ಸಿಕ್ಕಿರುವ ಉದ್ಯೋಗವನ್ನು ಮಾಡುವ ಅನಿವಾರ್ಯ ಪರಿಸ್ಥಿತಿ ಎಲ್ಲರ ಮುಂದಿದೆ. ಕೆಲವರಿಗೆ ತಮ್ಮ ಜಿಲ್ಲೆಯಲ್ಲಿ ಉದ್ಯೋಗ ಮಾಡಬೇಕೆಂಬ ಆಸೆ ಇರುತ್ತದೆ. ಅದರಂತೆ ರಾಯಚೂರು ಜಿಲ್ಲೆಯ ಜಿಲ್ಲಾ ನಿರ್ಮಿತಿ ಕೇಂದ್ರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದಾರೆ. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೋಡೋಣ.
ರಾಯಚೂರು ಜಿಲ್ಲಾ ನಿರ್ಮಿತಿ ಕೇಂದ್ರದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆ ಹೊಂದಿರುವ ಹಾಗೂ ಆಸಕ್ತಿ ಇರುವ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕು. ರಾಯಚೂರು ಜಿಲ್ಲಾ ನಿರ್ಮಿತಿ ಕೇಂದ್ರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬಹುದಾಗಿದೆ. ಪ್ರಾಜೆಕ್ಟ್ ಡೈರೆಕ್ಟರ್ ಒಂದು ಹುದ್ದೆ, ಜ್ಯೂನಿಯರ್ ಇಂಜಿನಿಯರ್ 2 ಹುದ್ದೆ, ಅಕೌಂಟೆಂಟ್ 1 ಹುದ್ದೆ, ವಾಹನ ಚಾಲಕ ಒಂದು ಹುದ್ದೆ ಖಾಲಿ ಇದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹ ವಿದ್ಯಾರ್ಹತೆ ಹೊಂದಿರಬೇಕು. ಎಸ್ಎಸ್ಎಲ್ ಸಿ ಡಿಪ್ಲೋಮಾ, ಬಿಕಾಂ, ಎಂಕಾಂ, ಬಿಇ, ಬಿಟೆಕ್ ಸಿವಿಲ್, ಎಂಟೆಕ್, ಎಂಇ ವಿದ್ಯಾರ್ಹತೆಯನ್ನು ಹೊಂದಿರಬೇಕು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 22 ವರ್ಷ, ಗರಿಷ್ಠ 28 ವರ್ಷ ವಯೋಮಿತಿಯನ್ನು ಹೊಂದಿರಬೇಕು. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ಹಾಗೂ ಇತರೆ ವಿವರಗಳ ಅನುಭವದ ಬಗ್ಗೆ ಸ್ವದೃಢೀಕರಣ ದಾಖಲಾತಿಗಳೊಂದಿಗೆ ಅರ್ಜಿಯನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಯೋಜನಾ ವ್ಯವಸ್ಥಾಪಕರು, ನಿರ್ಮಿತಿ ಕೇಂದ್ರ ರಾಯಚೂರು ಇವರಿಗೆ ದಿನಾಂಕ 7 ಮಾರ್ಚ್ 2022 ರ ಸಾಯಂಕಾಲ ಐದು ಗಂಟೆ ಮೂವತ್ತು ನಿಮಿಷದೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಫೆಬ್ರವರಿ 8 ಅಂದರೆ ಈಗಾಗಲೆ ಅರ್ಜಿ ಸಲ್ಲಿಸಲು ಆರಂಭವಾಗಿದ್ದು ಮಾರ್ಚ್ ಏಳರವರೆಗೆ ಅರ್ಜಿ ಸಲ್ಲಿಸಬಹುದು. ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಲಾಗುವುದು. ಅರ್ಜಿ ಸಲ್ಲಿಸುವ ಬಗ್ಗೆಯಾಗಲಿ, ದಾಖಲಾತಿಗಳ ಬಗ್ಗೆಯಾಗಲಿ ಅನುಮಾನವಿದ್ದರೆ 08532 – 200260 ಈ ನಂಬರಿಗೆ ಕರೆ ಮಾಡಿ ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಬಹುದು. ಈ ಮಾಹಿತಿಯನ್ನು ತಪ್ಪದೆ ಎಲ್ಲರಿಗೂ ತಿಳಿಸಿ, ಉದ್ಯೋಗಕ್ಕಾಗಿ ಪರದಾಡುತ್ತಿರುವವರಿಗೆ ನಿಮ್ಮ ಒಂದು ಮಾಹಿತಿಯಿಂದ ಅವರ ಜೀವನವೆ ಬದಲಾಗಬಹುದು.