Ration Card update: ಈಗ ನಮ್ಮ ರಾಜ್ಯದ ಜನರು ರಾಜ್ಯ ಸರ್ಕಾರದ ಎಲ್ಲಾ ಸೌಲಭ್ಯಗಳು, ಗ್ಯಾರಂಟಿ ಯೋಜನೆಗಳ ಸವಲತ್ತು ಪಡೆಯುವುದಕ್ಕೆ ಬಿಪಿಎಲ್ ರೇಷನ್ ಕಾರ್ಡ್ ಇರಲೇಬೇಕು. ಬಿಪಿಎಲ್ ರೇಶನ್ ಕಾರ್ಡ್ ಇದ್ದು, ಬಡತನದ ರೇಖೆಯಿಂದ ಕೆಳಗೆ ಇರುವವರಿಗೆ ಮಾತ್ರ ಎಲ್ಲಾ ಗ್ಯಾರಂಟಿ ಯೋಜನೆಗಳ ಸೌಲಭ್ಯ ಸಿಗುತ್ತದೆ. ಹೀಗಿದ್ದಾಗ, ಬಿಪಿಎಲ್ ರೇಶನ್ ಕಾರ್ಡ್ ಹೊಂದಿರುವುದು ಮುಖ್ಯ. ಈ ಕಾರಣದಿಂದ ಸಾಕಷ್ಟು ಜನರು ಹೊಸದಾಗಿ ಬಿಪಿಎಲ್ ರೇಶನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಕಾಯುತ್ತಿದ್ದಾರೆ.
ಆದರೆ ಈಗ ಬಿಪಿಎಲ್ ರೇಶನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವ ಬಗ್ಗೆ, ರೇಶನ್ ಕಾರ್ಡ್ ಪಡೆಯುವ ಬಗ್ಗೆ ಸರ್ಕಾರದಿಂದ ಒಂದು ಶಾಕಿಂಗ್ ಸುದ್ದಿ ಹೊರಬಿದ್ದಿದೆ. ಅದೇನು ಎಂದರೆ, ಬಿಪಿಎಲ್ ರೇಶನ್ ಕಾರ್ಡ್ ಗೆ ಹೊಸದಾಗಿ ಅಪ್ಲೈ ಮಾಡಲು ಇನ್ಮುಂದೆ ಸಾಧ್ಯ ಆಗುವುದಿಲ್ಲ, ಹಾಗೆಯೇ ಈಗಾಗಲೇ ರೇಷನ್ ಕಾರ್ಡ್ ಗೆ ಅಪ್ಲೈ ಮಾಡಿರುವವರಿಗೂ ರೇಷನ್ ಕಾರ್ಡ್ ಸಿಗುವುದಿಲ್ಲ ಎಂದು ಹೊಸದಾಗಿ ಮಾಹಿತಿ ಸಿಕ್ಕಿದೆ..
Ration Card update:
ಈ ಮುಖ್ಯವಾದ ಮಾಹಿತಿಯನ್ನು ಖುದ್ದು ಆಹಾರ ಮತ್ತು ನಾಗರೀಕ ಸಚಿವಾಲಯ ನೀಡಿದ್ದು, ಹೊಸದಾಗಿ ರೇಶನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವ ಪೋರ್ಟಲ್ ಮತ್ತೆ ಓಪನ್ ಆಗುವುದಿಲ್ಲ ಎಂದು ಹೇಳಿದ್ದಾರೆ, ಹಾಗೆಯೇ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿರುವವರಿಗು ಹೊಸ ರೇಶನ್ ಕಾರ್ಡ್ ಸಿಗುವುದಿಲ್ಲ ಎಂದು ಹೇಳಲಾಗುತ್ತಿದೆ. ಇದಕ್ಕೆ ಕಾರಣ ಏನು ಎಂದು ಸಹ ತಿಳಿಸಿದ್ದು ನಮ್ಮ ರಾಜ್ಯದಲ್ಲಿ ಈಗ ಇರಬೇಕಾಗಿದ್ದಕ್ಕಿಂತ ಹೆಚ್ಚು ಜನರ ಬಳಿ ಬಿಪಿಎಲ್ ರೇಷನ್ ಕಾರ್ಡ್ ಇದೆ..
ಇದರಿಂದ ರಾಜ್ಯ ಸರ್ಕಾರಕ್ಕೆ ಆರ್ಥಿಕವಾಗಿ ಹೊರೆ ಆಗುತ್ತದೆ, ಈ ಕಾರಣಕ್ಕೆ ಹೊಸದಾಗಿ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ನಿಲ್ಲಿಸಲಾಗಿದೆ ಎಂದು ಹೇಳಕಾಗುತ್ತಿದೆ. ಹಾಗೆಯೇ ಹಲವು ಜನರು ರಾಜ್ಯ ಸರ್ಕಾರದ ಸೌಲಭ್ಯ ಪಡೆಯಲು ಸುಳ್ಳು ದಾಖಲೆಗಳನ್ನು ನೀಡಿ, ಬಿಪಿಎಲ್ ರೇಶನ್ ಕಾರ್ಡ್ ಪಡೆದಿದ್ದಾರೆ. ಈ ರೀತಿ ಆಗುವ ಸಮಸ್ಯೆಗಳನ್ನು ತಡೆಯುವ ಸಲುವಾಗಿ ಈಗಾಗಲೇ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿರುವ ಎಲ್ಲರಿಗೂ ರೇಶನ್ ಕಾರ್ಡ್ ವಿತರಣೆ ಆಗುವುದಿಲ್ಲ ಎಂದು ಹೇಳಲಾಗುತ್ತಿದೆ .
ರೇಷನ್ ಕಾರ್ಡ್ ಗೆ ಅರ್ಜಿ ಹಾಕಿರುವವರ ಎಲ್ಲಾ ಮಾಹಿತಿಗಳನ್ನು ಪರಿಶೀಲಿಸಿ, ಅವರು ಬಡತನದ ರೇಖೆಗಿಂತ ಕೆಳಗಿದ್ದಾರೆ ಎನ್ನುವುದು ಸಾಬೀತಾದರೆ ಮಾತ್ರ ರೇಷನ್ ಕಾರ್ಡ್ ವಿತರಣೆ ಮಾಡಲಾಗುತ್ತದೆ. ಶ್ರೀಮಂತರು ಅಥವಾ ಬಡತನದ ರೇಖೆಗಿಂತ ಮೇಲಿದ್ದರೆ ರೇಷನ್ ಕಾರ್ಡ್ ಸಿಗುವುದಿಲ್ಲ. ಪ್ರಸ್ತುತ ಬಿಪಿಎಲ್ ರೇಷನ್ ಕಾರ್ಡ್ ಹೊಂದಿರುವವರ ವಿಚಾರದಲ್ಲಿ ಕೂಡ ಎಲ್ಲವನ್ನು ಚೆಕ್ ಮಾಡಿ, ಸುಳ್ಳು ಮಾಹಿತಿ ನೀಡಿರುವವರ ರೇಷನ್ ಕಾರ್ಡ್ ಕ್ಯಾನ್ಸಲ್ ಆಗುತ್ತದೆ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ: ಅಸ್ತಿ ಖರೀದಿ ಅಥವಾ ಮಾರಾಟ ಮಾಡುವವರಿಗೆ ಇವತ್ತಿನಿಂದ ಹೊಸ ರೂಲ್ಸ್ ಜಾರಿ