ರೈತರ ಆದಾಯ ದ್ವಿಗುಣಗೊಳಿಸುವುದಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿವೆ. ಆದರೆ ರೈತರಿಗಾಗಿ ಜಾರಿಗೆ ತಂದ ಯೋಜನೆಗಳು ಸರಿಯಾದ ಮಾಹಿತಿಯ ಕೊರತೆಯಿಂದಾಗಿ ರೈತರಿಗೆ ಸರ್ಕಾರದ ಲಾಭ ಸಿಗುತ್ತಿಲ್ಲ. ಕೃಷಿ ಯಾಂತ್ರೀಕರಣ ಯೋಜನೆಯಂತೆ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಡಿಯಲ್ಲಿಯೂ ಸಹ ರೈತರಿಗೆ ಟ್ರ್ಯಾಕ್ಟರ್ ಖರೀದಿಗೆ ಸಬ್ಸಿಡಿ ಸಿಗುತ್ತದೆ. 20 ಹೆಚ್.ಪಿ. ಅಶ್ವಶಕ್ತಿ ಟ್ರ್ಯಾಕ್ಟರ್ ಖರೀದಿಗಾಗಿ ರೈತರಿಗೆ ಸಹಾಯಧನ ಸಿಗಲಿದೆ. ಈ ಯೋಜನೆಯಡಿ ರೈತರು ಎಷ್ಟು ಸಬ್ಸಿಡಿ ಪಡೆಯುತ್ತಾರೆ. ಯಾವ ಯಾವ ದಾಖಲೆಗಳು ಬೇಕು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.
ಕೇಂದ್ರ ಸರ್ಕಾರ ರೈತರಿಗೆ ಟ್ರ್ಯಾಕ್ಟರ್ ಖರೀದಿಸಲು ಸಬ್ಸಿಡಿ ಪಿಎಂ ಕಿಸಾನ್ ಟ್ರ್ಯಾಕ್ಟರ್ ಯೋಜನೆ ಅಡಿಯಲ್ಲಿ ನೀಡುತ್ತದೆ. ಇದರ ಅಡಿಯಲ್ಲಿ ರೈತರು ಯಾವುದೇ ಕಂಪನಿಯ ಟ್ರ್ಯಾಕ್ಟರ್‌ಗಳನ್ನು ಅರ್ಧ ಬೆಲೆಗೆ ಖರೀದಿಸಬಹುದು. ಉಳಿದ ಅರ್ಧದಷ್ಟು ಹಣವನ್ನು ಸರ್ಕಾರವು ಸಹಾಯಧನವಾಗಿ ನೀಡುತ್ತದೆ. ರೈತರಿಗೆ ವಿವಿಧ ಘಟಕಗಳ ನಿರ್ಮಾಣಕ್ಕೆ ಮತ್ತು ಟ್ರ್ಯಾಕ್ಟರ್ ಖರೀದಿಗಾಗಿ ಸಹಾಯಧನ ನೀಡಲಾಗುವುದು. ಇತ್ತೀಚೆಗೆ ಕೂಲಿಕಾರ್ಮಿಕರ ವೆಚ್ಚ ಹೆಚ್ಚಾಗುತ್ತಿದ್ದರಿಂದ ರೈತರ ಕೃಷಿ ಕೂಲಿಕಾರ್ಮಿಕರ ವೆಚ್ಚ ತಗ್ಗಿಸಲು ವಿವಿಧ ಘಟಕಗಳ ನಿರ್ಮಾಣಕ್ಕೆ ಹಾಗೂ ಟ್ರ್ಯಾಕ್ಟರ್ ಖರೀದಿಗೆ ಸಹಾಯಧನ ನೀಡಲಾಗುತ್ತಿದೆ.
ರೈತರ ಆದಾಯವನ್ನು ಹೆಚ್ಚಿಸಲು ಮತ್ತು ಅವರಿಗೆ ಆರ್ಥಿಕವಾಗಿ ಸಹಾಯ ಮಾಡಲು ಮೋದಿ ಸರ್ಕಾರ ಅನೇಕ ಯೋಜನೆಗಳನ್ನು ನೀಡುತ್ತಿದೆ. ಪಿಎಂ ಕಿಸಾನ್ ಅಡಿಯಲ್ಲಿ ರೈತರ ಖಾತೆಗೆ ವಾರ್ಷಿಕ 6000 ರೂ. ರೈತರಿಗೂ ಕೃಷಿಗೆ ಹಲವು ಬಗೆಯ ಯಂತ್ರಗಳು ಬೇಕು. ಇಂತಹ ಪರಿಸ್ಥಿತಿಯಲ್ಲಿ ರೈತರ ನೆರವಿಗೆ ಕೇಂದ್ರ ಸರ್ಕಾರ ಟ್ರ್ಯಾಕ್ಟರ್ ಖರೀದಿಗೆ ಸಬ್ಸಿಡಿ ನೀಡುತ್ತಿದೆ. ಈ ಸಬ್ಸಿಡಿಯನ್ನು ‘ಪಿಎಂ ಕಿಸಾನ್ ಟ್ರ್ಯಾಕ್ಟರ್ ಯೋಜನೆ’ ಅಡಿಯಲ್ಲಿ ನೀಡಲಾಗುತ್ತಿದೆ. ಇದಲ್ಲದೆ, ಅನೇಕ ರಾಜ್ಯ ಸರ್ಕಾರಗಳು ತಮ್ಮದೇ ಮಟ್ಟದಲ್ಲಿ ರೈತರಿಗೆ ಟ್ರ್ಯಾಕ್ಟರ್‌ಗಳ ಮೇಲೆ 20 ರಿಂದ 50% ರಷ್ಟು ಸಹಾಯಧನವನ್ನು ನೀಡುತ್ತವೆ.
