The state government has given good news to the BPL family: ಬಿಪಿಎಲ್ ಪಡಿತರದಾರರಿಗೆ (State govt) ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಫಲಾನುಭವಿಗಳಿಗೆ ಈವರೆಗೆ ವಿತರಿಸುತ್ತಿದ್ದ 5 ಕೆಜಿ ಜೊತೆಗೆ 1 ಕೆಜಿ ಹೆಚ್ಚುವರಿಯಾಗಿ ಅಕ್ಕಿ ವಿತರಣೆಗೆ (State govt) ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ ಆದ್ಯತಾ ಪಡಿತರ ಚೀಟಿಗಳ ಬಿಪಿಎಲ್ ಪ್ರತಿ ಫಲಾನುಭವಿಗಳಿಗೆ ಪ್ರತಿ ತಿಂಗಳು ತಲಾ 5 ಕೆಜಿ ಅಕ್ಕಿ ವಿತರಿಸಲಾಗುತ್ತಿತ್ತು. ಈಗ 1 ಕೆಜಿ ಹೆಚ್ಚುವರಿ ಸೇರಿದಂತೆ ಒಟ್ಟು 6 ಕೆಜಿ ಅಕ್ಕಿ ವಿತರಿಸಲಾಗುವುದು.
ಫೆಬ್ರವರಿ 1ರಿಂದಲೇ ಈ ಆದೇಶ ಜಾರಿಗೊಂಡಿದೆ ಎಂದು ಸರ್ಕಾರ ತಿಳಿಸಿದೆ ರಾಜ್ಯದಲ್ಲಿರುವ ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗಳಿಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯನ್ವಯ ಸಾರ್ವಜನಿಕ ವಿತರಣಾ ಪದ್ಧತಿಯಡಿ ವಿತರಿಸಲಾಗುತ್ತಿರುವ 5 ಕೆಜಿ ಆಹಾರ ಧಾನ್ಯದೊಂದಿಗೆ ಹೆಚ್ಚುವರಿಯಾಗಿ ಪ್ರತಿ ತಿಂಗಳು 1 ಕೆಜಿ ಅಕ್ಕಿಯನ್ನು ವಿತರಿಸಲು ಸರ್ಕಾರ ಆದೇಶಿಸಿದೆ.
ಚುನಾವಣೆ ಸಮೀಪದಲ್ಲಿರುವ ಹೊತ್ತಿನಲ್ಲೇ ಸರ್ಕಾರ ಈ ಆದೇಶ ಹೊರಡಿಸಿದೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸಮಾವೇಶವೊಂದರಲ್ಲಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಪಡಿತರದಾರರಿಗೆ 10 ಕೆಜಿ ಅಕ್ಕಿ ವಿತರಿಸಲಾಗುವುದು ಎಂದು ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಸರ್ಕಾರ ಸದ್ಯ ನೀಡುತ್ತಿರುವ ಪಡಿತರ ಜೊತೆಗೆ 1 ಕೆಜಿ ಹೆಚ್ಚುವರಿ ಅಕ್ಕಿ ನೀಡುವುದಾಗಿ ತಿಳಿಸಿದೆ ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೇಂದ್ರದ ಪಾಲಿನ ಜೊತೆಗೆ ಹೆಚ್ಚುವರಿಯಾಗಿ ಕೇವಲ ಒಂದು ಕೆ.ಜಿ. ಅಕ್ಕಿಯನ್ನು ಮಾತ್ರ ವಿತರಿಸಲು ಆದೇಶ ಹೊರಡಿಸಿದೆ.
ಹೊಸ ಆದೇಶ ಫೆಬ್ರವರಿಯಿಂದ ಜಾರಿಗೆ ಬರಲಿದೆ. ರಾಜ್ಯದಲ್ಲಿ ಪ್ರಸ್ತುತ 10,91,508 ಅಂತ್ಯೋದಯ ಕಾರ್ಡುಗಳಿದ್ದು 44,83,745 ಮಂದಿ ಫಲಾನುಭವಿಗಳಿದ್ದಾರೆ. ಹಾಗೆಯೇ 1,15,93,227 ಬಿಪಿಎಲ್ ಕಾರ್ಡುಗಳಿದ್ದು 3,87,79,975 ಮಂದಿ ಫಲಾನುಭವಿಗಳಿದ್ದಾರೆ. ಹೀಗೆ ಒಟ್ಟು 4,32,63,720 ಮಂದಿ ಫಲಾನುಭವಿಗಳು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ಅನ್ವಯ ಪ್ರತಿ ತಿಂಗಳು ತಲಾ 6 ಕೆ.ಜಿ. ಅಕ್ಕಿಯನ್ನು ಪಡೆಯಲಿದ್ದಾರೆ.
ಇದನ್ನೂ ಓದಿ..ಪಶುಪಾಲನೆ ಇಲಾಖೆಯಿಂದ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿಕರೆಯಲಾಗಿದೆ ಆಸಕ್ತರು ಅರ್ಜಿಹಾಕಿ
ಕೇಂದ್ರ ಸರ್ಕಾರ ಪ್ರತಿ ತಿಂಗಳು ಪ್ರತಿ ಯೂನಿಟ್‌ಗೆ ತಲಾ 5 ಕೆ.ಜಿ.ಯಂತೆ ಒಟ್ಟು 2.17 ಲಕ್ಷ ಮೆಟ್ರಿಕ್ ಟನ್ ಅಕ್ಕಿಯನ್ನು ಹಂಚಿಕೆ ಮಾಡಲಿದೆ. ಇದರೊಂದಿಗೆ ರಾಜ್ಯ ಸರ್ಕಾರ ತಲಾ 1 ಕೆ.ಜಿ.ಯಂತೆ 4.32 ಕೋಟಿಗೂ ಅಧಿಕ ಕೆ.ಜಿ. ಅಕ್ಕಿಯನ್ನು ವಿತರಿಸಲಿದೆ.