Driver jobs in karnataka: ವಾಹನ ಚಾಲಕ ಹುದ್ದೆಗಳಿಗೆ ಅರ್ಜಿ ಆಹ್ವಾನ ರಾಜ್ಯ ಸರ್ಕಾರದ ವತಿಯಿಂದ ಕರ್ನಾಟಕ ರಾಜ್ಯದಲ್ಲಿರುವ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳಿಗೆ ಇದೀಗ ಸಿಹಿ ಸುದ್ದಿ ಹೊರಡಿಸಿದೆ. ಕರ್ನಾಟಕ ವಿಧಾನಸಭಾ ಸಚಿವಾಲಯದಲ್ಲಿ ಚಾಲಕ ಹುದ್ದೆಗಳು ಖಾಲಿ ಇದ್ದು ಇದನ್ನು ಭರ್ತಿ ಮಾಡಿಕೊಳ್ಳುವ ಸಲುವಾಗಿ ಪುರುಷ ಅಭ್ಯರ್ಥಿಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಈ ಹುದ್ದೆಯು ಕರ್ನಾಟಕ ಸರ್ಕಾರದ ಹುದ್ದೆಯಾಗಿದ್ದು ಉದ್ಯೋಗ ಸ್ಥಳ ಕರ್ನಾಟಕ ವಿಧಾನಸಭಾ ಸಚಿವಾಲಯ ಆಗಿರುತ್ತದೆ ಬೆಂಗಳೂರಿನಲ್ಲಿ ಒಟ್ಟು ಮೂರು ಚಾಲಕ ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳಿಗೆ ಮಾಸಿಕವಾಗಿ 21400 ರಿಂದ 42,000 ವೇತನ ಸಿಗಲಿದೆ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಇರಬೇಕಾದ ಅರ್ಹತೆಗಳು ಏನೆಂಬುದನ್ನ ಈ ಕೆಳಗೆ ನೋಡೋಣ.
ಶೈಕ್ಷಣಿಕ ವಿದ್ಯಾರ್ಹತೆಯಾಗಿ ಏಳನೇ ತರಗತಿಯನ್ನು ಕಡ್ಡಾಯವಾಗಿ ಉತ್ತೀರ್ಣವಾಗಿರಬೇಕು. ಇತ್ತೀಚಿನ ವಾಹನ ಚಾಲನಾ ಪರವಾನಗಿಯನ್ನು ಹೊಂದಿರಬೇಕು ಜೊತೆಗೆ ಕಾರು ಚಾಲನೆಯಲ್ಲಿ ಕನಿಷ್ಠ ಮೂರು ವರ್ಷಗಳ ಅನುಭವವನ್ನು ಹೊಂದಿರಬೇಕು. ಈ ಹುದ್ದೆಗಳಿಗೆ ಸಂಬಂಧಿಸಿದ ವಯೋಮಿತಿ ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 35 ವರ್ಷವನ್ನು ಮೀರಿರಬಾರದು ವಯೋಮಿತಿ ಸಡಲಿಕೆ ಕೂಡ ಇದ್ದು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ 1 ಸೇರಿದ ಅಭ್ಯರ್ಥಿಗಳಿಗೆ 2 ವರ್ಷ ವಯೋಮಿತಿ ಸಡಲಿಕ್ಕೆ ಇರುತ್ತದೆ. 2A,2 B, 3 A, 3 B ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಮೂರು ವರ್ಷ ವಯೋಮಾನ ಸಡಿಲಿಕೆ ಇರುತ್ತದೆ.
Driver jobs in karnataka
ಅರ್ಜಿ ಸಲ್ಲಿಸುವ ವಿಧಾನವನ್ನು ನೋಡುವುದಾದರೆ ಈ ಹುದ್ದೆಗೆ ಅರ್ಜಿಯನ್ನ ಸಲ್ಲಿಸಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಸರ್ಕಾರಿ ಮುದ್ರಣ ಮಳಿಗೆಗಳಲ್ಲಿ ಫಾರಂ ಅನ್ನು ಪಡೆದುಕೊಳ್ಳಬೇಕು ನಮೂನೆ 1 ದ್ವೀಪ್ರತಿಯಲ್ಲಿ ಈ ವಿವರಗಳನ್ನು ಭರ್ತಿ ಮಾಡಬೇಕು ನಂತರ ಅಧಿಸೂಚನೆಯಲ್ಲಿ ಕೇಳಲಾದ ಅರ್ಹತೆಗಳಾದ ಶೈಕ್ಷಣಿಕ ವಿದ್ಯಾರ್ಹತೆ ಚಾಲನ ಪರವಾನಗಿ ಮತ್ತು ಚಾಲನೆಯಲ್ಲಿ ಅನುಭವ ಇದೆ ಎನ್ನುವುದಕ್ಕೆ ಸಂಬಂಧಪಟ್ಟ ದಾಖಲೆಗಳ ಪ್ರತಿಯನ್ನ ಲಗತ್ತಿಸಿ ಕಚೇರಿಗೆ ಸಲ್ಲಿಸಬೇಕು. ಇವುಗಳನ್ನು ಅಂಚೆ ಮೂಲಕ ಅಥವಾ ಖುದ್ದಾಗಿ ಹಜಾರಾಗುವ ಮೂಲಕ ಕೂಡ ಸಲ್ಲಿಸಬಹುದು.
