ತಮಿಳು, ಕನ್ನಡ, ಹಿಂದಿ ಭಾಷೆಯಲ್ಲಿ ನಟಿಸಿದ ಸಂಜನಾ ಗಲ್ರಾನಿ ಅವರ ಸೀಮಂತ ನಡೆದ ವಿಷಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದೀಗ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದು ನಾಮಕರಣ ಕಾರ್ಯಕ್ರಮವನ್ನು ಮಾಡಿಕೊಂಡಿದ್ದಾರೆ ಅದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೋಡೋಣ.
ಸ್ಯಾಂಡಲ್ ವುಡ್ ನಟಿ ಸಂಜನಾ ಗಲ್ರಾನಿ ಒಂದಲ್ಲ ಒಂದು ವಿಷಯಕ್ಕೆ ಸುದ್ದಿಯಲ್ಲಿ ಇರುತ್ತಾರೆ. ಇತ್ತೀಚೆಗೆ ಗರ್ಭಿಣಿಯಾಗಿದ್ದು ಅವರ ಸೀಮಂತ ಕಾರ್ಯಕ್ರಮ ನಡೆಯಿತು. ಗಂಡು ಮಗುವಿಗೆ ಜನ್ಮ ನೀಡಿದ ಸಂಜನಾ ಅವರು ಮಗುವಿನ ಪಾಲನೆಯಲ್ಲಿ ತೊಡಗಿಕೊಂಡಿದ್ದಾರೆ. ಸಂಜನಾ ಅವರ ಮನೆಗೆ ಹೊಸ ಅತಿಥಿಯಾಗಿ ಅವರ ಮಗನ ಆಗಮನವಾಗಿ ಒಂದು ತಿಂಗಳು ಕಳೆದಿದೆ. ಇದೀಗ ತಮ್ಮ ಮಗುವಿನ ನಾಮಕರಣ ಮಾಡುವ ಸಂತೋಷದಲ್ಲಿ ಇದ್ದಾರೆ. ಸಂಜನಾ ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟ ಮೇಲೆ ಸಿನಿಮಾದಿಂದ ಕೊಂಚ ಬ್ರೇಕ್ ತೆಗೆದುಕೊಂಡಿದ್ದರು.
2020 ರಲ್ಲಿ ಗುರುಹಿರಿಯರ ಸಮ್ಮುಖದಲ್ಲಿ ಅಜೀಜ್ ಎಂಬುವವರ ಜೊತೆ ವಿವಾಹವಾದರು. ಇದೀಗ ಅವರ ಮುದ್ದಾದ ಗಂಡು ಮಗುವಿನ ನಾಮಕರಣ ಶಾಸ್ತ್ರ ನಡೆದು ಅಲಾರಿಕ್ ಎಂಬ ಹೆಸರನ್ನು ಇಡಲಾಗಿದೆ ಎಂದು ಸಂಜನಾ ಅವರೆ ಹೇಳಿಕೊಂಡಿದ್ದಾರೆ. ಈ ಕುರಿತು ಸಂಜನಾ ಅವರು ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಆಕ್ಟೀವ್ ಆಗಿರುವ ಸಂಜನಾ ಅವರು ತಮ್ಮ ಮಗುವನ್ನು ಎತ್ತಿಕೊಂಡಿರುವ ಹಾಗೂ ಗಂಡ, ಮಗುವಿನ ಜೊತೆ ಇರುವ ಫೋಟೊ, ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ ಅದು ವೈರಲ್ ಆಗಿದೆ.
