ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಪೆಚ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿರುವ ಕೇಂದ್ರ ಸರ್ಕಾರ ಇದರ ನಡುವೆಯೇ ಗ್ಯಾಸ್ ಸಿಲಿಂಡರ್ ಮೇಲೆ ಕೂಡ ಘೋಷಣೆ ಮಾಡಿದೆ. ಶನಿವಾರ ಗ್ಯಾಸ್ ಸಿಲಿಂಡರ್ ಬೆಲೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಶನಿವಾರ ಮಹತ್ವದ ಘೋಷಣೆಗಳನ್ನು ಮಾಡಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸುವುದಾಗಿ ಘೋಷಿಸಿದ್ದರೆ, ಗ್ಯಾಸ್ ಸಿಲಿಂಡರ್‌ಗಳ ಮೇಲೆ 200ರೂ. ಸಬ್ಸಿಡಿಯನ್ನು ಸಹ ಘೋಷಿಸಿದೆ. ಇದರ ಕುರಿತಾಗಿ ಹೆಚ್ಚಿನ ಮಾಹಿತಿಯನ್ನು ನಾವು ಈ ಲೇಖನದ ಮೂಲಕ ತಿಳಿದುಕೊಳ್ಳೋಣ.

ಅಡುಗೆ ಅನಿಲ ಸಿಲಿಂಡರ್ ದರ ಹೆಚ್ಚಳ ಸೇರಿದಂತೆ ಹಣದುಬ್ಬರ ಏರಿಕೆಯಿಂದ ಕಂಗೆಟ್ಟಿರುವ ಜನಸಾಮಾನ್ಯರಿಗೆ ತುಸು ನೆಮ್ಮದಿ ನೀಡುವ ಸುದ್ದಿಯೊಂದನ್ನು ಕೇಂದ್ರ ಸರ್ಕಾರ ಘೋಷಿಸಿದೆ. ಬಡ ವರ್ಗದ ಜನರಿಗೆ ವಾರ್ಷಿಕ 12 ಸಿಲಿಂಡರ್ ಗಳ ಮೇಲೆ LPG ಸಬ್ಸಿಡಿಯನ್ನು ಕೇಂದ್ರ ಸರ್ಕಾರ ಘೋಷಿಸಿದೆ. ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳ ಮೇಲಿನ ತೆರಿಗೆ ಕಡಿತದ ಬೆನ್ನಲ್ಲೇ ಸರ್ಕಾರ ಈ ನಿರ್ಧಾರ ಪ್ರಕಟಿಸಿದೆ. ಕರ್ನಾಟಕ ರಾಜ್ಯದ 31.45 ಲಕ್ಷ ಫಲಾನಭವಿಗಳು ಇದರ ಲಾಭವನ್ನು ಪಡೆಯಲಿದ್ದಾರೆ.

ಇಂದು ಜಗತ್ತು ಕಷ್ಟದ ಕಾಲವನ್ನು ದಾಟುತ್ತಿದೆ. ಕೋವಿಡ್ -19 ಸಾಂಕ್ರಾಮಿಕ ರೋಗದಿಂದ ಜಗತ್ತು ಚೇತರಿಸಿಕೊಳ್ಳುತ್ತಿರುವಾಗಲೂ, ಉಕ್ರೇನ್ ಸಂಘರ್ಷವು ಪೂರೈಕೆ ಸರಪಳಿ ಸಮಸ್ಯೆಗಳನ್ನು ಮತ್ತು ವಿವಿಧ ಸರಕುಗಳ ಕೊರತೆಯನ್ನು ತಂದಿದೆ. ಇದು ಬಹಳಷ್ಟು ದೇಶಗಳಲ್ಲಿ ಹಣದುಬ್ಬರ ಮತ್ತು ಆರ್ಥಿಕ ಸಂಕಷ್ಟಕ್ಕೆ ಕಾರಣವಾಗುತ್ತಿದೆ ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

LPG ಸಿಲಿಂಡರ್ ಸಬ್ಸಿಡಿ ಬಗ್ಗೆ ಇತ್ತೀಚೆಗೆ ಟ್ವೀಟ್ ಮೂಲಕ ಮಾಹಿತಿ ನೀಡಿರುವ ನಿರ್ಮಲಾ ಸೀತಾರಾಮನ್, ‘ ಪ್ರಧಾನ ಮಂತ್ರಿ ಉಜ್ವಲ ಯೋಜನೆಯ 9 ಕೋಟಿಗೂ ಅಧಿಕ ಫಲಾನುಭವಿಗಳಿಗೆ ಪ್ರತಿ LPG ಸಿಲಿಂಡರ್ 12ಸಿಲಿಂಡರ್ ತನಕ ಮೇಲೆ 200ರೂಪಾಯಿ ಸಬ್ಸಿಡಿ ನೀಡುತ್ತಿದ್ದೇವೆ. ಇದು ನಮ್ಮ ತಾಯಂದಿರು ಹಾಗೂ ಅಕ್ಕಂದಿರಿಗೆ ನೆರವು ನೀಡಲಿದೆ. ಈ ನಿರ್ಣಯದಿಂದ ಸರ್ಕಾರದ ಬೊಕ್ಕಸದಿಂದ ವಾರ್ಷಿಕ ಸುಮಾರು 6,100 ಕೋಟಿ ರೂಪಾಟಿ ಖರ್ಚಾಗಲಿದೆ. 2020ರ ಜೂನ್ ಬಳಿಕ ಉಜ್ವಲ ಯೋಜನೆಯ ಫಲಾನುಭವಿಗಳು ಸೇರಿದಂತೆ ಎಲ್ಲ ಬಳಕೆದಾರರಿಗೂ ಸಬ್ಸಿಡಿ ನಿಲ್ಲಿಸಲಾಗಿದ್ದು, ಮಾರ್ಕೆಟ್ ದರದಲ್ಲೇ ಎಲ್‌ ಪಿಜಿ ಸಿಲಿಂಡರ್ ಖರೀದಿಸುತ್ತಿದ್ದರು.

