There are many vacancies in Bangalore Metropolitan Transport Corporation: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಹಲವು ಹುದ್ದೆಗಳು ಖಾಲಿ ಇದ್ದು ಉದ್ಯೋಗಾಂಕ್ಷಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಒಟ್ಟು 636 ಅಪ್ರೆಂಟಿಸ್ ಹುದ್ದೆಗಳು ಖಾಲಿ ಇದ್ದು SSLC, ಐಟಿಐ, ಡಿಪ್ಲೊಮಾ ಪಾಸಾಗಿರುವವರು ಅರ್ಜಿ ಸಲ್ಲಿಸಬಹುದಾಗಿದೆ.
ಅಭ್ಯರ್ಥಿಗಳು ಆಫ್ಲೈನ್/ಪೋಸ್ಟ್ ಮೂಲಕ ಅರ್ಜಿ ಸಲ್ಲಿಸಬೇಕು. ಇದೇ ಮಾರ್ಚ್ 15, 2023 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬಹುದು. ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ನೇಮಕಾತಿ ಸಂಸ್ಥೆ ಬೆಂಗಳೂರು ಮೆಟ್ರೋಪಾಲಿಟನ್ ಟ್ರಾನ್ಸ್‌ಪೋರ್ಟ್ ಕಾರ್ಪೊರೇಷನ್ ವೇತನ ಶ್ರೇಣಿ 6,000 ರಿಂದ 9,000 ರೂ ಉದ್ಯೋಗ ಸ್ಥಳ ಬೆಂಗಳೂರು ಹುದ್ದೆಗಳ ಸಂಖ್ಯೆ 636 ಹುದ್ದೆಗಳ ವಿವರ ಪೂರ್ಣಾವಧಿ ಅಪ್ರೆಂಟಿಸ್ 550 ಹುದ್ದೆಗಳು ಡಿಪ್ಲೊಮಾ ಅಪ್ರೆಂಟಿಸ್ 43 ಹುದ್ದೆಗಳು ಪದವಿ ಅಪ್ರೆಂಟಿಸ್ 43 ಹುದ್ದೆಗಳು ಶೈಕ್ಷಣಿಕ ಅರ್ಹತೆ ಪೂರ್ಣಾವಧಿ ಅಪ್ರೆಂಟಿಸ್ 10 ನೇ ತರಗತಿ, ಐಟಿಐ. ಡಿಪ್ಲೊಮಾ ಅಪ್ರೆಂಟಿಸ್ ಡಿಪ್ಲೊಮಾ ಪದವಿ ಅಪ್ರೆಂಟಿಸ್ BE. ವೇತನ ಶ್ರೇಣಿ ಪೂರ್ಣಾವಧಿ ಅಪ್ರೆಂಟಿಸ್ 6,000 ರಿಂದ 7,000 ರೂ ಡಿಪ್ಲೊಮಾ ಅಪ್ರೆಂಟಿಸ್ 8,000 ರೂ ಪದವಿ ಅಪ್ರೆಂಟಿಸ್ 9,000 ರೂ
ವಯೋಮಿತಿ ಬೆಂಗಳೂರು ಮೆಟ್ರೋಪಾಲಿಟನ್ ಟ್ರಾನ್ಸ್‌ಪೋರ್ಟ್ ಕಾರ್ಪೊರೇಷನ್ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 16 ವರ್ಷ ಹಾಗೂ ಗರಿಷ್ಠ 30 ವರ್ಷ ಮೀರಿರಬಾರದು.
ಪ್ರಮುಖ ದಿನಾಂಕಗಳು ಅರ್ಜಿ ಸಲ್ಲಿಕೆ ಆರಂಭ ದಿನಾಂಕ 21-02-2023 ದಾಖಲಾತಿ ಪರಿಶೀಲನೆ ದಿನಾಂಕ 15 ಮಾರ್ಚ್ 2023 ದಿನಾಂಕ 15 ಮಾರ್ಚ್ 2023 ರಂದು ಬೆಳಿಗ್ಗೆ 10.30 ಗಂಟೆಯಿಂದ 5 ಗಂಟೆಯೊಳಗಾಗಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ಅನೆಕ್ಸ್ ಬಿಲ್ಡಿಂಗ್, ಆಡಳಿತ ಇಲಾಖೆ, 5ನೇ ಮಹಡಿ, ಶಾಂತಿನಗರ ಬಸ್ ನಿಲ್ದಾಣ ಪಕ್ಕ ಬೆಂಗಳೂರು-560027, ಇಲ್ಲಿ ಖುದ್ದಾಗಿ ಮೂಲ ದಾಖಲಾತಿಗಳ ಪರಿಶೀಲನೆಗೆ ಹಾಜರಾಗಲು ತಿಳಿಸಲಾಗಿದೆ.
ಇದನ್ನೂ ಓದಿ..ಕೆಲಸದ ನಿರೀಕ್ಷೆಯಲ್ಲಿರುವರಿಗೆ ಇಲ್ಲಿದೆ ಉದ್ಯೋಗಾವಕಾಶ ಇವತ್ತೆ ಅರ್ಜಿಹಾಕಿ
ಮೂಲ ದಾಖಲಾತಿಗಳ ಒಂದು ಸೆಟ್ ಜೆರಾಕ್ಸ್ ಪ್ರತಿಗಳನ್ನು ಸಹ ತರುವುದು. ಅಪೂರ್ಣ ಅಥವಾ ವಿಳಂಬವಾಗಿ ಸಲ್ಲಿಸುವ ಅರ್ಜಿಗಳನ್ನು ಆಯ್ಕೆಗೆ ಪರಿಗಣಿಸಲಾಗುವುದಿಲ್ಲ. ಅಗತ್ಯ ದಾಖಲೆಗಳು 02 ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಐ.ಟಿ.ಐ ತೇರ್ಗಡೆ ಹೊಂದಿದ್ದಲ್ಲಿ ಅದರ ಮೂಲ ಅಂಕಪಟ್ಟಿ, ಡಿಪ್ಲೋಮ ಅಂಕಪಟ್ಟಿಗಳು, ಪದವಿ ಅಂಕಪಟ್ಟಿಗಳು, ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಆಧಾರ್ ಲಿಂಕ್ ಬ್ಯಾಂಕ್ ಖಾತೆಯ ಪ್ರತಿ