Rain In Karnataka: ಮಳೆಗಾಲದಲ್ಲಿ ಮಳೆ ಬರುವುದು ಸಹಜ ಆದರೆ ಇತ್ತೀಚಿಗೆ ಮಳೆಗಾಲವಲ್ಲದ ಸಮಯದಲ್ಲೂ ಮಳೆ ಬರುತ್ತಿದೆ. ನೈಸರ್ಗಿಕ ವಿಕೋಪದ ಮುಂದೆ ನಾವು ಮನುಷ್ಯರು ಏನು ಅಲ್ಲ ಹೌದು ದೀಪಾವಳಿಯ ಸಮಯದಲ್ಲಿ ಕೆಲವು ಕಡೆ ಭಾರಿ ಮಳೆಯಾಗುವ (Rain) ಮುನ್ಸೂಚನೆ ಕಂಡುಬಂದಿದೆ ಹಾಗಾದರೆ ಯಾವ ಯಾವ ಕಡೆ ಮಳೆ ಬರಲಿದೆ ಎಂಬುದನ್ನು ಈ ಲೇಖನದಲ್ಲಿ ನೋಡೋಣ.
ಅರಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಬೀಸಿದ್ದು ನೈಸರ್ಗಿಕ ವಿಕೋಪ ಉಂಟಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ದಕ್ಷಿಣ ಒಳನಾಡು, ಕರಾವಳಿ ಭಾಗ, ಉತ್ತರ ಒಳನಾಡು ಭಾಗಗಳ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರಿ ಪ್ರಮಾಣದಲ್ಲಿ ಮಳೆಯಾಗಿಲಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ ಈ ವೇಳೆ ಮಳೆಯಾಗುವ ಪ್ರದೇಶದಲ್ಲಿ ಸುಮಾರು 35ರಿಂದ 40 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸಲಿದೆ ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಕರಾವಳಿ ಭಾಗ ಹಾಗೂ ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಹೆಚ್ಚಿದೆ.
ಕರಾವಳಿ ಉತ್ತರ ಕನ್ನಡ ಜಿಲ್ಲೆ ಉತ್ತರ ಒಳನಾಡಿನ ಗದಗ, ಹಾವೇರಿ ಜಿಲ್ಲೆ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಚಿತ್ರದುರ್ಗ, ದಾವಣಗೆರೆ, ತುಮಕೂರು ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಮತ್ತು ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ಕರಾವಳಿಯ ಒಂದೆರಡು ಭಾಗಗಳಲ್ಲಿ ಕನಿಷ್ಠ ತಾಪಮಾನವು ದಾಖಲಾಗಿದೆ ಅಂದರೆ ಸಾಮಾನ್ಯ ತಾಪಮಾನಕ್ಕಿಂತ ಎರಡರಿಂದ ಮೂರು ಡಿಗ್ರಿ ಸೆಲ್ಸಿಯಸ್ ಕಡಿಮೆ ಉಷ್ಣಾಂಶ ದಾಖಲಾಗುವ ಸಾಧ್ಯತೆ ಇದೆ.
Rain In Karnataka
ಇನ್ನು ಮೀನುಗಾರಿಕೆಗೆ ತೆರಳುವವರಿಗೆ ಯಾವುದೆ ಮುನ್ಸೂಚನೆ ಇದುವರೆಗೂ ಕೊಟ್ಟಿಲ್ಲ ಉತ್ತರ ಕನ್ನಡ ಜಿಲ್ಲೆಯನ್ನು ಹೊರತುಪಡಿಸಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಕರಾವಳಿಯಲ್ಲಿ ಹಗುರ ಮಳೆಯಾಗಲಿದ್ದು ಮೀನುಗಾರರಿಗೆ ಆತಂಕವಿಲ್ಲ ಎಂದು ತಿಳಿಸಲಾಗಿದೆ. ರಾಜ್ಯ ರಾಜಧಾನಿ ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಮೋಡ ಕವಿದ ವಾತಾವರಣವಿರುತ್ತದೆ. ಮಳೆ ಹಾಗೂ ಗುಡುಗು ಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆಯಿದ್ದು ಕೆಲವೊಮ್ಮೆ ಭಾರಿ ಮಳೆ ಆಗುವ ಸಾಧ್ಯತೆಯು ಇದೆ.
ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಸಾಧ್ಯತೆ ಹೆಚ್ಚಿದೆ. ಗರಿಷ್ಠ 27°c ಹಾಗೂ ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರುವ ಸಾಧ್ಯತೆ ಇದೆ. ಕರ್ನಾಟಕ ವಿಕೋಪ ನಿಗಾ ಕೇಂದ್ರ ಉಪಗ್ರಹ ಆಧಾರಿತ ಮಳೆ ನಕ್ಷೆಯ ಮಾಹಿತಿಯಂತೆ ನವೆಂಬರ್ 11 ರಿಂದ 14ರವರೆಗೆ ರಾಜ್ಯದಲ್ಲಿ ಎಲ್ಲೂ ಮಳೆಯಾಗುವುದಿಲ್ಲ ಎಂದು ಹೇಳುತ್ತಿದೆ ಆದರೆ ನವೆಂಬರ್ 15 ರಿಂದ ತುಮಕೂರು ಹಾಗೂ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಕೊಡಗು, ಚಾಮರಾಜನಗರ ಮಂಡ್ಯ ರಾಮನಗರ ಚಿಕ್ಕಬಳ್ಳಾಪುರ ಕೋಲಾರ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು ಅದರಲ್ಲೂ ವಿಶೇಷವಾಗಿ ಮೈಸೂರು ಹಾಗೂ ಚಾಮರಾಜನಗರದಲ್ಲಿ ಗರಿಷ್ಠ 30 ಮಿಲಿ ಮೀಟರ್ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.