ರೈತರಿಗೆ ಕೃಷಿಗೆ ಟ್ರ್ಯಾಕ್ಟರ್ ಬಹಳ ಮುಖ್ಯ. ಆದರೆ ಆರ್ಥಿಕ ಸ್ಥಿತಿ ಹದಗೆಟ್ಟ ಕಾರಣ ಟ್ರ್ಯಾಕ್ಟರ್ ಇಲ್ಲದ ತುಂಬಾ ಜನ ರೈತರು ಪರದಾಡುತ್ತಿದ್ದಾರೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಟ್ರ್ಯಾಕ್ಟರ್ ಅಥವಾ ಎತ್ತುಗಳನ್ನು ಬಾಡಿಗೆಗೆ ತೆಗೆದುಕೊಳ್ಳಬೇಕಾಗುತ್ತದೆ. ಇದಕ್ಕಾಗಿ ರೈತರ ನೆರವಿಗೆ ಸರಕಾರ ಈ ಯೋಜನೆ ತಂದಿದೆ. ಪಿಎಂ ಕಿಸಾನ್ ಟ್ರಾಕ್ಟರ್ ಯೋಜನೆ ಅಡಿಯಲ್ಲಿ ರೈತರಿಗೆ ಅರ್ಧ ಬೆಲೆಗೆ ಟ್ರ್ಯಾಕ್ಟರ್‌ಗಳನ್ನು ನೀಡಲಾಗುತ್ತದೆ. ಟ್ರ್ಯಾಕ್ಟರ್ ನೊಂದಿಗೆ ರೈತರು ಹಣ್ಣಿನ ಬೆಳೆಗಳಾದ ಬಾಳೆ, ದ್ರಾಕ್ಷಿ, ಡ್ರ್ಯಾಗನ್ ಫ್ರೂಟ್, ದಾಳಿಂಬೆ, ಮಾವು, ಸೇಬು, ಸಪೋಟಾ, ಸೀತಾಫಲ ಸೇರಿದಂತೆ ಇನ್ನಿತರ ಹಣ್ಣುಗಳ ಪ್ರದೇಶ ವಿಸ್ತರಣೆಗೆ ಸಹಾಯಧನ ನೀಡಲಾಗುವುದು.
ಇದರೊಂದಿಗೆ ಪಾಲಿಹೌಸ್ ನಿರ್ಮಾಣಕ್ಕೆ, ಅರಿಶಿಣ, ಈರುಳ್ಳಿ ಶೇಖರಣ ಘಟಕ ನಿರ್ಮಾಣಕ್ಕೂ ಸಹಾಯಧನ ಸಿಗಲಿದೆ. ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿಯಲ್ಲಿ ತೋಟಗಾರಿಕಾ ಯಾಂತ್ರೀಕರಣ ಕಾರ್ಯಕ್ರಮದಡಿಯಲ್ಲಿ ಸಾಮಾನ್ಯ ವರ್ಗಕ್ಕೆ ಶೇ. 40 ರಷ್ಟು ಸಹಾಯಧನ ನೀಡಲಾಗುವುದು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಶೇ. 50 ರಷ್ಟು ಪ್ರೋತ್ಸಾಹಧನ ನೀಡಲಾಗುವುದು.
ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿಯಲ್ಲಿ ತೋಟಗಾರಿಕೆ ಇಲಾಖೆಯ ವತಿಯಿಂದ ರೈತರು ಸಹಾಯಧನ ಪಡೆಯಲು ಸ್ವಂತ ಜಮೀನಿ ಹೊಂದಿರಬೇಕು. ಆಧಾರ್ ಕಾರ್ಡ್ ಇರಬೇಕು. ಮೊಬೈಲ್ ನಂಬರ್, ಜಮೀನಿನ ಪಹಣಿ ಇರಬೇಕು. ಬ್ಯಾಂಕ್ ಪಾಸ್ ಬುಕ್ ಹೊಂದಿರಬೇಕು. ಇತ್ತೀಚಿನ ಪಾಸ್ಪೋರ್ಟ್ ಸೈಜಿನ ಫೋಟೋ ಇರಬೇಕು. ಫ್ರೂಟ್ಸ್ ಐಡಿ ಹೊಂದಿರಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಾಗಿದ್ದರೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಇರಬೇಕು. ರೈತರು ಮೇಲಿನ ದಾಖಲೆಗಳೊಂದಿಗೆ ಅರ್ಜಿಸಲ್ಲಿಸಬೇಕು.ತೋಟಗಾರಿಕೆ ಇಲಾಖೆಯ ವತಿಯಿಂದ ಸಹಾಯಧನ ಪಡೆಯಲು ಮತ್ತೇನಾದರೂ ದಾಖಲೆ ಬೇಕಾದರೆ ಹತ್ತಿರದರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ಅಗತ್ಯ ಮಾಹಿತಿ ಪಡೆದು ಅರ್ಜಿ ಸಲ್ಲಿಸಬೇಕು.
