ಪ್ರಾದೇಶಿಕ ಭಾಷೆಗಳ ಪ್ರಾಮುಖ್ಯತೆ ಕುರಿತು ಪ್ರಧಾನಿ ನರೇಂದ್ರ ಮೋದಿ ಮಾತನಾಡಿರುವ ಬಗ್ಗೆ ನಟ ಕಿಚ್ಚ ಸುದೀಪ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಹಿಂದಿ ನಮ್ಮ ರಾಷ್ಟ್ರೀಯ ಭಾಷೆ ಹೌದೋ, ಅಲ್ಲವೋ ಎಂಬ ವಿಚಾರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಕೂಡ ಪರೋಕ್ಷವಾಗಿ ಪ್ರಸ್ತಾಪ ಮಾಡಿದ್ದಾರೆ. ಇತ್ತ ಪ್ರಧಾನಿಯವರ ಹೇಳಿಕೆಗೆ ನಟ ಕಿಚ್ಚ ಸುದೀಪ್ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ಹಾಗಾದರೆ ಮೋದಿಯವರ ಹೇಳಿಕೆ ಏನಿರಬಹುದು? ಹಾಗೂ ಅದಕ್ಕೆ ನಮ್ಮ ಕನ್ನಡದ ನಟ ಸುದೀಪ್ ಅವರ ಪ್ರತಿಕ್ರಿಯೆ ಏನಾಗಿತ್ತು ಎನ್ನುವುದನ್ನು ನಾವು ಈ ಲೇಖನದ ಮೂಲಕ ತಿಳಿದುಕೊಳ್ಳೋಣ.

ಹಿಂದಿ ರಾಷ್ಟ್ರ ಭಾಷೆ ಹೌದೋ, ಅಲ್ಲವೋ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಕೆಲ ದಿನಗಳ ಹಿಂದಷ್ಟೇ ರಾಷ್ಟ್ರಾದ್ಯಂತ ದೊಡ್ಡ ಮಟ್ಟದ ಚರ್ಚೆಯೇ ನಡೆದಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧ ಕಾಮೆಂಟ್ ನಡೀತಿತ್ತು. ಸ್ಯಾಂಡಲ್‌ವುಡ್ ಸ್ಟಾರ್ ನಟ ಕಿಚ್ಚ ಸುದೀಪ್ ಹಾಗೂ ಬಾಲಿವುಡ್ ನಟ ಅಜಯ್ ದೇವಗನ್ ನಡುವೆ ಟ್ವೀಟ್ ವಾರ್ ನಡೆದಿತ್ತು. ಇದೀಗ ಈ ವಿವಾದದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಕೂಡ ಪರೋಕ್ಷವಾಗಿ ಪ್ರಸ್ತಾಪ ಮಾಡಿದ್ದಾರೆ. ಇತ್ತ ಪ್ರಧಾನಿಯವರ ಹೇಳಿಕೆಗೆ ನಟ ಕಿಚ್ಚ ಸುದೀಪ್ ಕೂಡ ಪ್ರತಿಕ್ರಿಯೆ ನೀಡಿದ್ದಾರೆ.

ಹಿಂದಿ ರಾಷ್ಟ್ರೀಯ ಭಾಷೆ ಅಲ್ಲ ಎಂಬ ಸ್ಯಾಂಡಲ್ ವುಡ್ ಸ್ಟಾರ್ ನಟ ಕಿಚ್ಚ ಸುದೀಪ್ ಅವರ ಹೇಳಿಕೆಗೆ ಬಾಲಿವುಡ್ ನಟ ಅಜಯ್ ದೇವಗನ್ ಪ್ರತಿಕ್ರಿಯೆ ನೀಡುವ ಮೂಲಕ ಇಬ್ಬರ ನಡುವೆ ಟ್ವಿಟರ್ ವಾಗ್ವಾದ ನಡೆದಿತ್ತು. ಇದೀಗ ಭಾಷೆಗಳ ನಡುವೆ ವಿವಾದ ಹುಟ್ಟಿಕೊಳ್ಳುತ್ತಿರುವ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿರುವ ಹೇಳಿಕೆಯನ್ನು ಸ್ವಾಗತಿಸುವುದಾಗಿ ಕಿಚ್ಚ ಸುದೀಪ್ ಪ್ರತಿಕ್ರಿಯೆ ನೀಡಿದ್ದಾರೆ. ಹಿಂದಿ ಭಾಷೆಯ ಕುರಿತು ನಾನು ಯಾವುದೇ ಜಗಳ ಅಥವಾ ಯಾವುದೇ ರೀತಿಯ ಚರ್ಚೆ ಹುಟ್ಟುಹಾಕಬೇಕೆಂಬ ಉದ್ದೇಶ ಹೊಂದಿರಲಿಲ್ಲ.