ಸಂಜನಾ ಅವರು ಏನಾದರೂ ಸುದ್ದಿಯಲ್ಲಿ ಇದ್ದು ಡ್ರ ಗ್ಸ್ ದಂಧೆಗೆ ಸಂಬಂಧಿಸಿ ಜೈಲು ಪಾಲಾಗಿದ್ದರು. ಅಲ್ಲಿಂದ ಹೊರಬಂದ ನಂತರ ಅವರು ಯಾವುದೆ ಸಿನಿಮಾದಲ್ಲಿ ಕಾಣಿಸಿಕೊಂಡಿಲ್ಲ. ಸಂಜನಾ ಅವರು ಕನ್ನಡದಲ್ಲಿ ಅನೇಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಗಂಡ ಹೆಂಡತಿ ಎಂಬ ಸಿನಿಮಾದಲ್ಲಿ ನಟಿಸಿ ಭಾರಿ ಸುದ್ದಿಯಾಗಿದ್ದರು. ಕನ್ನಡದಲ್ಲಿ ಸತ್ಯ ಮೇವ ಜಯತೆ, ಮೈಲಾರಿ, ಈ ಸಂಜೆ, ಮಸ್ತ್ ಮಜಾ ಮಾಡಿ, ಸಾಗರ, ಅಗ್ರಜ ಮುಂತಾದ ಸಿನಿಮಾಗಳಲ್ಲಿ ನಟಿಸಿದ್ದಾರೆ. ಸಂಜನಾ ಅವರು ನಟಿ ಮಾತ್ರವಲ್ಲದೆ ಮೊಡೆಲ್ ಕೂಡ ಆಗಿದ್ದರು. ಒಟ್ಟಿನಲ್ಲಿ ಸಂಜನಾ ಅವರು ತಮ್ಮ ಮಗುವಿನೊಂದಿಗೆ ಸಂತೋಷದಿಂದ ಇರಲಿ ಎಂದು ಆಶಿಸೋಣ.
ಶ್ರೀ ಕಾಳಿಕಾ ದುರ್ಗಾ ಜೋತಿಷ್ಯ ಪೀಠ ಪ್ರಧಾನ್ ತಾಂತ್ರಿಕ ಶ್ರೀ ಶ್ರೀನಿವಾಸ್ ರಾಘವನ್ ಆಚಾರ್ಯರು ಇವರು ನಿಮ್ಮ ಎಲ್ಲಾ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಸೂಚಿಸುತ್ತಾರೆ 9900555458. ಅಮಾವಾಸ್ಯೆಯ (ಅಮಾವಾಸ್ಯೆಯ ದಿನ) ರಾತ್ರಿಯ ಈ ಯಾಗವು ಸಂಪೂರ್ಣವಾಗಿ ಪ್ರಯೋಜನಕಾರಿಯಾಗಿದೆ ಮತ್ತು ಋಣಭಾರದ ಸಮಸ್ಯೆಗಳನ್ನು ನಾಶಪಡಿಸುತ್ತದೆ ಶತ್ರುಸಂಹಾರ, ಮಾಟ-ಮಂತ್ರ ಸೇರಿದಂತೆ ಶತ್ರುಗಳಿಂದ ಉಂಟಾಗುವ ದೋಷಗಳನ್ನು ಓಡಿಸಿ ಕಾನೂನು ವಿಷಯಗಳಲ್ಲಿ ವಿಜಯವನ್ನು ಖಚಿತಪಡಿಸಿಕೊಳ್ಳಿ ಹಿಂದಿನ ಜನ್ಮದ ಪಾಪಗಳನ್ನು ಕೊನೆಗೊಳಿಸಿ (ಪೂರ್ವ ಜನ್ಮ ಪಾಪ ನಿವಾರ್ಥಿ) ಪೂರ್ವಜರ ಶಾಪ (ಪಿತೃ ದೋಷ) ರೋಗಗಳನ್ನು ಕೊನೆಗೊಳಿಸಿ ರಘು ದೋಷ ಶಾಂತಿ ಮತ್ತು ನಿಮಗೆ ಜೀವನದಲ್ಲಿ ಬಹಳಷ್ಟು ಸಂತೋಷ, ಶಾಂತಿ, ಸೌಕರ್ಯ ಮತ್ತು ಸಮೃದ್ಧಿಯನ್ನು ಒದಗಿಸುತ್ತದೆ.