ರಾಜ್ಯದ ಪ್ರತಿಯೊಂದು ಹೋಬಳಿ ಕೇಂದ್ರದಲ್ಲಿ ಒಂದು ರೈತ ಸಂಪರ್ಕ ಕೇಂದ್ರವಿರುತ್ತದೆ. ರೈತರು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಹೋಗಿ ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆಯಿಂದ ಸಿಗುವ ಸೌಲಭ್ಯಗಳ ಮಾಹಿತಿ ಪಡೆಯಬಹುದು. ಅಥವಾ ತೋಟಗಾರಿಕೆ ಇಲಾಖೆಗೆ ಭೇಟಿ ನೀಡಿ ಲಭ್ಯತೆಯ ಆಧಾರದ ಮೇಲೆ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯಬಹುದು. ಕೃಷಿ ಯಾಂತ್ರೀಕರಣ ಯೋಜನೆಯಡಿಯಲ್ಲಿ ಟ್ರ್ಯಾಕ್ಟರ್ ಪಡೆಯಲು ರೈತರು ಕೃಷಿ ಇಲಾಖೆಯಲ್ಲಿ ಅರ್ಜಿ ಸಲ್ಲಿಸಬೇಕಾಗುತ್ತದೆ. ಅದೇ ರೀತಿ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿಯಲ್ಲಿ ಸೌಲಭ್ಯ ಪಡೆಯಬೇಕಾದರೆ ರೈತರು ತೋಟಗಾರಿಕೆ ಇಲಾಖೆಯಲ್ಲಿ ಅರ್ಜಿ ಸಲ್ಲಿಸಬೇಕಾಗುತ್ತದೆ.
ಅರ್ಜಿ ನಮೂನೆಯನ್ನು ಸ್ವೀಕರಿಸಿದ ನಂತರ, ನೀವು ಅದರಲ್ಲಿ ಕೇಳಲಾದ ಹೆಸರು, ವಿಳಾಸ ಮುಂತಾದ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಬೇಕು ಮತ್ತು ನಂತರ ನಿಮ್ಮ ಎಲ್ಲಾ ದಾಖಲೆಗಳನ್ನು ಅರ್ಜಿ ನಮೂನೆಯೊಂದಿಗೆ ಲಗತ್ತಿಸಿ ಮತ್ತು ಅದನ್ನು ಜನ ಸೇವಾ ಕೇಂದ್ರಕ್ಕೆ ಸಲ್ಲಿಸಬೇಕು.ಆನ್‌ಲೈನ್ ಕಿಸಾನ್ ಟ್ರ್ಯಾಕ್ಟರ್ ಯೋಜನೆ ಅರ್ಜಿ ನಮೂನೆ ಕೆಳಗೆ ನೀಡಿರುವ ಅಧಿಕೃತ ವೆಬ್‌ಸೈಟ್ ಕಿಸಾನ್ ಟ್ರ್ಯಾಕ್ಟರ್ ಯೋಜನೆ ರಾಜ್ಯವಾರು ನೇರ ಲಿಂಕ್‌ಗೆ ಭೇಟಿ ನೀಡಿ.
ಮುಖಪುಟದಲ್ಲಿ, ರಾಜ್ಯ ವೈಸ್ ಯೋಜನಾ ಲಿಂಕ್ ಅನ್ನು ಕ್ಲಿಕ್ ಮಾಡಿ.
ಅರ್ಜಿ ನಮೂನೆಯ ಪುಟವು ಪರದೆಯ ಮೇಲೆ ಕಾಣಿಸುತ್ತದೆ. ಈಗ ಅಗತ್ಯವಿರುವ ವಿವರಗಳನ್ನು ನಮೂದಿಸಿ ಹೆಸರು, ತಂದೆ/ಪತಿ ಹೆಸರು, ಹುಟ್ಟಿದ ದಿನಾಂಕ, ಲಿಂಗ, ಜಾತಿ ಮತ್ತು ಇತರ ಮಾಹಿತಿಯಂತಹ ಎಲ್ಲಾ ವಿವರಗಳನ್ನು ನಮೂದಿಸಿ ಮತ್ತು ದಾಖಲೆಗಳನ್ನು ಅಪ್‌ಲೋಡ್ ಮಾಡಬೇಕಾಗುತ್ತದೆ.