ಮಳೆಯ ಆರ್ಭಟ ಕಡಿಮೆಯಾಯಿತು ಎಂದು ನಿಟ್ಟುಸಿರು ಬಿಡುತ್ತಿದ್ದೀರಾ? ಇಂದಿನಿಂದ 4 ದಿನಗಳ ಕಾಲ ರಾಜ್ಯಾದ್ಯಂತ ವರುಣನ ಅಬ್ಬರ ಮತ್ತೆ ಹೆಚ್ಚಾಗಲಿದೆ. ಇಂದಿನಿಂದ ನಾಲ್ಕು ದಿನ ಕರ್ನಾಟಕ ಮಾತ್ರವಲ್ಲದೆ ತಮಿಳುನಾಡು, ಕೇರಳದಲ್ಲಿ ಕೂಡ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ. ಮೇ 19ರಂದು ಕರ್ನಾಟಕದ ದಕ್ಷಿಣ ಒಳನಾಡು, ಕರಾವಳಿ ಪ್ರದೇಶದಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ.
ಬುಧವಾರ ಭಾರತೀಯ ಹವಾಮಾನ ಇಲಾಖೆಯಿಂದ ಕರ್ನಾಟಕದ ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮೇ ತಿಂಗಳಲ್ಲಿ ಈ ವರ್ಷ ಕರ್ನಾಟಕದಲ್ಲಿ ಮೊದಲ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಅಪಾಯದ ಸನ್ನಿವೇಶ ಎದುರಿಸಲು ಸಿದ್ಧತೆ ಮಾಡಿಕೊಳ್ಳಲು ರೆಡ್ ಅಲರ್ಟ್ ನೀಡಲಾಗುತ್ತದೆ.
ದೇಶದಲ್ಲಿ ಮುಂಗಾರು ಪ್ರವೇಶ ರೈತರ ಮೊಗದಲ್ಲಿ ಸಂತಸ ಮೂಡಿಸಿದೆ. ಆದರೆ ಕರ್ನಾಟಕದಲ್ಲಿ ಆತಂಕ ಛಾಯೆ ಕಾಣುತ್ತಿದೆ. ಕಾರಣ ಹವಾಮಾನ ಇಲಾಖೆ ಮಹತ್ವದ ಎಚ್ಚರಿಕೆ ನೀಡಿದೆ. ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಹಾಗೂ ಪ್ರವಾಹದ ಎಚ್ಚರಿಕೆ ನೀಡಲಾಗಿದೆ. ಮುಂದಿನ 4 ದಿನಗಳಲ್ಲಿ ಕರ್ನಾಟಕ, ತಮಿಳುನಾಡು ಮತ್ತು ಕೇರಳದ ಕೆಲವು ಭಾಗಗಳಲ್ಲಿ ಅತಿ ಹೆಚ್ಚು ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳಭಾಗದಲ್ಲಿ ಸಾಕಷ್ಟು ವ್ಯಾಪಕವಾದ ಮಳೆಯಾಗಲಿದೆ. ಹಾಗೇ, ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಭಾರೀ ಪ್ರಮಾಣದಲ್ಲಿ ಬೀಳುವ ಸಾಧ್ಯತೆಯಿದೆ.
ಈಗಾಗಲೇ ದಕ್ಷಿಣ ಕನ್ನಡ, ಉಡುಪಿ, ಹಾವೇರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಭಾರಿ ಮಳೆಯಾಗಿದೆ. ಕೊಡಗು ಸೇರಿದಂತೆ ಇನ್ನಿತರ ಜಿಲ್ಲೆಗಳಲ್ಲೂ ಮಳೆಯಾಗುತ್ತಿದೆ. ಇದರ ಬೆನ್ನಲ್ಲೇ ಮತ್ತೆ ಪ್ರವಾಹ ಎಚ್ಚರಿಕೆ ರಾಜ್ಯದ ಜನರ ಆತಂಕಕ್ಕೆ ಕಾರಣವಾಗಿದೆ. ದಕ್ಷಿಣ ಕರ್ನಾಟಕದಲ್ಲಿ ನಾಳೆಯಿಂದ ಭಾರಿ ಮಳೆಯಾಗಲಿದೆ. ಈಗಾಗಲೇ ಹಲವು ಭಾಗದಲ್ಲಿ ಭಾರಿ ಮಳೆಯಾಗಿದೆ. ಇದು ಪ್ರವಾಹಕ್ಕೂ ಕಾರಣವಾಗಲಿದೆ ಎಂದು ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಅಸ್ಸಾಂ ಸೇರಿ ಕೆಲ ರಾಜ್ಯಗಳಲ್ಲಿ ಈಗಾಗಲೇ ಪ್ರವಾಹ ಪರಿಸ್ಥಿತಿ ಸೃಷ್ಟಿಯಾಗಿದೆ.