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ 14.2ಕೆಜಿ ಎಲ್ ಪಿಜಿ ಸಿಲಿಂಡರ್ ಬೆಲೆ 1,003 ರೂಪಾಗಿ ಇದೆ. ಸರ್ಕಾರದ ಸಬ್ಸಿಡಿ ನೀಡುವ ನಿರ್ಧಾರದಿಂದ ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಪ್ರತಿ ಸಿಲಿಂಡರ್ ಮೇಲೆ 200ರೂ. ಸಬ್ಸಿಡಿ ನೇರವಾಗಿ ಅವರ ಬ್ಯಾಂಕ್ ಖಾತೆಗಳಿಗೆ ಜಮೆ ಆಗಲಿದೆ. ಇದ್ರಿಂದ ಅವರಿಗೆ ಪ್ರತಿ 14.2 ಕೆ.ಜಿ. LPG ಸಿಲಿಂಡರ್ ಗೆ 803ರೂ. ಬೆಲೆ ನೀಡಿದಂತಾಗುತ್ತದೆ.

ರಾಜ್ಯ ದ 31.45 ಲಕ್ಷ ಫಲಾನುಭವಿಗಳಿಗೆ ಪ್ರಯೋಜನ ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಸಬ್ಸಿಡಿ ಹಣ ನೀಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿರುವ ಹಿನ್ನೆಲೆಯಲ್ಲಿ ರಾಜ್ಯ ದ 31.45 ಲಕ್ಷ ಫಲಾನುಭವಿಗಳಿಗೆ ಇದರ ಪ್ರಯೋಜನ ಸಿಗಲಿದೆ. ರಾಜ್ಯದಲ್ಲಿ ಸದ್ಯ 14.2 ಕೆಜಿ ಗ್ಯಾಸ್ ಸಿಲಿಂಡರ್ ದರ 1,002 ರೂ. ಇದೆ. ತಿಂಗಳ ಕೊನೆಯಲ್ಲಿ ಕೇಂದ್ರ ಸರ್ಕಾರ ಸಬ್ಸಿಡಿ ಹಣವನ್ನು ಲೆಕ್ಕ ಹಾಕಿ ಗ್ಯಾಸ್ ಏಜೆನ್ಸಿಗಳಿಗೆ ಕಳುಹಿಸಲಿದೆ. ಆ ಬಳಿಕ ಗ್ರಾಹಕರ ಖಾತೆಗೆ 200 ರೂ. ಜಮೆಯಾಗಲಿದೆ.

ರಾಜ್ಯದಲ್ಲಿ ಉಜ್ವ ಲ ಯೋಜನೆಯಡಿ ಇಂಡಿಯನ್ ಆಯಿಲ್ ಕಾಪೋರೇಷನ್ ಲಿ.ನಲ್ಲಿ (IOC) 13,93,748, ಭಾರತ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿ. (BPCL) 7,40,897, ಹಾಗೂ ಹಿಂದೂಸ್ತಾನ್ ಪೆಟ್ರೋ ಲಿಯಂ ಕಾರ್ಪೋರೇಷನ್ ಲಿ. ನಲ್ಲಿ (HPCL) 10,11,042 ಸೇರಿದಂತೆ ಒಟ್ಟು 31,45,687 ಗ್ರಾಹಕರಿದ್ದಾರೆ. ಈ ಹಿಂದೆ ಗ್ಯಾಸ್ ಏಜೆನ್ಸಿಗಳು ಹಾಗೂ ಬ್ಯಾಂಕುಗಳ ಎಡವಟ್ಟಿನಿಂದ ಅನೇಕ ಗ್ರಾಹಕರ ಬ್ಯಾಂಕ್ ಖಾತೆಗೆ ಸಬ್ಸಿಡಿ ಹಣ ಜಮೆ ಆಗದೆ ತೊಂದರೆಯಾಗಿತ್ತು. ಹೀಗಾಗಿ ಗ್ಯಾಸ್ ಸಂಪರ್ಕ ಹೊಂದಿರುವ ಫಲಾನುಭವಿಗಳು ಅವರ ಹೆಸರಿನಲ್ಲಿರುವ ಬ್ಯಾಂಕ್ ಖಾತೆ ವಿವರಗಳು ಹಾಗೂ ಆಧಾರ್ ಸಂಖ್ಯೆಯನ್ನು ಸರಿಯಾಗಿ ನೀಡಬೇಕು. ಬ್ಯಾಂಕ್ ಐಎಫ್ ಸಿ ಕೋಡ್ ಕೂಡ ನೀಡಬೇಕು. ಈ ಎಲ್ಲ ಮಾಹಿತಿ ಸಮರ್ಪಕವಾಗಿದ್ದರೆ ಗ್ರಾಹಕರ ಖಾತೆಗೆ ಸಬ್ಸಿಡಿ ಹಣ ಬರುತ್ತದೆ.

WhatsApp Group Join Now
Telegram Group Join Now

Leave a Reply

Your email address will not be published. Required fields are marked *

error: Content is protected !!