ಇದೊಂದು ಅಜೆಂಡಾ ಇಲ್ಲದ ಪ್ರತಿಕ್ರಿಯೆಯಾಗಿತ್ತು. ನನ್ನ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರೇ ಖುದ್ದಾಗಿ ಹೇಳಿರುವ ಮಾತುಗಳನ್ನು ಕೇಳಿಸಿಕೊಳ್ಳುವುದು ನಮಗೊಂದು ಗೌರವ ಮತ್ತು ಸೌಭಾಗ್ಯವಾಗಿದೆ” ಎಂದು ಕಿಚ್ಚ ಸುದೀಪ್ ಎನ್ ಡಿಟಿವಿಗೆ ನೀಡಿರುವ ಸಂದರ್ಶನದಲ್ಲಿ ತಿಳಿಸಿದ್ದಾರೆ. ತಮ್ಮ ಮಾತೃಭಾಷೆಯನ್ನು ಗೌರವದಿಂದ ಕಾಣುವ ಪ್ರತಿಯೊಬ್ಬರಿಗೂ ಪ್ರಧಾನಿಯವರ ಹೇಳಿಕೆಯಿಂದ ಅತೀವ ಸಂತಸ ತಂದಿದೆ ಎಂದು ಸುದೀಪ್ ಹೇಳಿದರು. ಎಲ್ಲಾ ಪ್ರಾದೇಶಿಕ ಭಾಷೆಗಳು ಪೂಜನೀಯ ಎಂಬ ಪ್ರಧಾನಿಯವರ ಹೇಳಿಕೆಯನ್ನು ನಾನು ಸ್ವಾಗತಿಸುತ್ತೇನೆ.

ನಾನು ಕೇವಲ ಕನ್ನಡ ಭಾಷೆಯನ್ನು ಪ್ರತಿನಿಧಿಸುತ್ತಿಲ್ಲ. ನಾನು ಪ್ರತಿಯೊಬ್ಬರ ಮಾತೃಭಾಷೆಯನ್ನು ಗೌರವಿಸುವ ನೆಲೆಗಟ್ಟಿನಲ್ಲಿ ಮಾತನಾಡಿದ್ದೆ. ನಾನು ಅಂದು ನೀಡಿದ್ದ ಹೇಳಿಕೆಗೆ ಇಂದು ಪ್ರಧಾನಿಯರು ನೀಡಿರುವ ಹೇಳಿಕೆ ಅರ್ಥಪೂರ್ಣವಾಗಿದೆ. ನಾವು ಪ್ರಧಾನಿ ಮೋದಿ ಅವರನ್ನು ಕೇವಲ ರಾಜಕಾರಣಿಯನ್ನಾಗಿ ನೋಡುತ್ತಿಲ್ಲ, ನಾವೆಲ್ಲ ಅವರನ್ನು ನಾಯಕನನ್ನಾಗಿ ನೋಡುತ್ತೇವೆ” ಎಂದು ಸುದೀಪ್ ತಿಳಿಸಿದ್ದಾರೆ.

ನಾವು ಭಾರತದ ಎಲ್ಲಾ ಸ್ಥಳೀಯ ಭಾಷೆಗಳನ್ನು ಗೌರವಿಸುತ್ತೇವೆ, ಆ ಭಾಷೆಗಳಲ್ಲಿ ದೇಶದ ಸಂಸ್ಕೃತಿ ಪ್ರತಿಫಲನಗೊಳ್ಳುತ್ತದೆ. ಅವುಗಳನ್ನೆಲ್ಲ ಬಿಜೆಪಿ ಪೂಜನೀಯವಾಗಿ ಕಾಣುತ್ತದೆ. ಅಷ್ಟು ಮಾತ್ರವಲ್ಲ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಎಲ್ಲ ಸ್ಥಳೀಯ ಭಾಷೆಗಳಿಗೂ ಆದ್ಯತೆ ನೀಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದರು. ಇನ್ನೂ ಮುಂದುವರೆದು ಮಾತನಾಡಿದ ಸುದೀಪ್, ಭಾಷಾ ಹೇರಿಕೆ ಇರಬಾರದು.

ನಾವು ಇತರ ಭಾಷೆಗಳನ್ನು ಕಲಿತಿದ್ದರೆ, ಇತರರು ಸಹ ಕಲಿಯಬೇಕು. ಆಲೋಚನೆಗಳು ಮತ್ತು ಆಲೋಚನೆಗಳನ್ನು ಹೇರುವುದು ಒಳ್ಳೆಯದಲ್ಲ ಎಂದಿದ್ದಾರೆ. ನಾವೆಲ್ಲರೂ ನಾವಿರುವ ರೀತಿಯಲ್ಲಿ ಸಹಬಾಳ್ವೆ ನಡೆಸಬಹುದು. ಯಾವುದೇ ಹೇರಿಕೆ ಇರಬಾರದು ಎಂದು ನಾನು ಬಲವಾಗಿ ನಂಬುತ್ತೇನೆ ಅಂತ ಸುದೀಪ್ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

WhatsApp Group Join Now
Telegram Group Join Now

Leave a Reply

Your email address will not be published. Required fields are marked *

error: Content is protected !!