Prerana Scheme in Karnataka: ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದ ಆರ್ಥಿಕ ಅಭಿವೃದ್ಧಿಗಾಗಿ ಕಲ್ಯಾಣ ಇಲಾಖೆಯಿಂದ 2023-24 ನೇ ಸಾಲಿನಲ್ಲಿ ಪ್ರೇರಣಾ ಯೋಜನೆಯಡಿ ಮಹಿಳೆಯರಿಗೆ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಯಾವೆಲ್ಲಾ ದಾಖಲಾತಿಗಳು ಬೇಕು ಹಾಗೂ ಇನ್ನು ಮುಂತಾದ ಅಂಶಗಳನ್ನು ಈ ಕೆಳಗಿನ ಲೇಖನದಲ್ಲಿ ನೋಡೋಣ

ಮಹಿಳೆಯರು ತಾವು ರಚಿಸಿಕೊಂಡಿರುವ ನೋಂದಾಯಿತ ಸ್ವಸಹಾಯ ಸಂಘದ ಸದಸ್ಯರು ಉತ್ತಮ ಆದಾಯವನ್ನು ಗಳಿಸಿ ಆರ್ಥಿಕ ಸ್ವಾವಲಂಬನೆಯನ್ನು ಸಾಧಿಸಲು ಹಾಗೂ ಸಬಲೀಕರಣ ಉದ್ದೇಶಕ್ಕಾಗಿ ಪ್ರೇರಣಾ ಯೋಜನೆಯನ್ನು ಜಾರಿಗೆ ತರಲಾಯಿತು. ಕನಿಷ್ಠ 10 ಪರಿಶಿಷ್ಟ ಜಾತಿ ಮತ್ತು ಪಂಗಡದ ಮಹಿಳಾ ಸದಸ್ಯರನ್ನು ಹೊಂದಿರುವ ನೋಂದಾಯಿತ ಸ್ವಸಹಾಯ ಸಂಘಕ್ಕೆ ಪ್ರತಿ ಸದಸ್ಯರಿಗೆ ತಲಾ 15,000 ರೂಪಾಯಿ ಸಹಾಯಧನ ಹಾಗೂ 10,000 ರೂಪಾಯಿ ಸಾಲ ಒಟ್ಟು 25,000 ರೂಪಾಯಿ ಅಂತೆ ಒಂದು ಸಂಘಕ್ಕೆ ಗರಿಷ್ಟ ರೂಪಾಯಿ 2.50 ಲಕ್ಷದವರೆಗೆ ಅನುದಾನವನ್ನು ನಿಗಮದಿಂದ ನೀಡಲಾಗುತ್ತದೆ ಹಾಗೂ ಪಡೆದುಕೊಂಡ ಸಾಲಕ್ಕೆ ವಾರ್ಷಿಕವಾಗಿ 4% ಬಡ್ಡಿ ದರದಲ್ಲಿ ಸಾಲ ನೀಡಲಾಗುತ್ತದೆ ಮತ್ತು 30 ಸಾಮಾನ್ಯ ಕಂತುಗಳಲ್ಲಿ ಸಾಲವನ್ನು ನಿಗಮಕ್ಕೆ ಮರುಪಾವತಿ ಮಾಡಬೇಕು.

ಪ್ರೇರಣಾ ಯೋಜನೆಗೆ ಅರ್ಜಿ ಸಲ್ಲಿಸಲು ಆಧಾರ್ ಕಾರ್ಡ್ ಪ್ರತಿ, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಬುಕ್, ಸ್ವಸಹಾಯ ಸಂಘದ ನೋಂದಣಿ ಪತ್ರ ಹಾಗೂ ನಾಲ್ಕು ಪಾಸ್ಪೋರ್ಟ್ ಸೈಜಿನ ಫೋಟೋ ಬೇಕಾಗುತ್ತದೆ. ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ, ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ, ಕರ್ನಾಟಕ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮಗಳ ಅಡಿಯಲ್ಲಿ ಬರುವವರು ಪ್ರೇರಣಾ ಯೋಜನೆಗೆ ಅರ್ಜಿ ಸಲ್ಲಿಸಬಹುದು.

ಪ್ರೇರಣಾ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ಸೇವಾ ಸಿಂಧು ಪೋರ್ಟಲ್ ಮೂಲಕ ಆನ್ ಲೈನ್ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಇದೆ ನವೆಂಬರ್ 29 ನೆ ತಾರೀಖು ಆಗಿರುತ್ತದೆ ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಅರ್ಹ ಅಭ್ಯರ್ಥಿಗಳು ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲಿಯೂ ಅರ್ಜಿ ಸಲ್ಲಿಸಬಹುದಾಗಿದೆ. ಈ ಮಾಹಿತಿಯನ್ನು ತಪ್ಪದೆ ಎಲ್ಲರಿಗೂ ತಿಳಿಸಿ ನೀವು ಎಸ್ಸಿ ಎಸ್ಟಿ ಸಮುದಾಯದವರಾಗಿದ್ದರೆ ಈಗಲೆ ಅರ್ಜಿ ಸಲ್ಲಿಸಿ

WhatsApp Group Join Now
Telegram Group Join Now

By AS Naik

Leave a Reply

Your email address will not be published. Required fields are marked *

error: Content is protected !!