ಅರ್ಜಿ ಶುಲ್ಕವನ್ನು ನೋಡುವುದಾದರೆ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ1 ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಉಳಿದ ಎಲ್ಲಾ ಸಾಮಾನ್ಯ ವರ್ಗದ ಹಾಗೂ ಹಿಂದುಳಿದ ವರ್ಗದ ಅಭ್ಯರ್ಥಿಗಳು ಕ್ರಾಸ್ ಮಾಡಿದ 500 ಇಂಡಿಯನ್ ಪೋಸ್ಟಲ್ ಬಾರ್ಡರ್ ಖರೀದಿಸಿ ನಮ್ಮ ವಿಳಾಸಕ್ಕೆ ಅರ್ಜಿ ಫಾರಂ ಜೊತೆ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕದ ಒಳಗೆ ನೀಡಬೇಕು ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ 5. 8.2023 ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 8.9. 2023
ಈ ಆಯ್ಕೆ ಪ್ರಕ್ರಿಯೆಯು ಲಿಖಿತ ಪರೀಕ್ಷೆ ಸಂದರ್ಶನ ಹಾಗೂ ಡ್ರೈವಿಂಗ್ ಟೆಸ್ಟನ್ನು ನಡೆಸಿದ ನಂತರ ದಾಖಲೆಗಳ ಪರಿಶೀಲನೆ ನಡೆಸಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಇದನ್ನೂ ಓದಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ರದ್ದಾಯ್ತಾ? ಇಲ್ಲಿದೆ ನೋಡಿ ಅಸಲಿ ಸತ್ಯ
ಶ್ರೀ ಕಾಳಿಕಾ ದುರ್ಗಾ ಜೋತಿಷ್ಯ ಪೀಠ ಪ್ರಧಾನ್ ತಾಂತ್ರಿಕ ಶ್ರೀ ಶ್ರೀನಿವಾಸ್ ರಾಘವನ್ ಆಚಾರ್ಯರು ಇವರು ನಿಮ್ಮ ಎಲ್ಲಾ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಸೂಚಿಸುತ್ತಾರೆ 9900555458 ಅಮಾವಾಸ್ಯೆಯ (ಅಮಾವಾಸ್ಯೆಯ ದಿನ) ರಾತ್ರಿಯ ಈ ಯಾಗವು ಸಂಪೂರ್ಣವಾಗಿ ಪ್ರಯೋಜನಕಾರಿಯಾಗಿದೆ ಮತ್ತು ಋಣಭಾರದ ಸಮಸ್ಯೆಗಳನ್ನು ನಾಶಪಡಿಸುತ್ತದೆ; ಶತ್ರು ಸಂಹಾರ, ಮಾಟ-ಮಂತ್ರ ಸೇರಿದಂತೆ ಶತ್ರುಗಳಿಂದ ಉಂಟಾಗುವ ದೋಷಗಳನ್ನು ಓಡಿಸಿ; ಕಾನೂನು ವಿಷಯಗಳಲ್ಲಿ ವಿಜಯವನ್ನು ಖಚಿತಪಡಿಸಿಕೊಳ್ಳಿ; ಹಿಂದಿನ ಜನ್ಮದ ಪಾಪಗಳನ್ನು ಕೊನೆಗೊಳಿಸಿ (ಪೂರ್ವ ಜನ್ಮ ಪಾಪ ನಿವಾರ್ಥಿ), ಪೂರ್ವಜರ ಶಾಪ (ಪಿತೃ ದೋಷ), ರೋಗಗಳನ್ನು ಕೊನೆಗೊಳಿಸಿ; ರಘು ದೋಷ ಶಾಂತಿ ಮತ್ತು ನಿಮಗೆ ಜೀವನದಲ್ಲಿ ಬಹಳಷ್ಟು ಸಂತೋಷ, ಶಾಂತಿ, ಸೌಕರ್ಯ ಮತ್ತು ಸಮೃದ್ಧಿಯನ್ನು ಒದಗಿಸುತ್ತದೆ.