ದಕ್ಷಿಣ ಕರ್ನಾಟಕದಲ್ಲಿ ನಾಳೆಯಿಂದ ಭಾರಿ ಮಳೆಯಾಗಲಿದೆ. ಈಗಾಗಲೇ ಹಲವು ಭಾಗದಲ್ಲಿ ಭಾರಿ ಮಳೆಯಾಗಿದೆ. ಇದು ಪ್ರವಾಹಕ್ಕೂ ಕಾರಣವಾಗಲಿದೆ ಎಂದು ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಅಸ್ಸಾಂ ಸೇರಿ ಕೆಲ ರಾಜ್ಯಗಳಲ್ಲಿ ಈಗಾಗಲೇ ಪ್ರವಾಹ ಪರಿಸ್ಥಿತಿ ಸೃಷ್ಟಿಯಾಗಿದೆ. ಮಳೆಯಿಂದಾಗಿ ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿ ಬೆಂಗಳೂರು ನಗರದ ಹಲವೆಡೆ ಸೋಮವಾರ ಗುಡುಗು ಸಹಿತ ಉತ್ತಮ ಮಳೆಯಾಗಿದ್ದು, ಬೈಕ್ ಸವಾರರು ಮತ್ತು ರಸ್ತೆ ಬದಿ ವ್ಯಾಪಾರಿಗಳು ಪರದಾಡಿದರು. ಕೆಲವೆಡೆ ಸುರಿದ ಮಳೆಯಿಂದಾಗಿ ಸಂಚಾರಿ ದಟ್ಟಣೆ ಉಂಟಾಗಿ ವಾಹನ ಸವಾರರ ಸುಗಮ ಸಂಚಾರಕ್ಕೆ ಅಡ್ಡಿಯುಂಟಾಯಿತು. ದೊಡ್ಡನೆಕ್ಕುಂದಿ, ವರ್ತೂರುಗಳಲ್ಲಿ 6 ಸೆಂ.ಮೀ.ಗಿಂತ ಹೆಚ್ಚು ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಗುರುವಾರ ಬೆಳಗ್ಗಿನಿಂದ ಮಧ್ಯಾಹ್ನದವರೆಗೆ ಮೋಡ ಮತ್ತು ಬಿಸಿಲಿನ ಕಣ್ಣಮುಚ್ಚಾಲೆ ನಡೆದಿತ್ತು. ಆದರೆ ಮಧ್ಯಾಹ್ನ 3ಕ್ಕೆ ನಂತರ ಎಲ್ಲೆಡೆ ಮೋಡಗಳು ಆವರಿಸಿಕೊಂಡು ಮಳೆ ಆರಂಭಗೊಂಡು ರಾತ್ರಿ 9ರವರೆಗೂ ಮುಂದುವರಿದಿತ್ತು. ಇದರಿಂದಾಗಿ ಸಂಜೆಯ ವೇಳೆ ಕಚೇರಿ, ಶಾಲೆ ಬಿಟ್ಟು ತೆರಳುತ್ತಿದ್ದ ಗಾರ್ಮೆಂಟ್ಸ್ ಕಾರ್ಮಿಕರು, ದ್ವಿಚಕ್ರ ವಾಹನ ಸವಾರರು, ವಿದ್ಯಾರ್ಥಿಗಳು, ಫುಡ್ ಡೆಲಿವರಿ ಬಾಯ್ಗಳು ಸೇರಿದಂತೆ ಹಲವರು ಮಳೆಗೆ ನೆನೆದು ಪರದಾಡಿದರು. ಜಿಲ್ಲೆಯಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರ
ಚಂಡಮಾರುತ ಮತ್ತು ಸಮುದ್ರದ ಮೇಲಿನ ಮೇಲ್ಮೈ ಸುಳಿಗಾಳಿಯ ಪರಿಣಾಮ ಮಂಡ್ಯ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದೆ. ಜಿಲ್ಲೆಯಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ.
