Gruhalakshmi Scheme: ಗೃಹಲಕ್ಷ್ಮಿ ಯೋಜನೆ ಜಾರಿಗೆ ಬಂದು 2 ತಿಂಗಳು ಕಳೆದು ಹೋಯಿತು, ಆದರೆ ಇನ್ನು ಕೂಡ ಹಲವು ಮಹಿಳೆಯರಿಗೆ ಈ ಯೋಜನೆಯ ಹಣ ಸಿಕ್ಕಿಲ್ಲ. ರಾಜ್ಯದಲ್ಲಿ 1.28 ಕೋಟಿ ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ಅರ್ಹತೆ ಪಡೆಯುತ್ತಾರೆ. ಆದರೆ ಅವರಲ್ಲಿ 1.20 ಕೋಟಿ ಮಹಿಳೆಯರು ಈಗ ಅರ್ಜಿ ಸಲ್ಲಿಸಿದ್ದು, ಅವರುಗಳ ಪೈಕಿ 64 ಲಕ್ಷ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಿಕ್ಕಿದೆ. ಸುಮಾರು 45% ಮಹಿಳೆಯರಿಗೆ ಇನ್ನು ಗೃಹಲಕ್ಷ್ಮಿ ಯೋಜನೆಯ ಹಣ ಸಿಕ್ಕಿಲ್ಲ.

ಇನ್ನು ಹಣ ಬರದೆ ಇರುವ ಮಹಿಳೆಯರು ಆತಂಕಕ್ಕೆ ಒಳಗಾಗಿದ್ದಾರೆ. ಗೃಹಲಕ್ಷ್ಮಿ ಯೋಜನೆಯ ಹಣ ಬರುತ್ತೋ ಇಲ್ಲವೋ ಎನ್ನುವ ಪ್ರಶ್ನೆ ಕೂಡ ಜನರಲ್ಲಿದೆ. ಆದರೆ ಈ ಎಲ್ಲಾ ಪ್ರಶ್ನೆಗಳಿಗೆ ಸರ್ಕಾರ ಕೊಡುತ್ತಿರುವ ಉತ್ತರ ಒಂದೇ ಆಗಿತ್ತು, ತಾಂತ್ರಿಕ ಸಮಸ್ಯೆಯ ಕಾರಣದಿಂದ ಮಹಿಳೆಯರ ಖಾತೆಗೆ ಹಣ ಬಂದಿಲ್ಲ ಎಂದು ಹೇಳಿ ಸರ್ಕಾರ ತಪ್ಪಿಸಿಕೊಳ್ಳುತ್ತಿತ್ತು. ಸರ್ಕಾರದಿಂದ ಸಿಕ್ಕಿರುವ ಮಾಹಿತಿಯ ಅನುಸಾರ, ಈಗಾಗಲೇ 2 ತಿಂಗಳಿಗೆ ಮಹಿಳೆಯರನ್ನು ತಲುಪಬೇಕಾದಷ್ಟು ಹಣವನ್ನು ಈಗಾಗಲೇ ಬಿಡುಗಡೆ ಮಾಡಿದೆ.

ಇದೇ ಮೊದಲ ಸಾರಿ ಸರ್ಕಾರವು DBT ಮೂಲಕ ಹಣ ಬಿಡುಗಡೆ ಮಾಡಿದ್ದು, ಇದರ ಜವಾಬ್ದಾರಿಯನ್ನು RBI ತೆಗೆದುಕೊಂಡಿದೆ. ಆದರೆ DBT ಮೂಲಕ ನೇರ ವರ್ಗಾವಣೆ ಮಾಡುವಲ್ಲಿ ತಾಂತ್ರಿಕ ದೋಷ ಉಂಟಾಗಿರುವ ಕಾರಣ ಇನ್ನು ಹಲವು ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಇನ್ನು ಕ್ರೆಡಿಟ್ ಆಗಿಲ್ಲ. ಈ ರೀತಿ ಇದ್ದಾಗ, ಸರ್ಕಾರವು ಜನರಿಗೆ ಭರವಸೆ ಕೊಡುತ್ತಲೇ ಬಂದಿದೆ. ಆದರೆ ಮಹಿಳೆಯರಿಗೆ ಇನ್ನು ಹಣ ಬಂದಿಲ್ಲ ಎನ್ನುವ ಚಿಂತೆ ಕಾಡುತ್ತಿದೆ.

ಆದರೆ ಇದೀಗ ಮಹಿಳೆಯರಿಗೆ ಸರ್ಕಾರದ ಕಡೆಯಿಂದ ಒಂದು ಗುಡ್ ನ್ಯೂಸ್ ಸಿಕ್ಕಿದೆ. ಅದೇನು ಎಂದರೆ ದೀಪಾವಳಿ ಹಬ್ಬದ ವಿಶೇಷವಾಗಿ ಮಹಿಳೆಯರ ಬ್ಯಾಂಕ್ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಎಲ್ಲಾ ಮಹಿಳೆಯರ ಖಾತೆಗೆ ಬರಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಆಗರುವ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ. ಹಾಗಿದ್ರೆ ಗೃಹಲಕ್ಷ್ಮಿ ಯೋಜನೆಯ ಹಣ ಯಾರಿಗೆಲ್ಲಾ ಸಿಗಲಿದೆ ಗೊತ್ತಾ?

ಗೃಹಲಕ್ಷ್ಮಿ ಯೋಜನೆಯ ಹಣ ಯಾರಿಗೆಲ್ಲಾ ಸಿಗುತ್ತದೆ ಎಂದರೆ ಆಗಸ್ಟ್ 18ರ ಒಳಗೆ ಯಾವೆಲ್ಲಾ ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ಅಪ್ಲೈ ಮಾಡಿದ್ದಾರೋ ಅವರಿಗೆಲ್ಲಾ ಗೃಹಲಕ್ಷ್ಮಿ ಯೋಜನೆಯ ಹಣ ಸಿಗಲಿದೆ ಎಂದು ತಿಳಿಸಿದ್ದಾರೆ. ಮೂರು ತಿಂಗಳ ಹಣವು ಕೂಡ ಮಹಿಳೆಯರಿಗೆ ಒಂದೇ ಸಾರಿ ಸಿಗಲಿದೆ ಎಂದು ತಿಳಿಸಿದ್ದಾರೆ. ಒಟ್ಟಿನಲ್ಲಿ ಇದರಿಂದ ಮಹಿಳೆಯರಿಗೆ ನೆಮ್ಮದಿಯಾಗಿದೆ ಎಂದರೆ ತಪ್ಪಲ್ಲ. ಇದನ್ನೂ ಓದಿ Bhoo Odetana Yojane: ಜಮೀನು ಇಲ್ಲದವರಿಗೆ ಗುಡ್ ನ್ಯೂಸ್, ಜಮೀನು ಖರೀದಿಗೆ ಸರ್ಕಾರದಿಂದ ಸಿಗಲಿದೆ 20 ಲಕ್ಷ ಸಹಾಯಧನ ಆಸಕ್ತರು ಇಂದೇ ಅಪ್ಲೈ ಮಾಡಿ

WhatsApp Group Join Now
Telegram Group Join Now

By AS Naik

Leave a Reply

Your email address will not be published. Required fields are marked *

error: Content is protected !!