ಜನವರಿಯಿಂದ ಇಲ್ಲಿಯವರೆಗೆ ಜಿಲ್ಲೆಯಲ್ಲಿ 100.3 ಮಿ.ಮೀ. ವಾಡಿಕೆ ಮಳೆ ಇದ್ದು, 190.4 ಮಿ.ಮೀ. ಮಳೆಯಾಗಿದೆ. ವಾಡಿಕೆಗಿಂತ ಶೇ.90ರಷ್ಟುಹೆಚ್ಚುವರಿ ಮಳೆಯಾಗಿರುವುದು ಸಂತಸ ಮೂಡುವಂತೆ ಮಾಡಿದೆ. ಏಪ್ರಿಲ್ ತಿಂಗಳಿನಿಂದ ಈವರೆಗೆ ವಾಡಿಕೆ ಮಳೆ 87.1 ಮಿ.ಮೀ. ಇದ್ದು ವಾಸ್ತವದಲ್ಲಿ 169.2 ಮಿ.ಮೀ. ಮಳೆಯಾಗಿದೆ. ಶೇ.94.3ರಷ್ಟುಹೆಚ್ಚುವರಿ ಮಳೆಯಾಗಿರುವುದು ದಾಖಲಾಗಿದೆ. ಕೆ.ಆರ್.ಪೇಟೆ- 205.3 ಮಿ.ಮೀ., ಮದ್ದೂರು-155.1 ಮಿ.ಮೀ., ಮಳವಳ್ಳಿ-172 ಮಿ.ಮೀ., ಮಂಡ್ಯ-167.9 ಮಿ.ಮೀ., ನಾಗಮಂಗಲ-146.6 ಮಿ.ಮೀ., ಪಾಂಡವಪುರ-173.0 ಮಿ.ಮೀ., ಶ್ರೀರಂಗಪಟ್ಟಣ ತಾಲೂಕಿನಲ್ಲಿ 169.2 ಮಿ.ಮೀ. ಮಳೆಯಾಗಿದೆ.
ಮೇ 18ರವರೆಗೆ ತಮಿಳುನಾಡಿನಲ್ಲಿ ಮತ್ತು ಮೇ 17ರಂದು ಲಕ್ಷದ್ವೀಪ ಪ್ರದೇಶದಲ್ಲಿ ಭಾರೀ ಮಳೆಯಾಗಲಿದೆ. ಮೇ 18ರಂದು ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲೂ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದಲ್ಲಿ ಮುಂದಿನ 4 ದಿನ ಭಾರೀ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಆರೆಂಜ್ ಅಲರ್ಟ್ ನೀಡಲಾಗಿದೆ. ಮೇ 18ರಂದು ಕರಾವಳಿಯಲ್ಲಿ ಭಾರೀ ಮಳೆಯ ಹಿನ್ನಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಮೇ 19ರಂದು ಕೂಡ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮೇ 20ರಿಂದ ಮಳೆಯ ಪ್ರಮಾಣ ಕಡಿಮೆಯಾಗಲಿದ್ದು, ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ.
ಕರ್ನಾಟಕದ ಉತ್ತರ ಒಳನಾಡಿನ ಜಿಲ್ಲೆಗಳಿಗೆ ಮುಂದಿನ 4 ದಿನ ಹಗುರ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕ ಬಳ್ಳಾಪುರ, ಚಿಕ್ಕಮಂಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರಿನಲ್ಲಿ ಮೇ 17, 18ರಂದು, ಮೇ 19, 20ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಮತ್ತು ಅಕ್ಕಪಕ್ಕದ ಪ್ರದೇಶಗಳಲ್ಲಿ ಕಡಿಮೆ ಉಷ್ಣವಲಯದ ಮಟ್ಟದಲ್ಲಿ ನೈಋತ್ಯ ಮಾರುತಗಳು ಬಲಗೊಳ್ಳುವುದರಿಂದ ಮಳೆಯಾಗುತ್ತಿದೆ ಎಂದು ಹವಾಮಾನ ಕಚೇರಿ ತಿಳಿಸಿದೆ. ಇಂದಿನಿಂದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಹವಾಮಾನ ಇಲಾಖೆ ಆರೆಂಜ್ ಹಾಗೂ ರೆಡ್ ಅಲರ್ಟ್ ಘೋಷಿಸಿದೆ.